ಅಹಮದಾಬಾದ್, ಏ.08: “ಕಳೆದ ಬೆಳಗಾವಿ ಅಧಿವೇಶನದ ವೇಳೆ ಈ ವರ್ಷವನ್ನು ಸಂಘಟನೆಯ ವರ್ಷ ಎಂದು ಸೂಚನೆ ನೀಡಲಾಗಿತ್ತು. ಬ್ಲಾಕ್, ಜಿಲ್ಲಾ, ತಾಲ್ಲೂಕು ಮಟ್ಟದಲ್ಲಿ ಪಕ್ಷವನ್ನು ಇನ್ನಷ್ಟು ಬಲಪಡಿಸುವ ಬಗ್ಗೆ ಅಹಮದಾಬಾದ್ ಅಧಿವೇಶನದಲ್ಲಿ ಚರ್ಚೆ ನಡೆಸಲಾಗುತ್ತದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.
ಎಐಸಿಸಿ ಅಧಿವೇಶನದಲ್ಲಿ ಭಾಗವಹಿಸಲು ಗುಜರಾತ್ ನ ಅಹಮದಬಾದ್ ಗೆ ತೆರಳಿರುವ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮಾಧ್ಯಮಗಳಿಗೆ ಮಂಗಳವಾರ ಪ್ರತಿಕ್ರಿಯೆ ನೀಡಿದರು.
“ಪಕ್ಷ ಸಂಘಟನೆಯ ವಿಚಾರದಲ್ಲಿ ಒಂದೊಂದೆ ಬದಲಾವಣೆಗಳನ್ನು ತರಲಾಗುತ್ತಿದೆ. ಕಾಂಗ್ರೆಸ್ ಪಕ್ಷ ಕಾರ್ಯಕರ್ತರ ಪಕ್ಷವಾಗಿ ಇನ್ನೂ ಬೆಳೆಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ನಾವೆಲ್ಲರು ಚರ್ಚೆ ನಡೆಸಿ ಒಟ್ಟಿಗೆ ಕೆಲಸ ಮಾಡುವುದಕ್ಕೆ ಈ ಸಮಾವೇಶ ಮುನ್ನುಡಿ” ಎಂದು ಹೇಳಿದರು.
ಮಲ್ಲಿಕಾರ್ಜುನ ಖರ್ಗೆ ಅವರು ಹಾಗೂ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಹಲವಾರು ವಿಚಾರಗಳು ಸೇರಿದಂತೆ ಪಕ್ಷದ ಎಲ್ಲಾ ಘಟಕಗಳ ಬಲವರ್ಧನೆ ಬಗ್ಗೆ ಚರ್ಚೆ ಮಾಡಲಾಗುವುದು. ಕಳೆದ ವಾರ ದೆಹಲಿಯಲ್ಲಿ ಜಿಲ್ಲಾ ಮಟ್ಟದ ಅಧ್ಯಕ್ಷರ ಸಭೆ ನಡೆಸಲಾಗಿತ್ತು. 1924 ರಲ್ಲಿ ಮಹಾತ್ಮ ಗಾಂಧಿ ಅವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಜವಾಬ್ದಾರಿ ತೆಗೆದುಕೊಂಡು 100 ವರ್ಷಗಳು ಸಂದಿವೆ. ಗಾಂಧಿ ಅವರು ಏಕ ನಾಯಕತ್ವದಲ್ಲಿ ನಂಬಿಕೆ ಇಟ್ಟವರಲ್ಲ. ಸಾಮೂಹಿಕ ನಾಯಕತ್ವದಲ್ಲಿ ನಂಬಿಕೆಯಿಟ್ಟು ನಡೆದವರು” ಎಂದು ತಿಳಿಸಿದರು.
ಕಾಂಗ್ರೆಸ್ಸಿನ ಗೆಲುವು ಗುಜರಾತಿನಿಂದ ಪ್ರಾರಂಭವಾಗಲಿದೆಯೇ ಎಂದು ಕೇಳಿದಾಗ, “ಹೌದು ಖಂಡಿತವಾಗಿಯೂ ಆಗಲಿದೆ. ಜೊತೆಗೂಡುವುದು ಆರಂಭ, ಜೊತೆಗೂಡಿ ನಡೆಯುವುದು ಪ್ರಗತಿ ಎನ್ನುವ ಮಾತನ್ನು ನಾನು ಪುನರುಚ್ಚರಿಸುತ್ತೇನೆ” ಎಂದರು.
ಬಿಜೆಪಿ ಜನಾಕ್ರೋಶ ಯಾತ್ರೆಯ ಬಗ್ಗೆ ಕೇಳಿದಾಗ, “ಬಿಜೆಪಿಯವರ ಜನಾಕ್ರೋಶ ಯಾತ್ರೆಯನ್ನು ಸ್ವಾಗತಿಸುತ್ತೇನೆ. ಪೆಟ್ರೋಲ್, ಡಿಸೇಲ್, ಅಡುಗೆ ಅನಿಲ ಬೆಲೆ ಏರಿಕೆ ಮಾಡಿರುವ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ದ ಜನರಿಗೆ ಇರುವ ಆಕ್ರೋಶ ಈ ಯಾತ್ರೆ ಮೂಲಕ ರಾಜ್ಯ ಬಿಜೆಪಿ ನಾಯಕರಿಗೆ ಅರ್ಥವಾಗಲಿ. ಅವರ ಸರ್ಕಾರದ ವಿರುದ್ಧವೇ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ಮಾಡುವಂತಾಗಿದೆ” ಎಂದು ವ್ಯಂಗ್ಯವಾಡಿದರು.
ನಿಮ್ಮ ನೆಚ್ಚಿನ ಗ್ಯಾರಂಟಿ ನ್ಯೂಸ್ ಈ ಕೆಳಕಂಡ ಕೇಬಲ್ & ಡಿಟಿಎಚ್ ನೆಟ್ ವರ್ಕ್ ಗಳಲ್ಲಿ ಲಭ್ಯ..
- Tata Play-1665
- U-Digital-ಮೈಸೂರು-160
- Metro Cast Network-ಬೆಂಗಳೂರು-ಬೆಳಗಾವಿ-30-828
- V4 digital network-623
- Abhishek network-817
- Malnad Digital network-45
- JBM network-ರಾಮದುರ್ಗ-54
- Channel net nine-ಧಾರವಾಡ-128
- Basava cable network-ಚಳ್ಳಕೆರೆ-54
- City channel network– ಚಳ್ಳಕೆರೆ-54
- RST digital-ಕಾರ್ಕಳ-101
- Vinayak cable-ಪಟ್ಟನಾಯಕನಹಳ್ಳಿ-54
- Mubarak digital-ಸಂಡೂರು-54
- SB cable-ಸವದತ್ತಿ-54
- Bhosale network-ವಿಜಯಪುರ-54
- Surya digital-ಜಗಳೂರು-54
- Gayatri network-ಸಿಂಧನೂರು-54
- Global vision-ದಾವಣಗೆರೆ-54
- Janani cable-ಮಂಡ್ಯ-54
- Hira cable-ಬೆಳಗಾವಿ-ಹುಬ್ಬಳ್ಳಿ-54
- UDC network-ಹಾರೋಗೇರಿ-54
- Moka cable-ಬಳ್ಳಾರಿ-100
- CAN network-ಚಿಕ್ಕೋಡಿ-54
- KK digital-ಗಂಗಾವತಿ-54
- Victory network-ದಾವಣಗೆರೆ-54
