ಡಿಜಿಪಿ ರಾಮಚಂದ್ರ ರಾವ್ ಕಾಮಲೀಲೆ? ಹಲವು ಮಹಿಳೆಯರ ಜೊತೆಗಿನ ವಿಡಿಯೋ ವೈರಲ್..!

WhatsApp Image 2026 01 19 at 2.35.51 PM

ಕರ್ನಾಟಕ ಪೊಲೀಸ್ ಇಲಾಖೆಯ ಉನ್ನತ ಅಧಿಕಾರಿಯೊಬ್ಬರ ಅಸಭ್ಯ ವರ್ತನೆಯ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿ ರಾಜ್ಯಾದ್ಯಂತ ಸಂಚಲನ ಮೂಡಿಸಿದೆ. ಡಿಜಿಪಿ ಕೆ. ರಾಮಚಂದ್ರ ರಾವ್ ಅವರದ್ದು ಎನ್ನಲಾದ ಈ ವಿಡಿಯೋಗಳು, ಭಾರೀ ಚರ್ಚೆಗೆ ಗ್ರಾಸವಾಗಿವೆ. ರಾಮಚಂದ್ರ ರಾವ್ ತಮ್ಮ ಕಚೇರಿಯಲ್ಲೇ ಸಮವಸ್ತ್ರ ಧರಿಸಿರುವಾಗಲೇ ಹಲವು ಮಹಿಳೆಯರೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎನ್ನಲಾದ ಈ ವಿಡಿಯೋಗಳು ಭಾರೀ ವೈರಲ್ ಆಗಿವೆ. ಜೊತೆಯಲ್ಲೇ ಈ ‘ಕಾಮಕಾಂಡ’ ಸಾರ್ವಜನಿಕರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ವೈರಲ್ ಆಗಿರುವ ವಿಡಿಯೋಗಳಲ್ಲಿ ರಾಮಚಂದ್ರ ರಾವ್ ಅವರು ಕಚೇರಿಯ ಚೇಂಬರ್‌ನಲ್ಲಿ ಕುಳಿತು, ಸಮವಸ್ತ್ರದಲ್ಲಿರುವಾಗಲೇ ಮಹಿಳೆಯರೊಂದಿಗೆ ಸರಸವಾಡುತ್ತಿರುವ ರೀತಿ ಚಿತ್ರಿತವಾಗಿದೆ. ಪ್ರಸಿದ್ಧ ಮಾಡೆಲ್‌ಗಳ ಜೊತೆಗಿನ ಸರಸದ ವಿಡಿಯೋ ಇದಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಕಚೇರಿಗೆ ಕೆಲಸದ ನಿಮಿತ್ತ ಬರುವ ಮಹಿಳೆಯರ ಜೊತೆಗೂ ಇದೇ ರೀತಿ ಅನುಚಿತ ವರ್ತನೆ ನಡೆಸಿದ್ದಾರಾ ಅನ್ನೋ ಪ್ರಶ್ನೆಗಳೂ ಎದ್ದಿವೆ. ಸರಣಿ ರೂಪದಲ್ಲಿ ಹಲವು ಮಹಿಳೆಯರ ಜೊತೆಗಿನ ವಿಡಿಯೋಗಳು ಹೊರ ಬರುತ್ತಿರುವ ಹಿನ್ನೆಲೆಯಲ್ಲಿ ಪ್ರಕರಣ ಇನ್ನಷ್ಟು ಗಂಭೀರ ಸ್ವರೂಪ ಪಡೆದಿದೆ. ಆದರೆ ಇದು 10 ವರ್ಷಗಳ ಹಿಂದಿನ ಹಳೆಯ ವಿಡಿಯೋ ಎಂಬ ಮಾತುಗಳೂ ಕೇಳಿ ಬರ್ತಿವೆ.

ಈ ಘಟನೆಯು ಪೊಲೀಸ್ ಇಲಾಖೆಯ ನೈತಿಕತೆ ಮತ್ತು ಮಹಿಳಾ ಸುರಕ್ಷತೆಯ ಬಗ್ಗೆ ದೊಡ್ಡ ಪ್ರಶ್ನೆಗಳನ್ನು ಎಬ್ಬಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ವಿಷಯದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಡಿಜಿಪಿ ಶ್ರೇಣಿಯ ಅಧಿಕಾರಿಯೇ ಇಂತಹ ಅಸಭ್ಯ ಕೃತ್ಯಗಳಲ್ಲಿ ತೊಡಗಿರುವುದು ಇಲಾಖೆಯ ವಿಶ್ವಾಸಾರ್ಹತೆಯ ಮೇಲೆ ದೊಡ್ಡ ಪ್ರಭಾವ ಬೀರುತ್ತಿದೆ.

ಈ ವಿಚಾರವಾಗಿ ಕರ್ನಾಟಕ ರಾಜ್ಯ ಸರ್ಕಾರ & ಪೊಲೀಸ್ ಇಲಾಖೆ ತಕ್ಷಣ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ. ರಾಮಚಂದ್ರ ರಾವ್ ಅವರ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ಸಂಬಂಧಿತ ಸೆಕ್ಷನ್‌ಗಳ ಅಡಿ ಪ್ರಕರಣ ದಾಖಲಾಗುವ ಸಾಧ್ಯತೆ ಇದೆ. ಈ ಪ್ರಕರಣದ ತನಿಖೆ ಆರಂಭವಾದ ಬಳಿಕ, ಹೆಚ್ಚಿನ ಸಾಕ್ಷ್ಯಗಳ ಸಂಗ್ರಹ ಮತ್ತು ದೂರುದಾರರ ಹೇಳಿಕೆ ದಾಖಲಾದ ಮೇಲೆ ಈ ವಿಚಾರ ಸಂಬಂಧ ಇನ್ನಷ್ಟು ಮಾಹಿತಿ ಲಭ್ಯವಾಗಲಿದೆ. ಒಟ್ಟಿನಲ್ಲಿ ಈ ಪ್ರಕರಣ ಪೊಲೀಸ್ ಇಲಾಖೆಯ ಒಳಗಿನ ನೈತಿಕತೆಯ ಬಗ್ಗೆ ದೊಡ್ಡ ಚರ್ಚೆಗೆ ಗ್ರಾಸವಾಗಿದೆ.

Exit mobile version