ಬೆಂಗಳೂರಿನ ಸೌಲಭ್ಯ ಬಳಸಿ, ಬೆಳೆದವರು ಈಗ ಟೀಕೆ ಮಾಡುತ್ತಿದ್ದಾರೆ: ಡಿ.ಕೆ.ಶಿವಕುಮಾರ್

ನಮ್ಮ ಮೆಟ್ರೊ (1)

ಬೆಂಗಳೂರು: ಬೆಂಗಳೂರಿನ ಸೌಲಭ್ಯಗಳನ್ನು ಬಳಸಿಕೊಂಡು ಉದ್ಯಮ ಆರಂಭಿಸಿ ದೊಡ್ಡ ಮಟ್ಟಕ್ಕೆ ಬೆಳೆದವರು ಈಗ ಬೆಂಗಳೂರಿನ ಬಗ್ಗೆ ಟೀಕೆ ಮಾಡುತ್ತಿದ್ದಾರೆ ಎಂದು ಡಿಸಿಎಂ ಡಿ.ಕೆ. ವಾಗ್ವಾದ ನಡೆಸಿದ್ದಾರೆ.

ಕೋರಮಂಗಲದ ವೀರ ಯೋಧ ಉದ್ಯಾನವನದಲ್ಲಿ ನಡೆದ ಬೆಂಗಳೂರು ನಡಿಗೆ ಕಾರ್ಯಕ್ರಮದಲ್ಲಿ ನಾಗರಿಕರೊಂದಿಗೆ ಸಂವಾದ ನಡೆಸಿದ ಡಿಸಿಎಂ, ಬೆಂಗಳೂರಿಗೆ ಬಂದು ಬೆಳೆದಿರುವವರು ಹಿಂದೆ ಹೇಗಿದ್ದೆವು, ಪ್ರಸ್ತುತ ಹೇಗಿದ್ದೇವೆ ಎಂಬುದನ್ನು ಮರೆತು ಟ್ವೀಟ್ ಮಾಡುತ್ತಿದ್ದಾರೆ. ನಾವು ನಮ್ಮ ಮೂಲವನ್ನು ಮರೆಯಬಾರದು ಎಂದು ಎಂದು ಕಿಡಿಕಾರಿದ್ದಾರೆ.

ನಾನು ಟೀಕೆ ಹಾಗೂ ವಿಮರ್ಶೆಗಳನ್ನು ಸ್ವಾಗತಿಸುತ್ತೇನೆ. ಟೀಕೆಗಳು ಇದ್ದಾಗಲೇ ಪ್ರಜಾಪ್ರಭುತ್ವಕ್ಕೆ ಹೆಚ್ಚು ಮೌಲ್ಯ ಇರುತ್ತದೆ. ಆದರೆ ಕೆಲವರು ವಿಕೋಪಕ್ಕೆ ಹೋಗಿ ಟೀಕೆ ಮಾಡುತ್ತಿದ್ದಾರೆ. ಅಂತಹವರ ಟೀಕೆ ಬಗ್ಗೆ ನಾನು ತಲೆ ಕೆಡಿಸಿಕೊಳ್ಳುವುದಿಲ್ಲ ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಡಿಸಿಎಂ ಅವರು ಬೆಂಗಳೂರಿನ ಅಭಿವೃದ್ಧಿಗಾಗಿ ಮಹತ್ವದ ಯೋಜನೆಗಳನ್ನು ಬಹಿರಂಗಪಡಿಸಿದ ಡಿಸಿಎಂ

ಪಾಲಿಕೆ ಆಯುಕ್ತರ ವೆಚ್ಚ ಮಿತಿಯನ್ನು 1ರಿಂದ 3 ಕೋಟಿಗೆ, ಸ್ಥಾಯಿ ಸಮಿತಿ ವೆಚ್ಚ ಮಿತಿಯನ್ನು 3ರಿಂದ 5 ಕೋಟಿಗೆ, ಪಾಲಿಕೆ ಮೇಯರ್ ವೆಚ್ಚ ಮಿತಿಯನ್ನು 5ರಿಂದ 10 ಕೋಟಿಗೆ ಏರಿಸಲಾಗಿದೆ. ಇದರಿಂದ ಪಾಲಿಕೆಗಳಿಗೆ ಆರ್ಥಿಕ ಉತ್ತೇಜನ ನೀಡಲಾಗಿದೆ ಎಂದು ಡಿಕೆ ಶಿವಕುಮಾರ್‌ ತಿಳಿಸಿದ್ದಾರೆ.

ನಾಗರಿಕರು ಸರ್ಕಾರದ ಕೆಲಸಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ. ಜನರು ಸರ್ಕಾರದೊಂದಿಗೆ ಕೈ ಜೋಡಿಸಿದರೆ ಮಾತ್ರ ಯಾವುದೇ ಕೆಲಸವನ್ನು ಸರ್ಕಾರ ಪರಿಣಾಮಕಾರಿಯಾಗಿ ಮಾಡಲು ಸಾಧ್ಯ. ಬೆಂಗಳೂರನ್ನು ನಾನು ಮಾತ್ರ ಬದಲಾಯಿಸಲು ಆಗುವುದಿಲ್ಲ ಎಂದು ಎಂದು ಡಿಸಿಎಂ ಮನವಿ ಮಾಡಿದ್ದಾರೆ.

 ನಗರದ ತಾಂತ್ರಿಕ ಸುಧಾರಣೆ

ಕಾರ್ಯಕ್ರಮದ ಅವಧಿಯಲ್ಲಿ ಸುಮಾರು 180 ನಾಗರಿಕರು ತಮ್ಮ ಸಮಸ್ಯೆಗಳನ್ನು ರಿಜಿಸ್ಟರ್ ಮಾಡಿದ್ದಾರೆ ಎಂದು ಡಿಸಿಎಂ ಅವರು ತಿಳಿಸಿದರು.

Exit mobile version