• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ನಿವೇಶನ ಪಡೆದು ಐದು ವರ್ಷದೊಳಗೆ ಮನೆ ಕಟ್ಟದಿದ್ದರೆ, ನಿವೇಶನ ವಾಪಸ್: ಸಿಎಂ ಡಿ.ಕೆ ಶಿವಕುಮಾರ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 1, 2026 - 2:13 pm
in Flash News, ಕರ್ನಾಟಕ
0 0
0

ಬೆಂಗಳೂರು, ಆ.01: “ಬಿಡಿಎ ಆಗಲಿ, ಕಾರ್ಪೊರೇಷನ್ ನಿವೇಶನವಾಗಲಿ ಅದರ ಮಾಲೀಕರು ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಹೀಗಾಗಿ ನಿವೇಶನ ಪಡೆದ 5 ವರ್ಷದೊಳಗೆ ಅಲ್ಲಿ ಮನೆ ನಿರ್ಮಾಣ ಮಾಡಬೇಕು. ಕಟ್ಟದಿದ್ದರೆ, ಅದಕ್ಕೆ ದುಪ್ಪಟ್ಟು ತೆರಿಗೆ ಅಥವಾ ನಿವೇಶನ ಹಿಂಪಡೆಯಲಾಗುವುದು. ಮನೆ ಕಟ್ಟದೇ ಖಾಲಿ ಇಟ್ಟುಕೊಂಡರೆ ಅಲ್ಲಿ ಕಸದ ಸಮಸ್ಯೆ ಎದುರಾಗುತ್ತದೆ. ಹೀಗಾಗಿ ಈ ತೀರ್ಮಾನ ಮಾಡಲಾಗಿದೆ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು.

ಹೆಬ್ಬಾಳ ಜಂಕ್ಷನ್‌ ಬಳಿ “ತ್ಯಾಜ್ಯದಿಂದ ಸ್ವಾತಂತ್ರ್ಯ” ಅಭಿಯಾನಕ್ಕೆ ಚಾಲನೆ ನೀಡಿ ಶಿವಕುಮಾರ್‌ ಅವರು ಶನಿವಾರ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದರು. ಮನೆ ಕಟ್ಟದಿದ್ದರೆ ನಿವೇಶನ ವಾಪಸ್ ತೆಗೆದುಕೊಳ್ಳುತ್ತೀರಾ ಎಂದು ಕೇಳಿದಾಗ, “ಬೇರೆ ವಿಧಿಯಿಲ್ಲ, ನಾವು ಇದನ್ನು ಮಾಡಲೇಬೇಕಾಗುತ್ತದೆ. ನಾವು ನಿವೇಶನ ನೀಡುವುದು ಮನೆ ಕಟ್ಟಿಕೊಳ್ಳಲು. ಕೆಲವರು 20, 30, 40 ವರ್ಷವಾದರೂ ಮನೆ ಕಟ್ಟಿಲ್ಲ. ಅವರು ಕಟ್ಟಿರುವ ಹಣವನ್ನು ಬಡ್ಡಿ ಸಮೇತ ವಾಪಸ್ ನೀಡಿ ನಿವೇಶನ ಹಿಂಪಡೆಯಲಾಗುವುದು. ಸಿಐಟಿಬಿ, ಬಿಡಿಎ, ಸೊಸೈಟಿಗಳಿಂದ ನಿವೇಶನ ಪಡೆದ ಮೇಲೆ ಮನೆ ಕಟ್ಟಬೇಕಾಗಿರುವುದು ಅವರ ಕರ್ತವ್ಯ. ನಿವೇಶನಕ್ಕೆ ಕಾಪೌಂಡ್ ಕೂಡ ಹಾಕದೇ, ಕಸ ಹಾಕಲು ಅವಕಾಶ ಕೊಟ್ಟರೆ ಹೇಗೆ? ಅವರ ಜಾಗದಲ್ಲಿ ಅವರು ಕಸ ಹಾಕದೇ ಇದ್ದರೂ, ಅವರ ಜಾಗವನ್ನು ಅವರು ರಕ್ಷಣೆ ಮಾಡಿಕೊಳ್ಳಬೇಕು” ಎಂದು ತಿಳಿಸಿದರು.

RelatedPosts

ಗೋ ಬ್ಯಾಕ್ ವಿಜಯ್‌..ಮಂಡ್ಯದಲ್ಲಿ ಮುಂದುವರೆದ ಕಾವೇರಿ ಹೋರಾಟ

ಭಾರತಕ್ಕೆ ಬರಲಿದೆಯೇ ‘ಹಾರುವ ಹಡಗು’? ಶತ್ರು ರಾಷ್ಟ್ರಗಳಿಗೆ ಶುರುವಾಯ್ತು ನಡುಕ!

CWG 2026: ಜಾವೆಲಿನ್‌ನಲ್ಲಿ ಭಾರತಕ್ಕೆ ಡಬಲ್ ಪದಕ; ನೀರಜ್‌ಗೆ ಬೆಳ್ಳಿ, ಯಶ್‌ವೀರ್‌ಗೆ ಕಂಚು

ಕಾವೇರಿ ವಿವಾದದ ನಡುವೆಯೇ ಭೀಮಾನದಿ, ಕಬಿನಿ ಜಲಾಶಯಗಳಲ್ಲಿ ನೀರಿನ ಮಟ್ಟ ಏರಿಕೆ

ADVERTISEMENT
ADVERTISEMENT

“ಮಹಾತ್ಮಾ ಗಾಂಧೀಜಿ ಅವರು ಸ್ವಚ್ಛತೆಯೇ ದೇವರು ಎಂದು ನಮಗೆ ಮಾರ್ಗದರ್ಶನ ನೀಡಿದ್ದಾರೆ. ರಾಜೀವ್ ಗಾಂಧಿ ಅವರು ನಿಮ್ಮ ಮನೆ ಮುಂದೆ ಸ್ನಚ್ಛತೆ ಕಾಪಾಡಿದರೆ, ಬೀದಿ ಸ್ವಚ್ಛವಾಗುತ್ತದೆ. ಬೀದಿ ಸ್ವಚ್ಛವಾದರೆ ಊರು ಸ್ವಚ್ಛವಾಗುತ್ತದೆ, ಊರು ಸ್ವಚ್ಛವಾದರೆ ನಾಡು ಸ್ವಚ್ಛವಾಗುತ್ತದೆ ಎಂದು ಹೇಳಿದ್ದಾರೆ. ಬೆಂಗಳೂರಿನ ಸ್ವಚ್ಛತೆ ನಮ್ಮ ಕರ್ತವ್ಯ. ನಿಮ್ಮ ಬೆಂಗಳೂರನ್ನು ಕಾಪಾಡಿಕೊಳ್ಳುವುದು ನಿಮ್ಮ ಕರ್ತವ್ಯ” ಎಂದರು.

ಎಲ್ಲೆಂದರಲ್ಲಿ ಕಸ ಸುರಿಯುವ ವಾಹನ ಮುಲಾಜಿಲ್ಲದೆ ಮುಟ್ಟುಗೋಲು ಹಾಕಿಕೊಳ್ಳಿ

“ಬೆಂಗಳೂರು ಸರ್ಕಾರದ ಆಸ್ತಿಯಲ್ಲ, ಬೆಂಗಳೂರು ನಿಮ್ಮ ಆಸ್ತಿ. ಇದನ್ನು ಕಾಪಾಡಲು ಅಭಿಯಾನ ಆರಂಭಿಸಿದ್ದೇವೆ. ಘನತ್ಯಾಜ್ಯವನ್ನು ಎಲ್ಲೆಂದರಲ್ಲಿ ಸುರಿಯುವ ವಾಹನಗಳಿಗೆ ನೋಟೀಸ್ ಕೊಡಲಾಗಿತ್ತು. ಕ್ಯಾಮೆರಾ ಕಣ್ಗಾವಲು ಇಡಲಾಗಿತ್ತು. ಈಗ ಮತ್ತೆ ಯತಾಸ್ಥಿತಿಯಲ್ಲಿ ಕಸ ಸುರಿಯುತ್ತಿದ್ದಾರೆ. ಅನುಮತಿ ಇಲ್ಲದೇ ಕಸ ಸುರಿಯುವವರ ವಾಹನವನ್ನು ಮುಲಾಜಿಲ್ಲದೇ ಮುಟ್ಟುಗೋಲು ಹಾಕಿಕೊಳ್ಳಿ ಎಂದು ನಾನು ಪೊಲೀಸರಿಗೆ ನಿರ್ದೇಶನ ನೀಡುತ್ತಿದ್ದೇನೆ. ಜನರಲ್ಲಿ ನಾವು ನಾಗರಿಕ ಪ್ರಜ್ಞೆ ತರಬೇಕಾಗಿದೆ” ಎಂದು ಅಭಿಪ್ರಾಯಪಟ್ಟರು.

“ಹಸಿರಿನ ವಿಚಾರವಾಗಿ ನನ್ನಲ್ಲಿ ವಿಭಿನ್ನ ಆಲೋಚನೆ ಇದೆ. ಅದನ್ನು ಈಗ ನಾನು ಪ್ರಸ್ತಾಪ ಮಾಡುವುದಿಲ್ಲ, 100 ದಿನಗಳ ಕಾರ್ಯಕ್ರಮದ ವೇಳೆ ಪ್ರಕಟ ಮಾಡುತ್ತೇವೆ. ಬೆಂಗಳೂರು ಸ್ವಚ್ಛತೆ ಬಗ್ಗೆ ಟೀಕೆ ಟಿಪ್ಪಣಿ ಬರುತ್ತಿವೆ. ನಾವು ಮಾಡುವ ಕೆಲಸ ಶಾಶ್ವತವಾಗಿ ಉಳಿಯುತ್ತದೆ, ಟೀಕೆಗಳು ಸಾಯುತ್ತವೆ. ಶಿವಾಜಿನಗರದಲ್ಲಿ ಪಾದಚಾರಿ ಮಾರ್ಗ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ದಾಳಿ ಮಾಡಲಾಗಿದೆ. ಯಾರಾದರೂ ಇದನ್ನು ಅಧಿಕಾರಿಗಳ ಮೇಲೆ ದಾಳಿ ಎಂದು ಭಾವಿಸಿದ್ದರೆ ಅದು ಭ್ರಮೆ. ಇದು ಸರ್ಕಾರ, ಸಚಿವರು ಹಾಗೂ ಶಾಸಕರ ಮೇಲಿನ ದಾಳಿ ಎಂದೇ ಭಾವಿಸುತ್ತೇವೆ. ನಾವು ಎಲ್ಲಾ ಪಕ್ಷದ ಶಾಸಕರನ್ನು ವಿಶ್ವಾಸಕ್ಕೆ ಪಡೆದು ಈ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ” ಎಂದು ಹೇಳಿದರು.

“ಬೀದಿವ್ಯಾಪಾರದವರಿಗೆ ಬೇರೆ ಜಾಗಗಳಲ್ಲಿ ವ್ಯಾಪಾರ ಮಾಡಲು ಅವಕಾಶ ಕಲ್ಪಿಸಲಾಗುವುದು. ಬೀದಿ ವ್ಯಾಪಾರಿಗಳು ಪಾದಚಾರಿಗಳು ಹಾಗೂ ವಾಹನ ಸಂಚಾರಕ್ಕೆ ತೊಂದರೆ ಮಾಡಲು ಸಾಧ್ಯವಿಲ್ಲ. ಇಂದಿನಿಂದ ಆರಂಭವಾಗುತ್ತಿರುವ ಈ ಅಭಿಯಾನ ಬೆಂಗಳೂರಿಗೆ ಮಾತ್ರವಲ್ಲ, ಇಡೀ ರಾಜ್ಯಕ್ಕೆ ಮಾದರಿ ಕಾರ್ಯಕ್ರಮವಾಗಿದೆ. ಎಲ್ಲಾ ಶಾಸಕರು ತಮ್ಮ ಕ್ಷೇತ್ರದಲ್ಲಿ ಈ ಅಭಿಯಾನ ಕೈಗೆತ್ತಿಕೊಳ್ಳಬೇಕು. ಇದು ನಿಮ್ಮ ಬೆಂಗಳೂರು, ಇಡೀ ದೇಶ ನಿಮ್ಮನ್ನು ಗಮನಿಸುತ್ತಿದೆ. ಅನೇಕ ರಾಷ್ಟ್ರೀಯ ನಾಯಕರು ಅನೇಕ ಮಾರ್ಗದರ್ಶನ ನೀಡಿದ್ದು, ಅದನ್ನು ಮುಂದುವರಿಸಿಕೊಂಡು ಹೋಗೋಣ” ಎಂದರು.

ಎನ್ ಜಿಒ, ಸಂಘ ಸಂಸ್ಥೆಗಳು ನಾಲ್ಕೈದು ರಸ್ತೆ ಜವಾಬ್ದಾರಿ ಪಡೆದು ಸ್ವಚ್ಛತೆ ಕಾಪಾಡಬಹುದು

“ದೇಶದ ಎಲ್ಲಾ ನಗರಗಳಲ್ಲೂ ಈ ಕಸ ಹಾಕುವ ಸಮಸ್ಯೆ ಇದೆ. ಬೆಂಗಳೂರಿನಲ್ಲಿ ಕಸದ ವಿಚಾರವಾಗಿ ಕಾರ್ಯಕ್ರಮ ಮಾಡಿ ಅನೇಕ ವರ್ಷಗಳಾಗಿವೆ. ಮುಂದಿನ ದಿನಗಳಲ್ಲಿ ಇದಕ್ಕೆ ಹೊಸ ರೂಪ ನೀಡುತ್ತಿದ್ದೇವೆ. ಎನ್ ಜಿಒಗಳು, ಸಂಘ ಸಂಸ್ಥೆಗಳು ಒಂದೊಂದು ಪ್ರದೇಶದ ಜವಾಬ್ದಾರಿ ಹೊತ್ತುಕೊಂಡರೆ ನಾನು ಸ್ವಾಗತಿಸುತ್ತೇನೆ. ನಾಲ್ಕು ರಸ್ತೆ ಜವಾಬ್ದಾರಿ ತೆಗೆದುಕೊಂಡು ಬಂದರೆ ಸಾಕು. ಈ ಅಭಿಯಾನಕ್ಕೆ ನಾಗರಿಕರ ಸಹಕಾರ ಬೇಕು” ಎಂದು ತಿಳಿಸಿದರು.

ಕಾವೇರಿಯ ಒಂದು ಅಣೆಕಟ್ಟು ತುಂಬುತ್ತಿದ್ದು, ನೀರು ಹಿಡಿದಿಡಲು ಸಾಧ್ಯವಿಲ್ಲ

ಕಾವೇರಿ ವಿಚಾರವಾಗಿ ಬಿಜೆಪಿ ನಾಯಕರ ಟೀಕೆ, ಆರೋಪದ ಬಗ್ಗೆ ಕೇಳಿದಾಗ, “ಬಿಜೆಪಿ ನಾಯಕರು ಆರೋಪ ಮಾಡುತ್ತಾರೆ. ನಾವು ಇನ್ನೂ ನೀರು ಹರಿಸಿಲ್ಲ, ಅವರೇ ಸರ್ವಪಕ್ಷ ಸಭೆ ಕರೆಯುವ ಸಲಹೆ ನೀಡಿದ್ದಾರೆ. ಆದರೆ ಇಂದು ಸಂಜೆ ವೇಳೆಗೆ ಒಂದು ಅಣೆಕಟ್ಟು ಭರ್ತಿಯಾಗಲಿದೆ. ಆ ಅಣೆಕಟ್ಟು ತುಂಬಿದ ಬಳಿಕವೂ ನೀರನ್ನು ಹಿಡಿದಿಡಲು ಆಗುವುದಿಲ್ಲ. ಅತ್ತ ತಮಿಳುನಾಡಿನವರು ಸುಪ್ರೀಂ ಕೋರ್ಟಿಗೆ ಹೋಗಲು ಸಿದ್ಥತೆ ಮಾಡಿಕೊಳ್ಳಲಾಗುತ್ತಿದೆ ಎಂದು ಎಂದು ಈಗಾಗಲೇ ಹೇಳಿಕೆಗಳು ಬಂದಿವೆ. 36-39 ಕ್ಯೂಸೆಕ್ ನೀರು ಒಳಹರಿವು ಇದ್ದು, ನಮಗೆ ನೀರು ಹರಿಸಲು ಹೇಳಿರುವುದು 3,500 ಕ್ಯೂಸೆಕ್ ನೀರು. ವಿರೋಧ ಪಕ್ಷದವರು ಹಾಗೂ ಕಾನೂನು ತಜ್ಞರೊಂದಿಗೆ ಚರ್ಚೆ ಮಾಡಿ ನಾವು ತೀರ್ಮಾನ ಮಾಡುತ್ತೇವೆ” ಎಂದು ತಿಳಿಸಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಅನೈತಿಕ (1)

ಭೋಗಾಪುರಂ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಿ ಮೋದಿ

by ಕವಿತಾ
August 1, 2026 - 4:10 pm
0

ಅನೈತಿಕ

ಅನೈತಿಕ ಸಂಬಂಧದ ಶಂಕೆ: ಪತ್ನಿಯನ್ನು ಕೊಂದು ತಾನೂ ಆತ್ಮ*ಹತ್ಯೆಗೆ ಶರಣಾದ ಪತಿ

by ಕವಿತಾ
August 1, 2026 - 3:52 pm
0

Untitled design (39)

ಸಾರ್ವಜನಿಕವಾಗಿ ಕ್ಷಮೆ ಕೇಳಿದ ಮೋದಿ ವಿರುದ್ಧ ಘೋಷಣೆ ಕೂಗಿದ್ದ ಅಪ್ರಾಪ್ತೆ

by ಕವಿತಾ
August 1, 2026 - 3:22 pm
0

Untitled design 2026 08 01T143715.408

ಅಬ್ಬಬ್ಬಾ.. ನಮ್ಮ ಯಶ್ ಡೈ ಹಾರ್ಡ್ ಫ್ಯಾನ್ ಸಾಹಸ ನೋಡಿ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 1, 2026 - 2:38 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 01T135522.811
    ಗೋ ಬ್ಯಾಕ್ ವಿಜಯ್‌..ಮಂಡ್ಯದಲ್ಲಿ ಮುಂದುವರೆದ ಕಾವೇರಿ ಹೋರಾಟ
    August 1, 2026 | 0
  • Untitled design 2026 08 01T133249.841
    ಭಾರತಕ್ಕೆ ಬರಲಿದೆಯೇ ‘ಹಾರುವ ಹಡಗು’? ಶತ್ರು ರಾಷ್ಟ್ರಗಳಿಗೆ ಶುರುವಾಯ್ತು ನಡುಕ!
    August 1, 2026 | 0
  • Untitled design 2026 08 01T130430.830
    CWG 2026: ಜಾವೆಲಿನ್‌ನಲ್ಲಿ ಭಾರತಕ್ಕೆ ಡಬಲ್ ಪದಕ; ನೀರಜ್‌ಗೆ ಬೆಳ್ಳಿ, ಯಶ್‌ವೀರ್‌ಗೆ ಕಂಚು
    August 1, 2026 | 0
  • Untitled design 2026 08 01T125221.821
    ಕಾವೇರಿ ವಿವಾದದ ನಡುವೆಯೇ ಭೀಮಾನದಿ, ಕಬಿನಿ ಜಲಾಶಯಗಳಲ್ಲಿ ನೀರಿನ ಮಟ್ಟ ಏರಿಕೆ
    August 1, 2026 | 0
  • Untitled design 2026 08 01T114336.903
    ದುಷ್ಟಶಕ್ತಿ ನಿವಾರಣೆ ಹೆಸರಲ್ಲಿ ಮಹಿಳೆಗೆ ₹2.5 ಕೋಟಿ ವಂಚನೆ: ಮೂವರ ವಿರುದ್ಧ ಕೇಸ್‌ ದಾಖಲು
    August 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version