ಬಿಬಿಎಂಪಿಯಿಂದ ಗ್ಯಾರಂಟಿ ಯೋಜನೆಗಳ ಯಶಸ್ವಿ ಜಾರಿ

Siddu stalin kcr (38)

ಬಿಬಿಎಂಪಿ ವ್ಯಾಪ್ತಿಯಲ್ಲಿ ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಹಾಗೂ ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಗಿದೆ. ಗೃಹಲಕ್ಷ್ಮೀ ಯೋಜನೆ ರಾಜದಾದ್ಯಂತ ಶೇ. 98% ರಷ್ಟು ಫಲಾನುಭವಿಗಳಿಗೆ ಯಾವುದೇ ಮಧ್ಯವರ್ತಿಗಳಿಲ್ಲದೆ ನೇರವಾಗಿ ಖಾತೆಗೆ ತಲುಪಿಸುವ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಯೋಜನೆ ಅನುಷ್ಠಾನ ಸಂಬಂಧಿ ಸಭೆಯಲ್ಲಿ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ (ಬೆಂಗಳೂರು ವಿಭಾಗ) ದ ಉಪಾಧ್ಯಕ್ಷರಾದ ಸೂರಜ್ ಹೆಗ್ಡೆ ಅವರು ಮಾಹಿತಿ ನೀಡಿದರು.

ಗೃಹ ಲಕ್ಷ್ಮೀ ಯೋಜನೆ ಹಣ ನೀಡಿದರೆ, ಹಸಿದವರಿಗೆ ಅನ್ನಭಾಗ್ಯ ಯೋಜನೆ ಆಸರೆಯಾಗಿದೆ. ಗೃಹ ಜ್ಯೋತಿಯಿಂದ ಸಾಕಷ್ಟು ಕುಂಟುಂಬಗಳಿಗೆ ಅನುಕೂಲವಾಗಿದೆ. ಗ್ಯಾರಂಟಿ ಯೋಜನೆಗಳಲ್ಲಿರುವ ಸಣ್ಣ-ಪುಟ್ಟ ನ್ಯೂನ್ಯತೆಗಳನ್ನು ಸರಿಪಿಸಲು ಕ್ರಮವಹಿಸಲಾಗುತ್ತಿದೆ ಎಂದರು.

ಪಡಿತರ ತೂಕದಲ್ಲಿ ವ್ಯತ್ಯಾಸ, ಇತರ ಸಮಸ್ಯೆ ಪರಿಹಾರ

ಹೌದು ಕೆಲವು ನ್ಯಾಯ ಬೆಲೆ ಅಂಗಡಿಗಳ ಮೇಲೆ ಪಡಿತರ ವಿತರಿಸುವ ಸಮಯವನ್ನು ಪ್ರದರ್ಶಿಸದಿರುವುದು ಕಂಡು ಬಂದಿದೆ ಹಾಗೂ ಕೆಲವು ನ್ಯಾಯ ಬೆಲೆ ಅಂಗಡಿಗಳಲ್ಲಿ ಪಡಿತರ ವಿತರಿಸುವಾಗ ತೂಕದಲ್ಲಿ ವ್ಯತ್ಯಾಸಗಳು ಕಂಡುಬರುತ್ತಿದೆ. ಅದನ್ನು ಆಹಾರ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತರಲಾಗಿದ್ದು, ಅದನ್ನು ಸರಿಪಡಿಸಲಾಗುತ್ತಿದೆ.

ಬಿಬಿಎಂಪಿ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಜಿ. ಕೃಷ್ಣಪ್ಪ ಅವರು, ಪಾಲಿಕೆ ವ್ಯಾಪ್ತಿಯ 28 ವಿಧಾನಸಭಾ ಕ್ಷೇತ್ರಗಳಲ್ಲಿಯೂ ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ.

ನಗರದಲ್ಲಿ 20,48,961 ಫಲಾನುಭವಿಗಳಿಗೆ ಪರಿಣಾಮಕಾರಿಯಾಗಿ ಗ್ಯಾರಂಟಿ ಯೋಜನೆಗಳ ಅನುಷ್ಠಾನಗೊಳಿಸುವ ಹೊಣೆ ಹೊರಲಾಗಿದೆ ಎಂದು ವಿವರಿಸಿದ ಜಿ. ಕೃಷ್ಣಪ್ಪ, ಬಿಬಿಎಂಪಿ ವ್ಯಾಪ್ತಿಯಲ್ಲಿ ಒಟ್ಟು 8,156 ಬೂತ್ ಗಳಿದ್ದು, ಸುಮಾರು 93,32,000 ಮತದಾರರನ್ನು ಹೊಂದಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ 756 ನ್ಯಾಯ ಬೆಲೆ ಅಂಗಡಿಗಳಿಂದ ಒಟ್ಟು (AAY+BPL) 5,08,426 ಪಡಿತರ ಚೀಟಿಗಳಿವೆ, 68,021 APL ಕಾರ್ಡ್ ಸೇರಿ ಒಟ್ಟು 5,76,447 ಪಡಿತರ ಚೀಟಿಗಳಿವೆ.

ಈ ಪೈಕಿ ಒಟ್ಟು ಫಲಾನುಭವಿಗಳು (AAY+BPL) 18,07,151 ಮತ್ತು 2,41,810 APL ಫಲಾನುಭವಿಗಳು ಸೇರಿ ಒಟ್ಟಾಗಿ 20,48,961 ಫಲಾನುಭವಿಗಳಿಗೆ ಪರಿಣಾಮಕಾರಿಯಾಗಿ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವ ಹೊಣೆಯನ್ನು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯು ಜವಾಬ್ದಾರಿಯುತವಾಗಿ ನಿರ್ವಹಿಸುತ್ತಿದೆ ಎಂದು ತಿಳಿಸಿದರು.

ನಿಮ್ಮ ನೆಚ್ಚಿನ ಗ್ಯಾರಂಟಿ ನ್ಯೂಸ್ ಈ ಕೆಳಕಂಡ ಕೇಬಲ್ & ಡಿಟಿಎಚ್ ನೆಟ್ ವರ್ಕ್ ಗಳಲ್ಲಿ ಲಭ್ಯ..

Exit mobile version