ಏ.15ರಿಂದ ಬೀದರ್- ಬೆಂಗಳೂರು ವಿಮಾನಸೇವೆ ಪುನಾರಂಭ

ಹುಬ್ಬಳ್ಳಿ, ಬೆಳಗಾವಿ, ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಮಾಡಲು ಕೇಂದ್ರಕ್ಕೆ ಪತ್ರ: ಸಚಿವ ಎಂ.ಬಿ.ಪಾಟೀಲ್

Siddu stalin kcr (41)

ಕಾರಣಾಂತರಗಳಿಂದ ಸ್ಥಗಿತಗೊಂಡಿದ್ದ ಬೀದರ್ಬೆಂಗಳೂರು ವಿಮಾನ ಸೇವೆಯನ್ನು ಸ್ಟಾರ್ರ್ ಸಂಸ್ಥೆಯು ಇದೇ ತಿಂಗಳ(ಏಪ್ರಿಲ್) 15ರಿಂದ ಪುನಾರಂಭ ಮಾಡಲಿದೆ ಎಂದು ಸಚಿವ ಎಂ ಬಿ ಪಾಟೀಲ್ ತಿಳಿಸಿದ್ದಾರೆ.

ಹುಬ್ಬಳ್ಳಿ, ಬೆಳಗಾವಿ: ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಮಾಡಲು ಕೇಂದ್ರಕ್ಕೆ ಪತ್ರ: ಸಚಿವ ಎಂ.ಬಿ.ಪಾಟೀಲ್

ರಾಜ್ಯದ ಹುಬ್ಬಳ್ಳಿ ಮತ್ತು ಬೆಳಗಾವಿ ವಿಮಾನ ನಿಲ್ದಾಣಗಳನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಏರಿಸಬೇಕಾದ ಅಗತ್ಯವಿದೆ. ಸಂಬಂಧ ಕೇಂದ್ರ ಸರಕಾರಕ್ಕೆ ಪತ್ರ ಬರೆಯುವಂತೆ ಸಚಿವ ಎಂ.ಬಿ.ಪಾಟೀಲ್ ಅವರು ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಇವೆರಡೂ ಅಂತರಾಷ್ಟ್ರೀಯ ವಿಮಾನ ನಿಲ್ದಾಣಗಳಾಗಲು ಅರ್ಹತೆ ಪಡೆದಿವೆ. ಪ್ರಯಾಣಿಕರ ದಟ್ಟಣೆ ಕೂಡ ಇದೆ. ಸದ್ಯ ಭಾಗದವರು ವಿದೇಶಕ್ಕೆ ಹೋಗಬೇಕಾದರೆ ನೆರೆಯ ರಾಜ್ಯ ಗೋವಾಕ್ಕೆ ಹೋಗಬೇಕು. ಅದರ ಬದಲು ನಿಲ್ದಾಣಗಳನ್ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಗಳಾಗಿ ಘೋಷಿಸಿದರೆ ಪ್ರಯಾಣಿಕರಿಗೆ ಅನುಕೂಲವಾಗುತ್ತದೆ ಎಂದು ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.

ನಿಮ್ಮ ನೆಚ್ಚಿನ ಗ್ಯಾರಂಟಿ ನ್ಯೂಸ್ ಈ ಕೆಳಕಂಡ ಕೇಬಲ್ & ಡಿಟಿಎಚ್ ನೆಟ್ ವರ್ಕ್ ಗಳಲ್ಲಿ ಲಭ್ಯ..

Exit mobile version