• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, November 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ನಾಳೆ ಕರ್ನಾಟಕಕ್ಕೆ ಪ್ರಧಾನಿ ಮೋದಿ ಭೇಟಿ: ಬೆಂಗಳೂರಿನಲ್ಲಿ ಹೈ ಅಲರ್ಟ್, 1,000ಕ್ಕೂ ಹೆಚ್ಚು ಪೊಲೀಸರ ಭದ್ರತೆ!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 12, 2026 - 1:02 pm
in ಕರ್ನಾಟಕ
0 0
0
ನಾಳೆ ಕರ್ನಾಟಕಕ್ಕೆ ಪ್ರಧಾನಿ ಮೋದಿ ಭೇಟಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ಕರ್ನಾಟಕಕ್ಕೆ ಭೇಟಿ ನೀಡಲಿರುವ ಹಿನ್ನೆಲೆ ರಾಜಧಾನಿ ಬೆಂಗಳೂರಿನಲ್ಲಿ ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು ಬಿಗಿಗೊಳಿಸಲಾಗಿದೆ. ಪ್ರಧಾನಿ ಸಂಚರಿಸಲಿರುವ ರಸ್ತೆಗಳಲ್ಲಿ ಪೊಲೀಸ್ ಇಲಾಖೆ ಹದ್ದಿನ ಕಣ್ಣಿಟ್ಟಿದ್ದು, ಯಾವುದೇ ರೀತಿಯ ಭದ್ರತಾ ಲೋಪ ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ. ವಿಶೇಷ ರಕ್ಷಣಾ ಪಡೆ (SPG) ಹಾಗೂ ಬೆಂಗಳೂರು ನಗರ ಪೊಲೀಸರು ಜಂಟಿಯಾಗಿ ಭದ್ರತಾ ಕಾರ್ಯಾಚರಣೆ ನಡೆಸುತ್ತಿದ್ದು, ನಗರದ ಪ್ರಮುಖ ರಸ್ತೆಗಳಿಂದ ಹಿಡಿದು ಕಾರ್ಯಕ್ರಮ ನಡೆಯುವ ಸ್ಥಳದವರೆಗೆ ಕಟ್ಟುನಿಟ್ಟಿನ ನಿಗಾ ವಹಿಸಲಾಗಿದೆ.

ಪ್ರಧಾನಿ ಮೋದಿ ಅವರ ಭೇಟಿಯ ಹಿನ್ನೆಲೆ ಈಗಾಗಲೇ ಬೆಂಗಳೂರಿನಲ್ಲಿ ಭದ್ರತಾ ಸಿದ್ಧತೆಗಳು ಆರಂಭವಾಗಿವೆ. ಸುಮಾರು 10 ದಿನಗಳ ಹಿಂದೆಯೇ SPG ತಂಡಗಳು ರಾಜಧಾನಿಗೆ ಆಗಮಿಸಿ, ಪ್ರಧಾನಿ ಸಂಚರಿಸಲಿರುವ ಮಾರ್ಗಗಳು, ಮೆಟ್ರೋ ರೈಲು ಮಾರ್ಗಗಳು ಹಾಗೂ ಕಾರ್ಯಕ್ರಮ ನಡೆಯುವ ಸ್ಥಳಗಳಲ್ಲಿ ಪರಿಶೀಲನೆ ನಡೆಸಿವೆ. SPGಯ 13 ತಂಡಗಳು ವಿವಿಧ ಪ್ರದೇಶಗಳಲ್ಲಿ ಭದ್ರತಾ ವ್ಯವಸ್ಥೆಯನ್ನು ಪರಿಶೀಲಿಸುತ್ತಿದ್ದು, ಪ್ರತಿಯೊಂದು ಹಂತದಲ್ಲೂ ಸುರಕ್ಷತೆಗೆ ಆದ್ಯತೆ ನೀಡುತ್ತಿವೆ.

RelatedPosts

3 ಕೋಟಿ ಆಸ್ತಿಗಾಗಿ ಏಳು ಜನರ ಕೊಲೆ, ಮಗಳ ಬ್ರೈನ್‌ವಾಷ್ ಮಾಡಿದ್ದ ಹಂತಕ ತಂದೆ: ತನಿಖೆಯಲ್ಲಿ ಸಾಬೀತು

ಖಾಸಗಿ ಫೋಟೋ ವೈರಲ್ ಮಾಡುವುದಾಗಿ ಜೂನಿಯರ್ ಆರ್ಟಿಸ್ಟ್‌‌ಗೆ ಮಾಜಿ ಪ್ರಿಯಕರನಿಂದ ಬೆದರಿಕೆ

ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಒಣ ಹವೆ, ಚಳಿ ಹೆಚ್ಚಳ

ನಂದಿನಿ ಬೆನ್ನಲ್ಲೇ ಮದರ್ ಡೈರಿ ಹಾಲಿನ ದರ ಏರಿಕೆ!

ADVERTISEMENT
ADVERTISEMENT
ಮೋದಿ ಸಂಚರಿಸುವ ಮಾರ್ಗಗಳಲ್ಲಿ ಹದ್ದಿನ ಕಣ್ಣು

ಪ್ರಧಾನಿ ಮೋದಿ ಅವರ ಸಂಚಾರದ ಹಿನ್ನೆಲೆ ನಗರದ ಪ್ರಮುಖ ರಸ್ತೆಗಳಲ್ಲಿ ವಿಶೇಷ ಭದ್ರತಾ ವ್ಯವಸ್ಥೆ ಮಾಡಲಾಗಿದೆ. ಪ್ರಧಾನಿ ಸಂಚರಿಸಲಿರುವ ಮಾರ್ಗಗಳಲ್ಲಿನ ಪ್ರತಿಯೊಂದು ಪ್ರಮುಖ ಸ್ಥಳವನ್ನೂ ಪರಿಶೀಲಿಸಲಾಗುತ್ತಿದೆ. ರಸ್ತೆ ಬದಿಯ ಕಟ್ಟಡಗಳು, ಅಪಾರ್ಟ್‌ಮೆಂಟ್‌ಗಳು ಹಾಗೂ ಜನಸಂದಣಿ ಹೆಚ್ಚಿರುವ ಪ್ರದೇಶಗಳ ಮೇಲೆ ವಿಶೇಷ ನಿಗಾ ಇರಿಸಲಾಗಿದೆ.

ಪ್ರಮುಖ ರಸ್ತೆಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸುವುದರ ಜೊತೆಗೆ, ಎತ್ತರದ ಕಟ್ಟಡಗಳ ಮೇಲೆ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗುತ್ತಿದೆ. ಹೈರಿಸ್ಕ್ ಅಪಾರ್ಟ್‌ಮೆಂಟ್‌ಗಳಿಗೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಅಪಾರ್ಟ್‌ಮೆಂಟ್‌ಗಳಿಗೆ ಹೊಸದಾಗಿ ಯಾರಾದರೂ ಆಗಮಿಸಿದರೆ ಅವರ ವಿವರಗಳನ್ನು ಪೊಲೀಸರಿಗೆ ತಿಳಿಸುವಂತೆ ನಿವಾಸಿಗಳಿಗೆ ಸೂಚನೆ ನೀಡಲಾಗಿದೆ.

ಇದಲ್ಲದೆ, ಪ್ರಧಾನಿ ಸಂಚರಿಸುವ ರಸ್ತೆಗಳಲ್ಲಿ ವಿಶೇಷ ತಪಾಸಣಾ ಕಾರ್ಯಾಚರಣೆ ನಡೆಸುವಂತೆ SPG ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಅನುಮಾನಾಸ್ಪದ ವ್ಯಕ್ತಿಗಳು ಹಾಗೂ ವಸ್ತುಗಳ ಮೇಲೆ ನಿಗಾ ಇರಿಸುವಂತೆ ಸ್ಥಳೀಯ ಪೊಲೀಸ್ ಠಾಣೆಗಳಿಗೂ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.

ಕಳೆದ ಬಾರಿ ಜಿಲೆಟಿನ್ ಕಡ್ಡಿಗಳ ಬಾಕ್ಸ್ ಪತ್ತೆ: ಈ ಬಾರಿ ಹೈ ಅಲರ್ಟ್

ಪ್ರಧಾನಿ ಮೋದಿ ಅವರ ಹಿಂದಿನ ಬೆಂಗಳೂರು ಭೇಟಿಯ ಸಂದರ್ಭದಲ್ಲಿ ಸಂಭವಿಸಿದ್ದ ಘಟನೆಯೊಂದು ಇದೀಗ ಭದ್ರತಾ ಸಂಸ್ಥೆಗಳಿಗೆ ಮತ್ತೆ ನೆನಪಾಗಿದೆ. ಕಳೆದ ಬಾರಿ ಪ್ರಧಾನಿ ಸಂಚರಿಸಲಿದ್ದ ಮಾರ್ಗದಲ್ಲಿ ಜಿಲೆಟಿನ್ ಕಡ್ಡಿಗಳಿದ್ದ ಬಾಕ್ಸ್ ಪತ್ತೆಯಾಗಿದ್ದು, ಭಾರೀ ಆತಂಕಕ್ಕೆ ಕಾರಣವಾಗಿತ್ತು.

ಕಗ್ಗಲೀಪುರದ ತಾತಗುಣಿ ಸಮೀಪದ ಆರ್ಟ್ ಆಫ್ ಲಿವಿಂಗ್‌ನ ರವಿಶಂಕರ್ ಗುರೂಜಿ ಆಶ್ರಮಕ್ಕೆ ಪ್ರಧಾನಿ ಮೋದಿ ಭೇಟಿ ನೀಡಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿತ್ತು. ಪ್ರಧಾನಿ ಸಂಚರಿಸಲಿದ್ದ ಮಾರ್ಗದಲ್ಲಿ ಸ್ಫೋಟಕ ವಸ್ತುಗಳು ಪತ್ತೆಯಾಗಿದೆ.

ಈ ಘಟನೆಗೆ ಸಂಬಂಧಿಸಿದಂತೆ ಭದ್ರತಾ ಲೋಪದ ಆರೋಪದ ಹಿನ್ನೆಲೆ ಆರು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿತ್ತು. ಈ ಹಿಂದಿನ ಅನುಭವದಿಂದ ಎಚ್ಚೆತ್ತುಕೊಂಡಿರುವ ಪೊಲೀಸ್ ಇಲಾಖೆ, ಈ ಬಾರಿ ಯಾವುದೇ ಸಣ್ಣ ಲೋಪಕ್ಕೂ ಅವಕಾಶ ನೀಡದಂತೆ ಭದ್ರತಾ ವ್ಯವಸ್ಥೆಯನ್ನು ರೂಪಿಸಿದೆ.

1,000ಕ್ಕೂ ಅಧಿಕ ಪೊಲೀಸರ ನಿಯೋಜನೆ

ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರ ನೇತೃತ್ವದಲ್ಲಿ ಬೃಹತ್ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಪ್ರಧಾನಿ ಭೇಟಿಯ ಭದ್ರತಾ ಕಾರ್ಯಕ್ಕಾಗಿ ಹಿರಿಯ ಅಧಿಕಾರಿಗಳಿಂದ ಹಿಡಿದು ಕೆಳಹಂತದ ಪೊಲೀಸ್ ಸಿಬ್ಬಂದಿಯವರೆಗೆ ಸಾವಿರಕ್ಕೂ ಅಧಿಕ ಮಂದಿಯನ್ನು ನಿಯೋಜಿಸಲಾಗಿದೆ.

ಭದ್ರತಾ ವ್ಯವಸ್ಥೆಯಲ್ಲಿ ಮೂವರು ಜಂಟಿ ಪೊಲೀಸ್ ಆಯುಕ್ತರು, 15 ಮಂದಿ ಡಿಸಿಪಿಗಳು, 20 ಮಂದಿ ಎಸಿಪಿಗಳು, 30 ಇನ್ಸ್‌ಪೆಕ್ಟರ್‌ಗಳು ಹಾಗೂ 100ಕ್ಕೂ ಅಧಿಕ ಸಬ್ ಇನ್ಸ್‌ಪೆಕ್ಟರ್‌ಗಳು ಭಾಗಿಯಾಗಲಿದ್ದಾರೆ. ಇದರ ಜೊತೆಗೆ 1,000ಕ್ಕೂ ಅಧಿಕ ಸಿವಿಲ್ ಪೊಲೀಸ್ ಸಿಬ್ಬಂದಿಯನ್ನು ವಿವಿಧ ಸ್ಥಳಗಳಲ್ಲಿ ನಿಯೋಜಿಸಲಾಗಿದೆ.

ನಗರದ ಪ್ರಮುಖ ಜಂಕ್ಷನ್‌ಗಳು, ಸಂಚಾರ ಮಾರ್ಗಗಳು, ಕಾರ್ಯಕ್ರಮದ ಸ್ಥಳ ಹಾಗೂ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚುವರಿ ಪೊಲೀಸ್ ಸಿಬ್ಬಂದಿ ಕರ್ತವ್ಯ ನಿರ್ವಹಿಸಲಿದ್ದಾರೆ.

ಭದ್ರತಾ ಲೋಪವಾಗದಂತೆ ಪೊಲೀಸರ ಕಟ್ಟೆಚ್ಚರ

ಪ್ರಧಾನಿ ಮೋದಿ ಅವರ ಭೇಟಿಯ ಹಿನ್ನೆಲೆಯಲ್ಲಿ ಕೇವಲ ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ಮಾತ್ರವಲ್ಲದೆ, ಅವರು ಸಂಚರಿಸಲಿರುವ ಸಂಪೂರ್ಣ ಮಾರ್ಗಕ್ಕೆ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಸಿದ್ಧತೆ ನಡೆಸಲಾಗಿದೆ. ಸಿಸಿಟಿವಿ ನಿಗಾ, ಕಟ್ಟಡಗಳ ಪರಿಶೀಲನೆ, ವಾಹನ ತಪಾಸಣೆ ಹಾಗೂ ಅನುಮಾನಾಸ್ಪದ ಚಟುವಟಿಕೆಗಳ ಮೇಲೆ ನಿಗಾ ಇಡುವ ಮೂಲಕ ಪೊಲೀಸರು ಮುನ್ನೆಚ್ಚರಿಕೆ ವಹಿಸಿದ್ದಾರೆ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ನಾಳೆ ಕರ್ನಾಟಕಕ್ಕೆ ಪ್ರಧಾನಿ ಮೋದಿ ಭೇಟಿ

ನಾಳೆ ಕರ್ನಾಟಕಕ್ಕೆ ಪ್ರಧಾನಿ ಮೋದಿ ಭೇಟಿ: ಬೆಂಗಳೂರಿನಲ್ಲಿ ಹೈ ಅಲರ್ಟ್, 1,000ಕ್ಕೂ ಹೆಚ್ಚು ಪೊಲೀಸರ ಭದ್ರತೆ!

by ಶಾಲಿನಿ ಕೆ. ಡಿ
November 12, 2026 - 1:02 pm
0

Untitled design 2026 11 12T124221.395

3 ಕೋಟಿ ಆಸ್ತಿಗಾಗಿ ಏಳು ಜನರ ಕೊಲೆ, ಮಗಳ ಬ್ರೈನ್‌ವಾಷ್ ಮಾಡಿದ್ದ ಹಂತಕ ತಂದೆ: ತನಿಖೆಯಲ್ಲಿ ಸಾಬೀತು

by ಶಾಲಿನಿ ಕೆ. ಡಿ
November 12, 2026 - 12:43 pm
0

Untitled Design 2026 11 12T121149.830

ಗೆಳತಿ ಸಮ್ರೀನ್ ಕೌರ್ ಜೊತೆ ಎಂಗೇಜ್‌ ಆದ ಕ್ರಿಕೆಟರ್‌ ಅರ್ಷ್‌ದೀಪ್ ಸಿಂಗ್

by ಶಾಲಿನಿ ಕೆ. ಡಿ
November 12, 2026 - 12:08 pm
0

ಖಾಸಗಿ ಫೋಟೋ ವೈರಲ್ ಮಾಡುವುದಾಗಿ ಜೂನಿಯರ್ ಆರ್ಟಿಸ್ಟ್ ಗೆ ಮಾಜಿ ಪ್ರಿಯಕರನಿಂದ ಬೆದರಿಕೆ

ಖಾಸಗಿ ಫೋಟೋ ವೈರಲ್ ಮಾಡುವುದಾಗಿ ಜೂನಿಯರ್ ಆರ್ಟಿಸ್ಟ್‌‌ಗೆ ಮಾಜಿ ಪ್ರಿಯಕರನಿಂದ ಬೆದರಿಕೆ

by ಶಾಲಿನಿ ಕೆ. ಡಿ
November 12, 2026 - 11:43 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 11 12T124221.395
    3 ಕೋಟಿ ಆಸ್ತಿಗಾಗಿ ಏಳು ಜನರ ಕೊಲೆ, ಮಗಳ ಬ್ರೈನ್‌ವಾಷ್ ಮಾಡಿದ್ದ ಹಂತಕ ತಂದೆ: ತನಿಖೆಯಲ್ಲಿ ಸಾಬೀತು
    November 12, 2026 | 0
  • ಖಾಸಗಿ ಫೋಟೋ ವೈರಲ್ ಮಾಡುವುದಾಗಿ ಜೂನಿಯರ್ ಆರ್ಟಿಸ್ಟ್ ಗೆ ಮಾಜಿ ಪ್ರಿಯಕರನಿಂದ ಬೆದರಿಕೆ
    ಖಾಸಗಿ ಫೋಟೋ ವೈರಲ್ ಮಾಡುವುದಾಗಿ ಜೂನಿಯರ್ ಆರ್ಟಿಸ್ಟ್‌‌ಗೆ ಮಾಜಿ ಪ್ರಿಯಕರನಿಂದ ಬೆದರಿಕೆ
    November 12, 2026 | 0
  • Untitled Design 2026 11 12T111543.623
    ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಒಣ ಹವೆ, ಚಳಿ ಹೆಚ್ಚಳ
    November 12, 2026 | 0
  • Your paragraph text (17)
    ನಂದಿನಿ ಬೆನ್ನಲ್ಲೇ ಮದರ್ ಡೈರಿ ಹಾಲಿನ ದರ ಏರಿಕೆ!
    November 11, 2026 | 0
  • ಆತ್ಮಹತ್ಯೆ! (10)
    ರೈತರು ಆತಂಕ ಪಡಬೇಕಿಲ್ಲ, ಬರಪರಿಹಾರ ತಲುಪಲಿದೆ: ಸಿಎಂ‌ ಡಿ ಕೆ‌ ಶಿವಕುಮಾರ್
    November 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version