• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, August 15, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಏ.7ರಿಂದ ಜನಾಕ್ರೋಶ ಯಾತ್ರೆ: ಬಿ.ವೈ. ವಿಜಯೇಂದ್ರ

ವೀರೇಶ ದಾನಿ by ವೀರೇಶ ದಾನಿ
March 31, 2025 - 5:04 pm
in Flash News, ಕರ್ನಾಟಕ
0 0
0
Untitled design 2025 03 31t170248.008

ಬೆಂಗಳೂರು: ಬಡವರಿಗೆ ಬರೆ ಎಳೆಯುವ ರಾಜ್ಯದ ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿ ಹೋರಾಟ- ಪ್ರತಿಭಟನೆ ನಡೆಸಲಿದೆ. ರಾಜ್ಯ ಸರಕಾರ ತನ್ನ ನಿರ್ಧಾರದಿಂದ ಹಿಂದೆ ಸರಿಯುವ ಕೆಲಸವನ್ನು ಹೋರಾಟದ ಮುಖೇನ ಮಾಡಲು ನಿರ್ಧರಿಸಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ” ದಲ್ಲಿ ಇಂದು ಏರ್ಪಡಿಸಿದ ತುರ್ತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಏಪ್ರಿಲ್ 2ರಂದು ಬೆಳಿಗ್ಗೆ 11 ಗಂಟೆಯಿಂದ ಬೆಲೆ ಏರಿಕೆಯ ಕಾಂಗ್ರೆಸ್ ಸರಕಾರದ ವಿರುದ್ಧ ಅಹೋರಾತ್ರಿ ಧರಣಿ ಪ್ರಾರಂಭಿಸಲಿದ್ದೇವೆ. ಬಿಜೆಪಿಯ ಎಲ್ಲ ಶಾಸಕರು, ವಿಧಾನಪರಿಷತ್ ಸದಸ್ಯರು, ಮಾಜಿ ಶಾಸಕರು, ವಿಧಾನಪರಿಷತ್ ಮಾಜಿ ಸದಸ್ಯರು, ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ ಅಭ್ಯರ್ಥಿಗಳು, ರಾಜ್ಯದ ಎಲ್ಲ ಪದಾಧಿಕಾರಿಗಳು, ಜಿಲ್ಲಾ ಅಧ್ಯಕ್ಷರು, ಕಾರ್ಯಕರ್ತರು ಈ ಅಹೋರಾತ್ರಿ ಧರಣಿಯಲ್ಲಿ ಭಾಗವಹಿಸಲಿದ್ದಾರೆ ಎಂದು ವಿವರಿಸಿದರು. ಬಿಜೆಪಿಯ 8 ಶಾಸಕರನ್ನು ಅಮಾನತು ಮಾಡಿದ್ದನ್ನು ಆಕ್ಷೇಪಿಸಿ ಅದೇದಿನ ಕೆಂಗಲ್ ಹನುಮಂತಯ್ಯ ಅವರ ಪ್ರತಿಮೆ ಮುಂದೆ ಪ್ರತಿಭಟನೆ ನಡೆಸುತ್ತೇವೆ ಎಂದು ಹೇಳಿದರು.

RelatedPosts

ವೀರಶೈವ ಸಂಪ್ರದಾಯದಂತೆ ನೆರವೇರಿದ ಡಾ. ಶರಣಬಸಪ್ಪ ಅಪ್ಪ ಅಂತ್ಯಕ್ರಿಯೆ!

ಹಲಗಲಿ ಬೇಡರ ನಾಯಕನಾಗಿ ಡಾಲಿ ಧನಂಜಯ್‌, ‘ಹಲಗಲಿ’ ಟೀಸರ್ ಬಿಡುಗಡೆ!

ಕೃಷ್ಣ ಜನ್ಮಾಷ್ಟಮಿ: ಬೆಂಗಳೂರು ಇಸ್ಕಾನ್‌ ದೇವಸ್ಥಾನಕ್ಕೆ ಬದಲಿ ಮಾರ್ಗ, ಸುಗಮ ಸಂಚಾರಕ್ಕೆ ವಿಶೇಷ ಕ್ರಮ!

ನೆಲಮಂಗಲದಲ್ಲಿ ದಾರುಣ ಘಟನೆ: ಮದುವೆಯಾಗಲು ಹೆಣ್ಣು ಸಿಗದಿದ್ದಕ್ಕೆ ಇಬ್ಬರು ಆತ್ಮಹ*ತ್ಯೆ!

ADVERTISEMENT
ADVERTISEMENT

ಈ ಧರಣಿ ತುದಿ ಮುಟ್ಟಿಸುವ ಕುರಿತು ಏ.2ರಂದು ನಿರ್ಧರಿಸಲಿದ್ದೇವೆ ಎಂದು ಹೇಳಿದರು. ಏ.5ರಂದು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರ, ತಾಲ್ಲೂಕುಗಳಲ್ಲಿ, ಮಂಡಲದಲ್ಲಿ ಕಾರ್ಯಕರ್ತರು ಬೀದಿಗಿಳಿದು ಪ್ರತಿಭಟನೆ ಮಾಡುತ್ತಾರೆ ಎಂದರು.

7ರಿಂದ ರಾಜ್ಯದಾದ್ಯಂತ ಜನಜಾಗೃತಿಗೆ ‘ಜನಾಕ್ರೋಶ ಯಾತ್ರೆ’

ಏಪ್ರಿಲ್ 7ರಂದು ಮಧ್ಯಾಹ್ನ 3ಕ್ಕೆ ಮೈಸೂರಿನಿಂದ ಜನಜಾಗೃತಿ ಹೋರಾಟ ಆರಂಭವಾಗಲಿದೆ. ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಹೋರಾಟಕ್ಕೆ ಚಾಲನೆ ಕೊಡಲಿದ್ದಾರೆ. ಕೇಂದ್ರದ ಸಚಿವರಾದ ಸೋಮಣ್ಣ, ಶೋಭಾ ಕರಂದ್ಲಾಜೆ ಅವರ ಜೊತೆ ಚರ್ಚಿಸಿದ್ದೇನೆ. ಜನಾಕ್ರೋಶ ಯಾತ್ರೆ ಇದಾಗಿದೆ. 7ರಂದು ಮೈಸೂರು, ಚಾಮರಾಜನಗರ ಜಿಲ್ಲೆ, 8ರಂದು ಬೆಳಿಗ್ಗೆ ಮಂಡ್ಯ, ಮಧ್ಯಾಹ್ನ ಹಾಸನದಲ್ಲಿ ಹೋರಾಟ ಇದೆ. 9ರಂದು ಕೊಡಗು- ಮಂಗಳೂರಿನಲ್ಲಿ ಹೋರಾಟ, 10ರಂದು ಉಡುಪಿ, ಚಿಕ್ಕಮಗಳೂರಿನಲ್ಲಿ ಮೊದಲ ಹಂತದ ಹೋರಾಟ ಇದೆ ಎಂದರು.

13ರಿಂದ ಶಿವಮೊಗ್ಗ, ಉತ್ತರ ಕನ್ನಡದಲ್ಲಿ ಎರಡನೇ ಹಂತದ ಹೋರಾಟ ಇರುತ್ತದೆ. ರಾಜ್ಯದ ಪ್ರತಿ ಜಿಲ್ಲೆಗಳಲ್ಲಿ ಇದು ಸಂಚರಿಸಲಿದೆ ಎಂದು ವಿವರಿಸಿದರು. ಪ್ರತಿ ಜಿಲ್ಲೆಯಲ್ಲಿ ನಗರದಲ್ಲಿ 2-3 ಕಿಮೀ ಪಾದಯಾತ್ರೆ, ಬಳಿಕ ಸಭೆ ನಡೆಯಲಿದೆ. ಮುಖಂಡರು ಭಾಗವಹಿಸುತ್ತಾರೆ ಎಂದರು.

ಕೇವಲ ಮುಸ್ಲಿಮರಿಗೆ ಮಾತ್ರ ಇಂಥ ಯೋಜನೆಗಳು ಏಕೆ?

ರಾಜ್ಯ ಬಜೆಟ್‍ನಲ್ಲಿ ಅಲ್ಪಸಂಖ್ಯಾತರಿಗೆ, ಮುಸಲ್ಮಾನರಿಗೆ ಓಲೈಕೆ ಮಾತ್ರವಲ್ಲದೆ ಹಿಂದೂಗಳಿಗೆ ಅಪಮಾನ ಮಾಡಲಾಗಿದೆ. ಸರಕಾರಿ ಕಾಮಗಾರಿಗಳಲ್ಲಿ ಮುಸಲ್ಮಾನರಿಗೆ ಶೇ 4 ಮೀಸಲಾತಿ ನೀಡಿದ್ದು, ಕಾನೂನಿನ ವಿರುದ್ಧವಾಗಿದೆ. ಉನ್ನತ ಶಿಕ್ಷಣಕ್ಕೆ ಹೊರದೇಶಕ್ಕೆ ಹೋಗುವ ಮುಸಲ್ಮಾನ ವಿದ್ಯಾರ್ಥಿಗಳಿಗೆ 20 ಲಕ್ಷ ಇದ್ದುದನ್ನು 30 ಲಕ್ಷಕ್ಕೆ ಏರಿಸಿದ್ದಾರೆ. ಹಿಂದೆ ಮುಸಲ್ಮಾನ ಹೆಣ್ಮಕ್ಕಳಿಗೆ ಶಾದಿ ಭಾಗ್ಯ ನೀಡಿದ್ದರು. ಇದೀಗ ಮುಸ್ಲಿಂ ಹೆಣ್ಮಕ್ಕಳ ಆತ್ಮರಕ್ಷಣೆಗೆ ನೂರಾರು ಕೋಟಿಯನ್ನು ರಾಜ್ಯ ಸರಕಾರ ವೆಚ್ಚ ಮಾಡುತ್ತಿದೆ; ಇಮಾಮರ ವೇತನ ಹೆಚ್ಚಿಸಿದ್ದಾರೆ ಎಂದು ವಿಜಯೇಂದ್ರ ಅವರು ಆಕ್ಷೇಪ ವ್ಯಕ್ತಪಡಿಸಿದರು.

ಕೇವಲ ಮುಸ್ಲಿಮರಿಗೆ ಮಾತ್ರ ಇಂಥ ಯೋಜನೆಗಳು ಏಕೆ? ಮೋದಿಜೀ ಅವರು ಜನಧನ ಸೇರಿ ಹಲವು ಯೋಜನೆ ಜಾರಿಗೊಳಿಸಿದ್ದು, ಎಲ್ಲರಿಗೂ ಅವಕಾಶ ನೀಡಿದ್ದಾರೆ. ಯಡಿಯೂರಪ್ಪ ಅವರು ಭಾಗ್ಯಲಕ್ಷ್ಮಿ ಯೋಜನೆಯನ್ನು ಹಿಂದೂಗಳಿಗೆ ಮಾತ್ರ ಕೊಟ್ಟಿಲ್ಲ; ಮುಸ್ಲಿಮರು ಸೇರಿ ಎಲ್ಲರಿಗೂ ಕೊಟ್ಟಿದ್ದಾರೆ ಎಂದು ವಿವರಿಸಿದರು. ಹಿಂದೂಗಳ ಅವಮಾನವನ್ನು ನಾವು ಖಂಡಿಸುತ್ತೇವೆ. ಸಿದ್ದರಾಮಯ್ಯನವರು ಹಾಲುಮತ ಸಮುದಾಯ, ಕಾಯಕ ಸಮುದಾಯಗಳ ನಿರ್ಲಕ್ಷಿಸಿದ್ದಾರೆ ಎಂದು ಟೀಕಿಸಿದರು.

ಶೋಷಿತರ ಅಭಿವೃದ್ಧಿಗೆ ಮೀಸಲಿಟ್ಟ 38,860 ಕೋಟಿ ದುರುಪಯೋಗ

ಶೋಷಿತರು, ಪೀಡಿತರ ಅಭಿವೃದ್ಧಿಗೆ ಮೀಸಲಿಟ್ಟ ಎಸ್‍ಇಪಿ, ಟಿಎಸ್‍ಪಿ ಅನುದಾನದಲ್ಲಿ ಕಾಂಗ್ರೆಸ್ ಸರಕಾರವು 2023-24ರಲ್ಲಿ 11,144 ಕೋಟಿಯನ್ನು ಬೇರೆಡೆಗೆ ವರ್ಗಾಯಿಸಿದ್ದಾರೆ. 2024-25ರಲ್ಲಿ 14,282 ಕೋಟಿ ಹಣ ಬೇರೆ ಕಡೆಗೆ ವರ್ಗಾಯಿಸಿದ್ದಾರೆ. 2025-26ರಲ್ಲಿ ಇದು 13,433 ಕೋಟಿ. ಒಟ್ಟಾರೆಯಾಗಿ ಕಾಂಗ್ರೆಸ್ ಸರಕಾರವು 38,860 ಕೋಟಿಯಷ್ಟು ಹಣವನ್ನು ಬೇರೆ ಕಡೆ ವರ್ಗಾಯಿಸಿ, ದುರುಪಯೋಗ ಮಾಡಿಕೊಂಡಿದೆ ಎಂದು ವಿಜಯೇಂದ್ರ ಅವರು ಟೀಕಿಸಿದರು. ಅಲ್ಲದೆ, ಇದನ್ನು ಖಂಡಿಸಿದರು.
ಪರಿಶಿಷ್ಟ ಜಾತಿ, ಪಂಗಡಗಳನ್ನು ಮತಬ್ಯಾಂಕ್ ಮಾಡಿಕೊಂಡ ಕಾಂಗ್ರೆಸ್ಸಿನವರು ಅವರಿಗೆ ಅನ್ಯಾಯ ಮಾಡುತ್ತಿದೆ. ಇದರ ವಿರುದ್ಧ ಹೋರಾಟ ಮಾಡುತ್ತೇವೆ ಎಂದು ತಿಳಿಸಿದರು.

ಕಾಂಗ್ರೆಸ್ ಸರಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಾಗಿನಿಂದ ಬೆಲೆ ಏರಿಕೆ ನಿರಂತರವಾಗಿದೆ. ಪೆಟ್ರೋಲ್, ಡೀಸೆಲ್, ಸ್ಟಾಂಪ್ ಶುಲ್ಕ, ಹಾಲಿನ ದರ, ಮೆಟ್ರೊ ದರ ಏರಿಸುವ ಮೂಲಕ ಸಿದ್ದರಾಮಯ್ಯರ ನೇತೃತ್ವದ ಕಾಂಗ್ರೆಸ್ ಸರಕಾರವು ಜನಸಾಮಾನ್ಯರ ಮೇಲೆ ಬರೆ ಹಾಕುತ್ತಿದೆ ಎಂದು ಆಕ್ಷೇಪಿಸಿದರು.

ದೇಶದಲ್ಲೇ ಅತ್ಯಂತ ದುಬಾರಿ ಜೀವನವನ್ನು ಈ ನಾಡಿನ ಜನ ನಡೆಸಬೇಕಾದ ದುಸ್ಥಿತಿಗೆ ಕಾಂಗ್ರೆಸ್ ಕಾರಣವಾಗಿದೆ. ಸೇವಿಸುವ ಗಾಳಿಯೊಂದನ್ನು ಬಿಟ್ಟರೆ ಉಳಿದೆಲ್ಲವುಗಳ ದರ ಏರಿಸಲಾಗಿದೆ. ಸಾಮಾನ್ಯ ಜನರು, ರೈತರ ಸಂಕಷ್ಟ ಅರ್ಥ ಮಾಡಿಕೊಳ್ಳದ ಸರಕಾರ ಇದು. ಮತದಾರರಿಗೆ ಶಾಪಗ್ರಸ್ತ ಸರಕಾರ ಇದಾಗಿದೆ ಎಂದು ಟೀಕಿಸಿದರು.

ವಿದ್ಯುತ್ ದರ ಪ್ರತಿ ಯೂನಿಟ್‍ಗೆ ಏಪ್ರಿಲ್ 1ರಿಂದ 36 ಪೈಸೆ ಹೆಚ್ಚಲಿದೆ. ಹಾಲಿನ ದರ 3 ಬಾರಿ ಏರಿಸಿದ್ದಾರೆ. ಬಡವರ ವೈದ್ಯಕೀಯ ವೆಚ್ಚ ಹೆಚ್ಚಾಗಿದೆ. ಹೊರ ರೋಗಿ ನೋಂದಣಿ ಶುಲ್ಕ 10 ರೂ ಇದ್ದುದನ್ನು ರೂ. 20ಕ್ಕೆ ಏರಿಸಿದ್ದಾರೆ. ಮರಣೋತ್ತರ ಪ್ರಮಾಣಪತ್ರವನ್ನು 250 ಇದ್ದುದನ್ನು 300 ರೂ. ಹೆಚ್ಚಿಸಿದ್ದಾರೆ. ವೈದ್ಯಕೀಯ ಪ್ರಮಾಣಪತ್ರವನ್ನು 250 ಇದ್ದುದನ್ನು 300 ರೂ. ಹೆಚ್ಚಿಸಿದ್ದಾರೆ. ದಾಖಲಾತಿ ಶುಲ್ಕ, ಲ್ಯಾಬ್ ಪರೀಕ್ಷಾ ಶುಲ್ಕ ಹೆಚ್ಚಿಸಿದ್ದಾರೆ. ಗ್ರಾಮೀಣ ಭಾಗದಲ್ಲಿ ಸರಕಾರಿ ಆಸ್ಪತ್ರೆಗೆ ಹೋಗುವ ಬಡವರು ಹೆಚ್ಚುವರಿ ಶುಲ್ಕ ಕೊಡಬೇಕಾಗಿದೆ ಎಂದು ಆಕ್ಷೇಪಿಸಿದರು.

ಮುದ್ರಾಂಕ ಶುಲ್ಕದಡಿ ದತ್ತು ಸ್ವೀಕಾರ ಶುಲ್ಕ 500 ರೂ. ಇತ್ತು. ಅದನ್ನು 1 ಸಾವಿರ ರೂ. ಮಾಡಿದ್ದಾರೆ. ಅಫಿಡವಿಟ್‍ಗಳ ಮೊತ್ತವನ್ನು 20 ರೂ. ಇದ್ದುದು 100 ರೂಗೆ ಏರಿಸಿದ್ದಾರೆ. ಕ್ಯಾನ್ಸಲೇಶನ್ ಡೀಡ್ 100 ರೂ. ಇದ್ದುದನ್ನು 500ಕ್ಕೆ ಏರಿಸಿದ್ದಾರೆ. ಅಡಮಾನ ಪತ್ರ ಶುಲ್ಕವನ್ನು ರೂ. 100ರಿಂದ 200ಕ್ಕೆ ಏರಿಸಿದ್ದಾರೆ ಎಂದು ದೂರಿದರು.

ವೃತ್ತಪರ ತೆರಿಗೆ 1200 ರೂ. ಇದ್ದುದನ್ನು 2500 ರೂ.ಗೆ ಏರಿಸಿದ್ದಾರೆ. ಮುದ್ರಾಂಕ ಶುಲ್ಕ ಜಾಸ್ತಿ ಮಾಡಿದ್ದಾರೆ. ಬಸ್ ಪ್ರಯಾಣದರ ಹೆಚ್ಚಿಸಿದ್ದಾರೆ. ರೈತರಿಗೆ ತೊಂದರೆ ಕೊಡಲೆಂದೇ ಬಿತ್ತನೆ ಬೀಜದ ದರ ಹೆಚ್ಚಿಸಿದ್ದಾರೆ. ನೀರಿನ ಸುಂಕ ಜಾಸ್ತಿ ಮಾಡಿದ್ದಾರೆ. ಪೆಟ್ರೋಲ್- ಡೀಸೆಲ್ ದರ ಏರಿಕೆಯಾಗಿದೆ. ಮತದಾರರಿಗೆ ಬೆಲೆ ಏರಿಕೆಯ ಮೂಲಕ ಶಾಪವನ್ನು ಈ ಸರಕಾರ ನೀಡಿದೆ ಎಂದು ಆರೋಪಿಸಿದರು.

ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಮಾಜಿ ಸಚಿವ ಬಿ. ಶ್ರೀರಾಮುಲು, ಮಾಜಿ ಸಚಿವ ಹಾಗೂ ಶಾಸಕ ಬೈರತಿ ಬಸವರಾಜ್, ಸಂಸದ ಬೃಜೇಶ್ ಚೌಟ, ವಿಧಾನ ಪರಿಷತ್ತಿನ ಮುಖ್ಯ ಸಚೇತಕ ಎನ್. ರವಿಕುಮಾರ್, ಶಾಸಕರಾದ ಮುನಿರತ್ನ, ಎಸ್.ಆರ್. ವಿಶ್ವನಾಥ್, ಕೃಷ್ಣಪ್ಪ, ಬಸವರಾಜ ಮತ್ತಿಮೋಡ, ರೈತ ಮೋರ್ಚಾ ಅಧ್ಯಕ್ಷ ಎ.ಎಸ್.ನಡಹಳ್ಳಿ ಅವರು ಭಾಗವಹಿಸಿದ್ದರು.

ShareSendShareTweetShare
ವೀರೇಶ ದಾನಿ

ವೀರೇಶ ದಾನಿ

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಪೊಲಿಟಿಕಲ್ ರಿಪೋರ್ಟರ್ ಆಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ವಿವಿಧ ಟಿವಿ ಸುದ್ದಿ ವಾಹಿನಿಯಲ್ಲಿ ಜಿಲ್ಲಾ ವರದಿಗಾರರಾಗಿ, ಬ್ಯೂರೋ ಮುಖ್ಯಸ್ಥರಾಗಿ 14 ವರ್ಷ ಕಾರ್ಯ ನಿರ್ವಹಿಸಿದ ಅನುಭವ ಇದೆ. ರಾಜಕೀಯ, ಅಪರಾಧ ವಿಭಾಗ ಇವರ ಆಸಕ್ತಿಯ ವಿಷಯಗಳು. ರಾಜಕೀಯ ವಿಷಯಗಳ ಬಗ್ಗೆ ಲೇಖನಗಳನ್ನು ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸಿನಿಮಾ, ಕಾದಂಬರಿ ಪುಸ್ತಕಗಳ ಓದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

1 (51)

ಪ್ರಧಾನಿ ಮೋದಿಯವರನ್ನು ಭೇಟಿ ಮಾಡಲಿರುವ ಫುಟ್‌ಬಾಲ್ ದಿಗ್ಗಜ ಮೆಸ್ಸಿ!

by ಸಾಬಣ್ಣ ಎಚ್. ನಂದಿಹಳ್ಳಿ
August 15, 2025 - 10:13 pm
0

1 (50)

ಧರ್ಮಸ್ಥಳ ಪ್ರಕರಣ: ಧರ್ಮಾಧಿಕಾರಿಗಳ ವಿರುದ್ಧ ಅವಹೇಳನ ಖಂಡಿಸಿದ ಸಚಿವೆ ಹೆಬ್ಬಾಳ್ಕರ್!

by ಸಾಬಣ್ಣ ಎಚ್. ನಂದಿಹಳ್ಳಿ
August 15, 2025 - 8:38 pm
0

1 (49)

ಯೋಧರ ತ್ಯಾಗ, ಬಲಿದಾನ & ಶ್ರಮದ ನೆತ್ತರು ಸ್ವಾತಂತ್ರ್ಯ!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 15, 2025 - 8:20 pm
0

1 (48)

ವೀರಶೈವ ಸಂಪ್ರದಾಯದಂತೆ ನೆರವೇರಿದ ಡಾ. ಶರಣಬಸಪ್ಪ ಅಪ್ಪ ಅಂತ್ಯಕ್ರಿಯೆ!

by ಸಾಬಣ್ಣ ಎಚ್. ನಂದಿಹಳ್ಳಿ
August 15, 2025 - 7:52 pm
0

ಸಂಬಂಧಿಸಿದ ಪೋಸ್ಟ್‌ಗಳು

  • 1 (48)
    ವೀರಶೈವ ಸಂಪ್ರದಾಯದಂತೆ ನೆರವೇರಿದ ಡಾ. ಶರಣಬಸಪ್ಪ ಅಪ್ಪ ಅಂತ್ಯಕ್ರಿಯೆ!
    August 15, 2025 | 0
  • 1 (46)
    ಹಲಗಲಿ ಬೇಡರ ನಾಯಕನಾಗಿ ಡಾಲಿ ಧನಂಜಯ್‌, ‘ಹಲಗಲಿ’ ಟೀಸರ್ ಬಿಡುಗಡೆ!
    August 15, 2025 | 0
  • 1 (44)
    ಕೃಷ್ಣ ಜನ್ಮಾಷ್ಟಮಿ: ಬೆಂಗಳೂರು ಇಸ್ಕಾನ್‌ ದೇವಸ್ಥಾನಕ್ಕೆ ಬದಲಿ ಮಾರ್ಗ, ಸುಗಮ ಸಂಚಾರಕ್ಕೆ ವಿಶೇಷ ಕ್ರಮ!
    August 15, 2025 | 0
  • 1 (43)
    ನೆಲಮಂಗಲದಲ್ಲಿ ದಾರುಣ ಘಟನೆ: ಮದುವೆಯಾಗಲು ಹೆಣ್ಣು ಸಿಗದಿದ್ದಕ್ಕೆ ಇಬ್ಬರು ಆತ್ಮಹ*ತ್ಯೆ!
    August 15, 2025 | 0
  • 1 (41)
    ಅನಾಮಿಕನನ್ನು ಗಲ್ಲಿಗೇರಿಸಿ: ಯಲಹಂಕ ಶಾಸಕ ಎಸ್‌ಆರ್ ವಿಶ್ವನಾಥ್ ಆಗ್ರಹ!
    August 15, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version