ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಮೊದಲ ಕ್ಯಾಬಿನೆಟ್ ಸಭೆಯಲ್ಲಿ ರೈತರು ಮತ್ತು ಯುವಕರಿಗೆ ಇನ್ನೆರಡು ಮಹತ್ವದ ಗ್ಯಾರಂಟಿಗಳನ್ನು ಘೋಷಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ ಘೋಷಿಸಿದ ಐದು ಗ್ಯಾರಂಟಿಗಳು ಈಗಾಗಲೇ ಜನಪ್ರಿಯಗೊಂಡಿದ್ದು, ಡಿ.ಕೆ.ಶಿವಕುಮಾರ್ ಅವರು ಇದೀಗ ಹೆಚ್ಚುವರಿ ಎರಡು ಗ್ಯಾರಂಟಿಗಳ ಮೂಲಕ ರೈತ ಮತ್ತು ಯುವಕರ ಕಣ್ಣುಗಳಲ್ಲಿ ವಿಶ್ವಾಸ ಮೂಡಿಸುವ ತಯಾರಿಯಲ್ಲಿದ್ದಾರೆ.
ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡುವಾಗ ಪಂಚ ಗ್ಯಾರಂಡಿ ಯೋಜನೆಗಳನ್ನು ರಾಜ್ಯದ ಜನತೆಗೆ ನೀಡಿದ್ದರು. ಅವುಗಳೆಂದರೆ ಶಕ್ತಿ ಯೋಜನೆ , ಗೃಹ ಜ್ಯೋತಿ, ಗೃಹ ಲಕ್ಷ್ಮಿ, ಯುವನಿಧಿ, ಅನ್ನಭಾಗ್ಯ ಯೋಜನೆಗಳನ್ನು ನೀಡಿದ್ದರು ಹಾಗೂ ಅದನ್ನು ತಮ್ಮ ಅಧಿಕಾರವಧಿಯಲ್ಲಿ ಯಶಸ್ವಿಯಾಗಿ ನಿಭಾಯಿಸಿದ್ದರು. ಆದರೆ ಈಗ ಸಿಎಂ ಬದಲಾವಣೆ ಸಮಯ ಡಿ.ಕೆ.ಶಿವಕುಮಾರ್ ನೂತನ 25ನೇ ಸಿಎಂ ಆಗಿ ಅಧಿಕಾರ ಸ್ವೀಕರಿಸುವ ಹೊತ್ತಿನಲ್ಲಿ ರಾಜ್ಯದ ಜನತೆಗೆ ಇರುವ 5 ಗ್ಯಾರಂಟಿಗಳ ಜೊತೆಯಲ್ಲೇ ಇನ್ನೆರೆಡು ಗ್ಯಾರಂಟಿ ಯೋಜನೆಗಳನ್ನು ನೀಡಿದ್ದಾರೆ.
ಪ್ರಸ್ತಾಪಿತ ಎರಡು ಹೊಸ ಗ್ಯಾರಂಟಿಗಳು:
- ರೈತರಿಗೆ ಉಚಿತ ಟ್ರಾನ್ಸ್‌ಫಾರ್ಮರ್
ರೈತರ ಜಮೀನಿಗೆ ವಿದ್ಯುತ್ ಸಂಪರ್ಕ ನೀಡುವಲ್ಲಿ ಟ್ರಾನ್ಸ್‌ಫಾರ್ಮರ್‌ಗಳ ಕೊರತೆಯನ್ನು ಪರಿಹರಿಸಲು ರಾಜ್ಯ ಸರ್ಕಾರ ಉಚಿತ ಟ್ರಾನ್ಸ್‌ಫಾರ್ಮರ್ ಯೋಜನೆಯನ್ನು ಜಾರಿಗೊಳಿಸುವ ಸಾಧ್ಯತೆಯಿದೆ. ಇದರಿಂದ ರೈತರಿಗೆ ವಿದ್ಯುತ್ ಸಂಪರ್ಕ ಪಡೆಯುವಲ್ಲಿ ಆರ್ಥಿಕ ಹೊರೆ ಕಡಿಮೆಯಾಗುತ್ತದೆ.
- ಯುವಕರಿಗೆ ಉಚಿತ ಗ್ಯಾರಂಟಿ
ಯುವಕರ ಉದ್ಯೋಗ, ಸ್ವಯಂ ಉದ್ಯೋಗ ಮತ್ತು ಸ್ಕಿಲ್ ಡೆವಲಪ್‌ಮೆಂಟ್‌ಗೆ ಸಂಬಂಧಿಸಿದಂತೆ ಹೊಸ ಗ್ಯಾರಂಟಿ ಘೋಷಣೆಯಾಗುವ ನಿರೀಕ್ಷೆಯಿದೆ. ಇದು ಯುವಕರ ಮುಖ್ಯ ಬೇಡಿಕೆಗಳನ್ನು ಗಮನದಲ್ಲಿಟ್ಟುಕೊಂಡು ರೂಪಿಸಲಾಗುತ್ತಿದೆ.
ಇದರ ಜೊತೆಗೆ ರಾಜ್ಯ ಶಿಕ್ಷಣ ನೀತಿಯ ಬಗ್ಗೆ ಮಹತ್ವದ ತೀರ್ಮಾನಗಳನ್ನು ತೆಗೆದುಕೊಳ್ಳುವ ಸಾಧ್ಯತೆಯೂ ಇದೆ. ವಿಶೇಷವಾಗಿ ಸರ್ಕಾರಿ ಶಾಲೆಗಳ ಅಭಿವೃದ್ಧಿ, ಉನ್ನತ ಶಿಕ್ಷಣದಲ್ಲಿ ಆಸನ ಸಂಖ್ಯೆ ಹೆಚ್ಚಳ ಮತ್ತು ವೃತ್ತಿಪರ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುವ ನಿರ್ಧಾರಗಳು ಬರಲಿವೆ ಎಂದು ಹೇಳಲಾಗುತ್ತಿದೆ.
ಸಿದ್ದರಾಮಯ್ಯ ಅವರು ತಮ್ಮ ಅವಧಿಯಲ್ಲಿ ಅನುಷ್ಠಾನಗೊಳಿಸಿದ ಗ್ಯಾರಂಟಿ ಯೋಜನೆಗಳು ರಾಜ್ಯದಲ್ಲಿ ಜನಪ್ರಿಯತೆ ಗಳಿಸಿವೆ. ಡಿ.ಕೆ.ಶಿವಕುಮಾರ್ ಅವರು ಈ ಗ್ಯಾರಂಟಿಗಳನ್ನು ಮುಂದುವರಿಸುವುದರ ಜೊತೆಗೆ ಹೊಸ ಗ್ಯಾರಂಟಿಗಳ ಮೂಲಕ ತಮ್ಮ ಸರ್ಕಾರದ ಆದ್ಯತೆಗಳನ್ನು ಸ್ಪಷ್ಟಪಡಿಸುತ್ತದೆ ಎಂದು ನಿರೀಕ್ಷಿಸಲಾಗಿದೆ.
ಇಂದು ಸಂಜೆ ಲೋಕಭವನದಲ್ಲಿ ಪ್ರಮಾಣ ವಚನ ಸ್ವೀಕರಿಸುವ 13 ಸಚಿವರೊಂದಿಗೆ ಡಿ.ಕೆ.ಶಿವಕುಮಾರ್ ಅವರು ಮೊದಲ ಕ್ಯಾಬಿನೆಟ್ ಸಭೆ ನಡೆಸುವ ಸಾಧ್ಯತೆಯಿದೆ. ಈ ಸಭೆಯಲ್ಲಿ ಮೇಲಿನ ಗ್ಯಾರಂಟಿಗಳ ಬಗ್ಗೆ ಅಧಿಕೃತ ಘೋಷಣೆಯಾಗುವ ಸಾಧ್ಯತೆ ಹೆಚ್ಚಿದೆ.
ರೈತರು, ಯುವಕರು ಮತ್ತು ಸಾಮಾನ್ಯ ಜನತೆ ಡಿ.ಕೆ.ಶಿವಕುಮಾರ್ ಸರ್ಕಾರದಿಂದ ಹೊಸ ಗ್ಯಾರಂಟಿಗಳನ್ನು ಉತ್ಸುಕತೆಯಿಂದ ನಿರೀಕ್ಷಿಸುತ್ತಿದ್ದಾರೆ. ಇದು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಎರಡನೇ ಅವಧಿಯ ಆರಂಭದಲ್ಲಿ ಜನಸ್ನೇಹಿ ನಿರ್ಧಾರಗಳಾಗುವ ಸಾಧ್ಯತೆಯಿದೆ.




