• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, June 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಅಡ್ಡ ಮತದಾನ ಮಾಡಿಲ್ಲ, ಪಕ್ಷಕ್ಕೆ ದ್ರೋಹ ಬಗೆದಿಲ್ಲ: ಆಣೆ ಪ್ರಮಾಣ ಮಾಡಿದ BJP ಶಾಸಕ H.K ಸುರೇಶ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 30, 2026 - 1:16 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0

ಹಾಸನ, ಜೂನ್ 30: ವಿಧಾನಪರಿಷತ್ ಚುನಾವಣೆಯಲ್ಲಿ ಶಾಸಕರಿಂದ ಅಡ್ಡಮತದಾನ (Cross Voting) ನಡೆದಿದೆ ಎಂಬ ಆರೋಪಗಳು ಭಾರಿ ಚರ್ಚೆಗೆ ಕಾರಣವಾಗಿದೆ. ಈ ಬೆನ್ನಲ್ಲೇ, ಹಾಸನ ಜಿಲ್ಲೆಯ ಬೇಲೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಹೆಚ್.ಕೆ. ಸುರೇಶ್ ಅವರು ಆಣೆ-ಪ್ರಮಾಣ ಮಾಡುವ ಮೂಲಕ ತಮ್ಮ ನಿಷ್ಠೆಯನ್ನು ಸಾಬೀತುಪಡಿಸಿದ್ದಾರೆ. ಬೇಲೂರಿನ ಐತಿಹಾಸಿಕ ಹಾಗೂ ಪ್ರಸಿದ್ಧ ಶ್ರೀ ಚನ್ನಕೇಶವಸ್ವಾಮಿ ದೇವಾಲಯದ ಆವರಣದಲ್ಲಿ ಕರಿಕಲ್ಲಿನ (ಬಲಿಕಲ್ಲು) ಮೇಲೆ ಕೈಯಿಟ್ಟು ಶಾಸಕರು ಆಣೆ ಪ್ರಮಾಣ ಮಾಡಿದ್ದಾರೆ.

ದೇವಸ್ಥಾನದಲ್ಲಿ ವಿಶೇಷ ಪೂಜೆ ಮತ್ತು ಆಣೆ ಪ್ರಮಾಣ

RelatedPosts

ವಿಧಾನಸೌಧದ ಮುಂದೆ ನೇಪಾಳಿಗರ ಪುಂಡಾಟ: ಎರಡು ಗುಂಪುಗಳ ನಡುವೆ ಹೊಡೆದಾಟ

ಆಭರಣ ಪ್ರಿಯರಿಗೆ ಸಿಹಿ ಸುದ್ದಿ: ಚಿನ್ನದ ಬೆಲೆ ಭಾರೀ ಇಳಿಕೆ, ಬೆಳ್ಳಿ ದರವೂ ಕುಸಿತ

ರಾಮಮಂದಿರದ ದೇಣಿಗೆ ಕಳ್ಳತನಕ್ಕೆ ಕರ್ನಾಟಕ ನಂಟು: ಅಖಿಲೇಶ್ ಯಾದವ್ ಗಂಭೀರ ಆರೋಪ

ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಸಿಲಿಂಡರ್ ಸ್ಫೋಟ

ADVERTISEMENT
ADVERTISEMENT

ಶಾಸಕ ಹೆಚ್.ಕೆ. ಸುರೇಶ್ ಅವರು ಇಂದು ಬೆಳಿಗ್ಗೆ ಬೆಂಬಲಿಗರೊಂದಿಗೆ ಚನ್ನಕೇಶವಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದರು. ಚನ್ನಕೇಶವಸ್ವಾಮಿ, ಸೌಮ್ಯನಾಯಕಿ ಹಾಗೂ ರಂಗನಾಯಕಿ ಅಮ್ಮನವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಚನ್ನಕೇಶವಸ್ವಾಮಿಯ ಪಾದಮುಟ್ಟಿ ಭಕ್ತಿಯಿಂದ ನಮಸ್ಕರಿಸಿದರು. “ಪೂರ್ವಜನ್ಮದ ಪುಣ್ಯದಿಂದ ನನಗೆ ಭಗವಂತನ ಬಲಭಾಗದಲ್ಲಿ ವಾಸಮಾಡುವ ಹಾಗೂ ಕ್ಷೇತ್ರದ ಜನರ ಸೇವೆ ಮಾಡುವ ಅಪೂರ್ವ ಅವಕಾಶ ಸಿಕ್ಕಿದೆ” ಎಂದು ಅವರು ಭಾವುಕರಾಗಿ ಹೇಳಿದರು.

ದೇವಾಲಯದ ಆವರಣದ ಎದುರಿನ ಬಲಿಕಲ್ಲು (ಕರಿಕಲ್ಲು) ಮುಟ್ಟಿ ಪ್ರಮಾಣ ಮಾಡಿದ ಶಾಸಕರು, “ಈ ಕರಿಕಲ್ಲೇ ಸಾಕ್ಷಿ, ನಾನು ವಿಧಾನಪರಿಷತ್ ಚುನಾವಣೆಯಲ್ಲಿ ಯಾವುದೇ ಅಡ್ಡಮತದಾನ ಮಾಡಿಲ್ಲ” ಎಂದು ಮೂರು ಬಾರಿ ಗಟ್ಟಿಯಾಗಿ ಉಚ್ಚರಿಸಿದರು. ಅಷ್ಟೇ ಅಲ್ಲದೆ, “ನಾನು ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ದ್ರೋಹ ಮಾಡಿಲ್ಲ” ಎಂದು ಮೂರು ಬಾರಿ ಪುನರುಚ್ಚರಿಸಿದರು. 

‘ಪಿತೂರಿ ಮತ್ತು ಷಡ್ಯಂತ್ರವಿದು’

ಆಣೆ ಪ್ರಮಾಣದ ಬಳಿಕ ಮಾತನಾಡಿದ ಶಾಸಕ ಸುರೇಶ್, “ನನ್ನ ವಿರುದ್ಧ ಕೇಳಿಬರುತ್ತಿರುವ ಈ ಅಡ್ಡಮತದಾನದ ಅಪಪ್ರಚಾರವು ಈ ಕ್ಷೇತ್ರದ ವಿರುದ್ಧ ನಡೆದಿರುವ ದೊಡ್ಡ ಪಿತೂರಿ ಮತ್ತು ಷಡ್ಯಂತ್ರವಾಗಿದೆ. ನಮ್ಮ ಕ್ಷೇತ್ರಕ್ಕೆ ಖುದ್ದಾಗಿ ದೇಶದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಯವರು ಬಂದು ಪ್ರಚಾರ ಮಾಡಿದ್ದರು. ಅಂತಹ ನಾಯಕರಿಗೆ ಹಾಗೂ ಪಕ್ಷಕ್ಕೆ ನಾನು ಅನ್ಯಾಯ ಮಾಡಿದರೆ ಭಗವಂತ ನನ್ನನ್ನು ಎಂದಿಗೂ ಕ್ಷಮಿಸುವುದಿಲ್ಲ” ಎಂದು ತಿಳಿಸಿದರು.

“ನಮ್ಮ ಪಕ್ಷದ ವಿರೋಧ ಪಕ್ಷದ ನಾಯಕರು ಸೂಚಿಸಿದಂತೆ ನಾನು ನಿಖರವಾಗಿ ನನ್ನ ಮತ ಚಲಾವಣೆ ಮಾಡಿದ್ದೇನೆ. ಇದಕ್ಕೆ ಆ ಪರಮಾತ್ಮನೇ ಸಾಕ್ಷಿ. ನನ್ನನ್ನು ಹಣದಿಂದಾಗಲಿ ಅಥವಾ ದೌರ್ಜನ್ಯದಿಂದಾಗಲಿ ಯಾರೂ ಖರೀದಿಸಲು ಸಾಧ್ಯವಿಲ್ಲ. ನನ್ನನ್ನು ಕೇವಲ ಜನರ ಪ್ರೀತಿಯಿಂದ ಮಾತ್ರ ಖರೀದಿಸಲು ಸಾಧ್ಯ” ಎಂದು ಸ್ಪಷ್ಟಪಡಿಸಿದರು.

‘ಷಡ್ಯಂತ್ರವನ್ನು ಭಗವಂತ ಬಯಲು ಮಾಡಲಿ’

“ನನ್ನ ವಿರುದ್ಧ ನಡೆದಿರುವ ಈ ಪಿತೂರಿಯ ಹಿಂದಿನ ಷಡ್ಯಂತ್ರವನ್ನು ಆ ಭಗವಂತನೇ ಎಲ್ಲರಿಗೂ ತಿಳಿಸಲಿ ಎಂಬ ಕಾರಣಕ್ಕೆ ನಾನು ಈ ಆಣೆ ಪ್ರಮಾಣ ಮಾಡಿದ್ದೇನೆ. ಇಷ್ಟು ಜನರ ಪ್ರೀತಿಯೇ ನನಗೆ ಶ್ರೀರಕ್ಷೆ” ಎಂದು ಅವರು ಭಾವುಕವಾಗಿ ಹೇಳಿದರು. 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಸಿ (9)

ನಿಮ್ಮ ಆರೋಗ್ಯದ ಅಸಲಿ ಗುಟ್ಟು ಅಡಗಿರುವುದೇ ನಿಮ್ಮ ಹೊಟ್ಟೆಯಲ್ಲಿ!: ‘ಗಟ್ ಹೆಲ್ತ್’ ಸೀಕ್ರೆಟ್ ಬಿಚ್ಚಿಟ್ಟ ತಜ್ಞರು

by ಶಾಲಿನಿ ಕೆ. ಡಿ
June 30, 2026 - 2:22 pm
0

ಸಿ (8)

ಯಶ್‌ಗೆ ತೃಪ್ತಿ ದಿಮ್ರಿ ನಾಯಕಿ..ನರ್ತನ್ ಶಾಕಿಂಗ್ ಸ್ಟೇಟ್ಮೆಂಟ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 30, 2026 - 1:46 pm
0

ಸಿ (6)

ಅಡ್ಡ ಮತದಾನ ಮಾಡಿಲ್ಲ, ಪಕ್ಷಕ್ಕೆ ದ್ರೋಹ ಬಗೆದಿಲ್ಲ: ಆಣೆ ಪ್ರಮಾಣ ಮಾಡಿದ BJP ಶಾಸಕ H.K ಸುರೇಶ್

by ಶಾಲಿನಿ ಕೆ. ಡಿ
June 30, 2026 - 1:16 pm
0

ಸಿ (5)

ವಿಧಾನಸೌಧದ ಮುಂದೆ ನೇಪಾಳಿಗರ ಪುಂಡಾಟ: ಎರಡು ಗುಂಪುಗಳ ನಡುವೆ ಹೊಡೆದಾಟ

by ಶಾಲಿನಿ ಕೆ. ಡಿ
June 30, 2026 - 12:22 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಸಿ (5)
    ವಿಧಾನಸೌಧದ ಮುಂದೆ ನೇಪಾಳಿಗರ ಪುಂಡಾಟ: ಎರಡು ಗುಂಪುಗಳ ನಡುವೆ ಹೊಡೆದಾಟ
    June 30, 2026 | 0
  • ಸಿ (3)
    ಆಭರಣ ಪ್ರಿಯರಿಗೆ ಸಿಹಿ ಸುದ್ದಿ: ಚಿನ್ನದ ಬೆಲೆ ಭಾರೀ ಇಳಿಕೆ, ಬೆಳ್ಳಿ ದರವೂ ಕುಸಿತ
    June 30, 2026 | 0
  • ಸಿ (2)
    ರಾಮಮಂದಿರದ ದೇಣಿಗೆ ಕಳ್ಳತನಕ್ಕೆ ಕರ್ನಾಟಕ ನಂಟು: ಅಖಿಲೇಶ್ ಯಾದವ್ ಗಂಭೀರ ಆರೋಪ
    June 30, 2026 | 0
  • ಸಿ (1)
    ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಸಿಲಿಂಡರ್ ಸ್ಫೋಟ
    June 30, 2026 | 0
  • ಸಿ
    ಪತಿಯ ಅನೈತಿಕ ಸಂಬಂಧ ಪ್ರಶ್ನಿಸಿದ್ದಕ್ಕೆ ಪತ್ನಿಯ ಹತ್ಯೆ
    June 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version