ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣ ಸಮೀಪ ನಡೆದ ಕಾಂಗ್ರೆಸ್ ಕಾರ್ಯಕರ್ತ ಹಾಗೂ ಗ್ರಾಮ ಪಂಚಾಯತ್ ಸದಸ್ಯ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಸಂಜಯ್, ಭೂಷಣ್, ಮಿಥುನ್ ಸೇರಿದಂತೆ ಐವರನ್ನು ಸಖರಾಯಪಟ್ಟಣ ಪೊಲೀಸರು ಶನಿವಾರ ಬೆಳಿಗ್ಗೆ ವಿಚಾರಣೆಗೆ ಒಳಪಡಿಸಿದ್ದಾರೆ. ಹತ್ಯೆಗೆ ಬಳಸಲಾದ ಮಚ್ಚು ಹಾಗೂ ಘಟನೆಗೆ ಸಂಬಂಧಿಸಿದ ಕೆಲವು ಮಹತ್ವದ ಸಾಕ್ಷ್ಯಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ್ (38) ಅವರನ್ನು ದುಷ್ಕರ್ಮಿಗಳು ಕಲ್ಮುರುಡೇಶ್ವರ ಮಠದ ಬಳಿ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಗಣೇಶ್ ಗೌಡ್ ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು. ಕಳೆದ ಕೆಲ ದಿನಗಳಿಂದ ದತ್ತಜಯಂತಿ ಬ್ಯಾನರ್ ಹಾಕುವ–ತೆಗೆದುಹಾಕುವ ವಿಚಾರಕ್ಕೆ ಸಂಬಂಧಿಸಿ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿತ್ತು. ಸ್ಥಳೀಯ ದಲಿತ ಯುವಕರ ಹಾಗೂ ಮತ್ತೊಂದು ಗುಂಪಿನ ನಡುವೆ ವಾಗ್ವಾದಗಳು ನಡೆದಿದ್ದವು.
ಗುರುವಾರ ರಾತ್ರಿ ಕಲ್ಮುರುಡೇಶ್ವರ ಮಠದ ಬಳಿ ಗಣೇಶ್ ಗೌಡ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದು, ಮಚ್ಚು ಮಾರಣಾಂತಿಕ ಗುದ್ದಾಟದಲ್ಲಿ ಅವರು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಸಂಬಂಧ ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಯ ನಂತರ ಗ್ರಾಮದಲ್ಲಿ ಪೊಲೀಸರು ಸಖರಾಯಪಟ್ಟಣ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಬಿಗಿ ಬಂದೋಬಸ್ತ್ ಒದಗಿಸಿದ್ದಾರೆ.





