• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, September 8, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮಣ್ಣಲ್ಲಿ ಮಣ್ಣಾದ ದೇವೇಗೌಡರ ಪತ್ನಿ ಚೆನ್ನಮ್ಮ: ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 20, 2026 - 7:05 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಹಾಸನ
0 0
0

ಹಾಸನ: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಧರ್ಮಪತ್ನಿ ಚೆನ್ನಮ್ಮ ಅವರಿಗೆ ಇಂದು ಅವರ ಹುಟ್ಟೂರು ಹಾಸನ ಜಿಲ್ಲೆಯ ಹರದನಹಳ್ಳಿ ಸಮೀಪದ ಮಾವಿನಕೆರೆಯ ರಂಗನಾಥಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತಿಮ ವಿದಾಯ ನೀಡಲಾಯಿತು. ಕುಟುಂಬ ಸದಸ್ಯರು, ರಾಜಕೀಯ ನಾಯಕರು, ಗಣ್ಯರು ಹಾಗೂ ಸಾವಿರಾರು ಅಭಿಮಾನಿಗಳ ಸಮ್ಮುಖದಲ್ಲಿ ನಡೆದ ಅಂತ್ಯಕ್ರಿಯೆ ನಡೆಯಿತು.

ಬೆಳಗ್ಗೆಯಿಂದಲೇ ಮಾವಿನಕೆರೆ ಗ್ರಾಮದಲ್ಲಿ ಜನಸಾಗರ ನೆರೆದಿತ್ತು. ಅಂತಿಮ ದರ್ಶನಕ್ಕಾಗಿ ಆಗಮಿಸಿದ್ದ ಸಾರ್ವಜನಿಕರು ಹಾಗೂ ವಿವಿಧ ರಾಜಕೀಯ ಪಕ್ಷಗಳ ನಾಯಕರು ಚೆನ್ನಮ್ಮ ಅವರ ಪಾರ್ಥಿವ ಶರೀರಕ್ಕೆ ಪುಷ್ಪನಮನ ಸಲ್ಲಿಸಿದರು. ರಾಜ್ಯ ಸರ್ಕಾರದ ವತಿಯಿಂದ ಪೂರ್ಣ ಸರ್ಕಾರಿ ಗೌರವ ನೀಡಲಾಗಿದ್ದು, ಮೂರು ಸುತ್ತು ಕುಶಾಲತೋಪು ಸಿಡಿಸುವ ಮೂಲಕ ಗೌರವ ವಂದನೆ ಸಲ್ಲಿಸಲಾಯಿತು. ರಾಷ್ಟ್ರಗೀತೆಯ ನಾದದೊಂದಿಗೆ ಗೌರವ ಸಮರ್ಪಿಸಿ, ಎರಡು ನಿಮಿಷಗಳ ಮೌನಾಚರಣೆ ನಡೆಸಲಾಯಿತು.

RelatedPosts

ಯಶವಂತಪುರ ಎಪಿಎಂಸಿಗೆ ಭೇಟಿ ನೀಡಿದ ಡಿಕೆಶಿ: ರೈತರ ಸಮಸ್ಯೆ ಆಲಿಸಿದ ಸಿಎಂ

ಸೆ. 20 ರಿಂದ ಆಂಬುಲೆನ್ಸ್ ಸೇವೆ ಬಂದ್: ವೇತನ ಹೆಚ್ಚಳ ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ

ದಕ್ಷಿಣ ಕನ್ನಡ, ಉಡುಪಿ ಸೇರಿ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಕಾವೇರಿ ನೀರು ಹಂಚಿಕೆ ವಿವಾದ: ನಾಳೆ CWRC-CWMA ಸಭೆ, ಕರ್ನಾಟಕದ ಮನವಿಗೆ ಸಿಗುತ್ತಾ ಮನ್ನಣೆ?

ADVERTISEMENT
ADVERTISEMENT

ಬಳಿಕ ಮುಖ್ಯಮಂತ್ರಿ ದೇವೇಗೌಡರ ಕುಟುಂಬಕ್ಕೆ ರಾಷ್ಟ್ರಧ್ವಜವನ್ನು ಹಸ್ತಾಂತರಿಸಿದರು. ಇದೇ ವೇಳೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ದೇವೇಗೌಡರ ಕಾಲಿಗೆ ನಮಸ್ಕರಿಸಿ ಗೌರವ ಸಲ್ಲಿಸಿದ ದೃಶ್ಯ ಎಲ್ಲರ ಗಮನ ಸೆಳೆಯಿತು.

ಸರ್ಕಾರಿ ಗೌರವದ ನಂತರ ಧಾರ್ಮಿಕ ವಿಧಿವಿಧಾನಗಳು ಆರಂಭವಾದವು. ಅರ್ಚಕರ ತಂಡದ ನೇತೃತ್ವದಲ್ಲಿ ವೇದಮಂತ್ರ ಹಾಗೂ ಸ್ತೋತ್ರ ಪಠಣ ನಡೆಯಿತು. ದೇವೇಗೌಡರು ಮತ್ತು ಕುಟುಂಬ ಸದಸ್ಯರು ಪಾರ್ಥಿವ ಶರೀರಕ್ಕೆ ಅಂತಿಮ ಪೂಜೆ ಸಲ್ಲಿಸಿದರು. ಸಂಪ್ರದಾಯದಂತೆ ದೇಹ ಶುದ್ಧೀಕರಣ ಕಾರ್ಯ ನೆರವೇರಿಸಿ, ಅಂತಿಮ ಸಂಸ್ಕಾರಕ್ಕೆ ಅಗತ್ಯ ವಿಧಿವಿಧಾನಗಳನ್ನು ನಡೆಸಲಾಯಿತು.

ನಂತರ ಪಾರ್ಥಿವ ಶರೀರವನ್ನು ಪಲ್ಲಕ್ಕಿಯಲ್ಲಿ ಹೊತ್ತು ಮೂರು ಸುತ್ತು ಮೆರವಣಿಗೆ ನಡೆಸಲಾಯಿತು. ಒಕ್ಕಲಿಗ ಸಮುದಾಯದ ಸಂಪ್ರದಾಯದಂತೆ ಅಂತಿಮ ವಿಧಿಗಳನ್ನು ನೆರವೇರಿಸಲಾಯಿತು. ಹಿರಿಯ ಪುತ್ರ ಹೆಚ್.ಡಿ. ರಮೇಶ್ ಅವರು ಅಂತ್ಯಕ್ರಿಯೆಯ ಪ್ರಮುಖ ವಿಧಿವಿಧಾನಗಳನ್ನು ನೆರವೇರಿಸಿದರು. ಗುಂಡಿಯಲ್ಲಿ ಗಂಗಾಜಲ ಸಿಂಪಡಿಸಿ ಶುದ್ಧೀಕರಣ ಮಾಡಿದ ಬಳಿಕ ಪಾರ್ಥಿವ ಶರೀರವನ್ನು ಸಮಾಧಿ ಸ್ಥಳಕ್ಕೆ ಇಳಿಸಿ ಅಂತಿಮ ಸಂಸ್ಕಾರ ನೆರವೇರಿಸಲಾಯಿತು.

ಈ ವೇಳೆ ದೇವೇಗೌಡರು ಪತ್ನಿಯ ಪಾರ್ಥಿವ ಶರೀರಕ್ಕೆ ಮುತ್ತಿಟ್ಟು ಭಾವನಾತ್ಮಕವಾಗಿ ಅಂತಿಮ ನಮನ ಸಲ್ಲಿಸಿದರು. ಪುತ್ರ ಹೆಚ್.ಡಿ. ರೇವಣ್ಣ ಅವರು ತಾಯಿಗೆ ಮುತ್ತಿಟ್ಟು ಕಣ್ಣೀರಿನ ವಿದಾಯ ಹೇಳಿದರು. ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಹೆಚ್.ಡಿ. ಕುಮಾರಸ್ವಾಮಿ ಸಹ ತಾಯಿಯ ಪಾರ್ಥಿವ ಶರೀರದ ಎದುರು ಭಾವುಕರಾಗಿ ಕಣ್ಣೀರು ಹಾಕಿದ ದೃಶ್ಯ ನೆರೆದಿದ್ದವರ ಮನ ಮುಟ್ಟಿತು. ಕುಟುಂಬದ ಇತರ ಸದಸ್ಯರು ಸಹ ದುಃಖವನ್ನು ತಡೆದುಕೊಳ್ಳಲಾಗದೆ ಭಾವುಕರಾದರು.

ಚೆನ್ನಮ್ಮ ಅವರ ಸೊಸೆಯರು ಅರಿಶಿಣ-ಕುಂಕುಮ ಅರ್ಪಿಸಿ, ಬಾಗಿನ ಸಮರ್ಪಿಸುವ ಮೂಲಕ ಅಂತಿಮ ಗೌರವ ಸಲ್ಲಿಸಿದರು. ಬಳಿಕ ಪುತ್ರರು ಪಾರ್ಥಿವ ಶರೀರಕ್ಕೆ ಹೆಗಲು ನೀಡಿ ಅಂತಿಮಯಾತ್ರೆಯಲ್ಲಿ ಪಾಲ್ಗೊಂಡರು.

ಅಂತ್ಯಕ್ರಿಯೆಯಲ್ಲಿ ರಾಜ್ಯ ಸರ್ಕಾರದ ಸಚಿವರು, ವಿವಿಧ ರಾಜಕೀಯ ಪಕ್ಷಗಳ ಮುಖಂಡರು, ಶಾಸಕರು, ಸಂಸದರು ಹಾಗೂ ಕೇಂದ್ರದ ಹಲವು ಗಣ್ಯರು ಭಾಗವಹಿಸಿ ಚೆನ್ನಮ್ಮ ಅವರಿಗೆ ಅಂತಿಮ ನಮನ ಸಲ್ಲಿಸಿದರು. ಸಾವಿರಾರು ಕಾರ್ಯಕರ್ತರು ಹಾಗೂ ಸಾರ್ವಜನಿಕರು ಸಹ ಅಂತಿಮ ದರ್ಶನ ಪಡೆದು ಶ್ರದ್ಧಾಂಜಲಿ ಸಲ್ಲಿಸಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಚಿಂತೆ ಕಾಡಬಹುದು.! (6)

ಯಶವಂತಪುರ ಎಪಿಎಂಸಿಗೆ ಭೇಟಿ ನೀಡಿದ ಡಿಕೆಶಿ: ರೈತರ ಸಮಸ್ಯೆ ಆಲಿಸಿದ ಸಿಎಂ

by ಶಾಲಿನಿ ಕೆ. ಡಿ
September 8, 2026 - 9:36 am
0

ಚಿಂತೆ ಕಾಡಬಹುದು.! (4)

ಸೆ. 20 ರಿಂದ ಆಂಬುಲೆನ್ಸ್ ಸೇವೆ ಬಂದ್: ವೇತನ ಹೆಚ್ಚಳ ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ

by ಶಾಲಿನಿ ಕೆ. ಡಿ
September 8, 2026 - 8:43 am
0

ಚಿಂತೆ ಕಾಡಬಹುದು.! (3)

ದಕ್ಷಿಣ ಕನ್ನಡ, ಉಡುಪಿ ಸೇರಿ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

by ಶಾಲಿನಿ ಕೆ. ಡಿ
September 8, 2026 - 8:01 am
0

ಚಿಂತೆ ಕಾಡಬಹುದು.! (2)

ಬುದ್ಧಿಶಕ್ತಿ ಮತ್ತು ಏಕಾಗ್ರತೆ ಹೆಚ್ಚಿಸಿಕೊಳ್ಳಬೇಕೆ..? ಈ ಆಹಾರಗಳನ್ನು ತಪ್ಪದೇ ಸೇವಿಸಿ!

by ಶಾಲಿನಿ ಕೆ. ಡಿ
September 8, 2026 - 7:37 am
0

ಸಂಬಂಧಿಸಿದ ಪೋಸ್ಟ್‌ಗಳು

  • ಚಿಂತೆ ಕಾಡಬಹುದು.! (6)
    ಯಶವಂತಪುರ ಎಪಿಎಂಸಿಗೆ ಭೇಟಿ ನೀಡಿದ ಡಿಕೆಶಿ: ರೈತರ ಸಮಸ್ಯೆ ಆಲಿಸಿದ ಸಿಎಂ
    September 8, 2026 | 0
  • ಪಿಜಿ (12)
    ಕಾವೇರಿ ನೀರು ಹಂಚಿಕೆ ವಿವಾದ: ನಾಳೆ CWRC-CWMA ಸಭೆ, ಕರ್ನಾಟಕದ ಮನವಿಗೆ ಸಿಗುತ್ತಾ ಮನ್ನಣೆ?
    September 7, 2026 | 0
  • ಪಿಜಿ (4)
    ಮೋದಿ ಕಾರ್ಯಕ್ರಮಕ್ಕೆ ಭರ್ಜರಿ ಡಿಮ್ಯಾಂಡ್; ಆನ್‌ಲೈನ್ ಬುಕಿಂಗ್, ಒಂದೇ ಗಂಟೆಯಲ್ಲಿ ಸೀಟ್‌ಗಳೆಲ್ಲ ಫುಲ್!
    September 7, 2026 | 0
  • ಪಿಜಿ (3)
    ಮಹಿಳೆಗೆ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯರಿಗೆ ಶಾಕ್..! ಹೊಟ್ಟೆಯಲ್ಲಿ 14 ಪೆನ್ನು, 5 ಸ್ಪೂನ್, ಕ್ಯಾಂಡಲ್‌ ಪತ್ತೆ
    September 7, 2026 | 0
  • ಪಿಜಿ (2)
    ಪಿಒಪಿ ಗಣೇಶ ನಿಷೇಧದ ಬಳಿಕ ಪಟಾಕಿ ಬಳಕೆಗೂ ಹೊಸ ರೂಲ್ಸ್‌: ನಿಯಮ ಉಲ್ಲಂಘಿಸಿದ್ರೆ ಕ್ರಿಮಿನಲ್ ಕೇಸ್
    September 7, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version