• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡುವವರೆಗೂ ಹೋರಾಟ: ಹೆಚ್.ಡಿ. ದೇವೇಗೌಡ ಎಚ್ಚರಿಕೆ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
August 10, 2026 - 7:02 pm
in ಕರ್ನಾಟಕ
0 0
0
ಬಲಿಷ್ಠ (54)

ಬೆಂಗಳೂರು: ನಾಡಿನ ರೈತರ ಭೂಮಿಯನ್ನು ಸ್ವಾಧೀನಪಡಿಸಿಕೊಂಡು ಬಿಡದಿ ಟೌನ್‌ಶಿಪ್ ನಿರ್ಮಿಸುವ ರಾಜ್ಯ ಸರ್ಕಾರದ ಯೋಜನೆಯನ್ನು ತಕ್ಷಣ ಕೈಬಿಡಬೇಕು. ಇಲ್ಲವಾದರೆ ಯೋಜನೆ ಹಿಂಪಡೆಯುವವರೆಗೂ ನಿರಂತರ ಹೋರಾಟ ನಡೆಸುವುದಾಗಿ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರು ದಕ್ಷಿಣ ಜಿಲ್ಲೆಯ ಬಿಡದಿಯ ಬಿಜಿಎಸ್ ವೃತ್ತದಿಂದ ಸೋಮವಾರ ಆರಂಭವಾದ ಜೆಡಿಎಸ್‌ನ ಎರಡನೇ ದಿನದ ಪಾದಯಾತ್ರೆಯಲ್ಲಿ ಭಾಗವಹಿಸಿ ಮಾತನಾಡಿದ ದೇವೇಗೌಡರು, ಗ್ರೇಟರ್ ಬೆಂಗಳೂರು ಟೌನ್‌ಶಿಪ್ ಯೋಜನೆ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ರೈತರ ಭೂಮಿಯನ್ನು ಯಾವುದೇ ಕಾರಣಕ್ಕೂ ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳಲು ಅವಕಾಶ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

RelatedPosts

ಶಾಲಾ ಮಕ್ಕಳಿಗೆ ಗುಡ್‌ನ್ಯೂಸ್; ಅಕ್ಟೋಬರ್ 3ರಿಂದ 19 ದಿನ ದಸರಾ ರಜೆ

ಬರದ ನಡುವೆ ರೈತರಿಗೆ ಗುಡ್‌ನ್ಯೂಸ್‌: ರಾಜ್ಯದ 40 ಲಕ್ಷ ರೈತರ ಖಾತೆಗೆ ಬರಲಿದೆ ಹಣ

ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ: 12 ದಿನ ಭಕ್ತರಿಗೆ ದರ್ಶನ ಭಾಗ್ಯ

ಬರಪೀಡಿತ ಪಟ್ಟಿಗೆ ಇಂಡಿ ಸೇರಿದಂತೆ 29 ತಾಲೂಕುಗಳ ಸೇರ್ಪಡೆ

ADVERTISEMENT
ADVERTISEMENT

ಗ್ರೇಟರ್ ಬೆಂಗಳೂರು ಟೌನ್‌ಶಿಪ್ ಯೋಜನೆಯ ಹೆಸರಿನಲ್ಲಿ ಸುಮಾರು 9,600 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಸರ್ಕಾರ ಮುಂದಾಗಿದೆ ಎಂದು ಆರೋಪಿಸಿದ ದೇವೇಗೌಡರು, ರೈತರಿಗೆ ಹೆಚ್ಚಿನ ಬೆಲೆಯ ಆಮಿಷವೊಡ್ಡಿ ಭೂಮಿ ಪಡೆಯುವ ಪ್ರಯತ್ನ ನಡೆಯುತ್ತಿದೆ ಎಂದು ದೂರಿದರು. ರೈತರ ಹಿತಾಸಕ್ತಿಗೆ ಧಕ್ಕೆ ತರುವ ಯಾವುದೇ ಕ್ರಮವನ್ನು ಜೆಡಿಎಸ್ ಸಹಿಸುವುದಿಲ್ಲ ಎಂದು ಹೇಳಿದರು.

“ನನ್ನ ದೇಹಕ್ಕೆ ವಯಸ್ಸಾಗಿದೆಯೇ ಹೊರತು ಬುದ್ಧಿಗೆ ವಯಸ್ಸಾಗಿಲ್ಲ. 90ರ ಇಳಿವಯಸ್ಸಿನಲ್ಲಿಯೂ ರೈತರ ಪರವಾಗಿ ಹೋರಾಡುವ ಶಕ್ತಿ ನನಗಿದೆ. ಬಿಡದಿಯ ಕಿಂಚಿತ್ತೂ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಬಿಡುವುದಿಲ್ಲ” ಎಂದು ದೇವೇಗೌಡರು ಗುಡುಗಿದರು.

ಇದೇ ವೇಳೆ ಮುಂದಿನ ಹೋರಾಟದ ರೂಪುರೇಷೆಗಳನ್ನು ಪ್ರಕಟಿಸಿದ ಅವರು, ಆಗಸ್ಟ್ 19ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಸಭೆ ನಡೆಸಲಾಗುವುದು ಎಂದು ತಿಳಿಸಿದರು. ರೈತರು ಮಾನಸಿಕವಾಗಿ ಹೋರಾಟಕ್ಕೆ ಸಿದ್ಧರಾಗಬೇಕು ಎಂದು ಕರೆ ನೀಡಿದರು.

ಇನ್ನು ಒಕ್ಕಲಿಗರು ಮುಖ್ಯಮಂತ್ರಿಯಾದರೆ ದೇವೇಗೌಡರ ಕುಟುಂಬ ಸಹಿಸುವುದಿಲ್ಲ ಎಂಬ ಆರೋಪಕ್ಕೂ ದೇವೇಗೌಡರು ಪ್ರತಿಕ್ರಿಯಿಸಿದರು. “ಇನ್ನೂ ಎರಡು ವರ್ಷ ಅಧಿಕಾರವಿದೆ. ಆಡಳಿತ ನಡೆಸಲಿ. ಯಾರು ಮುಖ್ಯಮಂತ್ರಿಯಾಗಿ ಒಳ್ಳೆಯ ಕೆಲಸ ಮಾಡಿದರೂ ನಾನು ಬೆಂಬಲಿಸುತ್ತೇನೆ” ಎಂದು ಅವರು ಹೇಳಿದರು.

38 ಕಿ.ಮೀ. ಬೃಹತ್ ಪಾದಯಾತ್ರೆ

ರಾಮನಗರ ತಾಲ್ಲೂಕಿನ ಬಿಡದಿ ಹೋಬಳಿಯಲ್ಲಿ ಗ್ರೇಟರ್ ಬೆಂಗಳೂರು ಸಮಗ್ರ ಉಪನಗರ ಯೋಜನೆ ವಿರುದ್ಧ ಜೆಡಿಎಸ್‌ನ ಹೋರಾಟ ತೀವ್ರಗೊಂಡಿದೆ. ಬೈರಮಂಗಲ ವೃತ್ತದಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ವರೆಗೆ ಒಟ್ಟು 38 ಕಿ.ಮೀ. ಬೃಹತ್ ಪಾದಯಾತ್ರೆ ಆಯೋಜಿಸಲಾಗಿದೆ. ಮೂರು ದಿನಗಳ ಕಾಲ ನಡೆಯಲಿರುವ ಈ ಪಾದಯಾತ್ರೆಗೆ ರೈತರು ಹಾಗೂ ವಿವಿಧ ಕನ್ನಡಪರ ಸಂಘಟನೆಗಳಿಂದ ಬೆಂಬಲ ವ್ಯಕ್ತವಾಗಿದೆ.

ಎರಡನೇ ದಿನದ ಪಾದಯಾತ್ರೆ ಬಿಡದಿಯ ಸಜ್ಜನ್‌ರಾವ್ ವೃತ್ತದಿಂದ ಆರಂಭಗೊಂಡು ಜೆಕೆ ಟೈರ್ ಗೇಟ್, ಹೆದ್ದಾರಿ ಮಾರ್ಗವಾಗಿ ನೈಸ್ ರೋಡ್ ಜಂಕ್ಷನ್‌ವರೆಗೆ ಸಾಗಿತು. ಮೂರನೇ ದಿನವಾದ ಆಗಸ್ಟ್ 11ರಂದು ಪಾದಯಾತ್ರೆ ಬೆಂಗಳೂರಿನ ನಗರದ ಒಳಭಾಗ ಪ್ರವೇಶಿಸಿ ಫ್ರೀಡಂ ಪಾರ್ಕ್ ತಲುಪಲಿದೆ. ಬಳಿಕ ಅಲ್ಲಿ ಬೃಹತ್ ಸಮಾವೇಶ ನಡೆಯಲಿದೆ.

ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಪಾದಯಾತ್ರೆಯ ನೇತೃತ್ವ ವಹಿಸಿದ್ದು, ಎರಡನೇ ದಿನವೂ ಸಾವಿರಾರು ಕಾರ್ಯಕರ್ತರು ಹಾಗೂ ಹೋರಾಟಗಾರರು ಭಾಗವಹಿಸಿದ್ದರು. ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡುವಂತೆ ಒತ್ತಾಯಿಸಿ ಜೆಡಿಎಸ್ ಹೋರಾಟ ಮುಂದುವರಿಸಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮತ್ತು ಜೆಡಿಎಸ್ ನಡುವಿನ ರಾಜಕೀಯ ವಾಗ್ವಾದ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

ಜ್ಞಾನೇಶ್ (9)

ತುಂಗಭದ್ರಾ ನೀರಿನ ಹರಿವು ಹೆಚ್ಚಳ; ಮಂತ್ರಾಲಯದಲ್ಲಿ ಭಕ್ತರಿಗೆ ಬಿಗ್ ಅಲರ್ಟ್

by ಕವಿತಾ
September 25, 2026 - 6:33 pm
0

ಜ್ಞಾನೇಶ್ (7)

ಶಾಲಾ ಮಕ್ಕಳಿಗೆ ಗುಡ್‌ನ್ಯೂಸ್; ಅಕ್ಟೋಬರ್ 3ರಿಂದ 19 ದಿನ ದಸರಾ ರಜೆ

by ಕವಿತಾ
September 25, 2026 - 5:47 pm
0

ಜ್ಞಾನೇಶ್ (8)

ದಾಂಡೇಲಿಯಲ್ಲಿ ರಸ್ತೆ ಬದಿಯ ಕಾಡಿಗೆ ಆಕಸ್ಮಿಕ ಬೆಂಕಿ; ತಪ್ಪಿದ ಭಾರೀ ಅನಾಹುತ

by ಕವಿತಾ
September 25, 2026 - 5:07 pm
0

ಜ್ಞಾನೇಶ್ (6)

ಎರಡು ದಿನಗಳ ಬಳಿಕ ಹೇಮಾವತಿ ನಾಲೆಯಲ್ಲಿ ಯುವಕನ ಮೃತದೇಹ ಪತ್ತೆ

by ಕವಿತಾ
September 25, 2026 - 4:52 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಜ್ಞಾನೇಶ್ (7)
    ಶಾಲಾ ಮಕ್ಕಳಿಗೆ ಗುಡ್‌ನ್ಯೂಸ್; ಅಕ್ಟೋಬರ್ 3ರಿಂದ 19 ದಿನ ದಸರಾ ರಜೆ
    September 25, 2026 | 0
  • Untitled design 2026 09 24T162805.563
    ಬರದ ನಡುವೆ ರೈತರಿಗೆ ಗುಡ್‌ನ್ಯೂಸ್‌: ರಾಜ್ಯದ 40 ಲಕ್ಷ ರೈತರ ಖಾತೆಗೆ ಬರಲಿದೆ ಹಣ
    September 24, 2026 | 0
  • Untitled design 2026 09 24T134901.525
    ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ: 12 ದಿನ ಭಕ್ತರಿಗೆ ದರ್ಶನ ಭಾಗ್ಯ
    September 24, 2026 | 0
  • Untitled design 2026 09 24T133228.563
    ಬರಪೀಡಿತ ಪಟ್ಟಿಗೆ ಇಂಡಿ ಸೇರಿದಂತೆ 29 ತಾಲೂಕುಗಳ ಸೇರ್ಪಡೆ
    September 24, 2026 | 0
  • ಕಾವೇರಿ ವಿವಾದ ಕರ್ನಾಟಕಕ್ಕೆ ಮತ್ತೆ ಶಾಕ್ (1)
    ಕಾವೇರಿ ವಿವಾದ: ಕರ್ನಾಟಕಕ್ಕೆ ಮತ್ತೆ ಶಾಕ್‌, CWMA ಆದೇಶ ಪಾಲಿಸಲು ಸುಪ್ರೀಂ ಸೂಚನೆ
    September 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version