ಬೇಧಭಾವವಿಲ್ಲದೇ ಸಮಾನವಾಗಿ ಚಿಕಿತ್ಸೆ ನೀಡಿ-ಫಾರ್ಮಸಿಸ್ಟ್ ಗಳಿಗೆ ಸಿಎಂ ಕಿವಿಮಾತು

Untitled design (9)

ಬೆಂಗಳೂರು; ಸೆ.26,ಇಂದು ಬೆಂಗಳೂರಿನ ಲಿಟಲ್ ಫ್ಲವರ್ ಶಿಕ್ಷಣ ಸಮೂಹದ ಕಾಲೇಜಿನ ಕಟ್ಟಡವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟನೆ ಮಾಡಿದ್ದಾರೆ.

ಉದ್ಘಾಟನೆ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಫಾರ್ಮಸಿಸ್ಟ್ ಗಳು ವೈದ್ಯರಷ್ಟೇ ಪ್ರಮುಖರಾಗಿದ್ದು, ತಮ್ಮ ವೃತ್ತಿಯಲ್ಲಿ ಶ್ರೀಮಂತ ಬಡವ, ಜಾತಿಧರ್ಮಗಳೆಂದು ಬೇಧ ಮಾಡದೇ ಎಲ್ಲರಿಗೂ ಸಮಾನವಾಗಿ ಚಿಕಿತ್ಸೆ ನೀಡಬೇಕೆಂದು ತಿಳಿಸಿದರು.

ಫಾರ್ಮಸಿಸ್ಟ್ ಗಳು ವೈದ್ಯರಷ್ಟೇ ಪ್ರಮುಖರಾಗಿದ್ದು, ಆರೋಗ್ಯ ಕ್ಷೇತ್ರಕ್ಕೆ ಮಹತ್ವದ ಕೊಡುಗೆ ನೀಡುತ್ತಾರೆ. ಲಿಟಲ್ ಫ್ಲವರ್ ಶಿಕ್ಷಣ ಸಮೂಹದ ಮಾಲೀಕರಾದ ಡಾ.ಕೆ.ವೆಂಟಕಗಿರಿಯವರ ಸಂಸ್ಥೆಯಲ್ಲಿ ಶಿಕ್ಷಣ ಪಡೆದ ಸಾವಿರಾರು ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ರೂಪಿಸಿಕೊಂಡಿದ್ದಾರೆ. ಇಲ್ಲಿ ಫಾರ್ಮಸಿಸ್ಟ್ ಶಿಕ್ಷಣ ಪಡೆದು ದೇಶವಿದೇಶಗಳಲ್ಲಿ ಸೇವೆ ಸಲ್ಲಿಸುತ್ತಿರುವುದು ಶ್ಲಾಘನೀಯ. ತಮ್ಮ ವೃತ್ತಿಯಲ್ಲಿ ಶ್ರೀಮಂತ ಬಡವ, ಜಾತಿಧರ್ಮಗಳೆಂದು ಬೇಧ ಮಾಡದೇ ಎಲ್ಲರಿಗೂ ಸಮಾನವಾಗಿ ಚಿಕಿತ್ಸೆ ನೀಡುವ ಕೆಲಸ ಮಾಡಬೇಕು ಎಂದರು.

ಸಮಾಜದಲ್ಲಿನ ಬಡರೋಗಿಗಳಿಗೆ ಉತ್ತಮ ರೀತಿಯಲ್ಲಿ ಚಿಕಿತ್ಸೆ ನೀಡಬೇಕು. ಖಾಸಗಿ ಚಿಕಿತ್ಸಾ ವೆಚ್ಚಗಳನ್ನು ಭರಿಸಲು ಅಶಕ್ತರಾಗಿರುವ ಬಡರೋಗಿಗಳಿಗೆ ಸರ್ಕಾರಿ ಆಸ್ಪತ್ರೆಯ ಸೌಲಭ್ಯಗಳನ್ನು ಸರ್ಕಾರ ನೀಡುತ್ತಿದೆ. ಸರ್ಕಾರದ ಈ ಆಶಯದೊಂದಿಗೆ ಫಾರ್ಮಸಿಸ್ಟ್ ಗಳೂ ಕೈಜೋಡಿಸಿ, ಬಡರೋಗಿಗಳಿಗೆ ಉಚಿತ ಚಿಕಿತ್ಸೆ ನೀಡುವ ಮೂಲಕ ಸಾರಥಕ ಸೇವೆ ಸಲ್ಲಿಸಬೇಕು ಎಂದು ಮುಖ್ಯಮಂತ್ರಿಗಳು ಕೋರಿದರು.

Exit mobile version