ಹಾಸನ: ರಾಜ್ಯಾದ್ಯಂತ ಹಸು ಹಾಗೂ ಕರುವಿನ ಮೇಲೆ ದಾಳಿ ನಡೆಸುವ ಘಟನೆಗಳು ದಿನೇ ದಿನೇ ಹೆಚ್ಚಾಗುತ್ತಿವೆ. ಈ ಪೈಕಿ, ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಅರೆಕೆರೆ ಗ್ರಾಮದಲ್ಲಿ ಮತ್ತೊಂದು ಘಟನೆ ನಡೆದಿದೆ.
ಸೋಮವಾರ ರಾತ್ರಿ, ನವೀನ್ ಎಂಬುವವರ ಕೊಟ್ಟಿಗೆಯಲ್ಲಿ ಕಟ್ಟಿದ್ದ ಹೋರಿ ಕರುವಿನ ಮೇಲೆ ದುಷ್ಕರ್ಮಿಗಳು ಮಚ್ಚಿನಿಂದ ಅಟ್ಟಹಾಸ ಮೆರೆದಿದ್ದಾರೆ. ಈ ಅಮಾನವೀಯ ಕೃತ್ಯದಿಂದ ಕರುವಿನ ಕುತ್ತಿಗೆ ಹಾಗೂ ಬೆನ್ನಿನ ಮೇಲೆ ಗಂಭೀರ ಗಾಯಗಳಾಗಿವೆ. ರಕ್ತದ ಮಡುವಿನಲ್ಲಿ ಬಿದ್ದು ನೋವಿನಿಂದ ನರಳಾಡುತ್ತಿದ್ದ, ಕರುವನ್ನು ನವೀನ್, ತಕ್ಷಣ ಪಶುವೈದ್ಯರನ್ನು ಕರೆಸಿ ಚಿಕಿತ್ಸೆ ಕೊಡಿಸಿದ್ದಾರೆ.
ನಂತರ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ದುಷ್ಕರ್ಮಿಗಳನ್ನು ಪತ್ತೆಹಚ್ಚಲು ಬಲೆ ಬೀಸಿದ್ದಾರೆ.