ಚಿಕ್ಕಬಳ್ಳಾಪುರ: ಕೆರೆಯಲ್ಲಿ ಅನುಮಾನಸ್ಪದ ರೀತಿಯಲ್ಲಿ ವ್ಯಕ್ತಿಯ ಶವ ಪತ್ತೆಯಾದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ತೀಲಕುಂಟಹಳ್ಳಿಯಲ್ಲಿ ನಡೆದಿದೆ. ವಿಜಯಪುರ ಗ್ರಾಮದ ನಿವಾಸಿಯಾದ 29 ವರ್ಷದ ನವೀನ್ ಮೃತ ದುರ್ದೈವಿಯಾಗಿದ್ದಾರೆ.
ಘಟನೆಯ ವಿವರ
ನವೀನ್ ಟಿಪ್ಪರ್ ಲಾರಿ ಚಾಲಕನಾಗಿ ಕೆಲಸ ಮಾಡುತ್ತಿದ್ದನು. ಆಕಸ್ಮಿಕವಾಗಿ ಕೆರೆಗೆ ಬಿದ್ದು ಸಾವನ್ನಪ್ಪಿದ್ದಾನಾ ಅಥವಾ ಕೊಲೆ ಮಾಡಿದ್ದರಾ ಅನ್ನೋ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಪೆರೇಸಂದ್ರ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಅಗ್ನಿಶಾಮಕ ಸಿಬ್ಬಂದಿಗಳು ಶವವನ್ನು ಹೊರಕ್ಕೆ ತೆಗೆದು, ಮರಣೋತ್ತರ ಪರೀಕ್ಷೆಗಾಗಿ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ರವಾನೆ ಮಾಡಿದ್ದಾರೆ.
ಕಟ್ಟಿಗೆಯಿಂದ ಹೊಡೆದು ವ್ಯಕ್ತಿಯ ಬರ್ಬರ ಹ*ತ್ಯೆ
ಕಲಬುರಗಿ: ಬೆತ್ತಲೆ ಮಾಡಿ, ಕಟ್ಟಿಗೆಯಿಂದ ಹೊಡೆದು ವ್ಯಕ್ತಿಯನ್ನು ಬರ್ಬರವಾಗಿ ಹ*ತ್ಯೆ ಮಾಡಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ. 38 ವರ್ಷದ ಚಾಂದ್‌ಸಾಬ್ ಕೊಲೆಯಾದ ವ್ಯಕ್ತಿ.
ಘಟನೆಯ ವಿವರ
ಚಾಂದ್‌ಸಾಬ್ ಕಳೆದ ರಾತ್ರಿ ಮನೆಯಲ್ಲೆ ಪರಿಚಿತರೊಂದಿಗೆ ಎಣ್ಣೆ ಪಾರ್ಟಿ ಮಾಡಿ ಎಂಜಾಯ್ ಮಾಡಿದ್ದಾರೆ. ಈ ವೇಳೆ ಕಟ್ಟಿಗೆಯಿಂದ ಹೊಡೆದು ಚಾಂದ್‌ಸಾಬ್‌ನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಯಾವ ಕಾರಣಕ್ಕೆ ಕೊಲೆಯಾಗಿದೆ ಹಾಗೂ ಯಾರು ಕೊಲೆ ಮಾಡಿದ್ದಾರೆ ಎಂಬುದು ಇನ್ನೂ ಪತ್ತೆಯಾಗಿಲ್ಲ. ಆರ್‌ಜಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.





