• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಚೆನ್ನಮ್ಮಗೆ ನಾಳೆ ಹಾಸನದಲ್ಲಿ ಅಂತಿಮ ವಿದಾಯ: ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
July 19, 2026 - 7:18 am
in ಕರ್ನಾಟಕ
0 0
0
CLIPBOARD DATA SPLITTER123,34,101,108,101,109,101,110,116,115,34,58,91,123,34,105,100,34,58,34,53,52,102,52,52,49,56,52,45,51,50,52,56,45,52,49,57,51,45,57,49,101,102,45,55,49,56,53,100,50,98,57,5 (1)

RelatedPosts

ಕೆಪಿಎಸ್‌ಸಿ ನೇಮಕಾತಿ ಅಕ್ರಮ ಆರೋಪ: ಜುಲೈ 29ರೊಳಗೆ ಉತ್ತರಿಸಲು ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

ಜುಲೈ 25-26ರಂದು ರಾಜ್ಯಾದ್ಯಂತ ಬಿಜೆಪಿಯ ಎಸ್‌ಐಆರ್ ಜಾಗೃತಿ ಅಭಿಯಾನ

ಇಂದು ಎಲ್ಲೆಲ್ಲಿ ಮಳೆಯಾಗಲಿದೆ? ರಾಜ್ಯದ ಸಂಪೂರ್ಣ ಹವಾಮಾನ ವರದಿ ಇಲ್ಲಿದೆ

ಹೆದ್ದಾರಿಯಲ್ಲಿ ಅಪರಿಚಿತರಿಗೆ ಅಪಘಾತವಾದ್ರೆ ಉಚಿತ ಚಿಕಿತ್ಸೆ: ಆರೋಗ್ಯ ಸಚಿವ ಯು.ಟಿ ಖಾದರ್

ADVERTISEMENT
ADVERTISEMENT

ಮಾಜಿ ಪ್ರಧಾನಮಂತ್ರಿ ಹೆಚ್. ಡಿ. ದೇವೇಗೌಡ ಅವರ ಧರ್ಮಪತ್ನಿ ಚೆನ್ನಮ್ಮ ಅವರು ಅನಾರೋಗ್ಯದಿಂದ ಜುಲೈ 18ರಂದು ವಿಧಿವಶರಾಗಿದ್ದು, ಅವರ ಅಂತ್ಯಕ್ರಿಯೆ ಜುಲೈ 20ರಂದು ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಮಾವಿನಕೆರೆ ರಂಗನಾಥಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಲಿದೆ. ಹಲವು ದಶಕಗಳ ಕಾಲ ದೇವೇಗೌಡರ ರಾಜಕೀಯ ಹಾಗೂ ವೈಯಕ್ತಿಕ ಜೀವನದಲ್ಲಿ ಬೆನ್ನೆಲುಬಾಗಿ ನಿಂತಿದ್ದ ಚೆನ್ನಮ್ಮ ಅವರ ನಿಧನದಿಂದ ಕುಟುಂಬದ ಜೊತೆಗೆ ರಾಜಕೀಯ ವಲಯದಲ್ಲೂ ಶೋಕದ ವಾತಾವರಣ ನಿರ್ಮಾಣವಾಗಿದೆ.

ಚೆನ್ನಮ್ಮ ಅವರ ಪಾರ್ಥಿವ ಶರೀರವನ್ನು ಸಾರ್ವಜನಿಕರ ಅಂತಿಮ ದರ್ಶನಕ್ಕಾಗಿ ಇಂದು ಬೆಳಿಗ್ಗೆ 7 ಗಂಟೆಯಿಂದ 11 ಗಂಟೆಯವರೆಗೆ ಬೆಂಗಳೂರಿನ ಪದ್ಮನಾಭನಗರದಲ್ಲಿರುವ ದೇವೇಗೌಡರ ನಿವಾಸದ ಸಮೀಪದ ಮೈದಾನದಲ್ಲಿ ಇರಿಸಲಾಗಿದೆ. ರಾಜಕೀಯ ನಾಯಕರು, ಗಣ್ಯರು, ಪಕ್ಷದ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಆಗಮಿಸಿ ಅಂತಿಮ ನಮನ ಸಲ್ಲಿಸಲು ವ್ಯವಸ್ಥೆ ಮಾಡಲಾಗಿದೆ.

ಬೆಳಿಗ್ಗೆ 11.05ಕ್ಕೆ ಬೆಂಗಳೂರಿನಿಂದ ಹಾಸನ ಜಿಲ್ಲೆಯ ಹೊಳೆನರಸೀಪುರದತ್ತ ಅಂತಿಮ ಯಾತ್ರೆ ಆರಂಭವಾಗಲಿದೆ. ಅಂತಿಮ ಯಾತ್ರೆಯು ನೆಲಮಂಗಲ ಕ್ರಾಸ್, ಸೋಲೂರು ಕ್ರಾಸ್, ಮರೂರು ಹ್ಯಾಂಡ್ ಪೋಸ್ಟ್, ಕುಣಿಗಲ್ ಕ್ರಾಸ್, ಬೆಳ್ಳೂರು ಕ್ರಾಸ್, ಕದಬಳ್ಳಿ ಕ್ರಾಸ್, ಹಿರಿಸಾವೆ, ಚನ್ನರಾಯಪಟ್ಟಣ, ಎಲೆಯೂರು, ಹಾಸನ ಡೈರಿ ಸರ್ಕಲ್, ಭೂನಳ್ಳಿ ಕ್ರಾಸ್, ಶಾಂತಿಗ್ರಾಮ, ಎನ್.ಆರ್. ಸರ್ಕಲ್ ಮಾರ್ಗವಾಗಿ ಮೊಸಳೆ ಹೊಸಳ್ಳಿಗೆ ತಲುಪಲಿದೆ. ಈ ಮಾರ್ಗದುದ್ದಕ್ಕೂ ಸಾವಿರಾರು ಜನರು ಚೆನ್ನಮ್ಮ ಅವರಿಗೆ ಅಂತಿಮ ನಮನ ಸಲ್ಲಿಸುವ ನಿರೀಕ್ಷೆಯಿದೆ.

ಜುಲೈ 20ರಂದು ಬೆಳಿಗ್ಗೆ 7ರಿಂದ 9.30ರವರೆಗೆ ಹೊಳೆನರಸೀಪುರದಲ್ಲಿರುವ ಮಾಜಿ ಸಚಿವ ಎಚ್. ಡಿ. ರೇವಣ್ಣ ಅವರ ನಿವಾಸದಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಬಳಿಕ ಬೆಳಿಗ್ಗೆ 10 ಗಂಟೆಗೆ ಪಾರ್ಥಿವ ಶರೀರವನ್ನು ಅಂತ್ಯಕ್ರಿಯೆ ಸ್ಥಳಕ್ಕೆ ಕೊಂಡೊಯ್ಯಲಾಗುತ್ತದೆ. ಬೆಳಿಗ್ಗೆ 11.30ಕ್ಕೆ ಮಾವಿನಕೆರೆ ರಂಗನಾಥಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಕುಟುಂಬ ಸದಸ್ಯರು, ಬಂಧು-ಬಳಗ ಹಾಗೂ ಗಣ್ಯರ ಸಮ್ಮುಖದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.

ಪತ್ನಿಯ ಅಗಲಿಕೆಯ ದುಃಖವನ್ನು ಸಹಿಸಿಕೊಳ್ಳಲಾಗದೆ ಮಾಜಿ ಪ್ರಧಾನಮಂತ್ರಿ ಹೆಚ್. ಡಿ. ದೇವೇಗೌಡ ಅವರು ಚೆನ್ನಮ್ಮ ಅವರ ಪಾರ್ಥಿವ ಶರೀರ ಇರಿಸಲಾಗಿದ್ದ ಶೈತ್ಯಾಗಾರ ಪೆಟ್ಟಿಗೆಯ ಮೇಲೆ ತಲೆ ಇರಿಸಿ ಕಣ್ಣೀರು ಹಾಕಿದ ದೃಶ್ಯ ಎಲ್ಲರ ಮನಕಲಕಿತು. ಜೀವನ ಸಂಗಾತಿಯ ಅಗಲಿಕೆಯ ನೋವಿನಿಂದ ಭಾವುಕರಾಗಿದ್ದ ದೇವೇಗೌಡರನ್ನು ಪುತ್ರಿ ಶೈಲಜಾ ಹಾಗೂ ಕುಟುಂಬ ಸದಸ್ಯರು ಸಮಾಧಾನಪಡಿಸಿದರು.

ಇದೇ ವೇಳೆ CM ಡಿ.ಕೆ. ಶಿವಕುಮಾರ್ ಅವರು ಚೆನ್ನಮ್ಮ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಸಲು ರಾಜ್ಯ ಸರ್ಕಾರ ತೀರ್ಮಾನಿಸಿರುವುದಾಗಿ ತಿಳಿಸಿದ್ದಾರೆ. ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಲಾಗಿದೆ ಎಂದ ಅವರು, “ದೇಶದ ಮಾಜಿ ಪ್ರಧಾನಿಯ ಧರ್ಮಪತ್ನಿ ಹಾಗೂ ಕೇಂದ್ರ ಸಚಿವರ ತಾಯಿಯಾಗಿರುವ ಹಿನ್ನೆಲೆಯಲ್ಲಿ ಅವರಿಗೆ ರಾಜ್ಯ ಸರ್ಕಾರದ ಪರವಾಗಿ ಅತ್ಯುನ್ನತ ಗೌರವ ಸಲ್ಲಿಸಲಾಗುತ್ತದೆ” ಎಂದು ಹೇಳಿದರು.

ಇಂದು ನಡೆಯಲಿರುವ ರಾಜ್ಯ ಸಚಿವ ಸಂಪುಟ ಸಭೆಯಲ್ಲಿಯೂ ಚೆನ್ನಮ್ಮ ಅವರ ನಿಧನಕ್ಕೆ ಶ್ರದ್ಧಾಂಜಲಿ ಸಲ್ಲಿಸಲಾಗುವುದು ಎಂದು ಅವರು ಮಾಹಿತಿ ನೀಡಿದರು. ಈಗಾಗಲೇ ಪ್ರಧಾನಿ ನರೇಂದ್ರ ಮೋದಿ, ಸಿದ್ದರಾಮಯ್ಯ, CM ಡಿ.ಕೆ. ಶಿವಕುಮಾರ್ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ನಾಯಕರು ಹಾಗೂ ಗಣ್ಯರು ದೇವೇಗೌಡರ ಕುಟುಂಬಕ್ಕೆ ಭೇಟಿ ನೀಡಿ ಸಂತಾಪ ಸೂಚಿಸಿದ್ದಾರೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

ಸ್ವ (43)

ಇಂದಿನ ಚಿನ್ನದ ದರಗಳ ಸಂಪೂರ್ಣ ಪಟ್ಟಿ ಇಲ್ಲಿದೆ!

by ದಿಶಾ ಕೆ. ಎಸ್.
July 22, 2026 - 10:06 am
0

ಸ್ವ (41)

ಕೆಪಿಎಸ್‌ಸಿ ನೇಮಕಾತಿ ಅಕ್ರಮ ಆರೋಪ: ಜುಲೈ 29ರೊಳಗೆ ಉತ್ತರಿಸಲು ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

by ದಿಶಾ ಕೆ. ಎಸ್.
July 22, 2026 - 9:32 am
0

ಸ್ವ (40)

ಆಸ್ಪತ್ರೆಗೆ ದಾಖಲಾದ ಸೋನಮ್ ವಾಂಗ್ಚುಕ್ ಆರೋಗ್ಯ ವಿಚಾರಿಸಿದ ಜೆ.ಪಿ. ನಡ್ಡಾ, ಜಿತೇಂದ್ರ ಸಿಂಗ್

by ದಿಶಾ ಕೆ. ಎಸ್.
July 22, 2026 - 8:36 am
0

ಸ್ವ (37)

ವಿದ್ಯಾರ್ಥಿಗಳನ್ನು ರಾಜಕೀಯ ಅಸ್ತ್ರವಾಗಿ ಬಳಸುತ್ತಿದ್ದಾರೆ: ರಾಹುಲ್ ಗಾಂಧಿ ವಿರುದ್ಧ ಧರ್ಮೇಂದ್ರ ಪ್ರಧಾನ್ ವಾಗ್ದಾಳಿ

by ದಿಶಾ ಕೆ. ಎಸ್.
July 22, 2026 - 8:01 am
0

ಸಂಬಂಧಿಸಿದ ಪೋಸ್ಟ್‌ಗಳು

  • ಸ್ವ (41)
    ಕೆಪಿಎಸ್‌ಸಿ ನೇಮಕಾತಿ ಅಕ್ರಮ ಆರೋಪ: ಜುಲೈ 29ರೊಳಗೆ ಉತ್ತರಿಸಲು ಸರ್ಕಾರಕ್ಕೆ ಹೈಕೋರ್ಟ್ ಸೂಚನೆ
    July 22, 2026 | 0
  • ಸ್ವ (33)
    ಜುಲೈ 25-26ರಂದು ರಾಜ್ಯಾದ್ಯಂತ ಬಿಜೆಪಿಯ ಎಸ್‌ಐಆರ್ ಜಾಗೃತಿ ಅಭಿಯಾನ
    July 22, 2026 | 0
  • ಸ್ವ (30)
    ಇಂದು ಎಲ್ಲೆಲ್ಲಿ ಮಳೆಯಾಗಲಿದೆ? ರಾಜ್ಯದ ಸಂಪೂರ್ಣ ಹವಾಮಾನ ವರದಿ ಇಲ್ಲಿದೆ
    July 22, 2026 | 0
  • Untitled design 2026 07 21T221327.622
    ಹೆದ್ದಾರಿಯಲ್ಲಿ ಅಪರಿಚಿತರಿಗೆ ಅಪಘಾತವಾದ್ರೆ ಉಚಿತ ಚಿಕಿತ್ಸೆ: ಆರೋಗ್ಯ ಸಚಿವ ಯು.ಟಿ ಖಾದರ್
    July 21, 2026 | 0
  • Untitled design 2026 07 21T203109.779
    ಎಸ್ಸಿ-ಎಸ್ಟಿ ವಿದ್ಯಾರ್ಥಿಗಳ ಸ್ಕಾಲರ್‌ಶಿಪ್ ಹೆಚ್ಚಳಕ್ಕೆ ಸಿಎಂ ಜೊತೆ ಚರ್ಚೆ: ಡಿಸಿಎಂ ಪರಮೇಶ್ವರ್ ಭರವಸೆ
    July 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version