ಬೆಳಗಾವಿ: ಕರ್ನಾಟಕ-ಮಹಾರಾಷ್ಟ್ರ ಗಡಿಯಲ್ಲಿ ಮತ್ತೊಮ್ಮೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಮರಾಠಿ ಪುಂಡರಿಂದ ಬಸ್ ಕಂಡಕ್ಟರ್ ಮೇಲೆ ನಡೆದ ಹಲ್ಲೆ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ.
ಕಂಡಕ್ಟರ್ ವಿರುದ್ಧ ಪೋಕ್ಸೋ ಕೇಸ್
ನಿನ್ನೆ ಬೆಳಗಾವಿಯ ಮಾರಿಹಾಳ ಬಳಿ ಬಸ್ ಕಂಡಕ್ಟರ್ ಮೇಲೆ ಕಿಡಿಗೇಡಿಗಳು ಹಲ್ಲೆ ನಡೆಸಿದ ಘಟನೆಗೆ ವ್ಯಾಪಕ ಖಂಡನೆ ವ್ಯಕ್ತವಾಯಿತು. ಪೊಲೀಸರು ಆರೋಪಿಗಳನ್ನು ಬಂಧಿಸಿದ ಬೆನ್ನಲ್ಲೇ, ಇದೀಗ ಅದೇ ಮಾರಿಹಾಳ ಪೊಲೀಸ್ ಠಾಣೆಯಲ್ಲಿ ಅಪ್ರಾಪ್ತೆಯಿಂದ ಕಂಡಕ್ಟರ್ ಮೇಲೆ ಪೋಕ್ಸೋ ಕೇಸ್ ದಾಖಲಾಗಿದೆ. ಇದರಿಂದ ಹೊಸ ಸಂಚಲನ ಸೃಷ್ಟಿಸಿದೆ.
ಗಡಿ ಪ್ರದೇಶದಲ್ಲಿ ಉದ್ರಿಕ್ತ ಪರಿಸ್ಥಿತಿ
ಈ ಘಟನೆಯಿಂದ ಕರ್ನಾಟಕ-ಮಹಾರಾಷ್ಟ್ರ ಗಡಿಯಲ್ಲಿ ಮತ್ತೆ ತೀವ್ರ ಗಲಾಟೆ ಶುರುವಾಗಿದೆ. ಕರ್ನಾಟಕದಲ್ಲಿ ಕರವೇ ಕಾರ್ಯಕರ್ತರು ಪ್ರತಿಭಟನೆಗೆ ಕರೆದಿದ್ದು, ಪೋಕ್ಸೋ ಕೇಸ್ ಹಿಂಪಡೆಯುವಂತೆ ಒತ್ತಾಯಿಸಿದ್ದಾರೆ. ಮಹಾರಾಷ್ಟ್ರದಲ್ಲಿ ಠಾಕ್ರೆ ಬಣದ ಶಿವಸೇನೆ ಬೆಂಬಲಿಗರು ಕರ್ನಾಟಕ ಸಾರಿಗೆ ಬಸ್‌ಗಳ ಮೇಲೆ ಭಗವಾ ಧ್ವಜ ತೋರುತ್ತ, ಪ್ರತಿಭಟನೆ ನಡೆಸಿದ್ದಾರೆ.
ಸರ್ಕಾರದ ಸ್ಪಷ್ಟನೆ:
ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದು, “ಕಂಡಕ್ಟರ್ ಮೇಲೆ ಹಲ್ಲೆ ಮಾಡಿದವರನ್ನು ಬಂಧಿಸಲಾಗಿದೆ. ಇಂತಹ ಘಟನೆಗಳು ಪುನರಾವೃತ್ತಿಯಾಗದಂತೆ ಗೃಹ ಸಚಿವರನ್ನು ಕೇಳಿ ಕ್ರಮ ಕೈಗೊಳ್ಳಲು ಹೇಳುತ್ತೇನೆ” ಎಂದು ಹೇಳಿದ್ದಾರೆ.