ಶಿವಮೊಗ್ಗ/ಬೆಂಗಳೂರು – ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ (ಡಿಸಿಸಿ ಬ್ಯಾಂಕ್) ಹಗರಣದ ಹಿನ್ನೆಲೆಯಲ್ಲಿ, ಬ್ಯಾಂಕ್‌ನ ಮಾಜಿ ಅಧ್ಯಕ್ಷ ಮಂಜುನಾಥ್ ಗೌಡ ಅವರನ್ನು ಜಾರಿ ನಿರ್ದೇಶನಾಲಯ (ED) ಬಂಧಿಸಿದೆ.
ಮಂಜುನಾಥ್ ಗೌಡರ ಮೇಲೆ ಕೋಟ್ಯಂತರ ರೂಪಾಯಿ ಹಣದ ದುರ್ಬಳಕೆ ಆರೋಪವಿದೆ. ಇಡಿಯ ಅಧಿಕಾರಿಗಳು ಮಂಗಳವಾರ ಬೆಳಗ್ಗೆ ಶಿವಮೊಗ್ಗದಲ್ಲಿನ ಅವರ ನಿವಾಸದ ಮೇಲೆ ದಾಳಿ ನಡೆಸಿ, ಬಹುಮಾನವಾದ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ಈ ದಾಳಿಯು ಕೇವಲ ಶಿವಮೊಗ್ಗದಲ್ಲಿ ಮಾತ್ರವಲ್ಲದೆ, ಬೆಂಗಳೂರು ಸೇರಿದಂತೆ 8 ಕಡೆಗಳಲ್ಲಿ ಒಂದೇ ಸಮಯದಲ್ಲಿ ನಡೆಯಿತು. ಬೆಂಗಳೂರಿನ ಚಾಮರಾಜಪೇಟೆಯ ಅಪೆಕ್ಸ್ ಬ್ಯಾಂಕ್ ಗೆಸ್ಟ್‌ಹೌಸ್ ಮೇಲೂ ದಾಳಿ ನಡೆಸಲಾಗಿದೆ. ಈ ಎಲ್ಲಾ ದಾಳಿಗಳ ಸಂದರ್ಭದಲ್ಲಿ ಮಂಜುನಾಥ್ ಅವರನ್ನು ವಿಚಾರಣೆಗಾಗಿ ವಶಕ್ಕೆ ತೆಗೆದುಕೊಳ್ಳಲಾಗಿದೆ.
ಇಂದು ಬೆಳಿಗ್ಗೆ ಅವರನ್ನು ಬೆಂಗಳೂರಿನ 1ನೇ ಸಿಸಿಹೆಚ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ನ್ಯಾಯಾಲಯವು ಇಡಿಗೆ 14 ದಿನಗಳ ಕಾಲ ಕಸ್ಟಡಿಗೆ ಒಪ್ಪಿಸಿದೆ.
2018ರ ದಶಕದಲ್ಲಿ ಡಿಸಿಸಿ ಬ್ಯಾಂಕ್‌ನಲ್ಲಿ ಕೋಟ್ಯಂತರ ರೂ.ಗಳ ಹಣ ದುರ್ಬಳಕೆ ಕುರಿತು ತೀವ್ರ ಆಕ್ಷೇಪ ವ್ಯಕ್ತವಾಗಿತ್ತು. ಈ ಹಿನ್ನಲೆಯಲ್ಲಿ ರಾಜ್ಯದ ಭ್ರಷ್ಟಾಚಾರ ವಿರೋಧಿ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿತು. ಅಂದು ಮಂಜುನಾಥ್ ಗೌಡ ಅವರನ್ನು ಎಸಿಬಿ ಬಂಧಿಸಿತ್ತು. ಆದರೆ ನಂತರದ ಚಾರ್ಜ್‌ಶೀಟ್‌ನಲ್ಲಿ ಅವರ ಹೆಸರನ್ನು ಕೈಬಿಡಲಾಗಿತ್ತು. ಈ ನಿರ್ಧಾರ ಹಲವು ಪ್ರಶ್ನೆಗಳು ಮೂಡಿದ್ದವು..
ಬಳಿಕ ಜಾರಿ ನಿರ್ದೇಶನಾಲಯವು ಈ ಪ್ರಕರಣವನ್ನು ಮತ್ತೊಮ್ಮೆ ಕೈಗೆತ್ತಿಕೊಂಡು, 2023ರಲ್ಲಿ ಇಸಿಐಆರ್ (Enforcement Case Information Report) ದಾಖಲಿಸಿತು. ಈ ಮೂಲಕ ಇಡಿಯ ತನಿಖೆ ಅಧಿಕೃತವಾಗಿ ಆರಂಭವಾಯಿತು. ತನಿಖೆ ಮುಂದುವರಿದಂತೆ ಮಂಜುನಾಥ್ ಗೌಡ ಹೈಕೋರ್ಟ್‌ಗೆ ತೆರಳಿ ತನಿಖೆಗೆ ತಡೆಯಾಜ್ಞೆ ಪಡೆಯಲು ಪ್ರಯತ್ನಿಸಿದರು. ಕೆಲ ಸಮಯ ತಡೆಯಾಜ್ಞೆ ದೊರೆತಿದ್ದರೂ, ಇಡಿಯ ಕಾನೂನು ಹೋರಾಟದ ಫಲವಾಗಿ ಹೈಕೋರ್ಟ್ ಆ ತಡೆಯಾಜ್ಞೆಯನ್ನು ತೆರವುಗೊಳಿಸಿತು. ಇದರಿಂದಾಗಿ ಇಡಿಗೆ ತನಿಖೆ ಮುಂದುವರಿಸಲು ಅವಕಾಶ ದೊರಕಿತು.
ಈಗಾಗಲೇ ಇಡಿ ಅಧಿಕಾರಿಗಳು ಸಾಕಷ್ಟು ದಾಖಲೆಗಳನ್ನು ಪರಿಶೀಲನೆಗೆ ಒಳಪಡಿಸಿದ್ದು, ಹೆಚ್ಚಿನ ವಿಚಾರಣೆಗಾಗಿ ಮಂಜುನಾಥ್ ಅವರನ್ನು ಕಸ್ಟಡಿಯಲ್ಲಿ ಇಡಲಾಗಿದೆ. ಇಡಿಗೆ ಬಂಧಿತರಿಂದ ಸಿಕ್ಕ ಮಾಹಿತಿಯ ಆಧಾರದ ಮೇಲೆ ಹಣದ ಹಾದಿ, ಲೆಕ್ಕಾಚಾರ ಹಾಗೂ ಇನ್ನಿತರ ಪ್ರಮುಖ ದಾಖಲೆಗಳನ್ನು ಅನಾವರಣ ಮಾಡುವ ಸಾಧ್ಯತೆ ಇದೆ.