ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ನಾಲ್ವರ ವಿರುದ್ಧ ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ಬಿ ರಿಪೋರ್ಟ್‌ನ ವಿರುದ್ಧ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯವು ಮೇ 7, 2025ಕ್ಕೆ ಮುಂದೂಡಿದೆ. ಈ ಪ್ರಕರಣದಲ್ಲಿ ಲೋಕಾಯುಕ್ತವು ಅಂತಿಮ ತನಿಖಾ ವರದಿಯನ್ನು ಸಲ್ಲಿಸುವವರೆಗೆ ತೀರ್ಪನ್ನು ಕಾಯ್ದಿರಿಸಲಾಗಿದೆ.
ಲೋಕಾಯುಕ್ತ ಪೊಲೀಸರಿಗೆ ಅಂತಿಮ ತನಿಖೆಯನ್ನು ಮುಂದುವರೆಸಲು ನ್ಯಾಯಾಲಯವು ಅನುಮತಿ ನೀಡಿದೆ.ಜಾರಿ ನಿರ್ದೇಶನಾಲಯ ಇಡಿ ಕೂಡ ಈ ವರದಿಯ ವಿರುದ್ಧ ತಕರಾರು ಅರ್ಜಿಯನ್ನು ಸಲ್ಲಿಸಬಹುದು ಎಂದು ನ್ಯಾಯಾಲಯವು ಅಭಿಪ್ರಾಯಪಟ್ಟಿದೆ.ಮೈಸೂರು ಲೋಕಾಯುಕ್ತ ಪೊಲೀಸರು ಈಗಾಗಲೇ ಸಿದ್ದರಾಮಯ್ಯ, ಅವರ ಪತ್ನಿ ಬಿ.ಎಂ. ಪಾರ್ವತಿ ವಿರುದ್ಧ ತನಿಖೆ ತನಿಖೆ ನಡೆಸಿ ಬಿ ರಿಪೋರ್ಟ್ ಸಲ್ಲಿಸಿದ್ದರು.ಇಡಿ ಕೂಡ ಈ ವರದಿಯ ವಿರುದ್ಧ ತಕರಾರು ಅರ್ಜಿಯನ್ನು ಸಲ್ಲಿಸುವ ಸಾಧ್ಯತೆಯನ್ನು ನ್ಯಾಯಾಲಯವು ಗಮನಿಸಿದೆ.
ಮುಡಾ ಕೇಸ್‌ನಲ್ಲಿ ಬಿ ರಿಪೋರ್ಟ್ ಸಲ್ಲಿಕೆ ಆದ ಬಳಿಕ ಅದನ್ನು ಜನಪ್ರತಿನಿಧಿ ಕೋರ್ಟ್ ಒಪ್ಪಿಕೊಂಡು ರಿಲೀಫ್ ಪಡೆಯುವ ನಿರೀಕ್ಷೆಯಲ್ಲಿ ಸಿದ್ದರಾಮಯ್ಯ ಆಸೆಗೆ ತಣ್ಣೀರು ಎರಚಿದಂತಾಗಿದೆ. ಸದ್ಯಕ್ಕೆ ತನಿಖೆ ಮುಂದುವರಿಸುವಂತೆ ಲೋಕಾಯುಕ್ತ ಪೊಲೀಸರಿಗೆ ಕೋರ್ಟ್ ತಿಳಿಸಿದ್ದು, ಮೇ 7ರ ಒಳಗಾಗಿ ಕೋರ್ಟ್‌ಗೆ ಅಂತಿಮ ವರದಿ ಸಲ್ಲಿಕೆ ಮಾಡಬೇಕು ಎಂದು ಸೂಚನೆ ನೀಡಲಿದೆ. ಅಲ್ಲಿಯವರೆಗೂ ಬಿ ರಿಪೋರ್ಟ್ ಬಗ್ಗೆ ಯಾವುದೇ ಆದೇಶ ಇರೋದಿಲ್ಲ ಎನ್ನಲಾಗಿದೆ.