ಬಸವಕಲ್ಯಾಣದಲ್ಲಿ ಭಾರೀ ಹೈಡ್ರಾಮಾ: ಮುಸ್ಲಿಂ ಯುವಕರಿಂದ ಪೊಲೀಸ್ ಠಾಣೆಗೆ ಮುತ್ತಿಗೆ, 49 ಮಂದಿ ಮೇಲೆ FIR

Untitled design 2026 03 04T191018.769

ಬೀದರ್, ಮಾರ್ಚ್ 4, 2026: ಬಸವಕಲ್ಯಾಣ ನಗರದಲ್ಲಿ ಕಳೆದ ಎರಡು ದಿನಗಳಿಂದ ತೀವ್ರ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಮುಸ್ಲಿಂ ಮೌಲ್ವಿಗಳು ಮತ್ತು ಶಿಕ್ಷಕರ ಮೇಲೆ ಅಪರಿಚಿತ ಯುವಕರು ಹಲ್ಲೆ ನಡೆಸಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಸಾವಿರಾರು ಮಂದಿ ಮುಸ್ಲಿಂ ಯುವಕರು ನಗರ ಪೊಲೀಸ್ ಠಾಣೆ ಎದುರು ಜಮಾಯಿಷಿ ಗಲಾಟೆ ನಡೆಸಿದ್ದಾರೆ. ಪೊಲೀಸರು ಪರಿಸ್ಥಿತಿ ನಿಯಂತ್ರಿಸಲು ಲಘು ಲಾಠಿಚಾರ್ಜ್ ಮಾಡಬೇಕಾಯಿತು.

ಘಟನೆಯ ಹಿನ್ನೆಲೆ

ಮಾರ್ಚ್ 3ರ ಸಂಜೆ 7 ಗಂಟೆ ಸುಮಾರಿಗೆ ಬಸವಕಲ್ಯಾಣದಲ್ಲಿ ವಾಕಿಂಗ್‌ಗೆ ಹೋಗಿದ್ದ ಮುಸ್ಲಿಂ ಶಿಕ್ಷಕರಾದ ಮಹಮದ್ ಆರೀಫ್ ಮತ್ತು ಸೈಯದ್ ಇಮ್ರಾನ್ ಅವರ ಮೇಲೆ 6-7 ಅಪರಿಚಿತ ಯುವಕರು ಹಲ್ಲೆ ನಡೆಸಿದ್ದಾರೆ ಎಂಬ ದೂರು ದಾಖಲಾಗಿದೆ. ತಲೆಗೆ ಕಲ್ಲಿನಿಂದ ಹಲ್ಲೆ ಮಾಡಿ ಗಾಯಗೊಳಿಸಲಾಗಿದೆ ಎಂದು ದೂರುದಾರರು ಆರೋಪಿಸಿದ್ದಾರೆ. ಈ ಘಟನೆಯ ನಂತರ ಮುಸ್ಲಿಂ ಸಮುದಾಯದ ಯುವಕರು ಆ ಯುವಕರನ್ನು ಗುರುತಿಸಿ ಶಿಕ್ಷಿಸಬೇಕು ಎಂದು ಒತ್ತಾಯಿಸಿ ನಗರ ಠಾಣೆ ಎದುರು ಜಮಾಯಿಷಿ ನಡೆಸಿದರು.

ಪೊಲೀಸ್ ಠಾಣೆಗೆ ಮುತ್ತಿಗೆ
ನಿನ್ನೆ ರಾತ್ರಿ ಸುಮಾರು 1,000ಕ್ಕೂ ಹೆಚ್ಚು ಜನರು ಠಾಣೆ ಎದುರು ಸೇರಿ “ಅಲ್ಲಾಹು ಅಕ್ಬರ್” ಘೋಷಣೆ ಕೂಗಿ, ಆ ಅಪರಿಚಿತ ಯುವಕರನ್ನು ಒಪ್ಪಿಸುವಂತೆ ಒತ್ತಾಯಿಸಿದರು. ಪೊಲೀಸರು ಸಮಾಧಾನ ಪಡಿಸಿದ ನಂತರ ಗಲಾಟೆ ಮಾಡಿದ್ದು, ಪರಿಸ್ಥಿತಿ ಹದಗೆಡದಂತೆ ನೋಡಿಕೊಳ್ಳಲು ಪೊಲೀಸರು ಲಘು ಲಾಠಿಚಾರ್ಜ್ ಮಾಡಬೇಕಾಯಿತು. ಈ ವೇಳೆ ಠಾಣೆಯ ಕೆಲವು ವಸ್ತುಗಳಿಗೆ ಹಾನಿಯಾಗಿದೆ ಎಂದು ವರದಿಯಾಗಿದೆ.

ಪೊಲೀಸರ ಮೇಲೆಯೇ ಹಲ್ಲೆ ಆರೋಪ
ಗಲಾಟೆಯ ಸಂದರ್ಭದಲ್ಲಿ PSI, ASI ಸೇರಿದಂತೆ ಪೊಲೀಸರ ಮೇಲೆಯೇ ಹಲ್ಲೆ ನಡೆಸಲಾಗಿದೆ ಎಂಬ ಆರೋಪವಿದೆ. ಸಮವಸ್ತ್ರ ಎಳೆದಾಡಿ, ಕೆಲಸಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ 49 ಮಂದಿ ಮುಸ್ಲಿಂ ಯುವಕರ ಮೇಲೆ ಬಸವಕಲ್ಯಾಣ ನಗರ ಠಾಣೆಯಲ್ಲಿ FIR ದಾಖಲಾಗಿದೆ. ದಾಂಧಲೆ, ಸಾರ್ವಜನಿಕ ಆಸ್ತಿಗೆ ಹಾನಿ, ಪೊಲೀಸ್ ಕಾರ್ಯಕ್ಕೆ ಅಡ್ಡಿಪಡಿಸುವಿಕೆ ಸೇರಿದಂತೆ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version