ಚಿಕ್ಕಮಗಳೂರು: ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಕಾರಿಗೆ ಲಾರಿ ಡಿಕ್ಕಿ ಹೊಡೆದಿದೆ. ಚಿಕ್ಕಮಗಳೂರು ತಾಲೂಕಿನ ಲಕ್ಯಾ ಕ್ರಾಸ್ ಬಳಿ ಸಂಭವಿಸಿದ ಈ ಅಪಘಾತದಲ್ಲಿ ವಿಜಯೇಂದ್ರ ಅದೃಷ್ಟವಶಾತ್ ಸುರಕ್ಷಿತರಾಗಿದ್ದಾರೆ. ಅವರು ಬಸವ ತತ್ವ ಕಾರ್ಯಕ್ರಮದ ನಂತರ ವಾಪಸ್ ಚಿಕ್ಕಮಗಳೂರು ನಗರದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಕಾರಿನ ಹಿಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಅದೃಷ್ಟವಶಾತ್ ವಿಜಯೇಂದ್ರ ಅವರು ಸಾಮಾನ್ಯವಾಗಿ ಬಳಸುವ ಕಾರಿನ ಬದಲು ಇನ್ನೊಂದು ವಾಹನದಲ್ಲಿ ಪ್ರಯಾಣಿಸುತ್ತಿದ್ದರಿಂದ ಬಚಾವ್ ಆಗಿದ್ದಾರೆ. ಸದ್ಯ ಪೊಲೀಸರು ಲಾರಿ ಚಾಲಕನನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ವಿಜಯೇಂದ್ರ ಗೆ ಸೇರಿದ ಕಾರಿನ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಗೆ ಸಿಲುಕಿದ ಲಾರಿ ಬೀರೂರು ಮೂಲದ ಹರೀಶ್ ಎಂಬವರಿಗೆ ಲಾರಿ ಮರದ ಪೀಸ್ ತುಂಬಿಕೊಂಡು ಚಿಕ್ಕಮಂಗಳೂರು ನಗರದಿಂದ ಮುಂಬೈಗೆ ಸಾಗಿಸುತ್ತಿತ್ತು. ಪೊಲೀಸರು ಲಾರಿ ಚಾಲಕನನ್ನು ಹಿಡಿದು ವಿಚಾರಣೆ ನಡೆಸುತ್ತಿದ್ದಾರೆ. ಕಾರು ಮತ್ತು ಲಾರಿಯನ್ನು ಸಹ ಗ್ರಾಮಾಂತರ ಠಾಣೆಗೆ ತೆಗೆದುಕೊಂಡು ಹೋಗಿದ್ದು, ಲಾರಿ ಚಾಲಕನ ವಿರುದ್ಧ ಪ್ರಕರಣ ದಾಖಲಿಸಲು ಸಿದ್ದತೆ ನಡೆಸಿದ್ದಾರೆ.