• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕಾವೇರಿ ವಿವಾದ: ಸಿಎಂ ನಿವಾಸದಲ್ಲಿ ಸರ್ವಪಕ್ಷ ಸಭೆ ಆರಂಭ..ಮಾಜಿ ಮುಖ್ಯಮಂತ್ರಿಗಳು ಭಾಗಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 2, 2026 - 12:28 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0

ಬೆಂಗಳೂರು: ತಮಿಳುನಾಡಿಗೆ (Tamil Nadu) ಕಾವೇರಿ ನೀರು (Cauvery Water) ಹರಿಸುವ ವಿವಾದ ಹಾಗೂ ರಾಜ್ಯದ ಹಿತರಕ್ಷಣೆ ಕುರಿತು ಚರ್ಚಿಸಲು ಮುಖ್ಯಮಂತ್ರಿ ಗೃಹಕಚೇರಿ ‘ಕೃಷ್ಣಾ’ದಲ್ಲಿ (Krishna) ಮಹತ್ವದ ಸರ್ವಪಕ್ಷ ಸಭೆಯು ಇಂದು ಆರಂಭವಾಗಿದೆ.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆಯುತ್ತಿರುವ ಈ ಉನ್ನತ ಮಟ್ಟದ ಸಭೆಯು ಕಾವೇರಿ ವಿವಾದದ ಪ್ರಸ್ತುತ ಸ್ಥಿತಿ ಮತ್ತು ಮುಂದಿನ ಕಾನೂನು ಕ್ರಮಗಳ ಕುರಿತು ನಿರ್ಣಾಯಕ ಚರ್ಚೆ ನಡೆಯುತ್ತಿದೆ.. ರಾಜ್ಯದ ಪ್ರಮುಖ ನಾಯಕರು, ಕಾನೂನು ತಜ್ಞರು, ಜಲಸಂಪನ್ಮೂಲ ಇಲಾಖೆಯ ಹಿರಿಯ ಅಧಿಕಾರಿಗಳು ಮತ್ತು ಸುಪ್ರೀಂ ಕೋರ್ಟ್ನಲ್ಲಿ ಕರ್ನಾಟಕದ ಪರ ವಾದ ಮಂಡಿಸುತ್ತಿರುವ ಹಿರಿಯ ವಕೀಲರು ಈ ಸಭೆಯಲ್ಲಿ ಭಾಗವಹಿಸಿದ್ದಾರೆ.

RelatedPosts

ಖ್ಯಾತ ಖಳನಾಯಕ ಪ್ರದೀಪ್ ರಾವತ್‌ ನಿಧನ

ನಮ್ಮದು ಎಲ್ಲರನ್ನು ಒಟ್ಟಾಗಿ ಕರೆದೊಯ್ಯುವ ಸರ್ಕಾರ: ಸಿಎಂ ಡಿ.ಕೆ ಶಿವಕುಮಾರ್

ಲಾಲ್‌ಬಾಗ್‌ನಲ್ಲಿ ಅರಳಲಿದೆ ಗಂಗ ಸಾಮ್ರಾಜ್ಯದ ಗತವೈಭವ: 220ನೇ ಫಲಪುಷ್ಪ ಪ್ರದರ್ಶನಕ್ಕೆ ಭರ್ಜರಿ ಸಿದ್ಧತೆ

ಕಾಂಗೋದಲ್ಲಿ ಎಬೋಲಾ ವೈರಸ್‌ ಅಬ್ಬರ: ಹೆಚ್ಚುತ್ತಿದೆ ಸಾವಿನ ಸಂಖ್ಯೆ

ADVERTISEMENT
ADVERTISEMENT

ರಾಜಕೀಯ ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ, ರಾಜ್ಯದ ಹಿತಾಸಕ್ತಿಗಾಗಿ ಒಂದೇ ವೇದಿಕೆಯಲ್ಲಿ ರಾಜ್ಯದ ಪ್ರಮುಖ ನಾಯಕರು ಈ ಸಭೆಯಲ್ಲಿ ಭಾಗವಹಿಸಿದ್ದಾರೆ. ಮಾಜಿ ಮುಖ್ಯಮಂತ್ರಿಗಳಾದ ಎಂ. ವೀರಪ್ಪ ಮೊಯ್ಲಿ, ಸಿದ್ದರಾಮಯ್ಯ, ಬಿ.ಎಸ್. ಯಡಿಯೂರಪ್ಪ, ಹೆಚ್.ಡಿ. ಕುಮಾರಸ್ವಾಮಿ, ಡಿ.ವಿ. ಸದಾನಂದಗೌಡ ಹಾಗೂ ಬಸವರಾಜ ಬೊಮ್ಮಾಯಿ ಉಪಸ್ಥಿತರಿದ್ದಾರೆ. ಕರ್ನಾಟಕದ ಪರವಾಗಿ ಒಂದೇ ಧ್ವನಿಯಲ್ಲಿ ನಿಲುವು ವ್ಯಕ್ತಪಡಿಸುವ ಕುರಿತು ಚರ್ಚೆ ನಡೆಸುತ್ತಿದ್ದಾರೆ.

ಇದರ ಜೊತೆಗೆ ಕೇಂದ್ರ ಮತ್ತು ರಾಜ್ಯ ಮಟ್ಟದ ಸಂಸದರು, ಸಚಿವರು, ಜಲಸಂಪನ್ಮೂಲ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ಸುಪ್ರೀಂ ಕೋರ್ಟ್‌ನಲ್ಲಿ ಕರ್ನಾಟಕದ ಪರವಾಗಿ ವಾದ ಮಂಡಿಸುತ್ತಿರುವ ಹಿರಿಯ ವಕೀಲರ ತಂಡವೂ ಸಭೆಯಲ್ಲಿ ಪಾಲ್ಗೊಂಡಿದೆ. ಕಾನೂನು ಹೋರಾಟವನ್ನು ಮತ್ತಷ್ಟು ಬಲಪಡಿಸುವುದು, ಮುಂದಿನ ನ್ಯಾಯಾಂಗ ಪ್ರಕ್ರಿಯೆಯಲ್ಲಿ ಯಾವ ರೀತಿಯ ದಾಖಲೆಗಳು ಹಾಗೂ ವಾದಗಳನ್ನು ಮಂಡಿಸಬೇಕು ಎಂಬ ಕುರಿತು ಕಾನೂನು ತಜ್ಞರು ಸರ್ಕಾರಕ್ಕೆ ಸಲಹೆ ನೀಡುತ್ತಿದ್ದಾರೆ.

ಸಭೆಯಲ್ಲಿ ಪ್ರಮುಖವಾಗಿ ಕಾವೇರಿ ಕಣಿವೆಯ ನಾಲ್ಕು ಪ್ರಮುಖ ಜಲಾಶಯಗಳಾದ ಕೃಷ್ಣರಾಜಸಾಗರ (KRS), ಕಬಿನಿ, ಹಾರಂಗಿ ಹಾಗೂ ಹೇಮಾವತಿ ಜಲಾಶಯಗಳ ಪ್ರಸ್ತುತ ನೀರಿನ ಮಟ್ಟದ ಕುರಿತು ವಿವರವಾದ ಮಾಹಿತಿ ಮಂಡಿಸಲಾಗಿದೆ. ಮುಂಗಾರು ಮಳೆಯ ಪ್ರಮಾಣ, ಒಳಹರಿವು, ಮುಂದಿನ ತಿಂಗಳುಗಳಲ್ಲಿ ಕುಡಿಯುವ ನೀರಿನ ಬೇಡಿಕೆ, ರೈತರ ನೀರಾವರಿ ಅಗತ್ಯತೆ ಹಾಗೂ ನಗರ ಪ್ರದೇಶಗಳಿಗೆ ನೀರು ಪೂರೈಕೆಯ ಸ್ಥಿತಿಗತಿಗಳನ್ನು ಅಧಿಕಾರಿಗಳು ಅಂಕಿ-ಅಂಶಗಳೊಂದಿಗೆ ವಿವರಿಸಿದ್ದಾರೆ.

ರಾಜ್ಯದ ಹಲವೆಡೆ ಮಳೆಯ ಪ್ರಮಾಣದಲ್ಲಿ ಏರಿಳಿತ ಕಂಡುಬಂದಿರುವ ಕಾರಣ, ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆಗಳನ್ನೂ ಅಧಿಕಾರಿಗಳು ಸಭೆಯ ಗಮನಕ್ಕೆ ತಂದಿದ್ದಾರೆ. ಈ ಹಿನ್ನೆಲೆ ತಮಿಳುನಾಡಿಗೆ ನೀರು ಬಿಡುಗಡೆ ಮಾಡುವ ವಿಚಾರದಲ್ಲಿ ರಾಜ್ಯದ ವಾಸ್ತವ ಸ್ಥಿತಿಯನ್ನು ಸುಪ್ರೀಂ ಕೋರ್ಟ್ ಹಾಗೂ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಮುಂದೆ ಸಮರ್ಥವಾಗಿ ಮಂಡಿಸುವ ಅಗತ್ಯವಿದೆ ಎಂಬ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾಗಿದೆ.

ರಾಜ್ಯದ ಹಿತಾಸಕ್ತಿಗೆ ಯಾವುದೇ ಧಕ್ಕೆಯಾಗದಂತೆ ಕಾನೂನುಬದ್ಧ ಹೋರಾಟ ಮುಂದುವರಿಸಲು ಎಲ್ಲ ರಾಜಕೀಯ ಪಕ್ಷಗಳ ಸಹಕಾರ ಪಡೆಯುವ ಉದ್ದೇಶದಿಂದಲೇ ಈ ಸರ್ವಪಕ್ಷ ಸಭೆ ಆಯೋಜಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 08 04T233828.493

ಖ್ಯಾತ ಖಳನಾಯಕ ಪ್ರದೀಪ್ ರಾವತ್‌ ನಿಧನ

by ಶಾಲಿನಿ ಕೆ. ಡಿ
August 4, 2026 - 11:39 pm
0

ಖರ್ಚಾಗುತ್ತೆ

Google Payನಲ್ಲಿ ಹೊಸ AI ಫೀಚರ್ ಲಾಂಚ್: ಎಐ ಮೂಲಕ ನಿಮ್ಮ ಹಣ ಎಲ್ಲಿ ಖರ್ಚಾಗುತ್ತೆ ಅಂತ ತಿಳಿಯಿರಿ!

by ಶಾಲಿನಿ ಕೆ. ಡಿ
August 4, 2026 - 11:22 pm
0

Untitled design 2026 08 04T230313.569

ನಮ್ಮದು ಎಲ್ಲರನ್ನು ಒಟ್ಟಾಗಿ ಕರೆದೊಯ್ಯುವ ಸರ್ಕಾರ: ಸಿಎಂ ಡಿ.ಕೆ ಶಿವಕುಮಾರ್

by ಶಾಲಿನಿ ಕೆ. ಡಿ
August 4, 2026 - 11:04 pm
0

Untitled design 2026 08 04T224957.815

ಲಾಲ್‌ಬಾಗ್‌ನಲ್ಲಿ ಅರಳಲಿದೆ ಗಂಗ ಸಾಮ್ರಾಜ್ಯದ ಗತವೈಭವ: 220ನೇ ಫಲಪುಷ್ಪ ಪ್ರದರ್ಶನಕ್ಕೆ ಭರ್ಜರಿ ಸಿದ್ಧತೆ

by ಶಾಲಿನಿ ಕೆ. ಡಿ
August 4, 2026 - 10:52 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 04T233828.493
    ಖ್ಯಾತ ಖಳನಾಯಕ ಪ್ರದೀಪ್ ರಾವತ್‌ ನಿಧನ
    August 4, 2026 | 0
  • Untitled design 2026 08 04T230313.569
    ನಮ್ಮದು ಎಲ್ಲರನ್ನು ಒಟ್ಟಾಗಿ ಕರೆದೊಯ್ಯುವ ಸರ್ಕಾರ: ಸಿಎಂ ಡಿ.ಕೆ ಶಿವಕುಮಾರ್
    August 4, 2026 | 0
  • Untitled design 2026 08 04T224957.815
    ಲಾಲ್‌ಬಾಗ್‌ನಲ್ಲಿ ಅರಳಲಿದೆ ಗಂಗ ಸಾಮ್ರಾಜ್ಯದ ಗತವೈಭವ: 220ನೇ ಫಲಪುಷ್ಪ ಪ್ರದರ್ಶನಕ್ಕೆ ಭರ್ಜರಿ ಸಿದ್ಧತೆ
    August 4, 2026 | 0
  • Untitled design 2026 08 04T223414.536
    ಕಾಂಗೋದಲ್ಲಿ ಎಬೋಲಾ ವೈರಸ್‌ ಅಬ್ಬರ: ಹೆಚ್ಚುತ್ತಿದೆ ಸಾವಿನ ಸಂಖ್ಯೆ
    August 4, 2026 | 0
  • Untitled design 2026 08 04T214934.461
    BBK 13: ದೊಡ್ಮನೆ ಎಂಟ್ರಿಗೆ ಭರ್ಜರಿ ವೇದಿಕೆ ಸಜ್ಜು; ಸ್ಪರ್ಧಿಗಳ ಅಗ್ನಿಪರೀಕ್ಷೆಗೆ ಕೌಂಟ್‌ಡೌನ್‌ ಶುರು
    August 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version