• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, May 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಗ್ರಾಮಸ್ವರಾಜ್ಯದ ಕಲ್ಪನೆಗೆ ಶಕ್ತಿ ತುಂಬಿದ ಮಹಾನ್ ಚೇತನ ಮಹಾತ್ಮಾ ಗಾಂಧೀಜಿ: ಸಿಎಂ ಸಿದ್ದರಾಮಯ್ಯ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 30, 2026 - 2:39 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 01 30T143336.826

ಬೆಂಗಳೂರು, ಜನವರಿ 30: ಹಳ್ಳಿಯಿಂದ ದಿಲ್ಲಿಯೇ ಹೊರತು, ದಿಲ್ಲಿಯಿಂದ ಹಳ್ಳಿ ಅಲ್ಲ ಎಂದು ಪ್ರತಿಪಾದಿಸಿದ ಮಹಾತ್ಮಾ ಗಾಂಧೀಜಿಯವರು ಗ್ರಾಮಸ್ವರಾಜ್ಯದ ಕಲ್ಪನೆಗೆ ಶಕ್ತಿ ತುಂಬಿದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಇಂದು ಹುತಾತ್ಮ ದಿನಾಚರಣೆ ಅಂಗವಾಗಿ ಮಹಾತ್ಮಾಗಾಂಧೀಜಿಯವರ ಪ್ರತಿಮೆಗೆ ಸಿಎಂ ಸಿದ್ದರಾಮಯ್ಯ ಅವರು ಮಾಲಾರ್ಪಣೆ ಮಾಡಿದರು. ನಂತರ  ಮಾತನಾಡಿದ ಅವರು, ಮಹಾತ್ಮಾಗಾಂಧೀಜಿಯವರು ದೇಶಕ್ಕೆ ನೀಡಿದ ಕೊಡುಗೆಯನ್ನು ಇಂದಿನ ದಿನ ಸ್ಮರಿಸಲಾಗುತ್ತಿದೆ. ಭಾರತ ಹಳ್ಳಿಗಳ ದೇಶವಾಗಿದ್ದು, ಅಂದು ಶೇ.80 ರಷ್ಟು ಜನ ಹಳ್ಳಿಗಳಲ್ಲಿ ವಾಸಿಸುತ್ತಿದ್ದರು. ಗ್ರಾಮಗಳು ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಹಾಗೂ ರಾಜಕೀಯವಾಗಿ ಸ್ವಾವಲಂಬಿಯಾಗಬೇಕು. ಗ್ರಾಮಗಳ ಪ್ರಗತಿಯಲ್ಲಿಯೇ ದೇಶದ ಪ್ರಗತಿ ಅಡಗಿದೆ ಎಂದು ಅವರು ನುಡಿದಿದ್ದರು.

RelatedPosts

ಶುರುವಾಗ್ತಿದೆ ತಾಯಿಗಾಗಿ ಬ್ರಹ್ಮಚರ್ಯವನ್ನು ಪಾಲಿಸುತ್ತಿರೋ ಪೈಲ್ವಾನನ ಕಥೆ “ಮರ್ಯಾದೆ ರಾಮಣ್ಣ”

ರಾಜ್ಯದ ಹಲವೆಡೆ ವರುಣಾರ್ಭಟ: ಬಳ್ಳಾರಿ, ವಿಜಯಪುರ, ರಾಯಚೂರಿನಲ್ಲಿ ಧಾರಾಕಾರ ಮಳೆ

ಕ್ಷುಲ್ಲಕ ಕಾರಣಕ್ಕೆ ಸಹೋದರರ ಮಧ್ಯೆ ಜಗಳ: ಅಣ್ಣನನ್ನೇ ಕೊಂದ ತಮ್ಮ

ವರದಕ್ಷಿಣೆ ಕಿರುಕುಳಕ್ಕೆ ದಿನಕ್ಕೆ 16 ಮಹಿಳೆಯರು ಬಲಿ: NCRB ಯಿಂದ ಬಯಲಾಯ್ತು ಆತಂಕಕಾರಿ ಮಾಹಿತಿ

ADVERTISEMENT
ADVERTISEMENT

ಪಂಚಾಯತಿಗಳಿಗೆ ಮಹಾತ್ಮಾಗಾಂಧೀಜಿ ಹೆಸರು

ರಾಜ್ಯದಲ್ಲಿ ಸುಮಾರು 6 ಸಾವಿರ ಪಂಚಾಯ್ತಿಗಳಿವೆ. ಅವುಗಳಿಗೆ ಮಹಾತ್ಮಾಗಾಂಧಿಯವರ ಹೆಸರು ಇಡಬೇಕೆಂಬ ನಿರ್ಧಾರವನ್ನು ಕೈಗೊಳ್ಳಲಿದ್ದೇವೆ. ಗ್ರಾಮಸ್ವರಾಜ್ಯದ ಕಲ್ಪನೆಗೆ ಶಕ್ತಿ ತುಂಬಿದ್ದರು. ಹಳ್ಳಿಯಿಂದ ದಿಲ್ಲಿಯೇ ಹೊರತು, ದಿಲ್ಲಿಯಿಂದ ಹಳ್ಳಿಯಿಂದ ಅಲ್ಲ ಎಂಬುದನ್ನು ಪ್ರತಿಪಾದಿಸಿದ್ದುದಾಗಿ ತಿಳಿಸಿದರು.

ಗಾಂಧೀಜಿಯವರ ಕೊಡುಗೆಯನ್ನು ಇಡೀ ದೇಶ ಸ್ಮರಿಸುತ್ತದೆ

ಇಂತಹ ಮಹಾನ್ ಚೇತನ ಗುಂಡೇಟಿಗೆ ಬಲಿಯಾಗಿ ನಮ್ಮನ್ನ ಅಗಲಿದ್ದಾರೆ. ಅವರ ಅಭಿಮಾನಿಯೊಬ್ಬರು- ಗಾಂಧೀಜಿಯವರು 100 ವರ್ಷ ಬದುಕಬೇಕೆಂದು ಹಾರೈಸಿದ್ದಕ್ಕೆ, ಗಾಂಧೀಜಿಯವರು ‘’ನಾನು 125 ವರ್ಷಗಳು ದೇಶಕ್ಕಾಗಿ ಬದುಕಲಿಚ್ಛಿಸುತ್ತೇನೆ’ ಎಂದು ಉತ್ತರಿಸಿದ್ದರು. ಇಡೀ ದೇಶ ಅವರ ಕೊಡುಗೆಯನ್ನು ಸ್ಮರಿಸುತ್ತದೆ ಎಂದರು.

ಬಾಕಿ ಬಿಲ್ಲುಗಳು ಹಿಂದಿನ ಬಿಜೆಪಿ ಸರ್ಕಾರದ್ದು

ಗುತ್ತಿಗೆದಾರರ ಬಾಕಿ ಬಿಲ್ಲುಗಳ ಪಾವತಿ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ಹಿಂದಿನ ಬಿಜೆಪಿ ಸರ್ಕಾರದವರು ಬಾಕಿ ಬಿಲ್ಲುಗಳನ್ನು ಪಾವತಿಸದೇ ಬಿಟ್ಟುಹೋಗಿರುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

ಮಹಾತ್ಮ ಗಾಂಧೀಜಿ ಪುಣ್ಯತಿಥಿ: ಪ್ರಧಾನಿ ಮೋದಿ ಸೇರಿ ಗಣ್ಯರಿಂದ ಗೌರವ ನಮನ

ನವದೆಹಲಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ 78ನೇ ಪುಣ್ಯತಿಥಿಯ ಅಂಗವಾಗಿ ದೇಶದ ರಾಜಧಾನಿ ದೆಹಲಿಯ ರಾಜ್ ಘಾಟ್‌ನಲ್ಲಿ ಶುಕ್ರವಾರ ಭಾವಪೂರ್ಣ ಸ್ಮರಣೆ ನಡೆಯಿತು. ಪ್ರಧಾನಿ ನರೇಂದ್ರ ಮೋದಿ ಅವರು ಬೆಳಿಗ್ಗೆ ರಾಜ್ ಘಾಟ್‌ಗೆ ಭೇಟಿ ನೀಡಿ ಮಹಾತ್ಮ ಗಾಂಧೀಜಿ ಅವರ ಸಮಾಧಿಗೆ ಪುಷ್ಪ ನಮನ ಸಲ್ಲಿಸಿ ಗೌರವ ಸಮರ್ಪಿಸಿದರು. ಈ ವೇಳೆ ದೇಶದ ಗಣ್ಯರು, ಅಧಿಕಾರಿಗಳು ಹಾಗೂ ಅನೇಕರು ಬಾಪುವಿನ ಸ್ಮರಣೆಯಲ್ಲಿ ಭಾಗಿಯಾಗಿದ್ದರು.

ಪುಷ್ಪ ನಮನ ಸಲ್ಲಿಸಿದ ನಂತರ ಪ್ರಧಾನಿ ಮೋದಿ ಅವರು ಸಾಮಾಜಿಕ ಜಾಲತಾಣಗಳಲ್ಲಿ ಸಂದೇಶ ಹಂಚಿಕೊಂಡು, “ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಪುಣ್ಯತಿಥಿಯಂದು ಅವರಿಗೆ ನನ್ನ ಶತಶತ ನಮನಗಳು. ಪೂಜ್ಯ ಬಾಪು ಸ್ವದೇಶಿಗೆ ನೀಡಿದ ಮಹತ್ವವೇ ಇಂದು ಅಭಿವೃದ್ಧಿಶೀಲ ಹಾಗೂ ಸ್ವಾವಲಂಬಿ ಭಾರತದ ನಮ್ಮ ಸಂಕಲ್ಪದ ಆಧಾರವಾಗಿದೆ. ಅವರ ಜೀವನ ಮತ್ತು ಕಾರ್ಯಗಳು ದೇಶದ ಜನರನ್ನು ಸದಾ ಕರ್ತವ್ಯದ ಹಾದಿಯಲ್ಲಿ ನಡೆಯಲು ಪ್ರೇರೇಪಿಸುತ್ತಿವೆ” ಎಂದು ತಿಳಿಸಿದ್ದಾರೆ.

ಮಹಾತ್ಮ ಗಾಂಧೀಜಿಯವರ ಅಹಿಂಸೆಯ ತತ್ವವನ್ನು ಪ್ರಶಂಸಿಸಿದ ಪ್ರಧಾನಿ ಮೋದಿ, “ಪೂಜ್ಯ ಬಾಪು ಮಾನವೀಯತೆಯ ರಕ್ಷಣೆಗಾಗಿ ಅಹಿಂಸೆಗೆ ಅಪಾರ ಮಹತ್ವ ನೀಡಿದ್ದರು. ಶಸ್ತ್ರಾಸ್ತ್ರಗಳಿಲ್ಲದೆ ಜಗತ್ತನ್ನು ಬದಲಾಯಿಸುವ ಶಕ್ತಿ ಅಹಿಂಸೆಯಲ್ಲಿದೆ. ಅಹಿಂಸೆಯೇ ಪರಮ ಧರ್ಮ, ಪರಮ ಸತ್ಯ ಹಾಗೂ ಧರ್ಮದ ಮಾರ್ಗದಲ್ಲಿ ಸಾಗಲು ಪ್ರೇರಣೆ ನೀಡುವ ಶಕ್ತಿ” ಎಂದು ತಮ್ಮ ಸಂದೇಶದಲ್ಲಿ ವಿವರಿಸಿದ್ದಾರೆ.

ಇದೇ ಸಂದರ್ಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕೂಡ ರಾಜ್ ಘಾಟ್‌ಗೆ ಭೇಟಿ ನೀಡಿ ಮಹಾತ್ಮ ಗಾಂಧೀಜಿಯ ಸಮಾಧಿಗೆ ಪುಷ್ಪ ನಮನ ಸಲ್ಲಿಸಿದರು. ಗಾಂಧೀಜಿಯವರ ತತ್ವಗಳು ದೇಶದ ಅಭಿವೃದ್ಧಿ ಹಾಗೂ ಶಾಂತಿಗೆ ಸದಾ ಮಾರ್ಗದರ್ಶಕವಾಗಿವೆ ಎಂದು ಅವರು ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ. ರಾಷ್ಟ್ರಪತಿ, ಉಪರಾಷ್ಟ್ರಪತಿ, ಕೇಂದ್ರ ಸಚಿವರು, ವಿವಿಧ ರಾಜಕೀಯ ನಾಯಕರು ಮತ್ತು ಅಧಿಕಾರಿಗಳು ಈ ಸ್ಮರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ರಾಷ್ಟ್ರಪಿತನಿಗೆ ಗೌರವ ಸಲ್ಲಿಸಿದರು.

ಪ್ರತಿ ವರ್ಷ ಜನವರಿ 30ರಂದು ಮಹಾತ್ಮ ಗಾಂಧೀಜಿ ಅವರ ಪುಣ್ಯತಿಥಿಯನ್ನು ‘ಹುತಾತ್ಮರ ದಿನ’ವಾಗಿ ದೇಶಾದ್ಯಂತ ಆಚರಿಸಲಾಗುತ್ತದೆ. ಈ ದಿನ ದೇಶದ ವಿವಿಧ ಭಾಗಗಳಲ್ಲಿ ಶ್ರದ್ಧಾಂಜಲಿ ಸಭೆಗಳು, ಪ್ರಾರ್ಥನೆ, ಸ್ಮರಣಾ ಕಾರ್ಯಕ್ರಮಗಳು ಮತ್ತು ಶಾಂತಿ ಮೆರವಣಿಗೆಗಳು ನಡೆಯುತ್ತವೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 05 19T211813.132

ಶುರುವಾಗ್ತಿದೆ ತಾಯಿಗಾಗಿ ಬ್ರಹ್ಮಚರ್ಯವನ್ನು ಪಾಲಿಸುತ್ತಿರೋ ಪೈಲ್ವಾನನ ಕಥೆ “ಮರ್ಯಾದೆ ರಾಮಣ್ಣ”

by ಶಾಲಿನಿ ಕೆ. ಡಿ
May 19, 2026 - 9:19 pm
0

Untitled design 2026 05 19T210731.101

ರಾಜ್ಯದ ಹಲವೆಡೆ ವರುಣಾರ್ಭಟ: ಬಳ್ಳಾರಿ, ವಿಜಯಪುರ, ರಾಯಚೂರಿನಲ್ಲಿ ಧಾರಾಕಾರ ಮಳೆ

by ಶಾಲಿನಿ ಕೆ. ಡಿ
May 19, 2026 - 9:08 pm
0

Untitled design 2026 05 19T203501.071

ಕ್ಷುಲ್ಲಕ ಕಾರಣಕ್ಕೆ ಸಹೋದರರ ಮಧ್ಯೆ ಜಗಳ: ಅಣ್ಣನನ್ನೇ ಕೊಂದ ತಮ್ಮ

by ಶಾಲಿನಿ ಕೆ. ಡಿ
May 19, 2026 - 8:37 pm
0

Untitled design 2026 05 19T202041.295

ವರದಕ್ಷಿಣೆ ಕಿರುಕುಳಕ್ಕೆ ದಿನಕ್ಕೆ 16 ಮಹಿಳೆಯರು ಬಲಿ: NCRB ಯಿಂದ ಬಯಲಾಯ್ತು ಆತಂಕಕಾರಿ ಮಾಹಿತಿ

by ಶಾಲಿನಿ ಕೆ. ಡಿ
May 19, 2026 - 8:21 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 19T211813.132
    ಶುರುವಾಗ್ತಿದೆ ತಾಯಿಗಾಗಿ ಬ್ರಹ್ಮಚರ್ಯವನ್ನು ಪಾಲಿಸುತ್ತಿರೋ ಪೈಲ್ವಾನನ ಕಥೆ “ಮರ್ಯಾದೆ ರಾಮಣ್ಣ”
    May 19, 2026 | 0
  • Untitled design 2026 05 19T210731.101
    ರಾಜ್ಯದ ಹಲವೆಡೆ ವರುಣಾರ್ಭಟ: ಬಳ್ಳಾರಿ, ವಿಜಯಪುರ, ರಾಯಚೂರಿನಲ್ಲಿ ಧಾರಾಕಾರ ಮಳೆ
    May 19, 2026 | 0
  • Untitled design 2026 05 19T203501.071
    ಕ್ಷುಲ್ಲಕ ಕಾರಣಕ್ಕೆ ಸಹೋದರರ ಮಧ್ಯೆ ಜಗಳ: ಅಣ್ಣನನ್ನೇ ಕೊಂದ ತಮ್ಮ
    May 19, 2026 | 0
  • Untitled design 2026 05 19T202041.295
    ವರದಕ್ಷಿಣೆ ಕಿರುಕುಳಕ್ಕೆ ದಿನಕ್ಕೆ 16 ಮಹಿಳೆಯರು ಬಲಿ: NCRB ಯಿಂದ ಬಯಲಾಯ್ತು ಆತಂಕಕಾರಿ ಮಾಹಿತಿ
    May 19, 2026 | 0
  • Untitled design 2026 05 19T195128.115
    ಪೆಟ್ರೋಲ್-ಡೀಸೆಲ್, ಗ್ಯಾಸ್ ಕೊರತೆ ಇಲ್ಲ: ವದಂತಿಗಳಿಗೆ ತೆರೆ ಎಳೆದ ತೈಲ ಕಂಪನಿಗಳು
    May 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version