• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, August 7, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಎಲ್ಲ ವರ್ಗದವರಿಗೆ ಸಾಮಾಜಿಕ ನ್ಯಾಯ ಒದಗಿಸಲು ಕಾಂಗ್ರೆಸ್ ಬದ್ಧ: ಸಿಎಂ ಡಿ.ಕೆ ಶಿವಕುಮಾರ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 7, 2026 - 6:45 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Your paragraph text (28)

ಬೆಂಗಳೂರು, ಆ.07: “ನಮ್ಮ ಸರ್ಕಾರ ಸಾಮಾಜಿಕ ಆರ್ಥಿಕ ಸಮೀಕ್ಷೆ ನಡೆಸಿದ್ದು, ಅದನ್ನು ಜಾರಿಗೆ ತಂದು ಸಾಮಾಜಿಕ ನ್ಯಾಯ ಒದಗಿಸಲು ನಾವು ಬದ್ಧರಾಗಿದ್ದೇವೆ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು.

ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ರಾಷ್ಟ್ರೀಯ ಒಬಿಸಿ ಮಹಾಸಂಘದ 11ನೇ ರಾಷ್ಟ್ರೀಯ ಮಹಾ ಸಮಾವೇಶವನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ ಉದ್ಘಾಟಿಸಿ ಮಾತನಾಡಿದರು. “21 ರಾಜ್ಯಗಳಿಂದ ಬಂದಿರುವ ನಿಮ್ಮೆಲರನ್ನು ಭೇಟಿ ಮಾಡಿರುವುದು ಸಂತೋಷ ತಂದಿದೆ. ಕಾಂಗ್ರೆಸ್ ಪಕ್ಷ ಹಾಗೂ ಕರ್ನಾಟಕ ಸರ್ಕಾರದ ಪರವಾಗಿ ನಿಮ್ಮೆಲ್ಲರಿಗೂ ಸ್ವಾಗತ ಕೋರುತ್ತೇನೆ. ನಾವು ವೈವಿಧ್ಯತೆಯ ದೇಶದಲ್ಲಿದ್ದೇವೆ. ಮಾನವಿಯತೆ ಮೇಲೆ ನಂಬಿಕೆ ಇಟ್ಟಿದ್ದೇವೆ. ನಮ್ಮ ರಾಜ್ಯ ಅತ್ಯಂತ ಪ್ರಾಚೀನ ಪರಂಪರೆ ಹೊಂದಿದೆ. ಬಸವಣ್ಣನವರು 12ನೇ ಶತಮಾನದಲ್ಲಿ ವಿಶ್ವದ ಮೊದಲ ಸಂಸತ್ತನ್ನು ಆರಂಭಿಸಿದರು. ಎಲ್ಲಾ ವರ್ಗದ ಜನರು ಆ ಸಂಸತ್ತಿನ ಭಾಗವಾಗಿದ್ದರು. ನಿಮಗೆ ಸಾಧ್ಯವಾದರೆ ಬೀದರ್ ಜಿಲ್ಲೆಯ ಬಸವಕಲ್ಯಾಣಕ್ಕೆ ಹೋಗಿ ಬಸವಣ್ಣನವರ ಅನುಭವ ಮಂಟಪ ವೀಕ್ಷಣೆ ಮಾಡಿ. ಇದು ಕರ್ನಾಟಕ ಸರ್ಕಾರದ ಇತಿಹಾಸ” ಎಂದು ತಿಳಿಸಿದರು.

RelatedPosts

ಆಗಸ್ಟ್ 9 ರಂದು ನಂದಿಬೆಟ್ಟಕ್ಕೆ ವಾಹನ ಸಂಚಾರ ಸಂಪೂರ್ಣ ಬಂದ್: ಕಾರಣವೇನು?

ಸಚಿವ ಕೆ.ಜೆ.ಜಾರ್ಜ್ ಬೆಂಗಾವಲು ವಾಹನ ಅಪಘಾತ: ತಪ್ಪಿದ ಭಾರೀ ಅನಾಹುತ

ಬೆಂಗಳೂರು ಹೋಟೆಲ್‌ಗಳ ಮೇಲೆ ಆರೋಗ್ಯ ಇಲಾಖೆ ಅಧಿಕಾರಿಗಳ ದಿಢೀರ್ ದಾಳಿ

ತಮಿಳುನಾಡು ಸಿಎಂ ಡಿವೋರ್ಸ್ ಕೇಸ್‌ಗೆ ಬಿಗ್ ಟ್ವಿಸ್ಟ್: ವಿಚ್ಛೇದನ ಅರ್ಜಿ ವಾಪಸ್ ಪಡೆದ ವಿಜಯ್ ಪತ್ನಿ

ADVERTISEMENT
ADVERTISEMENT

“ನಾನು ಹಾಗೂ ಹರಿಪ್ರಸಾದ್ ಅವರು ಕಾಂಗ್ರೆಸ್ ಪಕ್ಷದಲ್ಲಿ ಬೆಳೆದವರು. ಕಾಂಗ್ರೆಸ್ ಸರ್ಕಾರ ಇಲ್ಲಿದೆ. ಕಾಂಗ್ರೆಸ್ ಇತಿಹಾಸ ದೇಶದ ಇತಿಹಾಸ, ಕಾಂಗ್ರೆಸ್ ಶಕ್ತಿ ದೇಶದ ಶಕ್ತಿ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಎಲ್ಲಾ ವರ್ಗದ ಜನರು ಅಧಿಕಾರಕ್ಕೆ ಬಂದಂತೆ. ಕಾಂಗ್ರೆಸ್ ಪಕ್ಷ ದೇಶಕ್ಕೆ ಸಂವಿಧಾನ ನೀಡಿದ್ದು, ನೆಹರೂ ಅವರ ಕಾಲದಿಂದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗೆಲ್ಲಾ ಎಲ್ಲಾ ವರ್ಗದವರ ರಕ್ಷಣೆ ಮಾಡಲಾಗಿದೆ. ಇಂದಿರಾ ಗಾಂಧಿ ಹಾಗೂ ದೆವರಾಜ ಅರಸು ಅವರ ಕಾಲದಲ್ಲಿ ಉಳುವವನೇ ಭೂಮಿಯ ಒಡೆಯ ಎಂದು ಘೋಷಣೆ ಮಾಡಲಾಯಿತು” ಎಂದರು.

“ನಾಲ್ವಡಿ ಕೃಷ್ಣರಾಜ ಒಡೆಯರ್ ಕಾಲದಲ್ಲೇ ಓಬಿಸಿ ಮೀಸಲಾತಿ ನೀಡಲಾಗಿತ್ತು. ಇದು ಕರ್ನಾಟಕ ರಾಜ್ಯದ ಇತಿಹಾಸ. ದೇಶದಲ್ಲಿ 52% ಹಿಂದುಳಿದ ವರ್ಗದವರಿದ್ದೀರಿ. ನೀವುಗಳು ನಿಮ್ಮ ಸಾಮರ್ಥ್ಯ, ಕಲೆ ಹಾಗೂ ಜ್ಞಾನದಿಂದ ಈ ದೇಶವನ್ನು ಕಟ್ಟಿದ್ದೀರಿ. ನೀವು ಈ ದೇಶದ ನಿರ್ಮಾತೃಗಳು. ನಿಮ್ಮ ಬೇಡಿಕೆಗಳ ಬಗ್ಗೆ ನಮಗೆ ಅರಿವಿದೆ” ಎಂದು ಹೇಳಿದರು.

ಸರ್ವರಿಗೂ ಸಮಬಾಳು ಸಮಪಾಲು ತತ್ವದ ಮೇಲೆ ಸಾಗುತ್ತಿದ್ದೇವೆ

“ನಾವು ಸರ್ವರಿಗೂ ಸಮಬಾಳು ಸಮಪಾಲು ತತ್ವದ ಮೇಲೆ ನಡೆಯುತ್ತಿದ್ದೇವೆ. ಬ್ರಿಟೀಷರ ಕಾಲದಲ್ಲೇ ಸಮಾನತೆಯ ಚರ್ಚೆ ಇತ್ತು. ಹೀಗಾಗಿ 1931ರ ಸಮಯದಲ್ಲಿ ಜಾತಿ ಗಣತಿ ಮಾಡಲಾಗಿತ್ತು. ನಮ್ಮ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಅವರು ಈ ಜಾತಿ ಗಣತಿಯನ್ನು ನಡೆಸಲು ಬದ್ಧರಾಗಿದ್ದಾರೆ. ಆ ಮೂಲಕ ಸಮಾಜದ ಎಲ್ಲಾ ವರ್ಗದವರಿಗೆ ಸಮಾನ ಅವಕಾಶ ನೀಡಬೇಕು. ಇಂದು ಪ್ರತಿ ಸಮುದಾಯಕ್ಕೂ ಸಂವಿಧಾನಿಕ ಹಕ್ಕು ನೀಡಲಾಗಿದೆ. ಕರ್ನಾಟಕದಲ್ಲಿ ಪ್ರತ್ಯೇಕ ಹಿಂದುಳಿದ ವರ್ಗಗಳ ಇಲಾಖೆ ಇದೆ. ಇದಕ್ಕಾಗಿ ಅನುದಾನ ನೀಡಲಾಗುವುದು. ಈ ವರ್ಗದ ಕೂಗನ್ನು ನಾವು ಆಲಿಸುತ್ತಿದ್ದೇವೆ. ನಮ್ಮ ಸಚಿವ ಸಂಪುಟದಲ್ಲಿ ಮೂರನೇ ಎರಡು ಭಾಗದಷ್ಟು ಸಚಿವರು ಹಿಂದುಳಿದವರು, ಪರಿಶಿಷ್ಟರು ಹಾಗೂ ಅಲ್ಪಸಂಖ್ಯಾತರಾಗಿದ್ದಾರೆ. ಇದು ನಮ್ಮ ನಾಯಕರಾದ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಅವರು ನನಗೆ ಹಾಗೂ ಹರಿಪ್ರಸಾದ್ ಅವರಿಗೆ ನೀಡಿರುವ ಮಾರ್ಗದರ್ಶನ” ಎಂದು ತಿಳಿಸಿದರು.

ಬೇರೆ ರಾಜ್ಯಗಳು ನಮ್ಮ ಗ್ಯಾರಂಟಿ ಯೋಜನೆ ಅನುಸರಿಸಿವೆ

“ನಾವು ಅಧಿಕಾರಕ್ಕೆ ಬರುವ ಮುನ್ನ ನಾನು ಹಾಗೂ ಸಿದ್ದರಾಮಯ್ಯ ಅವರು ರಾಜ್ಯದ ಜನರಿಗೆ ಬೆಲೆ ಏರಿಕೆಯಿಂದ ರಕ್ಷಣೆ ನೀಡುವ ಭರವಸೆ ನೀಡಿದೆವು. ಅವರಿಗೆ ನೆರವಾಗಲು ಐದು ಗ್ಯಾರಂಟಿ ಯೋಜನೆ ಘೋಷಣೆ ಮಾಡಿದೆವು. ನಮ್ಮ ಯೋಜನೆ ನೋಡಿ ಎಲ್ಲರೂ ನಗುತ್ತಿದ್ದರು. ಪ್ರಧಾನಮಂತ್ರಿಗಳು ಈ ಯೋಜನೆಗಳ ಜಾರಿ ಅಸಾಧ್ಯ ಎಂದರು. ಪ್ರತಿ ವರ್ಷ ಈ ಯೋಜನೆಗಳಿಗಾಗಿ 52 ಸಾವಿರ ಕೋಟಿ ನೀಡುತ್ತಿದ್ದೇವೆ. ಈ ಗ್ಯಾರಂಟಿ ಅನುಷ್ಠಾನ ಸಮಿತಿಗೆ ಹಿಂದುಳಿದ ವರ್ಗದ ಹಿರಿಯ ನಾಯಕರಾದ ರೇವಣ್ಣ ಅವರನ್ನು ಅಧ್ಯಕ್ಷರನ್ನಾಗಿ ಮಾಡಿದ್ದೇವೆ. ನಾವು ಗ್ಯಾರಂಟಿ ಯೋಜನೆಗಳ ಮೂಲಕ ಬಡ ಕುಟುಂಬದ ಮನೆಯೊಡತಿಗೆ ಮಾಸಿಕ 2 ಸಾವಿರ, ಮನೆಗಳಿಗೆ 200 ಯೂನಿಟ್ ವರೆಗೂ ವಿದ್ಯುತ್ ಉಚಿತ, ಶಕ್ತಿ ಯೋಜನೆ ಮೂಲಕ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ, ನಿರುದ್ಯೋಗಿ ಯುವಕರಿಗೆ ನಿರುದ್ಯೋಗ ಭತ್ಯೆ ನೀಡಲಾಗುತ್ತಿದೆ. ನಮ್ಮ ಯೋಜನೆಗಳನ್ನು ದೇಶದ ಇತರೆ ರಾಜ್ಯಗಳು ಅನುಸರಿಸುತ್ತಿವೆ” ಎಂದು ತಿಳಿಸಿದರು.

ದೇಶದಲ್ಲಿ ಜಾತಿ ಗಣತಿ ಅಗತ್ಯ

“ಸ್ಥಳೀಯ ಸಂಸ್ಥೆಗಳಲ್ಲೂ ನಾವು ಮೀಸಲಾತಿ ನೀಡುತ್ತಿದ್ದೇವೆ. 73-74ನೇ ತಿದ್ದುಪಡಿ ವೇಳೆ ನಾನು ರಾಜೀವ್ ಗಾಂಧಿ ಅವರಿಗೆ ಈ ತಿದ್ದುಪಡಿ ಯಾಕೆ ಎಂದು ಕೇಳಿದ್ದೆ. ಅದಕ್ಕೆ ಅವರು ಪಂಚಾಯ್ತಿಯಿಂದ ಪಾರ್ಲಿಮೆಂಟ್ ವರೆಗೂ ನಾಯಕರನ್ನು ತಯಾರು ಮಾಡಬೇಕು. ನಾಯಕರುಗಳನ್ನು ತಯಾರು ಮಾಡುವವನೇ ನಿಜವಾದ ನಾಯಕ ಎಂದು ಅವರು ಹೇಳಿದರು. ಸಮಾಜದ ಎಲ್ಲಾ ವರ್ಗದ ಜನರು ನಾಯಕರಾಗಬೇಕು ಎಂಬುದು ಅವರ ಬಯಕೆಯಾಗಿತ್ತು. ಈ ದೇಶದಲ್ಲಿ ಜಾತಿ ಗಣತಿ ಅಗತ್ಯವಾಗಿದ್ದು, ಕೇಂದ್ರ ಸರ್ಕಾರ ಮನೆ ಮನೆ ಜನಗಣತಿಗೆ ಮುಂದಾಗಿದೆ. ಜಾತಿಗಣತಿ ಮೂಲಕ ಅಂತರವನ್ನು ಕಡಿಮೆ ಮಾಡಬೇಕು” ಎಂದರು.

ಹಿಂದುಳಿದ ವರ್ಗಗಳ ಹಿತಾಸಕ್ತಿ ಕಾಪಾಡಲು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲಿಸಿ

“ಬಬನ್ ರಾವ್ ಅವರ ನೇತೃತ್ವದಲ್ಲಿ ರಾಷ್ಟ್ರೀಯ ಓಬಿಸಿ ಮಹಾಸಂಘವು ರಾಜಕೀಯ ಇಚ್ಛಾಶಕ್ತಿ ಇಲ್ಲದೇ ನಿಮ್ಮ ಹಕ್ಕಿಗಾಗಿ ಶ್ರಮಿಸುತ್ತಿದೆ. ನಿಮ್ಮ ಆಶೋತ್ತರಗಳನ್ನು ಈಡೇರಿಸಲು ನಾವು ಬದ್ಧವಾಗಿದ್ದೇವೆ. ನಾವು ಕಾಂಗ್ರೆಸ್ ಪಕ್ಷದ ಸಿದ್ಧಾಂತ, ಬಸವಣ್ಣನವರ ತತ್ವ, ದೇಶದ ಹಿತಾಸಕ್ತಿಗೆ ಬದ್ಧರಾಗಿದ್ದೇವೆ. ಕರ್ನಾಟಕದಲ್ಲಿ ಹಿಂದುಳಿದ ವರ್ಗಗಳ ಧ್ವನಿಗೆ ಸ್ಪಂದಿಸುವ ಸರ್ಕಾರವಿದೆ ಎಂಬ ಸಂದೇಶವನ್ನು ನೀವು ರಾಷ್ಟ್ರದಾದ್ಯಂತ ರವಾನಿಸಬೇಕು” ಎಂದು ಹೇಳಿದರು.

“ರಾಷ್ಟ್ರ ಮಟ್ಟದಲ್ಲಿ ನೀವು ನಿಮ್ಮ ಹಿತಾಸಕ್ತಿ ಕಾಪಾಡಿಕೊಳ್ಳಬೇಕಾದರೆ ನಮ್ಮ ಪಕ್ಷದ ಪರವಾಗಿ ನಿಲ್ಲಬೇಕು. ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಕಾಂಗ್ರೆಸ್ ಪಕ್ಷದಿಂದ ಮಾತ್ರ ಎಲ್ಲರನ್ನು ಒಟ್ಟಾಗಿ ತೆಗೆದುಕೊಂಡು ಹೋಗಲು ಸಾಧ್ಯ. ಸೋನಿಯಾ ಗಾಂಧಿ ಅವರಿಗೆ ಪ್ರಧಾನಮಂತ್ರಿ ಹುದ್ದೆ ಒಲಿದು ಬಂದಾಗ, ಅವರು ಈ ದೇಶದ ಹಿತಕ್ಕಾಗಿ ಆ ಅಧಿಕಾರವನ್ನು ಆರ್ಥಿಕ ತಜ್ಞ ಮನಮೋಹನ್ ಸಿಂಗ್ ಅವರು ಪ್ರಾಧಾನಿಯಾಗಲಿ ಎಂದರು. ಅವರ ಕಾಲದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಸುಧಾರಣೆ, ಆಹಾರ ಭದ್ರತಾ ಕಾಯ್ದೆ, ಉದ್ಯೋಗ ಖಾತರಿ ಯೋಜನೆ ನೀಡಲಾಯಿತು. ಇದನ್ನು ಕೊಟ್ಟಿದ್ದು ಕಾಂಗ್ರೆಸ್ ಸರ್ಕಾರ. ಎಲ್ಲಾ ವರ್ಗದವರ ಹಿತಕಾಯಲು ತಿದ್ದುಪಡಿ ಜಾರಿಗೆ ತಂದಿದ್ದರೆ ಅದು ಕಾಂಗ್ರೆಸ್ ಸರ್ಕಾರ ಮಾತ್ರ. ಒಬಿಸಿ ಮಹಾಸಂಘಟನೆ ಬೇಡಿಕೆಗಳಿಗೆ ಮನ್ನಣೆ ಸಿಗಬೇಕಾದರೆ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಿ” ಎಂದು ತಿಳಿಸಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text (28)

ಎಲ್ಲ ವರ್ಗದವರಿಗೆ ಸಾಮಾಜಿಕ ನ್ಯಾಯ ಒದಗಿಸಲು ಕಾಂಗ್ರೆಸ್ ಬದ್ಧ: ಸಿಎಂ ಡಿ.ಕೆ ಶಿವಕುಮಾರ್

by ಶಾಲಿನಿ ಕೆ. ಡಿ
August 7, 2026 - 6:45 pm
0

Your paragraph text (27)

ಇಂದು ‘ಬಾಸ್’ ರಿಲೀಸ್..ಡಿಬಾಸ್ ರೋಲ್‌ಗೆ ಜೀವ ತುಂಬಿದ ತನುಷ್ ಶಿವಣ್ಣ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 7, 2026 - 6:33 pm
0

Your paragraph text (26)

ಆಗಸ್ಟ್ 9 ರಂದು ನಂದಿಬೆಟ್ಟಕ್ಕೆ ವಾಹನ ಸಂಚಾರ ಸಂಪೂರ್ಣ ಬಂದ್: ಕಾರಣವೇನು?

by ಶಾಲಿನಿ ಕೆ. ಡಿ
August 7, 2026 - 6:09 pm
0

Your paragraph text (25)

‘ಅಯೋಗ್ಯ’ನಾಗಿ ಸತೀಶ್ ಆಲ್‌ರೌಂಡ್ ಪರ್ಫಾಮೆನ್ಸ್..ರಚಿತಾ ರಾಮ್ ಆಲ್‌‌ಟೈಂ ಮುದ್ದು ಪುಟ್ಟಲಕ್ಷ್ಮೀ..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 7, 2026 - 5:52 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (26)
    ಆಗಸ್ಟ್ 9 ರಂದು ನಂದಿಬೆಟ್ಟಕ್ಕೆ ವಾಹನ ಸಂಚಾರ ಸಂಪೂರ್ಣ ಬಂದ್: ಕಾರಣವೇನು?
    August 7, 2026 | 0
  • Your paragraph text (23)
    ಸಚಿವ ಕೆ.ಜೆ.ಜಾರ್ಜ್ ಬೆಂಗಾವಲು ವಾಹನ ಅಪಘಾತ: ತಪ್ಪಿದ ಭಾರೀ ಅನಾಹುತ
    August 7, 2026 | 0
  • Your paragraph text (21)
    ಬೆಂಗಳೂರು ಹೋಟೆಲ್‌ಗಳ ಮೇಲೆ ಆರೋಗ್ಯ ಇಲಾಖೆ ಅಧಿಕಾರಿಗಳ ದಿಢೀರ್ ದಾಳಿ
    August 7, 2026 | 0
  • Your paragraph text (19)
    ತಮಿಳುನಾಡು ಸಿಎಂ ಡಿವೋರ್ಸ್ ಕೇಸ್‌ಗೆ ಬಿಗ್ ಟ್ವಿಸ್ಟ್: ವಿಚ್ಛೇದನ ಅರ್ಜಿ ವಾಪಸ್ ಪಡೆದ ವಿಜಯ್ ಪತ್ನಿ
    August 7, 2026 | 0
  • Your paragraph text (18)
    ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗಳಿಗೆ ಬ್ರೇಕ್: ಕೇಂದ್ರ ಸರ್ಕಾರಕ್ಕೆ ದೆಹಲಿ ಹೈಕೋರ್ಟ್ ಮಹತ್ವದ ಸಲಹೆ
    August 7, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version