ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ: 12 ಆರೋಪಿಗಳಿಗೆ ಐದು ವರ್ಷ ಕಠಿಣ ಶಿಕ್ಷೆ

Untitled design 2026 02 04T153451.836

ಬೆಳಗಾವಿ: ಬೆಳಗಾವಿ ಜಿಲ್ಲೆಯ ವಂಟಮೂರಿ ಗ್ರಾಮದ ಮಹಿಳೆಯ ಮೇಲಿನ ಅಮಾನವೀಯ ಹಲ್ಲೆ ಮತ್ತು ಸಾರ್ವಜನಿಕವಾಗಿ ವಿವಸ್ತ್ರಗೊಳಿಸಿದ ಪ್ರಕರಣಕ್ಕೆ ಇಂದು ನ್ಯಾಯಾಲಯ ಐತಿಹಾಸಿಕ ತೀರ್ಪು ನೀಡಿದೆ. ಪ್ರಕರಣದ ಪ್ರಮುಖ 12 ಮಂದಿ ಆರೋಪಿಗಳು ದೋಷಿಗಳು ಎಂದು ಸಾಬೀತಾಗಿದ್ದು, ಅವರಿಗೆ ತಲಾ 5 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ದಂಡ ವಿಧಿಸಿ ಬೆಳಗಾವಿಯ 10ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶ ಹೊರಡಿಸಿದೆ.

ನ್ಯಾಯಾಧೀಶರಾದ ಎಚ್.ಎಸ್. ಮಂಜುನಾಥ್ ಅವರು ಸುದೀರ್ಘ ವಿಚಾರಣೆ ನಡೆಸಿ, ಸಾಕ್ಷ್ಯಾಧಾರಗಳು ಮತ್ತು ಸಾಕ್ಷಿಗಳ ಹೇಳಿಕೆಗಳನ್ನು ಪರಿಗಣಿಸಿ ಈ ಮಹತ್ವದ ತೀರ್ಪು ಪ್ರಕಟಿಸಿದರು.

ಪ್ರಕರಣದ ಹಿನ್ನೆಲೆ

2023ರ ಡಿಸೆಂಬರ್ ತಿಂಗಳಲ್ಲಿ ಬೆಳಗಾವಿ ಜಿಲ್ಲೆಯ ವಂಟಮೂರಿ ಗ್ರಾಮದಲ್ಲಿ ಈ ಅಮಾನುಷ ಘಟನೆ ನಡೆದಿತ್ತು. ಯುವಕನೊಬ್ಬ ಯುವತಿಯೊಂದಿಗೆ ಪ್ರೀತಿಸಿ ಓಡಿಹೋದ ಹಿನ್ನೆಲೆ, ಆ ಯುವತಿಯ ಕುಟುಂಬಸ್ಥರು ಪ್ರತೀಕಾರ ತೀರಿಸಿಕೊಳ್ಳುವ ಉದ್ದೇಶದಿಂದ ಯುವಕನ ತಾಯಿಯ ಮೇಲೆ ಕ್ರೂರವಾಗಿ ದಾಳಿ ನಡೆಸಿದ್ದರು.

ಆ ಮಹಿಳೆಯನ್ನು ಮನೆಯಿಂದ ಬಲವಂತವಾಗಿ ಎಳೆದುಕೊಂಡು ಬಂದು, ವಿವಸ್ತ್ರಗೊಳಿಸಿ, ವಿದ್ಯುತ್ ಕಂಬಕ್ಕೆ ಕಟ್ಟಿ ಸಾರ್ವಜನಿಕವಾಗಿ ಹಲ್ಲೆ ನಡೆಸಲಾಗಿತ್ತು. ಈ ದೃಶ್ಯಗಳನ್ನು ವಿಡಿಯೋ ರೂಪದಲ್ಲಿ ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಲಾಗಿತ್ತು. ಕೆಲವೇ ಗಂಟೆಗಳಲ್ಲಿ ಈ ವಿಡಿಯೋ ವೈರಲ್ ಆಗಿತ್ತು.

ನ್ಯಾಯಾಲಯದ ತೀರ್ಪು

ಪ್ರಕರಣದಲ್ಲಿ ಒಟ್ಟು 13 ಆರೋಪಿಗಳಿದ್ದರೂ, ಅವರಲ್ಲಿ ಒಬ್ಬರು ಬಾಲಾಪರಾಧಿಯಾಗಿರುವುದರಿಂದ ಅವರನ್ನು ಬಾಲ ನ್ಯಾಯ ಮಂಡಳಿಗೆ ಒಪ್ಪಿಸಲಾಗಿತ್ತು. ಉಳಿದ 12 ಆರೋಪಿಗಳನ್ನು ದೋಷಿಗಳು ಎಂದು ನ್ಯಾಯಾಲಯ ಘೋಷಿಸಿದೆ.

ನ್ಯಾಯಾಲಯವು ಆರೋಪಿಗಳಿಗೆ

ಶಿಕ್ಷೆಗೊಳಗಾದವರಲ್ಲಿ ಬಸಪ್ಪ ನಾಯಿಕ, ರಾಜು ನಾಯಿಕ ಸೇರಿದಂತೆ ಒಟ್ಟು 12 ಮಂದಿ ಸೇರಿದ್ದಾರೆ.

Exit mobile version