ಧರ್ಮಸ್ಥಳ ಪ್ರಕರಣ: ಶಿವಮೊಗ್ಗದಲ್ಲಿ ಮುಂದುವರೆದ ಚಿನ್ನಯ್ಯನ ವಿಚಾರಣೆ

Untitled design 2025 10 18t080623.276

ಶಿವಮೊಗ್ಗ: ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟಿದ್ದ ಆರೋಪದ ಮೇಲೆ ಬಂಧಿತನಾಗಿರುವ ಮಾಸ್ಕ್ ಮ್ಯಾನ್ ಚಿನ್ನಯ್ಯನ ವಿಚಾರಣೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ) ಶಿವಮೊಗ್ಗ ಸೆಂಟ್ರಲ್ ಜೈಲಿನಲ್ಲಿ ವಿಚಾರಣೆ ಮುಂದುವರೆಸಿದೆ. 

ಬೆಳ್ತಂಗಡಿ ನ್ಯಾಯಾಲಯದಿಂದ ಅನುಮತಿ ಪಡೆದ ನಂತರ, ಎಸ್‌ಐಟಿ ಅಧಿಕಾರಿಗಳು ಶುಕ್ರವಾರ ಶಿವಮೊಗ್ಗ ಕೇಂದ್ರ ಕಾರಾಗೃಹಕ್ಕೆ ಆಗಮಿಸಿ ವಿಚಾರಣೆ ನಡೆಸಿದರು. ಎಸ್‌ಐಟಿ ಎಸ್‌ಪಿ ಜಿತೇಂದ್ರ ಕುಮಾರ್ ನೇತೃತ್ವದ ತಂಡವು ಚಿನ್ನಯ್ಯನಿಂದ ಹೇಳಿಕೆ ದಾಖಲಿಸಿಕೊಂಡಿದೆ. ಈ ವಿಚಾರಣೆಯು ಶನಿವಾರವೂ ಮುಂದುವರೆಯಲಿದೆ ಎಂದು ತಿಳಿದುಬಂದಿದೆ.

ಪ್ರಕರಣದ ಪ್ರಮುಖ ಸಾಕ್ಷಿಯಾಗಿರುವ ಚಿನ್ನಯ್ಯನನ್ನು ಪ್ರಸ್ತುತ ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿ ಇರಿಸಲಾಗಿದೆ. ಇತ್ತೀಚೆಗೆ ಬೆಳ್ತಂಗಡಿ ನ್ಯಾಯಾಲಯದಲ್ಲಿ ನಡೆದ ವಿಚಾರಣೆಯ ಸಮಯದಲ್ಲಿ, ಚಿನ್ನಯ್ಯನು ಧರ್ಮಸ್ಥಳದಲ್ಲಿ ಇನ್ನೂ 10 ಶವಗಳನ್ನು ಹೂತಿಟ್ಟಿರುವುದಾಗಿ ಹೇಳಿಕೆ ನೀಡಿದ್ದ, ಇದಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಹೆಚ್ಚಿನ ವಿಚಾರಣೆ ನಡೆಸುತ್ತಿದೆ.

 ಎಸ್‌ಐಟಿ ತನಿಖೆದಾರರು ಚಿನ್ನಯ್ಯನಿಂದ ಪಡೆಯಲಾಗುವ ಮಾಹಿತಿಯ ಆಧಾರದ ಮೇಲೆ, ಶವಗಳ ಸ್ಥಳಗಳನ್ನು ಗುರುತಿಸಿ, ಅವುಗಳನ್ನು ಪತ್ತೆಹಚ್ಚುವ ಪ್ರಕ್ರಿಯೆಯನ್ನು ಕೈಗೊಳ್ಳಲು ಮುಂದಾಗಿದ್ದು, ಈ ವಿಚಾರಣೆಯು ಪ್ರಕರಣದ ಆಳವನ್ನು ಅರ್ಥಮಾಡಿಕೊಳ್ಳಲು ಮತ್ತು ಕುರಿತು ಹೆಚ್ಚಿನ ಸಾಕ್ಷ್ಯ-ಪುರಾವೆಗಳನ್ನು ಸಂಗ್ರಹಿಸಲು ನೆರವಾಗಲಿದೆ.

Exit mobile version