ಭೀಕರ ರಸ್ತೆ ಅಪಘಾತ: ಸ್ಥಳದಲ್ಲೇ ನಾಲ್ವರು ಬಾಲಕರು ಸಾವು

Untitled design 2025 09 07t085929.028

ಚಾಮರಾಜನಗರ, ಸೆಪ್ಟೆಂಬರ್ 07, 2025: ಚಾಮರಾಜನಗರ ಜಿಲ್ಲೆಯ ಗಾಳೀಪುರ ಬೈಪಾಸ್‌ನ ರಿಂಗ್ ರಸ್ತೆಯಲ್ಲಿ ಸಂಭವಿಸಿದ ಭೀಕರ ಸರಣಿ ಅಪಘಾತ ನಡೆದಿದ್ದು, ನಾಲ್ವರು ಬಾಲಕರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಈ ದುರ್ಘಟನೆಯಲ್ಲಿ ಕಾರು ಮತ್ತು ಲಾರಿಯ ನಡುವೆ ಡಿಕ್ಕಿಯಾಗಿದ್ದು, ಸ್ಥಳದಲ್ಲೇ ನಾಲ್ವರು ಯುವಕರು ಮೃತಪಟ್ಟಿದ್ದಾರೆ.

ಮೃತರನ್ನು ರೆಹಾನ್ (11), ಆದಾನ್ ಪಾಷಾ, ಫೈಜಲ್ ಮತ್ತು ಮೆರಾನ್ (10) ಎಂದು ಗುರುತಿಸಲಾಗಿದೆ. ಈ ನಾಲ್ವರು ಬಾಲಕರು ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಪೊಲೀಸರ ಪ್ರಕಾರ, ಮೊಪೆಡ್‌ನೊಂದಿಗೆ ಕಾರು ಮತ್ತು ಲಾರಿ ಡಿಕ್ಕಿಯಾಗಿದ್ದು, ಈ ಘಟನೆಯಲ್ಲಿ ಮೆರಾನ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ. ಉಳಿದ ಮೂವರು ರೆಹಾನ್, ಆದಾನ್ ಪಾಷಾ ಮತ್ತು ಫೈಜಲ್ ಗಂಭೀರವಾಗಿ ಗಾಯಗೊಂಡಿದ್ದರು.

ಗಾಯಾಳುಗಳನ್ನು ತಕ್ಷಣವೇ ಚಾಮರಾಜನಗರದ ಸಿಮ್ಸ್ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಅವರ ಗಾಯಗಳ ತೀವ್ರತೆಯನ್ನು ಗಮನದಲ್ಲಿಟ್ಟುಕೊಂಡು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ರವಾನಿಸಲಾಯಿತು. ದುರಾದೃಷ್ಟವಶಾತ್, ಚಿಕಿತ್ಸೆ ಫಲಕಾರಿಯಾಗದೇ ರೆಹಾನ್, ಆದಾನ್ ಪಾಷಾ ಮತ್ತು ಫೈಜಲ್ ಕೂಡ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಈ ದುರ್ಘಟನೆಗೆ ಸಂಬಂಧಿಸಿದಂತೆ ಚಾಮರಾಜನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version