ಚಿತ್ತಾಪೂರದಲ್ಲಿ ಆರ್‌ಎಸ್‌ಎಸ್‌ ಪಥಸಂಚಲನೆಗೆ ಅನುಮತಿ ಇಲ್ಲ..!

Untitled design 2025 10 19t101327.642

ಕಲಬುರಗಿ: ಚಿತ್ತಾಪೂರ ವಿಧಾನಸಭಾ ಕ್ಷೇತ್ರದ ಶಾಸಕ ಪ್ರಿಯಾಂಕ್ ಖರ್ಗೆಗೆ ಜೀವಬೆದರಿಕೆ ಹಾಕಿದ್ದನ್ನು ಖಂಡಿಸಿ ನಡೆಸಲಾಗಿದ್ದ ಬಂದ್‌ ಮತ್ತು ಪ್ರತಿಭಟನೆಯ ನಡುವೆ, ಆರ್‌ಎಸ್‌ಎಸ್‌ ಸಂಘಟನೆಯು ಇಂದು ನಡೆಸಲು ಯೋಜಿಸಿದ್ದ ಪಥಸಂಚಲನೆಗೆ ತಾಲೂಕು ಆಡಳಿತ ಅನುಮತಿ ನಿರಾಕರಿಸಿದೆ.

ಚಿತ್ತಾಪೂರ ತಾಲೂಕು ತಹಶೀಲ್ದಾರ್ ನಾಗಯ್ಯ ಈ ಬಗ್ಗೆ ಮಾತನಾಡಿ, ಪಥಸಂಚಲನೆಗೆ ಅನುಮತಿ ನೀಡಿದರೆ ಕಾನೂನು ಸುವ್ಯವಸ್ಥೆ ಹಾಳಾಗುವ ಸಾಧ್ಯತೆ ಇದೆ ಎಂದು ಪಥಸಂಲನೆಗೆ ಅನುಮತಿ ನೀಡಿಲ್ಲ ಎಂದು ಹೇಳಿದ್ದಾರೆ.

ಆರ್‌ಎಸ್‌ಎಸ್‌ ಪಥಸಂಚಲನದ ವಿರುದ್ಧವಾಗಿ ಭೀಮ್ ಆರ್ಮಿ ಸಂಘಟನೆ ಹಾಗೂ ಭಾರತೀಯ ದಲಿತ ಪ್ಯಾಂಥರ್‌ ಸಂಘದ ಸದಸ್ಯರು ಅದೇ ಮಾರ್ಗವಾಗಿ ಪಥಸಂಚಲನ ಮಾಡಲು ಅನುಮತಿ ಕೋರಿದ್ದಾರೆ. ಭಾನುವಾರ ಎಲ್ಲಾ ಸಂಘಟನೆಗಳು ಒಂದೇ ಮಾರ್ಗದಲ್ಲಿ ಪಥಸಂಚಲನ ನಡೆಸಿದರೆ ಗೊಂದಲ ಉಂಟಾಗಿ ಕಾನೂನು ಸುವ್ಯವಸ್ಥೆ ಹಾಳಾಗುವ ಸಾಧ್ಯತೆ ಇದೆ. ಹೀಗಾಗಿ ಯಾವುದೇ ಸಂಘಟನೆಗಳಿಗೆ ಪಥಸಂಚಲನ ಮಾಡಲು ಅನುಮತಿ ನೀಡುವುದಿಲ್ಲ ಎಂದು ತಹಶೀಲ್ದಾರ್ ನಾಗಯ್ಯ ತಿಳಿಸಿದ್ದಾರೆ.

Exit mobile version