• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 29, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಬೆಂಗಳೂರು-ನೆಲಮಂಗಲ ರಾ. ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್.!: ವಾಹನ ಸವಾರರು ಹೈರಾಣು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 29, 2026 - 11:56 am
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ಗ್ರಾಮಾಂತರ
0 0
0
Untitled design 2026 08 29T115521.566

ನೆಲಮಂಗಲ: ವೀಕೆಂಡ್ ಹಿನ್ನೆಲೆ ಬೆಂಗಳೂರು ನಗರದಿಂದ ತಮ್ಮ ಊರುಗಳತ್ತ ತೆರಳುತ್ತಿದ್ದ ವಾಹನ ಸವಾರರಿಗೆ ಭಾರೀ ಟ್ರಾಫಿಕ್ ಜಾಮ್ ಬಿಸಿ ತಟ್ಟಿದೆ. ಬೆಂಗಳೂರು-ನೆಲಮಂಗಲ ನಡುವಿನ ರಾಷ್ಟ್ರೀಯ ಹೆದ್ದಾರಿಗಳಲ್ಲಿ ವಾಹನ ದಟ್ಟಣೆ ಹೆಚ್ಚಾಗಿದ್ದು, ಹಲವು ಕಿಲೋಮೀಟರ್‌ಗಳಷ್ಟು ದೂರ ವಾಹನಗಳು ಸಾಲುಗಟ್ಟಿ ನಿಂತಿರುವ ದೃಶ್ಯ ಕಂಡುಬಂದಿದೆ.

ಶನಿವಾರ ವೀಕೆಂಡ್ ಹಿನ್ನೆಲೆ ಬೆಳಗ್ಗೆಯಿಂದಲೇ ಬೆಂಗಳೂರು ನಗರದಿಂದ ಹೊರ ಜಿಲ್ಲೆಗಳತ್ತ ತೆರಳುವ ವಾಹನಗಳ ಸಂಖ್ಯೆ ಹೆಚ್ಚಾಗಿದೆ. ಇದರ ಪರಿಣಾಮ ಬೆಂಗಳೂರು-ನೆಲಮಂಗಲ ಮಾರ್ಗದಲ್ಲಿ ಸಂಚಾರ ದಟ್ಟಣೆ ಉಂಟಾಗಿದೆ. ಪ್ರಮುಖವಾಗಿ ರಾಷ್ಟ್ರೀಯ ಹೆದ್ದಾರಿ-48 (NH-48) ಹಾಗೂ ರಾಷ್ಟ್ರೀಯ ಹೆದ್ದಾರಿ-75 (NH-75)ರಲ್ಲಿ ವಾಹನಗಳ ಸಂಖ್ಯೆ ಹೆಚ್ಚಾಗಿ, ಕೆಲವು ಕಡೆ ವಾಹನಗಳು ನಿಧಾನಗತಿಯಲ್ಲಿ ಸಾಗುತ್ತಿವೆ.

RelatedPosts

ಚಾಮುಂಡೇಶ್ವರಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಡಿಸಿಎಂ ಜಿ. ಪರಮೇಶ್ವರ್

ರಾಜ್ಯದಲ್ಲಿ 300ಕ್ಕೂ ಹೆಚ್ಚು ಮೆಡಿಸಿನ್‌ ಬ್ಯಾಚ್‌ಗಳು ಕಳಪೆ!

ಕರ್ನಾಟಕದಲ್ಲಿ ವರುಣನ ಅಬ್ಬರ: ಕರಾವಳಿ, ಮಲೆನಾಡಿನಲ್ಲಿ ಗಾಳಿ ಸಹಿತ ಮಳೆ

ನೇಪಾಳ ಜಲಪ್ರಳಯ: ಇನ್ಫೋಸಿಸ್ ಸಿಇಒ ನಾಪತ್ತೆ, 1,000 ಕಾರ್ಮಿಕರ ರಕ್ಷಣೆಗೆ ಭಾರತದ ನೆರವು

ADVERTISEMENT
ADVERTISEMENT
ಕಿಲೋಮೀಟರ್‌ಗಟ್ಟಲೆ ವಾಹನಗಳ ಸಾಲು

ಬೆಂಗಳೂರು-ನೆಲಮಂಗಲ ಮಾರ್ಗವು ರಾಜ್ಯದ ಪ್ರಮುಖ ಸಂಪರ್ಕ ರಸ್ತೆಗಳಲ್ಲೊಂದಾಗಿದೆ. ಬೆಂಗಳೂರು ನಗರವನ್ನು ರಾಜ್ಯದ ವಿವಿಧ ಜಿಲ್ಲೆಗಳೊಂದಿಗೆ ಸಂಪರ್ಕಿಸುವ ಈ ಹೆದ್ದಾರಿಯಲ್ಲಿ ಪ್ರತಿನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ಅದರಲ್ಲೂ ವಾರಾಂತ್ಯದ ದಿನಗಳಲ್ಲಿ ನಗರದಿಂದ ಹೊರ ಜಿಲ್ಲೆಗಳು ಹಾಗೂ ತಮ್ಮ ಊರುಗಳತ್ತ ತೆರಳುವವರ ಸಂಖ್ಯೆ ಹೆಚ್ಚಾಗುವುದರಿಂದ ವಾಹನ ದಟ್ಟಣೆ ಮತ್ತಷ್ಟು ಹೆಚ್ಚಾಗುತ್ತದೆ.

ಶನಿವಾರವೂ ಇದೇ ಪರಿಸ್ಥಿತಿ ಮುಂದುವರಿದಿದ್ದು, ಹೆದ್ದಾರಿಯಲ್ಲಿ ವಾಹನಗಳು ಕಿಲೋಮೀಟರ್‌ಗಟ್ಟಲೆ ಸಾಲುಗಟ್ಟಿ ನಿಂತಿದ್ದವು. ಕೆಲವೆಡೆ ವಾಹನಗಳು ನಿಧಾನಗತಿಯಲ್ಲಿ ಚಲಿಸುತ್ತಿದ್ದರೆ, ಮತ್ತಷ್ಟು ಕಡೆಗಳಲ್ಲಿ ಸಣ್ಣ ಪ್ರಮಾಣದ ಜಾಮ್ ಕೂಡ ಕಂಡುಬಂದಿದೆ. ಇದರಿಂದ ಊರಿಗೆ ಹೊರಟಿದ್ದವರು ಹಾಗೂ ದೂರದ ಜಿಲ್ಲೆಗಳಿಗೆ ತೆರಳುತ್ತಿದ್ದ ಪ್ರಯಾಣಿಕರು ಸಾಕಷ್ಟು ತೊಂದರೆ ಅನುಭವಿಸುವಂತಾಗಿದೆ.

ಟ್ರಾಫಿಕ್ ನಿಯಂತ್ರಣಕ್ಕೆ ಪೊಲೀಸರ ಹರಸಾಹಸ

ವಾಹನ ದಟ್ಟಣೆ ಹೆಚ್ಚಾದ ಹಿನ್ನೆಲೆ ನೆಲಮಂಗಲ ಸಂಚಾರಿ ಪೊಲೀಸರು ಸ್ಥಳಕ್ಕೆ ತೆರಳಿ ಸಂಚಾರ ನಿಯಂತ್ರಿಸಲು ಹರಸಾಹಸ ನಡೆಸುತ್ತಿದ್ದಾರೆ. ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ಪೊಲೀಸರು ಪ್ರಮುಖ ಜಂಕ್ಷನ್‌ಗಳು ಹಾಗೂ ಹೆಚ್ಚು ದಟ್ಟಣೆ ಇರುವ ಪ್ರದೇಶಗಳಲ್ಲಿ ನಿಯೋಜನೆಗೊಂಡಿದ್ದಾರೆ.

ಹೆದ್ದಾರಿಯಲ್ಲಿ ವಾಹನಗಳ ಸಂಖ್ಯೆ ಹೆಚ್ಚಾಗುತ್ತಿದ್ದಂತೆ ಸಂಚಾರ ನಿರ್ವಹಣೆ ಪೊಲೀಸರಿಗೆ ಸವಾಲಾಗಿದೆ. ಒಂದೆಡೆ ವೀಕೆಂಡ್ ವಾಹನ ದಟ್ಟಣೆ, ಮತ್ತೊಂದೆಡೆ ಹೆದ್ದಾರಿಯಲ್ಲಿನ ಸಂಚಾರ ಸಮಸ್ಯೆಗಳಿಂದಾಗಿ ವಾಹನ ಸವಾರರು ನಿಧಾನವಾಗಿ ಸಾಗಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

22 ಜಿಲ್ಲೆಗಳಿಗೆ ಪ್ರಮುಖ ಸಂಪರ್ಕ

ಬೆಂಗಳೂರು-ನೆಲಮಂಗಲ ಮಾರ್ಗವು ಕೇವಲ ಬೆಂಗಳೂರು ಮತ್ತು ನೆಲಮಂಗಲ ನಡುವಿನ ಸಂಪರ್ಕಕ್ಕೆ ಸೀಮಿತವಾಗಿಲ್ಲ. ರಾಜ್ಯದ ಸುಮಾರು 22 ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ಹೆದ್ದಾರಿ ಮಾರ್ಗ ಇದಾಗಿದೆ. ಹೀಗಾಗಿ ಈ ರಸ್ತೆಯಲ್ಲಿ ಸಂಚಾರ ದಟ್ಟಣೆ ಉಂಟಾದರೆ ಅದರ ಪರಿಣಾಮ ದೂರದ ಜಿಲ್ಲೆಗಳಿಗೆ ತೆರಳುವ ವಾಹನಗಳ ಮೇಲೂ ಬೀಳುತ್ತದೆ.

ಹೆದ್ದಾರಿ ಸಮಸ್ಯೆಗಳ ಕುರಿತು ಜಿಲ್ಲಾಡಳಿತದಿಂದ ಹಲವು ಬಾರಿ ಮನವಿ ಮಾಡಿದ್ದರೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲ ಎಂಬ ಆರೋಪವೂ ಕೇಳಿಬರುತ್ತಿದೆ. 

ವರದಿ: ಮೂರ್ತಿ ಬೀರಯ್ಯನಪಾಳ್ಯ, ಗ್ಯಾರಂಟಿ ನ್ಯೂಸ್ 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (80)

ಭಾರತಕ್ಕೆ ಬಂತು 1.90 ಕೋಟಿ ಬೆಲೆಯ ರೇಂಜ್ ರೋವರ್ ಸ್ಪೋರ್ಟ್ ಟ್ವೆಂಟಿ

by ಕವಿತಾ
August 29, 2026 - 3:48 pm
0

Untitled design (79)

ನೇಪಾಳಕ್ಕೆ ಮತ್ತೊಂದು ಆಘಾತ: ಎರಡು ಸರೋವರಗಳಲ್ಲಿ ಅಪಾರ ನೀರು

by ಕವಿತಾ
August 29, 2026 - 3:27 pm
0

Untitled design 2026 08 29T144230.633

ಬಿಟೌನ್‌ಗೆ ಒರಿಜಿನಲ್ ಮಾನ್‌ಸ್ಟರ್ ದೊಡ್ಮನೆ ದೊರೆ ಶಿವಣ್ಣ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 29, 2026 - 2:43 pm
0

Untitled design 2026 08 29T142524.517

‘ಶಾಂತಿ’ಯಿಂದಿದ್ದ ರವಿಚಂದ್ರನ್ ರಾಜಕೀಯ ‘ಕ್ರಾಂತಿ’ ಶುರು

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 29, 2026 - 2:26 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 29T124704.607
    ಚಾಮುಂಡೇಶ್ವರಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಡಿಸಿಎಂ ಜಿ. ಪರಮೇಶ್ವರ್
    August 29, 2026 | 0
  • Karnataka government hospital medicines 301 batches failed quality test
    ರಾಜ್ಯದಲ್ಲಿ 300ಕ್ಕೂ ಹೆಚ್ಚು ಮೆಡಿಸಿನ್‌ ಬ್ಯಾಚ್‌ಗಳು ಕಳಪೆ!
    August 29, 2026 | 0
  • Untitled design 2026 08 29T081040.162
    ಕರ್ನಾಟಕದಲ್ಲಿ ವರುಣನ ಅಬ್ಬರ: ಕರಾವಳಿ, ಮಲೆನಾಡಿನಲ್ಲಿ ಗಾಳಿ ಸಹಿತ ಮಳೆ
    August 29, 2026 | 0
  • Untitled design 2026 08 29T075440.305
    ನೇಪಾಳ ಜಲಪ್ರಳಯ: ಇನ್ಫೋಸಿಸ್ ಸಿಇಒ ನಾಪತ್ತೆ, 1,000 ಕಾರ್ಮಿಕರ ರಕ್ಷಣೆಗೆ ಭಾರತದ ನೆರವು
    August 29, 2026 | 0
  • Your paragraph text (52)
    ಪಕ್ಷಕ್ಕೆ ಮುಜುಗರವಾಗಬಾರದು ಎಂಬ ಕಾರಣಕ್ಕೆ ರಾಜೀನಾಮೆ ಕೊಡ್ತೇನೆ: ಕಣ್ಣೀರಾಕಿದ ಬಿ.ನಾಗೇಂದ್ರ
    August 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version