• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, June 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಹೊಸ ವರ್ಷದ ಸಂಭ್ರಮಕ್ಕೆ ‘ಖಾಕಿ’ ಹೈ ಅಲರ್ಟ್!: ಬೆಂಗಳೂರು ಪೊಲೀಸರ ಭರ್ಜರಿ ಸಿದ್ಧತೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 27, 2025 - 10:37 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 12 27T223124.056

RelatedPosts

ಮುಂಗಾರು ಚುರುಕು: ಬೆಂಗಳೂರಲ್ಲಿ ಇಂದು ಮಳೆ

ಬಿಜೆಪಿ ಹೈಕಮಾಂಡ್ ಅಲರ್ಟ್: ರಾಜ್ಯ ನಾಯಕರಿಗೆ ದೆಹಲಿಗೆ ಬುಲಾವ್

NEET-UG 2026 ಮರು ಪರೀಕ್ಷೆ: ಬೆಂಗಳೂರಿನಲ್ಲಿ ಬಿಗಿ ಭದ್ರತೆ, 200 ಮೀಟರ್ ನಿಷೇಧಾಜ್ಞೆ ಜಾರಿ

ಜೂನ್ 25ರಂದು ತುಂಗಭದ್ರಾ ಜಲಾಶಯದ 33 ಕ್ರಸ್ಟ್ ಗೇಟ್‌ಗಳ ಲೋಕಾರ್ಪಣೆ

ADVERTISEMENT
ADVERTISEMENT

ಬೆಂಗಳೂರು: 2025ಕ್ಕೆ ವಿದಾಯ ಹೇಳಿ 2026ನ್ನು ಸ್ವಾಗತಿಸುವ ಕ್ಷಣಕ್ಕೆ ಸಿಲಿಕಾನ್ ಸಿಟಿ ಬೆಂಗಳೂರು ಸಜ್ಜಾಗಿದೆ. ಹೊಸ ವರ್ಷಾಚರಣೆಯ ಸಂಭ್ರಮ ನಗರದೆಲ್ಲೆಡೆ ಜೋರಾಗುತ್ತಿರುವ ಹಿನ್ನೆಲೆ, ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡದಂತೆ ಬೆಂಗಳೂರು ಪೊಲೀಸರು ಕಟ್ಟುನಿಟ್ಟಿನ ಭದ್ರತಾ ಕ್ರಮಗಳನ್ನು ಜಾರಿಗೊಳಿಸಿದ್ದಾರೆ. ಇದರಿಂದಾಗಿ ಡಿಸೆಂಬರ್ 31ರ ಸಂಜೆಯಿಂದಲೇ ನಗರಾದ್ಯಂತ ಖಾಕಿ ಪಡೆ ಹೈ ಅಲರ್ಟ್ ಆಗಿದ್ದಾರೆ.

ಹೊಸ ವರ್ಷದ ಸಂಭ್ರಮದಲ್ಲಿ ಲಕ್ಷಾಂತರ ಜನರು ರಸ್ತೆಗೆ ಇಳಿಯುವ ನಿರೀಕ್ಷೆ ಇರುವುದರಿಂದ, ಸಾರ್ವಜನಿಕರ ಸುರಕ್ಷತೆ, ಸಂಚಾರ ನಿಯಂತ್ರಣ ಹಾಗೂ ಮಹಿಳೆಯರ ರಕ್ಷಣೆಗೆ ಪೊಲೀಸರು ವಿಶೇಷ ಯೋಜನೆ ರೂಪಿಸಿದ್ದಾರೆ. ನಗರದ ಪ್ರಮುಖ ಜಂಕ್ಷನ್‌ಗಳು, ವಾಣಿಜ್ಯ ಪ್ರದೇಶಗಳು, ಐಟಿ-ಬಿಟಿ ಹಬ್‌ಗಳು, ಬಾರ್-ರೆಸ್ಟೋರೆಂಟ್ ಪ್ರದೇಶಗಳು ಮತ್ತು ಜನಸಂದಣಿ ಹೆಚ್ಚಿರುವ ಸ್ಥಳಗಳಲ್ಲಿ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರು ಸ್ವತಃ ನಗರದಲ್ಲಿ ರೌಂಡ್ಸ್ ನಡೆಸಿ ಭದ್ರತಾ ವ್ಯವಸ್ಥೆಗಳನ್ನು ಪರಿಶೀಲಿಸಿದರು. ನ್ಯೂ ಇಯರ್ ವೇಳೆ ಯಾವ ರೀತಿಯ ಕ್ರಮಗಳನ್ನು ಕೈಗೊಳ್ಳಬೇಕು ಎಂಬುದರ ಕುರಿತು ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಉನ್ನತ ಮಟ್ಟದ ಸಭೆ ಕೂಡ ನಡೆಸಲಾಗಿದೆ. ಈ ಸಭೆಯಲ್ಲಿ ಸಂಚಾರ ನಿರ್ಬಂಧ, ಫ್ಲೈಓವರ್‌ಗಳ ಓಪನ್ ಅಥವಾ ಕ್ಲೋಸ್ ನಿರ್ಧಾರ, ಜನಸಂದಣಿ ನಿಯಂತ್ರಣ ಹಾಗೂ ತುರ್ತು ಸೇವೆಗಳ ಸಂಯೋಜನೆ ಕುರಿತು ಚರ್ಚೆ ನಡೆದಿದೆ.

ಎಲೆಕ್ಟ್ರಾನಿಕ್ಸ್ ಸಿಟಿಯಲ್ಲಿ ಹೈ ಅಲರ್ಟ್

ಐಟಿ-ಬಿಟಿ ಉದ್ಯೋಗಿಗಳು ಹೆಚ್ಚಿರುವ ಎಲೆಕ್ಟ್ರಾನಿಕ್ಸ್ ಸಿಟಿ ಪ್ರದೇಶದಲ್ಲಿ ವಿಶೇಷ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಜಂಟಿ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಅವರು ಡಿಸಿಪಿ ಎಂ. ನಾರಾಯಣ್ ಅವರೊಂದಿಗೆ ಸ್ಥಳ ಪರಿಶೀಲನೆ ನಡೆಸಿದರು.

ಬಸ್ ನಿಲ್ದಾಣಗಳು, ಆಸ್ಪತ್ರೆಗಳು, ಮೆಟ್ರೋ ರೈಲು ಸಂಪರ್ಕ ಮಾರ್ಗಗಳು ಹಾಗೂ ಪಾದಚಾರಿಗಳ ಸಂಚಾರ ಹೆಚ್ಚಿರುವ ಸ್ಥಳಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಲಾಗಿದೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮಗಳ ಜತೆಗೆ ಸಿಸಿಟಿವಿ ಕ್ಯಾಮೆರಾಗಳ ಮೂಲಕ ನಿರಂತರ ನಿಗಾ ವಹಿಸಲಾಗಿದೆ.

ಮಹಿಳೆಯರ ಸುರಕ್ಷತೆಗೆ ವಿಶೇಷ ಗಮನ

ಹೊಸ ವರ್ಷದ ಸಂಭ್ರಮದಲ್ಲಿ ಮಹಿಳೆಯರ ಸುರಕ್ಷತೆಗೆ ವಿಶೇಷ ಒತ್ತು ನೀಡಲಾಗಿದೆ. ರಾಣಿ ಚೆನ್ನಮ್ಮ ಪಡೆಯನ್ನು ಪ್ರಮುಖ ಪ್ರದೇಶಗಳಲ್ಲಿ ನಿಯೋಜಿಸಲಾಗಿದೆ. ಮಹಿಳೆಯರಿಗೆ ಕಿರುಕುಳ ನೀಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

ಎಲೆಕ್ಟ್ರಾನಿಕ್ಸ್ ಸಿಟಿ ಇನ್ಸ್‌ಪೆಕ್ಟರ್ ನವೀನ್ ಕುಮಾರ್ ಅವರು ಮಾತನಾಡಿ, ಮಹಿಳೆಯರ ರಕ್ಷಣೆಗೆ ವಿಶೇಷ ಪ್ಯಾಟ್ರೋಲಿಂಗ್, ತಕ್ಷಣ ಸ್ಪಂದಿಸುವ ತಂಡಗಳು ಹಾಗೂ ಸಹಾಯವಾಣಿ ವ್ಯವಸ್ಥೆ ಸಿದ್ಧವಾಗಿದೆ ಎಂದು ತಿಳಿಸಿದ್ದಾರೆ.

ಸಂಚಾರ ನಿಯಂತ್ರಣ ಮತ್ತು ಸಾರ್ವಜನಿಕರಿಗೆ ಮನವಿ

ಡಿಸೆಂಬರ್ 31ರ ರಾತ್ರಿ ಕೆಲವು ಪ್ರಮುಖ ರಸ್ತೆಗಳಲ್ಲಿ ಸಂಚಾರ ನಿರ್ಬಂಧ ಜಾರಿಯಾಗುವ ಸಾಧ್ಯತೆ ಇದೆ. ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತದೆ. ಸಾರ್ವಜನಿಕರು ಸಹಕರಿಸಬೇಕು, ಸಂಭ್ರಮವನ್ನು ಸಂಯಮದಿಂದ ಆಚರಿಸಬೇಕು ಹಾಗೂ ಪೊಲೀಸ್ ಸೂಚನೆಗಳನ್ನು ಪಾಲಿಸಬೇಕು ಎಂದು ಬೆಂಗಳೂರು ಪೊಲೀಸರು ಮನವಿ ಮಾಡಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 20T103432.126

ಕ್ರಿಕೆಟ್ ಅಭಿಮಾನಿಗಳಿಗೆ ಸಿಹಿಸುದ್ದಿ: ಇಂದಿನಿಂದ ಮಹಾರಾಜ ಟಿ20 ಟ್ರೋಫಿ ಆರಂಭ

by ದಿಶಾ ಕೆ. ಎಸ್.
June 20, 2026 - 10:35 am
0

Untitled design (62)

ಮುಂಗಾರು ಚುರುಕು: ಬೆಂಗಳೂರಲ್ಲಿ ಇಂದು ಮಳೆ

by ಕವಿತಾ
June 20, 2026 - 10:30 am
0

Untitled design (61)

ಲಡಾಖ್‌ನಲ್ಲಿ ಪ್ಲಾಸ್ಟಿಕ್‌ ಬಳಕೆ ನಿಷೇಧ: ಉಲ್ಲಂಘಿಸಿದರೆ ದಂಡ ಫಿಕ್ಸ್!

by ಕವಿತಾ
June 19, 2026 - 7:11 pm
0

Untitled design (60)

ಸೆನ್ಸಾರ್ ನಿಯಮ ಉಲ್ಲಂಘನೆ: ‘ಮಾಲಿವುಡ್ ಟೈಮ್ಸ್’ ಚಿತ್ರತಂಡಕ್ಕೆ ಸಂಕಷ್ಟ

by ಕವಿತಾ
June 19, 2026 - 6:53 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (62)
    ಮುಂಗಾರು ಚುರುಕು: ಬೆಂಗಳೂರಲ್ಲಿ ಇಂದು ಮಳೆ
    June 20, 2026 | 0
  • Untitled design 2026 06 19T184247.864
    ಬಿಜೆಪಿ ಹೈಕಮಾಂಡ್ ಅಲರ್ಟ್: ರಾಜ್ಯ ನಾಯಕರಿಗೆ ದೆಹಲಿಗೆ ಬುಲಾವ್
    June 19, 2026 | 0
  • Untitled design 2026 06 19T171843.826
    NEET-UG 2026 ಮರು ಪರೀಕ್ಷೆ: ಬೆಂಗಳೂರಿನಲ್ಲಿ ಬಿಗಿ ಭದ್ರತೆ, 200 ಮೀಟರ್ ನಿಷೇಧಾಜ್ಞೆ ಜಾರಿ
    June 19, 2026 | 0
  • Untitled design 2026 06 19T164502.841
    ಜೂನ್ 25ರಂದು ತುಂಗಭದ್ರಾ ಜಲಾಶಯದ 33 ಕ್ರಸ್ಟ್ ಗೇಟ್‌ಗಳ ಲೋಕಾರ್ಪಣೆ
    June 19, 2026 | 0
  • Untitled design 2026 06 19T161416.572
    ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ಆರ್ ಅಶೋಕ್ ವಾಗ್ದಾಳಿ
    June 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version