• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, September 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ತಮಿಳುನಾಡಿನಲ್ಲಿ ಅಚ್ಚರಿ ಫಲಿತಾಂಶ, ಹೊಸ ಯುಗ ಪ್ರಾರಂಭ: ಡಿ.ಕೆ. ಶಿವಕುಮಾರ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 4, 2026 - 4:02 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 05 04T160139.902

ಬೆಂಗಳೂರು, 04: ತಮಿಳುನಾಡಿನದ್ದು ಅಚ್ಚರಿಯ ಫಲಿತಾಂಶ. ಅಲ್ಲಿ ಹೊಸ ಯುಗ ಪ್ರಾರಂಭವಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು.

ರಾಜ್ಯದ ಉಪಚುನಾವಣೆ, ಪಂಚ ರಾಜ್ಯಗಳ ಚುನಾವಣಾ ಫಲಿತಾಂಶದ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಡಿ.ಕೆ ಶಿವಕುಮಾರ್‌ ಅವರು, “ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳು ನಮ್ಮ ಕೈ ಹಿಡಿದಿವೆ. ಜನರ ಕಷ್ಟಕ್ಕೆ ನಮ್ಮ ಸರ್ಕಾರ ಸ್ಪಂದಿಸಿದೆ. ಹೀಗಾಗಿ ಕರ್ನಾಟಕ ಉಪಚುನಾವಣೆಗಳಲ್ಲಿ ಉತ್ತಮ ಫಲಿತಾಂಶ ಬಂದಿದೆ. ಬೇರೆ ರಾಜ್ಯಗಳ ಪೈಕಿ ಕೇರಳದಲ್ಲಿ ಅಧಿಕಾರಕ್ಕೆ ಬರುತ್ತೇವೆ ಎನ್ನುವ ವಿಶ್ವಾಸವಿತ್ತು” ಎಂದು ಹೇಳಿದರು.

RelatedPosts

ಸೆ.26ರಿಂದ ಸಕ್ರೆಬೈಲು ಆನೆ ಬಿಡಾರ ಪ್ರವಾಸಿಗರಿಗೆ ಮುಕ್ತ

ಜ್ಞಾನೇಶ್ ಕುಮಾರ್ ರಾಜೀನಾಮೆಗೆ CJP 48 ಗಂಟೆ ಗಡುವು: ವಿಫಲವಾದರೆ ಹೋರಾಟದ ಎಚ್ಚರಿಕೆ

ಜನಸಾಮಾನ್ಯರಿಗೆ ಸಿಹಿಸುದ್ದಿ: ಅಡುಗೆ ಎಣ್ಣೆ ಮೇಲಿನ ಆಮದು ಸುಂಕ ಕಡಿತ

ಬರದ ನಡುವೆ ರೈತರಿಗೆ ಗುಡ್‌ನ್ಯೂಸ್‌: ರಾಜ್ಯದ 40 ಲಕ್ಷ ರೈತರ ಖಾತೆಗೆ ಬರಲಿದೆ ಹಣ

ADVERTISEMENT
ADVERTISEMENT

ದಾವಣಗೆರೆ ದಕ್ಷಿಣದಲ್ಲಿ ಗೆಲುವಿನ ಅಂತರ 25-30 ಸಾವಿರಕ್ಕಿಂತ ಕಡಿಮೆ ಆಗಿರುವ ಬಗ್ಗೆ ಕೇಳಿದಾಗ, “ಇಷ್ಟೆಲ್ಲಾ ಗೊಂದಲ ಆದಮೇಲೆ 25-30 ಸಾವಿರ ಅಂತರದ ಗೆಲುವು ಸಿಗುವುದಿಲ್ಲ ಎಂಬುದು ಗೊತ್ತಿತ್ತು. ಆದರೆ ಆರಾಮವಾಗಿ ಗೆಲ್ಲುತೇವೆ ಎಂದು ಗೊತ್ತಿತ್ತು. ಎಸ್ ಡಿಪಿಐನಿಂದ ಅಪಾಯವಾಗಿದೆ” ಎಂದರು.

ಎಸ್ ಡಿಪಿಐ ಮತಗಳಿಕೆಯ ಬಗ್ಗೆ ಕೇಳಿದಾಗ, “ಅದರ ಬಗ್ಗೆ ಮುಖ್ಯಮಂತ್ರಿಗಳು ಈಗಾಗಲೇ ಮಾತನಾಡಿದ್ದಾರೆ. ನಾನೇನು ಮಾತನಾಡಲು ಹೋಗುವುದಿಲ್ಲ. ಎಸ್ ಡಿಪಿಐ ಅನ್ನು ಹಗುರವಾಗಿ ನಾವು ಪರಿಗಣಿಸಿರಲಿಲ್ಲ. ಅದೂ ಸಹ ರಾಜಕೀಯ ಪಕ್ಷ. ಅವರು ಅಲ್ಪಸಂಖ್ಯಾತರ ಮತ ತೆಗೆದುಕೊಂಡರು” ಎಂದರು.

ಚುನಾವಣೆ ಫಲಿತಾಂಶವು ರಾಜ್ಯದಲ್ಲಿ ಏನಾದರೂ ಬದಲಾವಣೆ ತರಲಿದೆಯೇ ಎಂದು ಕೇಳಿದಾಗ, “ನಮ್ಮ ರಾಜ್ಯಕ್ಕೆ ಏನೂ ಆಗುವುದಿಲ್ಲ. ಒಂದಷ್ಟು ಜನಕ್ಕೆ ಸಂತೋಷ, ಒಂದಷ್ಟು ಜನಕ್ಕೆ ಬೇಜಾರು ಆಗಬಹುದು. ಡಬಲ್ ಎಂಜಿನ್ ಸರ್ಕಾರ ಇದ್ದಾಗಲೇ ಅವರಿಗೆ ಏನೂ ಮಾಡಲಿಲ್ಲ” ಎಂದು ಹೇಳಿದರು.

ಕೇರಳದಲ್ಲಿ ಯುಡಿಎಫ್ ಮೈತ್ರಿಯ ಗೆಲುವಿನ ಬಗ್ಗೆ ಕೇಳಿದಾಗ, “ಅಲ್ಲಿನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ನಾವು ಗೆದ್ದಿದ್ದೆವು. ಎಲ್ ಡಿಎಫ್ 10 ವರ್ಷಗಳ ಕಾಲ ಆಡಳಿತ ನಡೆಸಿದೆ. ಅದಕ್ಕೆ ಜನ ಬದಲಾವಣೆ ಬೇಕು ಎಂದು ಫಲಿತಾಂಶ ನೀಡಿದ್ದಾರೆ. ಪ್ರಚಾರಕ್ಕೂ ಹೋದಾಗಲೂ ಜನ ನಮ್ಮ ಬಗ್ಗೆ ವಿಶ್ವಾಸ ವ್ಯಕ್ತಪಡಿಸುತ್ತಿದ್ದರು” ಎಂದು ಹೇಳಿದರು.

ತಮಿಳುನಾಡಿನ ಫಲಿತಾಂಶ ಅಚ್ಚರಿ ತಂದಿದೆ

ತಮಿಳುನಾಡಿನ ಫಲಿತಾಂಶದ ಬಗ್ಗೆ ಕೇಳಿದಾಗ, “ತಮಿಳುನಾಡಿನದ್ದು ಅಚ್ಚರಿಯ ಫಲಿತಾಂಶ. ಅಲ್ಲಿ ಹೊಸ ಯುಗ ಪ್ರಾರಂಭವಾಗಿದೆ. ಜನರ ನಾಡಿಮಿಡಿತವನ್ನು ನಾವು ಗ್ರಹಿಸಲು ಆಗಲಿಲ್ಲ. ಸ್ಥಳೀಯ ನಾಯಕರು ಈ ಬಗ್ಗೆ ಹೇಳಿದ್ದರು. 40 ವರ್ಷಗಳ ರಾಜಕೀಯದಲ್ಲಿ ಸಂಬಂಧ, ನೆಂಟಸ್ತನ ಬಿಡಲು ಆಗುತ್ತದೆಯೇ” ಎಂದರು.

ಸ್ಟಾಲಿನ್ ಅವರ ಜೊತೆ ರಾಹುಲ್ ಗಾಂಧಿ ಅವರು ಎಲ್ಲಿಯೂ ಕಾಣಿಸಿಕೊಳ್ಳಲಿಲ್ಲ ಎನ್ನುವ ಬಗ್ಗೆ ಕೇಳಿದಾಗ, “ಆ ಬಗ್ಗೆ ಮಾತನಾಡಲು ನಾನು ಹೋಗುವುದಿಲ್ಲ. ಹೈಕಮಾಂಡ್ ತೀರ್ಮಾನ ಮಾಡಿದಂತೆ ನಾವೆಲ್ಲರೂ ಅಲ್ಲಿಗೆ ಹೋಗಿದ್ದೇವಲ್ಲ” ಎಂದರು.

ಸೆಲೆಬ್ರಿಟಿ ಅನ್ನುವ ಕಾರಣಕ್ಕೆ ಜನ ಮತ ಹಾಕಿದ್ದಾರೆಯೇ ಎಂದು ಕೇಳಿದಾಗ, “ಶೇ 30-40 ರಷ್ಟು ಮತ ಹೋಗಬಹುದು ಎಂದು ಕೊಂಡಿದ್ದೆವು. ಆದರೆ ಅದಕ್ಕೂ ಹೆಚ್ಚು ಮತ ಅವರಿಗೆ ಹೋಗಿದೆ” ಎಂದರು.

ಅಸ್ಸಾಂ ರಾಜ್ಯದಲ್ಲಿ ನಿರೀಕ್ಷಿತ ಫಲಿತಾಂಶ ಬಾರದಿರುವ ಬಗ್ಗೆ ಕೇಳಿದಾಗ, “ನಾವು 50- 60 ಸ್ಥಾನ ಬರುತ್ತೇವೆ ಎಂದು ಕೊಂಡಿದ್ದೆವು. ಅಲ್ಲಿನ ಸ್ಥಳೀಯ ನಾಯಕರೂ 50 ಸ್ಥಾನಗಳನ್ನು ಮುಟ್ಟುತ್ತೇವೆ ಎಂದು ಹೇಳಿದ್ದರು” ಎಂದರು.

ಸೋಲಿಗೆ ಕಾರಣ ಏನಿರಬಹುದು ಎಂದು ಕೇಳಿದಾಗ, “ಕ್ಷೇತ್ರ ಮರುವಿಂಗಡಣೆ ಮಾಡುವಾಗ ಅಲ್ಪಸಂಖ್ಯಾತರು ಒಂದೇ ಕಡೆ ಬರುವಂತೆ ಮಾಡಿದ್ದಾರೆ. ಉಪಾಯವಾಗಿಯೇ ಇದನ್ನು ಮಾಡಲಾಗಿದೆ” ಎಂದರು.

ಪಶ್ಚಿಮ ಬಂಗಾಳದ ಬಗ್ಗೆ ಕೇಳಿದಾಗ, “ಅಲ್ಲಿ ವ್ಯವಸ್ಥಿತವಾಗಿ ಅಧಿಕಾರ ದುರುಪಯೋಗವಾಗಿದೆ. ಎಲೆಕ್ಷನ್ ಕಮಿಷನ್ ಅನ್ನು ಎಷ್ಟು ದುರುಪಯೋಗ ಪಡಿಸಿಕೊಳ್ಳಬೇಕೋ ಅಷ್ಟು ದುರುಪಯೋಗ ಮಾಡಿಕೊಂಡಿದ್ದಾರೆ. ಈ ಹಿಂದೆ ಬಹಳ ಪ್ರಯತ್ನ ಮಾಡಿದರು. ಈಗ ಎರಡು ಲಕ್ಷಕ್ಕೂ ಹೆಚ್ಚು ಮತಗಳನ್ನು ಅಳಿಸಿ ಹಾಕಿದ ಕಾರಣಕ್ಕೆ ಬದಲಾವಣೆಯಾಗಿದೆ” ಎಂದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (45)

ಸೆ.26ರಿಂದ ಸಕ್ರೆಬೈಲು ಆನೆ ಬಿಡಾರ ಪ್ರವಾಸಿಗರಿಗೆ ಮುಕ್ತ

by ಕವಿತಾ
September 25, 2026 - 11:47 am
0

Untitled design (44)

ಸಿಕ್ಕಿಂನಲ್ಲಿ ಭಾರಿ ಮಳೆಗೆ ಭೂಕುಸಿತ; ನಾಲ್ವರು ಸಾ*ವು

by ಕವಿತಾ
September 25, 2026 - 11:15 am
0

Untitled design (42)

ಭಾರತೀಯ ಮಧುಮೇಹಿಗಳಲ್ಲಿ ಹೊಟ್ಟೆ ಬೊಜ್ಜು, ಪ್ರೋಟೀನ್ ಕೊರತೆಯೇ ದೊಡ್ಡ ಸಮಸ್ಯೆ: ಸಂಶೋಧನೆಯಲ್ಲಿ ಬಹಿರಂಗ!

by ಕವಿತಾ
September 25, 2026 - 11:00 am
0

Untitled design (39)

ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಚಿನ್ನದ ಬೇಟೆ; ಶೂಟರ್‌ಗಳ ಭರ್ಜರಿ ಪ್ರದರ್ಶನ

by ಕವಿತಾ
September 25, 2026 - 10:41 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 24T182659.844
    ಜ್ಞಾನೇಶ್ ಕುಮಾರ್ ರಾಜೀನಾಮೆಗೆ CJP 48 ಗಂಟೆ ಗಡುವು: ವಿಫಲವಾದರೆ ಹೋರಾಟದ ಎಚ್ಚರಿಕೆ
    September 24, 2026 | 0
  • ಜನಸಾಮಾನ್ಯರಿಗೆ ಸಿಹಿಸುದ್ದಿ
    ಜನಸಾಮಾನ್ಯರಿಗೆ ಸಿಹಿಸುದ್ದಿ: ಅಡುಗೆ ಎಣ್ಣೆ ಮೇಲಿನ ಆಮದು ಸುಂಕ ಕಡಿತ
    September 24, 2026 | 0
  • Untitled design 2026 09 24T151805.605
    ಓಮನ್ ಕರಾವಳಿಯಲ್ಲಿ ಹಡಗಿನ ಮೇಲೆ ದಾಳಿ: ಭಾರತೀಯ ವ್ಯಕ್ತಿ ಸಾ*ವು, 19 ಮಂದಿ ರಕ್ಷಣೆ
    September 24, 2026 | 0
  • Untitled design 2026 09 24T134901.525
    ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ: 12 ದಿನ ಭಕ್ತರಿಗೆ ದರ್ಶನ ಭಾಗ್ಯ
    September 24, 2026 | 0
  • Untitled design 2026 09 24T133228.563
    ಬರಪೀಡಿತ ಪಟ್ಟಿಗೆ ಇಂಡಿ ಸೇರಿದಂತೆ 29 ತಾಲೂಕುಗಳ ಸೇರ್ಪಡೆ
    September 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version