ಡೆಂಗ್ಯೂ ಚಿಕನ್ ಗುನ್ಯಾ ತಡೆಗೆ ಸಚಿವ ದಿನೇಶ್ ಗುಂಡೂರಾವ್ ಸೂಚನೆ

Siddu stalin kcr (42)

ಮಳೆಗಾಲದಲ್ಲಿ ಡೆಂಗ್ಯೂ ಮತ್ತು ಚಿಕನ್‌ಗುನ್ಯಾ ಪ್ರಕರಣಗಳು ಹೆಚ್ಚಾಗುವ ಸಾಧ್ಯತೆಗಳಿದ್ದು, ಈಗಿನಿಂದಲೇ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಮಂಗಳವಾರ ಸೂಚನೆ ನೀಡಿದ್ದಾರೆ.

ಮಂಗಳವಾರ ಬೆಂಗಳೂರಿನ ವಿಕಾಸಸೌಧದಲ್ಲಿ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಸಿಇಓಗಳು, ಜಿಲ್ಲಾ ಆರೋಗ್ಯಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದ ಅವರು, ಡೆಂಗ್ಯೂ, ಚಿಕನ್ ಗುನ್ಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳನ್ನ ತಡೆಯಲು ಜಿಲ್ಲೆಗಳಲ್ಲಿ ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆ ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕು ಎಂದು ಸೂಚನೆ ನೀಡಿದರು.

ಪ್ರತಿ 16 ವರ್ಷಗಳಿಗೊಮ್ಮೆ ಚಿಕೂನ್ ಗುನ್ಯಾ ಹಾವಳಿ ಹೆಚ್ಚಾಗಿರುತ್ತದೆ. ಈ ಬಾರಿ ಚಿಕನ್ ಗುನ್ಯಾ 16ನೇ ವರ್ಷದ ಆವರ್ತನವಾಗಿದೆ. ಪರಿಸ್ಥಿತಿ ಎದುರಿಸಲು ಆರೋಗ್ಯ ಇಲಾಖೆ ಅಧಿಕಾರಿಗಳು ಸಜ್ಜಾಗಬೇಕು. ಚಿಕನ್ ಗುನ್ಯಾ ತಡೆಗಟ್ಟಲು ಆಂದೋಲನದ ರೀತಿಯಲ್ಲಿ ಕೆಲಸ ಮಾಡಬೇಕು. ಯಾವುದೇ ರೀತಿಯ ರೋಗಗಳು ಜನರಿಗೆ ಹರಡದಂತೆ ಸೂಕ್ತ ಮುನ್ನಚ್ಚರಿಕೆ ಹಾಗೂ ಜಾಗೃತಿ ಮೂಡಿಸಬೇಕು ಎಂದು ಸೂಚನೆ ನೀಡಿದರು.

ಈ ವೇಳೆ ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಹರ್ಷ ಗುಪ್ತಾ, ಇಲಾಖೆ ಆಯುಕ್ತ ಶಿವಕುಮಾರ್, ಎನ್.ಎಚ್.ಎಮ್ ವ್ಯವಸ್ಥಾಪಕ ನಿರ್ದೇಶಕ ನವೀನ್ ಭಟ್ ಸೇರಿದಂತೆ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿ.ಪಂ. ಸಿಇಓಗಳು, ಇಲಾಖೆ ಅಧಿಕಾರಿಗಳು ಪಾಲ್ಗೊಂಡಿದ್ದರು.

ನಿಮ್ಮ ನೆಚ್ಚಿನ ಗ್ಯಾರಂಟಿ ನ್ಯೂಸ್ ಈ ಕೆಳಕಂಡ ಕೇಬಲ್ & ಡಿಟಿಎಚ್ ನೆಟ್ ವರ್ಕ್ ಗಳಲ್ಲಿ ಲಭ್ಯ..

Exit mobile version