ಬೆಳಗಾವಿ: ಅನಾರೋಗ್ಯದಿಂದ ಮೃತಪಟ್ಟ ತಮ್ಮನ ಸುದ್ದಿ ಕೇಳಿ ಅಣ್ಣನಿಗೆ ಹೃದಯಾಘಾತವಾಗಿ ಅವನೂ ಸಾವನ್ನಪ್ಪಿದ ದುರಂತ ಘಟನೆ ಬೆಳಗಾವಿಯ ಗೋಕಾಕ್ ತಾಲೂಕಿನ ಕಪರಟ್ಟಿ ಗ್ರಾಮದಲ್ಲಿ ನಡೆದಿದೆ. ತಮ್ಮ ಸತೀಶ್ ಬಾಗನ್ನವರ (16), ಅಣ್ಣ ಬಸವರಾಜ ಬಾಗನ್ನವರ (24) ಮೃತಪಟ್ಟ ಸಹೋದರರು.
ಕಪರಟ್ಟಿ ಗ್ರಾಮವು ಬೆಳಗಾವಿ ಜಿಲ್ಲೆಯ ಒಂದು ಸಣ್ಣ ಹಳ್ಳಿಯಾಗಿದೆ. ಬಾಗನ್ನವರ್ ಕುಟುಂಬವು ಇದೇ ಗ್ರಾಮದಲ್ಲಿ ವಾಸಿಸುತ್ತಿದ್ದು, ತಂದೆ-ತಾಯಿ ಮತ್ತು ಇಬ್ಬರು ಮಕ್ಕಳೊಂದಿಗೆ ಸಾಮಾನ್ಯ ಜೀವನ ಸಾಗಿಸುತ್ತಿದ್ದರು. ಸತೀಶ್ ಬಾಗನ್ನವರ, 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದನು. ಅವನು, ಕುಟುಂಬದ ಆರ್ಥಿಕ ಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಶಾಲೆಯ ಜೊತೆಗೆ ಸಣ್ಣ ಕೆಲಸಗಳಲ್ಲಿ ತೊಡಗಿಕೊಂಡಿದ್ದನು. ಆದರೆ, ಕಳೆದ ಕೆಲವು ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದ ಸತೀಶ್, ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟನು.
ಬಸವರಾಜ ಬಾಗನ್ನವರ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದನು. ತಂದೆ-ತಾಯಿಯ ಜೀವನಕ್ಕೆ ಆಸರೆಯಾಗಿದ್ದ ಅವನು, ತಮ್ಮ ಸತೀಶ್‌ನನ್ನು ತುಂಬಾ ಪ್ರೀತಿಸುತ್ತಿದ್ದನು. ಸತೀಶ್‌ನ ಸಾವಿನ ಸುದ್ದಿ ತಿಳಿದ ಕೂಡಲೇ, ಬಸವರಾಜನಿಗೆ ಹೃದಯಾಘಾತವಾಗಿದೆ. ಕುಟುಂಬದವರು ಅವನನ್ನು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗದಲ್ಲಿ ಅವನು ಕೊನೆಯುಸಿರೆಳೆದಿದ್ದಾನೆ. ಇಬ್ಬರು ಮಕ್ಕಳನ್ನು ಕಳೆದುಕೊಂಡ ಕಳೆದುಕೊಂಡ ತಂದೆ ತಾಯಿ ಆಕ್ರಂದನ ಮುಗಿಲು ಮುಟ್ಟಿದೆ.