ಭೀಕರ ರಸ್ತೆ ಅಪಘಾತ: ಇಬ್ಬರು ವಿದ್ಯಾರ್ಥಿಗಳ ದುರ್ಮರಣ!

ಭೀಕರ ರಸ್ತೆ ಅಪಘಾತ: ಇಬ್ಬರು ವಿದ್ಯಾರ್ಥಿಗಳ ದುರ್ಮರಣ!

Accident

ಬೆಂಗಳೂರು: ಬೆಂಗಳೂರಿನ ಬನ್ನೇರುಘಟ್ಟ ಸಮೀಪದ ರಾಗಿಹಳ್ಳಿ ಅರಣ್ಯ ಪ್ರದೇಶದ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ತಡರಾತ್ರಿ, ವೇಗದ ಕಾರು ಮರಕ್ಕೆ ಡಿಕ್ಕಿಯಾಗಿ, ಸ್ಥಳದಲ್ಲೇ ಇಬ್ಬರು ವಿದ್ಯಾರ್ಥಿಗಳು ಸಾವಿಗೀಡಾಗಿದ್ದಾರೆ.

ಮೃತರನ್ನು ಕೇರಳ ಮೂಲದ ಸಾಹಹುಕ್ (28) ಮತ್ತು ಅರ್ಶು (23) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ದೇವನಾರಾಯಣ ಮತ್ತು ಸಾಹಿಲ್ ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಈ ಘಟನೆ ಕುಡಿದ ಮತ್ತಿನಲ್ಲಿ ವೇಗವಾಗಿ ಕಾರು ಚಲಾಯಿಸಿದ ಪರಿಣಾಮ ಸಂಭವಿಸಿರುವ ಶಂಕೆ ವ್ಯಕ್ತವಾಗಿದೆ. ಮೃತರು ಗೊಟ್ಟಿಗೆರೆಯ ಟಿ ಜಾನ್ ಕಾಲೇಜಿನ ವಿದ್ಯಾರ್ಥಿಗಳಾಗಿದ್ದು, ಬನ್ನೇರುಘಟ್ಟ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.

Exit mobile version