• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, November 9, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಒಂದೇ ಕುಟುಂಬದ 7 ಮಂದಿಯ ಹ*ತ್ಯೆ ಕೇಸ್: ಶಿರಾಡಿ ಘಾಟ್‌ನಲ್ಲಿ ಇಬ್ಬರ ಮೃತದೇಹ ಪತ್ತೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 9, 2026 - 11:32 am
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled Design 2026 11 09T113143.300

ಬೆಂಗಳೂರು: ಒಂದೇ ಕುಟುಂಬದ ಏಳು ಮಂದಿಯನ್ನು ಬಲಿ ಪಡೆದ ಬೆಂಗಳೂರಿನ ಭೀಕರ ಸರಣಿ ಕೊಲೆ ಪ್ರಕರಣದಲ್ಲಿ ತನಿಖೆ ಚುರುಕುಗೊಂಡಿದೆ. ಹತ್ಯೆಗೀಡಾದವರ ಮೃತದೇಹಗಳಿಗಾಗಿ ಪೊಲೀಸರು ನಡೆಸುತ್ತಿದ್ದ ಹುಡುಕಾಟಕ್ಕೆ ಕೊನೆಗೂ ತೆರೆ ಬಿದ್ದಿದೆ. ನಾಪತ್ತೆಯಾಗಿದ್ದ ಶಂಕರ್ ಮತ್ತು ನಳಿನಿ ಅವರ ಮೃತದೇಹಗಳು ಶಿರಾಡಿ ಘಾಟ್‌ನಲ್ಲಿ ಪತ್ತೆಯಾಗಿದ್ದು, ಇದರೊಂದಿಗೆ ಹತ್ಯೆಗೀಡಾದ ಏಳು ಮಂದಿಯ ಶವಗಳನ್ನೂ ಪೊಲೀಸರು ಪತ್ತೆಹಚ್ಚಿದ್ದಾರೆ. ಪ್ರಕರಣದ ತನಿಖೆಯನ್ನು ವಿಶೇಷ ಪೊಲೀಸ್ ತಂಡಗಳು ಮತ್ತಷ್ಟು ಚುರುಕುಗೊಳಿಸಿದ್ದು, ಆರೋಪಿಯ ಹತ್ಯೆಯ ಸಂಚು ಹಾಗೂ ಶವ ವಿಲೇವಾರಿ ತಂತ್ರದ ಕುರಿತು ಸಾಕ್ಷ್ಯಗಳನ್ನು ಸಂಗ್ರಹಿಸಲಾಗುತ್ತಿದೆ.

ಒಂದೇ ಕುಟುಂಬದ ಏಳು ಮಂದಿಯನ್ನು ಹಂತ ಹಂತವಾಗಿ ಹತ್ಯೆ ಮಾಡಿದ್ದ ಆರೋಪಿ ಇಂದುಶೇಖರ್, ಸಾಕ್ಷ್ಯ ನಾಶಪಡಿಸುವ ಉದ್ದೇಶದಿಂದ ಮೃತದೇಹಗಳನ್ನು ಬೇರೆ ಬೇರೆ ಪ್ರದೇಶಗಳಲ್ಲಿ ಎಸೆದಿದ್ದ ಎನ್ನಲಾಗಿದೆ. ಇದರಿಂದಾಗಿ ಪೊಲೀಸರು ಹಲವು ಜಿಲ್ಲೆಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಬೇಕಾಗಿತ್ತು. ಇದೀಗ ಶಿರಾಡಿ ಘಾಟ್‌ನಲ್ಲಿ ಉಳಿದ ಇಬ್ಬರ ಮೃತದೇಹಗಳು ಪತ್ತೆಯಾಗಿದೆ.

RelatedPosts

ದೀಪಾವಳಿ ಹಬ್ಬದ ಮೊದಲ ದಿನವೇ ಪಟಾಕಿ ಅವಘಡ: ಬೆಂಗಳೂರಲ್ಲಿ 42 ಮಂದಿಗೆ ಗಾಯ

ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆ ಸಾಧ್ಯತೆ

ಹಾಸನಾಂಬೆ ಸನ್ನಿಧಿಯಲ್ಲೇ ಅಧಿಕಾರಿಗಳ ಮಧ್ಯೆ ಕಿತ್ತಾಟ; ತಹಶೀಲ್ದಾರ್-ಡಿವೈಎಸ್‌ಪಿ ನಡುವೆ ವಾಗ್ವಾದ

ನಮ್ಮನ್ನ ಟಾರ್ಗೆಟ್‌ ಮಾಡುತ್ತಿದ್ದಾರೆ, ಎಲ್ಲದಕ್ಕೂ ರೆಡಿ ಇದ್ದೇವೆ’: ಹೆಚ್‌ಡಿಕೆ ಆರೋಪಕ್ಕೆ ಹಾಸನ ಡಿಸಿ ತಿರುಗೇಟು

ADVERTISEMENT
ADVERTISEMENT
ಶಿರಾಡಿ ಘಾಟ್‌ನಲ್ಲಿ ಶಂಕರ್, ನಳಿನಿ ಶವ ಪತ್ತೆ

ಪ್ರಕರಣದಲ್ಲಿ ನಾಪತ್ತೆಯಾಗಿದ್ದ ಶಂಕರ್ ಮತ್ತು ನಳಿನಿ ಅವರ ಮೃತದೇಹಗಳನ್ನು ಸಕಲೇಶಪುರ ಪೊಲೀಸರು ಶಿರಾಡಿ ಘಾಟ್‌ನಲ್ಲಿ ಪತ್ತೆಹಚ್ಚಿದ್ದಾರೆ. ಆರೋಪಿಯ ವಿಚಾರಣೆ ವೇಳೆ ಲಭ್ಯವಾದ ಸುಳಿವುಗಳ ಆಧಾರದಲ್ಲಿ ಪೊಲೀಸರು ವಿವಿಧ ಸ್ಥಳಗಳಲ್ಲಿ ಹುಡುಕಾಟ ನಡೆಸಿದ್ದರು. ಅದರಂತೆ ಶಿರಾಡಿ ಘಾಟ್‌ನಲ್ಲಿ ಶೋಧ ನಡೆಸಿದಾಗ ಉಳಿದ ಇಬ್ಬರ ಮೃತದೇಹಗಳು ಪತ್ತೆಯಾಗಿವೆ.

ಇದುವರೆಗೆ ಏಳು ಮೃತದೇಹಗಳನ್ನು ನಾಲ್ಕು ವಿಭಿನ್ನ ಪ್ರದೇಶಗಳಲ್ಲಿ ಪತ್ತೆಹಚ್ಚಲಾಗಿದೆ. ಏಳು ವರ್ಷದ ಬಾಲಕ ಪುನೀತ್‌ನ ಮೃತದೇಹ ಚಿಕ್ಕಬಳ್ಳಾಪುರದ ನಂದಿ ಬೆಟ್ಟದ ತಪ್ಪಲಿನಲ್ಲಿ ಸಿಕ್ಕಿತ್ತು. ಸುನೀತಾ ಮತ್ತು ರೂಪವತಿ ಅವರ ಮೃತದೇಹಗಳು ತಮಿಳುನಾಡಿನ ಸೇಲಂನಲ್ಲಿ ಪತ್ತೆಯಾಗಿದ್ದವು. ಶಿವಕುಮಾರ್ ಮತ್ತು ದಿವ್ಯಾ ಅವರ ಶವಗಳು ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಸಿಕ್ಕಿದ್ದವು. ಇದೀಗ ಶಂಕರ್ ಮತ್ತು ನಳಿನಿ ಅವರ ಮೃತದೇಹಗಳು ಶಿರಾಡಿ ಘಾಟ್‌ನಲ್ಲಿ ಪತ್ತೆಯಾಗಿವೆ.

ಶವಗಳನ್ನು ಪ್ಯಾಕ್ ಮಾಡಲು ವಸ್ತುಗಳ ಖರೀದಿ!

ಆರೋಪಿ ಇಂದುಶೇಖರ್ ಹತ್ಯೆ ನಡೆಸುವುದಕ್ಕೂ ಮುನ್ನ ಹಲವು ಸಿದ್ಧತೆಗಳನ್ನು ಮಾಡಿಕೊಂಡಿದ್ದ ಎಂಬುದು ಪೊಲೀಸರ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಮೃತದೇಹಗಳನ್ನು ಪ್ಯಾಕ್ ಮಾಡಲು ಬೇಕಾದ ಸಾಮಗ್ರಿಗಳು ಹಾಗೂ ರಕ್ತದ ಕಲೆಗಳನ್ನು ಸ್ವಚ್ಛಗೊಳಿಸಲು ಬಳಸುವ ರಾಸಾಯನಿಕಗಳನ್ನು ಆತ ಖರೀದಿಸಿದ್ದ ಎನ್ನಲಾಗಿದೆ.

ಕೆಲವು ವಸ್ತುಗಳು ಸ್ಥಳೀಯ ಅಂಗಡಿಗಳಲ್ಲಿ ಲಭ್ಯವಾಗದ ಕಾರಣ ಯಶವಂತಪುರ ಮತ್ತು ಆರ್‌ಎಂಸಿ ಯಾರ್ಡ್ ಪ್ರದೇಶಗಳ ಅಂಗಡಿಗಳಿಗೂ ಆರೋಪಿ ಭೇಟಿ ನೀಡಿದ್ದ ಎನ್ನಲಾಗಿದೆ. ಇದೀಗ ಆತ ವಸ್ತುಗಳನ್ನು ಖರೀದಿಸಿದ್ದ ಅಂಗಡಿಗಳ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ಸಂಗ್ರಹಿಸುತ್ತಿದ್ದಾರೆ. ಅಂಗಡಿ ಮಾಲೀಕರು ಮತ್ತು ಕೆಲಸಗಾರರಿಂದಲೂ ಮಾಹಿತಿ ಪಡೆದು ಹೇಳಿಕೆ ದಾಖಲಿಸಿಕೊಳ್ಳಲಾಗುತ್ತಿದೆ.

ಇದಲ್ಲದೆ, ಕೊಲೆ ನಡೆದ ಪ್ರದೇಶಗಳ ಸುತ್ತಮುತ್ತಲಿನ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನೂ ಪೊಲೀಸರು ಪರಿಶೀಲಿಸುತ್ತಿದ್ದಾರೆ. ಆರೋಪಿಯ ಚಲನವಲನ, ವಾಹನ ಸಂಚಾರ ಮತ್ತು ವಸ್ತುಗಳ ಖರೀದಿಗೆ ಸಂಬಂಧಿಸಿದ ಸಾಕ್ಷ್ಯಗಳನ್ನು ಕಲೆಹಾಕಲಾಗುತ್ತಿದೆ.

10 ಸುತ್ತು ಟೇಪ್ ಸುತ್ತಿ ಶವ ಸಾಗಿಸಲು ಸಂಚು?

ತನಿಖೆಯ ವೇಳೆ ಆರೋಪಿಯ ಶವ ವಿಲೇವಾರಿ ಯೋಜನೆ ಪೊಲೀಸರ ಗಮನ ಸೆಳೆದಿದೆ. ಮೃತದೇಹಗಳಿಗೆ ಸುಮಾರು 10 ಸುತ್ತು ಟೇಪ್ ಸುತ್ತಿ ಪ್ಯಾಕ್ ಮಾಡಿದ್ದ ಎನ್ನುವ ಮಾಹಿತಿ ಹೊರಬಿದ್ದಿದೆ. ಶವಗಳನ್ನು ಸಾಗಿಸುವುದು ಹಾಗೂ ವಿಲೇವಾರಿ ಮಾಡುವ ವಿಧಾನಗಳ ಕುರಿತು ಆರೋಪಿ ಇಂಟರ್ನೆಟ್‌ನಲ್ಲಿ ಹುಡುಕಾಟ ನಡೆಸಿದ್ದ ಎಂಬ ಅಂಶ ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಒಬ್ಬೊಬ್ಬರನ್ನಾಗಿ ಹಂತ ಹಂತವಾಗಿ ಏಳು ಮಂದಿಯನ್ನು ಹತ್ಯೆಗೈದು, ಮೃತದೇಹಗಳನ್ನು ಒಂದೊಂದು ಪ್ರದೇಶದಲ್ಲಿ ಎಸೆದು ಸಾಕ್ಷ್ಯಗಳನ್ನು ಮರೆಮಾಚಲು ಪ್ರಯತ್ನಿಸಿದ್ದ ಎಂಬ ಶಂಕೆ ವ್ಯಕ್ತವಾಗಿದೆ. ಈ ಎಲ್ಲ ಅಂಶಗಳ ಕುರಿತು ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಶಿವಕುಮಾರ್, ದಿವ್ಯಾ ಮೃತದೇಹಗಳ ಮರಣೋತ್ತರ ಪರೀಕ್ಷೆ

ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಪತ್ತೆಯಾಗಿದ್ದ ಶಿವಕುಮಾರ್ ಮತ್ತು ದಿವ್ಯಾ ಅವರ ಮೃತದೇಹಗಳ ಮರಣೋತ್ತರ ಪರೀಕ್ಷೆಯನ್ನು ಮೈಸೂರು ಮೆಡಿಕಲ್ ಕಾಲೇಜಿನ ಶವಾಗಾರದಲ್ಲಿ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಈಗಾಗಲೇ ಆರೋಪಿ ಮತ್ತು ಮೃತರ ಸಂಬಂಧಿಕರ ಸಮ್ಮುಖದಲ್ಲಿ ಮಹಜರು ಪ್ರಕ್ರಿಯೆ ನಡೆಸಲಾಗಿದೆ.

ವಾಹನವನ್ನು ಮುಖ್ಯ ರಸ್ತೆಯಲ್ಲಿ ನಿಲ್ಲಿಸಿ, ಅಲ್ಲಿಂದ ಪಕ್ಕದ ಕಂದಕಕ್ಕೆ ಮೃತದೇಹಗಳನ್ನು ಎಸೆದಿದ್ದ ಎಂಬ ಮಾಹಿತಿ ತನಿಖೆಯಲ್ಲಿ ತಿಳಿದುಬಂದಿದೆ. ಆರೋಪಿಯ ಸುಳಿವಿನ ಆಧಾರದಲ್ಲಿ ಪೊಲೀಸರು ಶವಗಳನ್ನು ಪತ್ತೆಹಚ್ಚಿದ್ದಾರೆ.

ಮೃತದೇಹಗಳನ್ನು ಕುಟುಂಬಸ್ಥರಿಗೆ ಹಸ್ತಾಂತರಿಸುವ ಸಾಧ್ಯತೆ

ಏಳು ಮೃತದೇಹಗಳೂ ಪತ್ತೆಯಾಗಿರುವ ಹಿನ್ನೆಲೆ ಮರಣೋತ್ತರ ಪರೀಕ್ಷೆ ಹಾಗೂ ಅಗತ್ಯ ಕಾನೂನು ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಮೃತದೇಹಗಳನ್ನು ಕುಟುಂಬಸ್ಥರಿಗೆ ಹಸ್ತಾಂತರಿಸುವ ಸಾಧ್ಯತೆಯಿದೆ. ಬಳಿಕ ಎಲ್ಲ ಮೃತರ ಅಂತ್ಯಕ್ರಿಯೆಯನ್ನು ಒಂದೇ ಕಡೆ ನಡೆಸಲು ಕುಟುಂಬಸ್ಥರು ನಿರ್ಧರಿಸಿದ್ದಾರೆ ಎನ್ನಲಾಗಿದೆ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled Design 2026 11 09T113143.300

ಒಂದೇ ಕುಟುಂಬದ 7 ಮಂದಿಯ ಹ*ತ್ಯೆ ಕೇಸ್: ಶಿರಾಡಿ ಘಾಟ್‌ನಲ್ಲಿ ಇಬ್ಬರ ಮೃತದೇಹ ಪತ್ತೆ

by ಶಾಲಿನಿ ಕೆ. ಡಿ
November 9, 2026 - 11:32 am
0

Untitled Design 2026 11 09T110930.317

ಯುದ್ಧ ನಿಲ್ಲಿಸುವ ಮಾತುಕತೆ ಮಧ್ಯೆಯೇ ಇರಾನ್ ಮೇಲೆ ಅಮೆರಿಕಾ ದಾಳಿ

by Hemanth Kumar S
November 9, 2026 - 11:10 am
0

Untitled Design 2026 11 09T105956.980

ದೀಪಾವಳಿ ಹಬ್ಬದ ಮೊದಲ ದಿನವೇ ಪಟಾಕಿ ಅವಘಡ: ಬೆಂಗಳೂರಲ್ಲಿ 42 ಮಂದಿಗೆ ಗಾಯ

by ಶಾಲಿನಿ ಕೆ. ಡಿ
November 9, 2026 - 11:01 am
0

Untitled Design (98)

ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆ ಸಾಧ್ಯತೆ

by ಶಾಲಿನಿ ಕೆ. ಡಿ
November 9, 2026 - 10:31 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled Design 2026 11 09T105956.980
    ದೀಪಾವಳಿ ಹಬ್ಬದ ಮೊದಲ ದಿನವೇ ಪಟಾಕಿ ಅವಘಡ: ಬೆಂಗಳೂರಲ್ಲಿ 42 ಮಂದಿಗೆ ಗಾಯ
    November 9, 2026 | 0
  • Untitled Design (98)
    ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆ ಸಾಧ್ಯತೆ
    November 9, 2026 | 0
  • Your paragraph text 2026 11 08T185054.202
    ಹಾಸನಾಂಬೆ ಸನ್ನಿಧಿಯಲ್ಲೇ ಅಧಿಕಾರಿಗಳ ಮಧ್ಯೆ ಕಿತ್ತಾಟ; ತಹಶೀಲ್ದಾರ್-ಡಿವೈಎಸ್‌ಪಿ ನಡುವೆ ವಾಗ್ವಾದ
    November 8, 2026 | 0
  • Your paragraph text 2026 11 08T180924.902
    ನಮ್ಮನ್ನ ಟಾರ್ಗೆಟ್‌ ಮಾಡುತ್ತಿದ್ದಾರೆ, ಎಲ್ಲದಕ್ಕೂ ರೆಡಿ ಇದ್ದೇವೆ’: ಹೆಚ್‌ಡಿಕೆ ಆರೋಪಕ್ಕೆ ಹಾಸನ ಡಿಸಿ ತಿರುಗೇಟು
    November 8, 2026 | 0
  • Untitled Design 2026 11 08T163617.350
    ಶಿರಸಿಯಲ್ಲಿ ವಿಚಿತ್ರ ಘಟನೆ: ಬಾವಿಯಲ್ಲಿ ಆಯಿಲ್‌ ಮಿಶ್ರಿತ ನೀರು ಪತ್ತೆ!
    November 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version