• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, September 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬೆಂಗಳೂರಿಗೆ ಪೂರ್ಣ ಪ್ರಮಾಣದ ಅಮೆರಿಕ ಕಾನ್ಸುಲೇಟ್ ಅಗತ್ಯ: ಸಿಎಂ ಡಿ.ಕೆ ಶಿವಕುಮಾರ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 7, 2026 - 10:16 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0
Your paragraph text (39)

ಬೆಂಗಳೂರು: ‘ ಭಾರತ–ಅಮೆರಿಕ ತಂತ್ರಜ್ಞಾನ ಮತ್ತು ನಾವೀನ್ಯತಾ ಸಹಭಾಗಿತ್ವದ ಪ್ರಮುಖ ಕೇಂದ್ರವಾಗಿ ಬೆಂಗಳೂರು ಬೆಳೆಯುತ್ತಿದ್ದು, ನಗರದಲ್ಲಿ ಪೂರ್ಣ ಪ್ರಮಾಣದ ಅಮೆರಿಕ ಕಾನ್ಸುಲೇಟ್ ಸ್ಥಾಪನೆಯಾಗಬೇಕು’ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮನವಿ ಮಾಡಿದರು.

ಬೆಂಗಳೂರಿನ ಸೈನ್ಸ್ ಗ್ಯಾಲರಿಯಲ್ಲಿ ‘ಕ್ವಾಂಟಮ್’ ಪ್ರದರ್ಶನ ಉದ್ಘಾಟಿಸಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ 700ಕ್ಕೂ ಹೆಚ್ಚು ಅಮೆರಿಕನ್ ಕಂಪನಿಗಳು, 10 ಸಾವಿರಕ್ಕೂ ಹೆಚ್ಚು ಸ್ಟಾರ್ಟ್ಅಪ್ಗಳು ಹಾಗೂ 10 ಲಕ್ಷಕ್ಕೂ ಹೆಚ್ಚು ತಂತ್ರಜ್ಞಾನ ಉದ್ಯೋಗಿಗಳಿದ್ದಾರೆ. ಭಾರತದಲ್ಲಿ ಅಮೆರಿಕದ ಅತಿ ದೊಡ್ಡ ತಂತ್ರಜ್ಞಾನ ಮತ್ತು ನಾವೀನ್ಯತೆಯ ಪಾಲುದಾರ ನಗರವಾಗಿರುವ ಬೆಂಗಳೂರಿಗೆ ಪೂರ್ಣ ಪ್ರಮಾಣದ ಕಾನ್ಸುಲೇಟ್ ಅಗತ್ಯವಿದೆ ಎಂದು ಮುಖ್ಯಮಂತ್ರಿಗಳು ಪ್ರತಿಪಾದಿಸಿದರು.

RelatedPosts

ಸೆ.26ರಿಂದ ಸಕ್ರೆಬೈಲು ಆನೆ ಬಿಡಾರ ಪ್ರವಾಸಿಗರಿಗೆ ಮುಕ್ತ

ಜ್ಞಾನೇಶ್ ಕುಮಾರ್ ರಾಜೀನಾಮೆಗೆ CJP 48 ಗಂಟೆ ಗಡುವು: ವಿಫಲವಾದರೆ ಹೋರಾಟದ ಎಚ್ಚರಿಕೆ

ಜನಸಾಮಾನ್ಯರಿಗೆ ಸಿಹಿಸುದ್ದಿ: ಅಡುಗೆ ಎಣ್ಣೆ ಮೇಲಿನ ಆಮದು ಸುಂಕ ಕಡಿತ

ಬರದ ನಡುವೆ ರೈತರಿಗೆ ಗುಡ್‌ನ್ಯೂಸ್‌: ರಾಜ್ಯದ 40 ಲಕ್ಷ ರೈತರ ಖಾತೆಗೆ ಬರಲಿದೆ ಹಣ

ADVERTISEMENT
ADVERTISEMENT

‘ನಾವು ಕೇವಲ ವ್ಯಾಪಾರ ಕಚೇರಿಯನ್ನು ಕೇಳುತ್ತಿಲ್ಲ. ಶಾಶ್ವತ ರಾಜತಾಂತ್ರಿಕ ಕಚೇರಿ ಇಲ್ಲಿ ಇರಬೇಕು. ಇದರಿಂದ ತಂತ್ರಜ್ಞಾನ, ನಾವೀನ್ಯತೆ, ಸಂಶೋಧನೆ, ರಕ್ಷಣೆ, ಬಾಹ್ಯಾಕಾಶ ಮತ್ತು ವಿಮಾನಯಾನ ಕ್ಷೇತ್ರಗಳಲ್ಲಿ ಸಹಕಾರ ಮತ್ತಷ್ಟು ವಿಸ್ತರಿಸಲಿದೆ’ ಎಂದು ಹೇಳಿದರು.

ಕಾನ್ಸುಲೇಟ್ ಸ್ಥಾಪನೆಗೆ ಅಗತ್ಯವಿರುವ ರಾಜ್ಯಮಟ್ಟದ ಎಲ್ಲ ಅನುಮತಿಗಳನ್ನು ತ್ವರಿತವಾಗಿ ನೀಡಲು ಕರ್ನಾಟಕ ಸರ್ಕಾರ ಸಿದ್ಧವಿದೆ. ಅಮೆರಿಕದ ರಾಯಭಾರ ಕಚೇರಿ ಮತ್ತು ಸಂಬಂಧಿಸಿದ ಸಂಸ್ಥೆಗಳೊಂದಿಗೆ ಸರ್ಕಾರ ನಿಕಟವಾಗಿ ಕಾರ್ಯನಿರ್ವಹಿಸಲಿದೆ ಎಂದರು.

ಅಮೆರಿಕದ ಪ್ರಮುಖ ಶೈಕ್ಷಣಿಕ ಹಾಗೂ ನಾವೀನ್ಯತಾ ಕೇಂದ್ರಗಳೊಂದಿಗೆ ತರಬೇತಿ, ಸಂಶೋಧನೆ ಮತ್ತು ಹೊಸ ಆವಿಷ್ಕಾರಗಳಲ್ಲಿ ಪಾಲುದಾರಿಕೆ ಬೆಳೆಸಲು ಅಮೆರಿಕದ ರಾಯಭಾರಿ ಸರ್ಜಿಯೋ ಗೋರ್ ಅವರ ನೆರವು ಕೋರಿದರು.

ಸೈನ್ಸ್ ಗ್ಯಾಲರಿ ಬೆಂಗಳೂರು ಈ ಕನಸಿನೊಂದಿಗೆ ನಿಕಟವಾಗಿ ಬೆಸೆದುಕೊಂಡಿದೆ. ಕ್ವಾಂಟಮ್ ಶೈಕ್ಷಣಿಕ ಸಲಹೆಗಾರರಾದ ಪ್ರೊಫೆಸರ್ ಅರಿಂದಮ್ ಘೋಷ್ ಅವರು ಕರ್ನಾಟಕದ ಕ್ವಾಂಟಮ್ ಟಾಸ್ಕ್ ಫೋರ್ಸ್ನ ಅಧ್ಯಕ್ಷರಾಗಿದ್ದಾರೆ. ಡಾ. ಜಾಹ್ನವಿ ಫಾಲ್ಕಿ ಅವರು ಕ್ಯೂ-ಸಿಟಿ ಸಲಹಾ ಮಂಡಳಿಯ ಸದಸ್ಯರಾಗಿದ್ದಾರೆ.

ನನಗೆ ಕ್ವಾಂಟಮ್ ವಿಜ್ಞಾನದ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲದಿರಬಹುದು. ಆದರೆ ಕ್ವಾಂಟಮ್ ವಿಜ್ಞಾನವು ಕಂಪ್ಯೂಟಿಂಗ್, ಸಂವಹನ, ಆರೋಗ್ಯ ಮತ್ತು ಆಧುನಿಕ ಉತ್ಪಾದನಾ ಕ್ಷೇತ್ರದ ಭವಿಷ್ಯವನ್ನು ರೂಪಿಸುತ್ತದೆ ಎಂಬ ಅರಿವಿದೆ ಎಂದರು.

ನಮ್ಮ ಯುವಕರು ಇಂತಹ ಬೆಳವಣಿಗೆಗಳಲ್ಲಿ ತೊಡಗಿಸಿಕೊಳ್ಳುವುದನ್ನು ಖಾತರಿಪಡಿಸುವುದು ನಮ್ಮ ಜವಾಬ್ದಾರಿಯಾಗಿದೆ ಎಂದು ಹೇಳಿದರು.

ಅದಕ್ಕಾಗಿಯೇ ಇಂತಹ ಸಂಸ್ಥೆ ನಮಗೆ ಮುಖ್ಯವಾಗುತ್ತದೆ. ಸೈನ್ಸ್ ಗ್ಯಾಲರಿಯ ಸಂಸ್ಥಾಪಕ ಪಾಲುದಾರರಾಗಿ, ಸಾರ್ವಜನಿಕರಿಗೆ ವಿಜ್ಞಾನವನ್ನು ತಲುಪಿಸುವ ಅದರ ಆಶಯಕ್ಕೆ ಕರ್ನಾಟಕ ಸರ್ಕಾರ ಸಂಪೂರ್ಣ ಬೆಂಬಲ ನೀಡುತ್ತದೆ.

ಹೆಸರಘಟ್ಟದಲ್ಲಿ ‘ಕ್ವಾಂಟಮ್ ಸಿಟಿ’

ಕ್ವಾಂಟಮ್ ತಂತ್ರಜ್ಞಾನ ಕ್ಷೇತ್ರದಲ್ಲಿ ಕರ್ನಾಟಕ ಈಗಾಗಲೇ ಹಲವು ಹೆಜ್ಜೆಗಳನ್ನು ಇಟ್ಟಿದೆ. ಕರ್ನಾಟಕ ಕ್ವಾಂಟಮ್ ಮಿಷನ್ನ ಬೆಂಬಲದೊಂದಿಗೆ ಬೆಂಗಳೂರು ಜಾಗತಿಕ ತಂತ್ರಜ್ಞಾನ ಕಂಪನಿಗಳು ಮತ್ತು ನವೋದ್ಯಮಗಳ ಕೇಂದ್ರವಾಗಿ ಬೆಳೆಯುತ್ತಿದೆ ಎಂದು ಹೇಳಿದರು.

ಹೆಸರಘಟ್ಟದಲ್ಲಿ ಭಾರತದ ಮೊದಲ ‘ಕ್ವಾಂಟಮ್ ಸಿಟಿ’ ನಿರ್ಮಾಣವಾಗುತ್ತಿದ್ದು, ಸಂಶೋಧನಾ ಪ್ರಯೋಗಾಲಯಗಳ ಪ್ರಮುಖ ಕೇಂದ್ರವಾಗಲಿದೆ. ನಮ್ಮ ಬದ್ಧತೆ ಬೆಂಗಳೂರಿಗೆ ಮಾತ್ರ ಸೀಮಿತವಾಗಿಲ್ಲ. ‘ಲೋಕಲ್ ಎಕಾನಮಿ ಆಕ್ಸಿಲರೇಟರ್ ಪ್ರೋಗ್ರಾಂ’ (LEAP) ಅಡಿಯಲ್ಲಿ, ಕರ್ನಾಟಕ ಸರ್ಕಾರವು ಬೆಂಗಳೂರಿನ ಹೊರಗೆ ಮೊದಲ ಬಾರಿಗೆ ಧಾರವಾಡದ IIITಯಲ್ಲಿ ‘ಕ್ವಾಂಟಮ್ ಕೃತಕ ಬುದ್ಧಿಮತ್ತೆ ಮತ್ತು ಕಂಪ್ಯೂಟಿಂಗ್ ಶ್ರೇಷ್ಠತಾ ಕೇಂದ್ರ’ವನ್ನು ಸ್ಥಾಪಿಸಲಾಗಿದೆ ಎಂದರು.

‘ಜ್ಞಾನ ಮೂಲಸೌಕರ್ಯವೇ ಭವಿಷ್ಯದ ಶಕ್ತಿ’
ಭವಿಷ್ಯದ ಆರ್ಥಿಕ ಬೆಳವಣಿಗೆಯನ್ನು ಕಟ್ಟಡ, ರಸ್ತೆ ಮತ್ತಿತರ ಭೌತಿಕ ಮೂಲಸೌಕರ್ಯಗಳು ಮಾತ್ರ ನಿರ್ಧರಿಸುವುದಿಲ್ಲ. ಜ್ಞಾನ ಮೂಲಸೌಕರ್ಯವೇ ಭವಿಷ್ಯದ ಆರ್ಥಿಕತೆಯ ನಿಜವಾದ ಶಕ್ತಿ ಎಂದು ಡಿಕೆಶಿ ಹೇಳಿದರು.

“ನಮ್ಮ ಗುರಿ ಸರಳ. ತರಗತಿಗಳನ್ನು ಪ್ರಯೋಗಾಲಯಗಳಿಗೆ, ಪ್ರಯೋಗಾಲಯಗಳನ್ನು ಸ್ಟಾರ್ಟ್ಅಪ್ಗಳಿಗೆ ಮತ್ತು ಸ್ಟಾರ್ಟ್ಅಪ್ಗಳನ್ನು ಜಾಗತಿಕ ಮಾರುಕಟ್ಟೆಗೆ ಜೋಡಿಸಬೇಕು,” ಎಂದು ಹೇಳಿದರು.

ಕರ್ನಾಟಕದ ವಿಶ್ವವಿದ್ಯಾಲಯಗಳು ಮತ್ತು ಅಮೆರಿಕದ ಪ್ರಮುಖ ವಿಶ್ವವಿದ್ಯಾಲಯಗಳ ನಡುವೆ ಜಂಟಿ ಸಂಶೋಧನೆ, ಹೊಸ ಪಠ್ಯಕ್ರಮ ಮತ್ತು ಉದ್ಯಮಕ್ಕೆ ಅಗತ್ಯವಾದ ಕೌಶಲ್ಯಾಧಾರಿತ ಕಲಿಕೆಗೆ ಒತ್ತು ನೀಡಲಾಗುವುದು ಎಂದು ತಿಳಿಸಿದರು.

ಅಮೆರಿಕದ ಟೆಕ್ ಕೇಂದ್ರಗಳೊಂದಿಗೆ ಸಹಭಾಗಿತ್ವ
ಅಮೆರಿಕದ ಪ್ರಮುಖ ತಂತ್ರಜ್ಞಾನ ಕೇಂದ್ರಗಳ ಶ್ರೇಷ್ಠತಾ ಕೇಂದ್ರಗಳು, ಇನ್ಕ್ಯುಬೇಟರ್ಗಳು ಮತ್ತು ಸಂಶೋಧನಾ ಪಾರ್ಕ್ಗಳೊಂದಿಗೆ ಕರ್ನಾಟಕ ಆಳವಾದ ಪಾಲುದಾರಿಕೆ ಬಯಸಿದೆ ಎಂದರು.

ಇದರಿಂದ ರಾಜ್ಯದ ನವೋದ್ಯಮಗಳಿಗೆ ಜಾಗತಿಕ ಮಾರ್ಗದರ್ಶನ, ಆಧುನಿಕ ಸಂಶೋಧನಾ ಸೌಲಭ್ಯ, ಬಂಡವಾಳ ಮತ್ತು ಅಂತರರಾಷ್ಟ್ರೀಯ ಮಾರುಕಟ್ಟೆಗಳಿಗೆ ಪ್ರವೇಶ ದೊರೆಯಲಿದೆ ಎಂದು ಹೇಳಿದರು.

ಕ್ವಾಂಟಮ್ ವಿಜ್ಞಾನವು ಕಂಪ್ಯೂಟಿಂಗ್, ಸಂವಹನ, ಆರೋಗ್ಯ ಮತ್ತು ಆಧುನಿಕ ಉತ್ಪಾದನಾ ಕ್ಷೇತ್ರಗಳ ಭವಿಷ್ಯವನ್ನು ರೂಪಿಸಲಿದೆ. ಈ ಬೆಳವಣಿಗೆಯಲ್ಲಿ ಯುವಕರು ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಮಾಡುವುದು ಸರ್ಕಾರದ ಜವಾಬ್ದಾರಿ ಎಂದರು.

‘ಸೈನ್ಸ್ ಗ್ಯಾಲರಿ’ ಸಾರ್ವಜನಿಕರಿಗೆ ವಿಜ್ಞಾನವನ್ನು ತಲುಪಿಸುವ ಪ್ರಮುಖ ವೇದಿಕೆಯಾಗಿದ್ದು, ಅದರ ಆಶಯಕ್ಕೆ ಕರ್ನಾಟಕ ಸರ್ಕಾರ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಹೇಳಿದರು.

‘ಕ್ವಾಂಟಮ್’ ಪ್ರದರ್ಶನವನ್ನು ಬೆಂಗಳೂರಿನ ಜನರು, ಕರ್ನಾಟಕದ ಜನರು ಹಾಗೂ ನಗರಕ್ಕೆ ಭೇಟಿ ನೀಡುವ ಎಲ್ಲರಿಗಾಗಿ ಮುಕ್ತಗೊಳಿಸಲಾಗಿದೆ ಎಂದು ಇದೇ ಸಂದರ್ಭದಲ್ಲಿ ಅವರು ಘೋಷಿಸಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (47)

ಅಮೆರಿಕಕ್ಕೆ ಹೊಸ ಅತಿಥಿಗಳು: ಚೀನಾ ಅಧ್ಯಕ್ಷ ಘೋಷಣೆ

by ಕವಿತಾ
September 25, 2026 - 12:07 pm
0

Untitled design (45)

ಸೆ.26ರಿಂದ ಸಕ್ರೆಬೈಲು ಆನೆ ಬಿಡಾರ ಪ್ರವಾಸಿಗರಿಗೆ ಮುಕ್ತ

by ಕವಿತಾ
September 25, 2026 - 11:47 am
0

Untitled design (44)

ಸಿಕ್ಕಿಂನಲ್ಲಿ ಭಾರಿ ಮಳೆಗೆ ಭೂಕುಸಿತ; ನಾಲ್ವರು ಸಾ*ವು

by ಕವಿತಾ
September 25, 2026 - 11:15 am
0

Untitled design (42)

ಭಾರತೀಯ ಮಧುಮೇಹಿಗಳಲ್ಲಿ ಹೊಟ್ಟೆ ಬೊಜ್ಜು, ಪ್ರೋಟೀನ್ ಕೊರತೆಯೇ ದೊಡ್ಡ ಸಮಸ್ಯೆ: ಸಂಶೋಧನೆಯಲ್ಲಿ ಬಹಿರಂಗ!

by ಕವಿತಾ
September 25, 2026 - 11:00 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 24T182659.844
    ಜ್ಞಾನೇಶ್ ಕುಮಾರ್ ರಾಜೀನಾಮೆಗೆ CJP 48 ಗಂಟೆ ಗಡುವು: ವಿಫಲವಾದರೆ ಹೋರಾಟದ ಎಚ್ಚರಿಕೆ
    September 24, 2026 | 0
  • ಜನಸಾಮಾನ್ಯರಿಗೆ ಸಿಹಿಸುದ್ದಿ
    ಜನಸಾಮಾನ್ಯರಿಗೆ ಸಿಹಿಸುದ್ದಿ: ಅಡುಗೆ ಎಣ್ಣೆ ಮೇಲಿನ ಆಮದು ಸುಂಕ ಕಡಿತ
    September 24, 2026 | 0
  • Untitled design 2026 09 24T151805.605
    ಓಮನ್ ಕರಾವಳಿಯಲ್ಲಿ ಹಡಗಿನ ಮೇಲೆ ದಾಳಿ: ಭಾರತೀಯ ವ್ಯಕ್ತಿ ಸಾ*ವು, 19 ಮಂದಿ ರಕ್ಷಣೆ
    September 24, 2026 | 0
  • Untitled design 2026 09 24T134901.525
    ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ: 12 ದಿನ ಭಕ್ತರಿಗೆ ದರ್ಶನ ಭಾಗ್ಯ
    September 24, 2026 | 0
  • Untitled design 2026 09 24T133228.563
    ಬರಪೀಡಿತ ಪಟ್ಟಿಗೆ ಇಂಡಿ ಸೇರಿದಂತೆ 29 ತಾಲೂಕುಗಳ ಸೇರ್ಪಡೆ
    September 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version