ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಸ್ಥಾನಕ್ಕೆ ಬಿ.ಕೆ. ಹರಿಪ್ರಸಾದ್ ಅವರ ಹೆಸರು ಬಹುತೇಕ ಖಚಿತವಾಗಿದೆ ಎಂದು ಪಕ್ಷದ ಹಿರಿಯ ಮೂಲಗಳು ತಿಳಿಸಿವೆ. ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿರುವ ಹೊತ್ತಿನಲ್ಲಿ ಕೆಪಿಸಿಸಿ ಅಧ್ಯಕ್ಷ ಪಟ್ಟದ ನಿರ್ಧಾರವೂ ತ್ವರಿತಗತಿಯಲ್ಲಿ ಮುಂದುವರಿದಿದೆ.
ಸತೀಶ್ ಜಾರಕಿಹೊಳಿ ಅವರು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಬಲವಾಗಿ ಕಣ್ಣಿಟ್ಟಿದ್ದರು. ಉತ್ತರ ಕರ್ನಾಟಕದಿಂದ ಬಲವಾದ ಬೆಂಬಲವನ್ನೂ ಅವರು ಪಡೆದಿದ್ದರು. ಆದರೆ ಕೊನೆ ಕ್ಷಣದಲ್ಲಿ ಬಿ.ಕೆ. ಹರಿಪ್ರಸಾದ್ ಅವರ ಹೆಸರು ಮುಂದೆ ಬಂದಿದ್ದು, ಜಾರಕಿಹೊಳಿ ಅವರಿಗೆ ಈ ಪಟ್ಟ ತಪ್ಪಿದಂತಾಗಿದೆ ಎನ್ನಲಾಗುತ್ತಿದೆ.
ಸತೀಶ್ ಜಾರಕಿ ಹೊಳಿ ಮತ್ತು ಬಿಕೆ ಹರಿಪ್ರಸಾದ್ ನಡುವೆ ಇದ್ದ ಪೈಪೋಟಿಗೆ ತೆರೆ ಬಿದ್ದಿದ್ದು ಮುಖ್ಯಮಂತ್ರಿ ಪ್ರಮಾಣವಚನ ಬಳಿಕ kpcc ಹುದ್ದೆ ಘೋಷಿಸುವ ಸಾಧ್ಯತೆ ಇದೆ
ಪಕ್ಷದಲ್ಲಿ “ಒಂದು ವ್ಯಕ್ತಿ, ಒಂದು ಹುದ್ದೆ” ನೀತಿಯನ್ನು ಕಟ್ಟುನಿಟ್ಟಾಗಿ ಅನುಸರಿಸುವ ನಿರ್ಧಾರಕ್ಕೆ ಅನುಗುಣವಾಗಿ ಈ ಆಯ್ಕೆ ಮಾಡಲಾಗುತ್ತಿದೆ ಎಂದು ಹೈಕಮಾಂಡ್ ಮೂಲಗಳು ಸೂಚಿಸುತ್ತಿವೆ. ಸತೀಶ್ ಜಾರಕಿಹೊಳಿ ಅವರು ಈಗಾಗಲೇ ಸಚಿವ ಸಂಪುಟದಲ್ಲಿ ಸ್ಥಾನ ಪಡೆದಿರುವುದರಿಂದ ಅಧ್ಯಕ್ಷ ಸ್ಥಾನಕ್ಕೆ ಅವಕಾಶವಿಲ್ಲ ಎಂಬ ಅಭಿಪ್ರಾಯ ಬಲಗೊಂಡಿದೆ.
ಬಿ.ಕೆ. ಹರಿಪ್ರಸಾದ್‌ಗೆ ಏಕೆ ಆದ್ಯತೆ?
ಬಿ.ಕೆ. ಹರಿಪ್ರಸಾದ್ ಅವರು ರಾಜ್ಯ ಕಾಂಗ್ರೆಸ್‌ನಲ್ಲಿ ದೀರ್ಘ ಅನುಭವ ಹೊಂದಿದ್ದು, ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ರಾಜ್ಯದ ಎಲ್ಲಾ ಪ್ರದೇಶಗಳಲ್ಲಿ ಅವರಿಗೆ ಒಳ್ಳೆಯ ಸಂಪರ್ಕವಿದೆ. ಆದ್ದರಿಂದ ಬಿ.ಕೆ ಹರಿಪ್ರಸಾದ್ ಅವರು ಈ ಹುದ್ದೆ ಸರಿಯಾದ ಸಾರಥಿ ಎಂದು ತೀರ್ಮಾನಿಸಲಾಗಿದೆ.
ಸಚಿವ ಸಂಪುಟ ರಚನೆಯಲ್ಲಿ ಉಂಟಾದ ಗೊಂದಲದ ನಂತರ ಕೆಪಿಸಿಸಿ ಅಧ್ಯಕ್ಷತೆಯ ಘೋಷಣೆಯಾಗುವ ಸಾಧ್ಯತೆ ಹೆಚ್ಚಿದೆ. ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಈ ನಿರ್ಧಾರವನ್ನು ಅಧಿಕೃತವಾಗಿ ಘೋಷಿಸುವ ಸಾಧ್ಯತೆ ಇದೆ
ಸತೀಶ್ ಜಾರಕಿಹೊಳಿ ಅವರ ಅಭಿಮಾನಿಗಳಲ್ಲಿ ಈ ನಿರ್ಧಾರಕ್ಕೆ ಸ್ವಲ್ಪ ಅಸಮಾಧಾನವಿದ್ದರೂ, ಪಕ್ಷದ ಏಕತೆಗೆ ಧಕ್ಕೆ ಬರದಂತೆ ನೋಡಿಕೊಳ್ಳುವಂತೆ ಹೈಕಮಾಂಡ್ ಸೂಚಿಸಿದೆ ಎನ್ನಲಾಗುತ್ತಿದೆ.
ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್ ಅವರು ನೇಮಕಗೊಂಡರೆ, ರಾಜ್ಯದಲ್ಲಿ ಪಕ್ಷದ ಸಂಘಟನಾ ಬಲವನ್ನು ಹೆಚ್ಚಿಸುವ ಜವಾಬ್ದಾರಿ ಅವರ ಮೇಲಿರುತ್ತದೆ. ಮುಂದಿನ ಚುನಾವಣೆಗಳಲ್ಲಿ ಕಾಂಗ್ರೆಸ್‌ನ ವಿಜಯಕ್ಕೆ ಅವರು ಕಾರ್ಯತತ್ಪರರಾಗುವ ನಿರೀಕ್ಷೆಯಿದೆ.
ಒಟ್ಟಿನಲ್ಲಿ KPCCಯ ಹೊಸ ಸಾರಥಿಯಾಗಿ ಬಿ.ಕೆ ಹರಿಪ್ರಸಾದ್ ಇನ್ನು ಮುಂದೆ ಡಿ.ಕೆ ಶಿವಕುಮಾರ್ ನಂತರ ಮುಂದುವರೆಸಲಿದ್ದಾರೆ. ಈ ಸುದ್ದಿಯನ್ನು ಕೇಳಿದ ನಂತರ ಹರಿಪ್ರಸಾದ್ ಅವರು ಕೂಡ ಸಂತಸ ವ್ಯಕ್ತಪಡಿಸಿದ್ದಾರೆ.




