• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, October 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಮತದಾರರ ಪಟ್ಟಿಯಿಂದ ಅಳಿಸುವ ಷಡ್ಯಂತ್ರ ಮಾಡಿದವರ ವಿರುದ್ಧ ಪ್ರಕರಣ ದಾಖಲಿಸಬೇಕು: ಡಿಕೆಶಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
October 1, 2026 - 5:17 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Your paragraph text 2026 10 01T171602.410

ಬೆಂಗಳೂರು: “ಪೂರ್ವಮುದ್ರಿತ ಮತದಾರರ ವಿವರಗಳನ್ನು ಒಳಗೊಂಡ ಫಾರಂ -7 ಮೂಲಕ ರಾಜ್ಯದ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ ಅರ್ಹ ಮತದಾರರನ್ನು ಮತದಾರರ ಪಟ್ಟಿಯಿಂದ ಹೊರಗಿಡುವ (ಡಿಲೀಟ್) ಷ್ಯಡ್ಯಂತ್ರ ಮಾಡಿರುವವರ ವಿರುದ್ಧ ಚುನಾವಣಾ ಆಯೋಗ ಪ್ರಕರಣ ದಾಖಲಿಸಬೇಕು” ಎಂದು ಸಿಎಂ ಡಿ ಕೆ ಶಿವಕುಮಾರ್ ಆಗ್ರಹಿಸಿದರು.

ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಶಿವಕುಮಾರ್ ಅವರು ಮಾಧ್ಯಮಗೋಷ್ಠಿ ನಡೆಸಿ ಗುರುವಾರ ಮಾತನಾಡಿದರು. “ಮತದಾರರನ್ನು ಮತದಾರರ ಪಟ್ಟಿಯಿಂದ ತೆಗೆದು ಹಾಕಲು ಬಿಜೆಪಿ ಹಾಗೂ ಜನತಾದಳ ಕ್ರಿಮಿನಲ್ ಸಂಚು ರೂಪಿಸಿ ವ್ಯಾಪಕ ಅಕ್ರಮದಲ್ಲಿ ತೊಡಗಿರುವುದು ಬಯಲಿಗೆ ಬಂದಿದ್ದು, ಇದರ ವಿರುದ್ಧ ಸರ್ಕಾರ ಕಾನೂನು ಕ್ರಮ ಸೇರಿದಂತೆ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಿದೆ” ಎಂದು ತಿಳಿಸಿದರು.

RelatedPosts

ಮೈಸೂರಿನಲ್ಲಿ ಮಳೆ ಅವಾಂತರ: ಯುವ ದಸರಾ ಕಾರ್ಯಕ್ರಮ ಅರ್ಧಕ್ಕೆ ಸ್ಥಗಿತ!

ಏಷ್ಯನ್ ಗೇಮ್ಸ್‌ನಲ್ಲಿ ಪದಕ ಗೆದ್ದ ಭಾರತೀಯ ಕ್ರೀಡಾಪಟುಗಳಿಗೆ ಮೋದಿ ಸನ್ಮಾನ

ಬೆಂಗಳೂರಿನಲ್ಲಿ ವರುಣನ ಆರ್ಭಟ; ಹಲವೆಡೆ ಧಾರಾಕಾರ ಮಳೆ, ಜನಜೀವನ ಅಸ್ತವ್ಯಸ್ತ!

ಶ್ರೀರಂಗಪಟ್ಟಣ ದಸರಾ ಮಹೋತ್ಸವಕ್ಕೆ ಕ್ರೇಜಿಸ್ಟಾರ್ ರವಿಚಂದ್ರನ್ ಚಾಲನೆ

ADVERTISEMENT
ADVERTISEMENT

“ರಾಜ್ಯದ ಹಲವು ಜಿಲ್ಲೆಗಳ ಹಲವು ವಿಧಾನಸಭಾ ಕ್ಷೇತ್ರಗಳಲ್ಲಿ ಪೂರ್ವ ಮುದ್ರಿತ ಮಾಹಿತಿಗಳನ್ನು ಒಳಗೊಂಡ ಫಾರಂ 7 ಅನ್ನು ಬಿಜೆಪಿ ಕಾರ್ಯಕರ್ತರು ಬಿಎಲ್ಒಗಳಿಗೆ ಸಲ್ಲಿಸಿ, ಮತದಾರರ ಹೆಸರನ್ನು ಪಟ್ಟಿಯಿಂದ ತೆಗೆದು ಹಾಕಲು ಪ್ರಯತ್ನಿಸುತ್ತಿರುವುದು ಪತ್ತೆಯಾಗಿದೆ. ಇದು ಕ್ರಿಮಿನಲ್ ಸಂಚಾಗಿದ್ದು, ಕೋಮು ದ್ವೇಷ ಮೂಡಿಸಿ, ಕೋಮು ಸಾಮರಸ್ಯ ಕದಡಲು ನಡೆಸಿದ ವ್ಯವಸ್ಥಿತ ಷಡ್ಯಂತ್ರವಾಗಿದೆ” ಎಂದು ಕಿಡಿಕಾರಿದರು.

ಸಚಿವರ ಕ್ಷೇತ್ರಗಳಲ್ಲೇ ಸಾವಿರಾರು ಮತಗಳ ಡಿಲೀಟ್ ಗೆ ಪಿತೂರಿ

“ಬಬಲೇಶ್ವರದಲ್ಲಿ 1634 ಸಾವಿರಕ್ಕೂ ಅಧಿಕ ಇಂತಹ ಅರ್ಜಿಗಳನ್ನು ಸಲ್ಲಿಸಲಾಗಿದೆ. ಬಿಜಾಪುರದಲ್ಲಿ 14 ಸಾವಿರ ಅರ್ಜಿಗಳನ್ನು ಸಲ್ಲಿಸಲಾಗಿತ್ತು. ಭಾಲ್ಕಿಯಲ್ಲಿ 3244 ಇಂತಹ ಅರ್ಜಿಗಳನ್ನು ಬಿಜೆಪಿ ಕಾರ್ಯಕರ್ತರು ನೀಡಿದ್ದಾರೆ. ಭಾಲ್ಕಿ, ನರಸಿಂಹರಾಜಪುರ, ಬೆಳಗಾವಿ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಅರ್ಹ ಮತದಾರರನ್ನು ಮತದಾರರ ಪಟ್ಟಿಯಿಂದ ತೆಗೆದು ಹಾಕಲು ಫಾರಂ 7 ನೀಡಿರುವುದು ಕಂಡು ಬಂದಿದೆ. ಮತ್ತೆ ಕೆಲವು ಕ್ಷೇತ್ರಗಳಲ್ಲಿ 5-10 ಸಾವಿರ ಮತಗಳನ್ನು ಡಿಲೀಟ್ ಮಾಡುವ ಷಡ್ಯಂತ್ರ ನಡೆದಿದೆ. ಪ್ರಕಾಶ್ ರಾಜ್ ಅವರ ನೇತೃತ್ವದ ಸಿವಿಲ್ ಸೊಸೈಟಿ ಸದಸ್ಯರು ಮತಗಟ್ಟೆಗಳಿಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದಾರೆ” ಎಂದು ಮಾಹಿತಿ ನೀಡಿದರು.

“ಬಿಜೆಪಿಯ ಅಧಿಕೃತ ಕಾರ್ಯಕರ್ತರು ತಮ್ಮ ಹೆಸರಿನಲ್ಲಿ ನೂರಾರು ಇಂತಹ ಫಾರಂ 7 ಅರ್ಜಿಗಳನ್ನು ಸಲ್ಲಿಸಿರುವುದನ್ನು ನಾವು ಪತ್ತೆ ಹಚ್ಚಿದ್ದೇವೆ. ಕೆಲವು ಕಡೆ ಬಿಜೆಪಿ ಕಾರ್ಯಕರ್ತರು ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದಾರೆ. ಬಿಜೆಪಿ ಹಾಗೂ ಜನತಾದಳದ ಷಡ್ಯಂತ್ರ ಇದೀಗ ಬಯಲಾಗಿದೆ. ಫಾರಂ 7 ರಲ್ಲಿ ಮಾಹಿತಿಯನ್ನು ಮುದ್ರಿಸಿ ಬಿಜೆಪಿ ಕಾರ್ಯಕರ್ತರು ಈ ಕಾರ್ಯದಲ್ಲಿ ತೊಡಗಿದ್ದಾರೆ. ಕೆಲವು ಕಡೆ ಈ ಅರ್ಜಿ ನೀಡಿದ್ದ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದಾರೆ. ಎಲ್ಲಿ ಈ ಫಾರಂ ಮುದ್ರಿತವಾಗುತ್ತಿದೆ? ಇದರ ಹಿಂದೆ ಯಾವ ಪಕ್ಷದ ನಾಯಕರು ಇದ್ದಾರೆ? ಚುನಾವಣಾ ಆಯೋಗ ಇದರ ಹಿಂದೆ ಇರುವ ಪ್ರತಿಯೊಬ್ಬರನ್ನೂ ಪತ್ತೆ ಹಚ್ಚಿ ಕಠಿಣ ಕಾನೂನು ಕ್ರಮಗಳನ್ನು ಜರುಗಿಸಬೇಕು” ಎಂದು ಒತ್ತಾಯಿಸಿದರು.

ಕರ್ನಾಟಕದಲ್ಲಿ ಸುಮಾರು 50 ಲಕ್ಷ ಮತದಾರರನ್ನು ಮತಪಟ್ಟಿಯಿಂದ ಡಿಲೀಟ್ ಮಾಡುವ ಷಡ್ಯಂತ್ರ

“ಕರ್ನಾಟಕ ರಾಜ್ಯದಲ್ಲಿ ಈಗಾಗಲೇ ಎಸ್ಐಆರ್ ಪ್ರಕ್ರಿಯೆಯಲ್ಲಿ 1.07 ಕೋಟಿ ಮತದಾರರ ಹೆಸರುಗಳು ಕೈಬಿಡಲಾಗಿದ್ದು, 45 ಲಕ್ಷ ಮತದಾರರಿಗೆ ನೋಟೀಸ್ ನೀಡಿದ್ದಾರೆ. ಇಷ್ಟಾದ ಬಳಿಕವು ಈಗ ಬಿಜೆಪಿ ಕಾರ್ಯಕರ್ತರು ಸುಮಾರು 50 ಲಕ್ಷ ಮತದಾರರನ್ನು ಮತಪಟ್ಟಿಯಿಂದ ಡಿಲೀಟ್ ಮಾಡಿಸಲು ಷಡ್ಯಂತ್ರ ನಡೆದಿದೆ” ಎಂದು ವಿವರಿಸಿದರು.

“ರಾಜ್ಯ ಚುನಾವಣಾ ಆಯೋಗ, ತಕ್ಷಣ ಈ ಎಲ್ಲಾ ಪ್ರಕರಣಗಳ ಬಗ್ಗೆ ಎಫ್ಐಆರ್ ದಾಖಲಿಸಿ, ಈ ಎಲ್ಲಾ ಕಡೆಗಳಲ್ಲಿ ಸಮಗ್ರ ತನಿಖೆ ಆರಂಭಿಸಿ, ಯಾರು ಇದರಲ್ಲಿ ಒಳಗೊಂಡಿದ್ದಾರೆ ಅಂತವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು. ಬಿಜೆಪಿ ಹಾಗೂ ಜನತಾದಳ ನಾಯಕರ ಈ ಕ್ರಿಮಿನಲ್ ಷಡ್ಯಂತ್ರದ ಬಗ್ಗೆ ಸಮಗ್ರ ತನಿಖೆ ನಡೆಸಬೇಕು” ಎಂದು ಅವರು ಒತ್ತಾಯಿಸಿದರು.

“ರಾಜ್ಯದ ಪ್ರತಿಯೊಬ್ಬ ನಾಗರಿಕನ ಮತದಾನದ ಹಕ್ಕನ್ನು ರಕ್ಷಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ಮತದಾರರನ್ನು ಮತದಾರರ ಪಟ್ಟಿಯಿಂದ ತೆಗೆದು ಹಾಕಲು ನಡೆಯುತ್ತಿರುವ ಈ ಕ್ರಿಮಿನಲ್ ಷಡ್ಯಂತ್ರದ ಬಗ್ಗೆ ಪೊಲೀಸರು ಮೊಕದ್ದಮೆ ದಾಖಲಿಸಿ ತನಿಖೆ ನಡೆಸಲಾಗುವುದು” ಎಂದರು.

“ರಾಜ್ಯ ಚುನಾವಣಾ ಆಯೋಗ ತಕ್ಷಣ ಇದರ ಬಗ್ಗೆ ತನಿಖೆಗೆ ಆದೇಶಿಸಿ ಕ್ರಮ ಜರುಗಿಸಲು ಒತ್ತಾಯಿಸಿ, ರಾಜ್ಯ ಚುನಾವಣಾ ಆಯೋಗದ ಕಚೇರಿಗೆ ಭೇಟಿ ನೀಡಿ ಮನವಿ ಸಲ್ಲಿಸಲಾಗುವುದು. ಆಯೋಗ ಈ ಕುರಿತು ಸೂಕ್ತ ಕ್ರಮ ಜರುಗಿಸುವ ತನಕ ಅಲ್ಲಿಯೇ ಸಂಪುಟದ ಸಚಿವರೊಂದಿಗೆ ಧರಣಿ ಕುಳಿತುಕೊಳ್ಳಲಾಗುವುದು” ಎಂದು ಎಚ್ಚರಿಕೆ ನೀಡಿದರು.

ಚುನಾವಣೆಯಲ್ಲಿ ಗೆಲ್ಲಲು ಸಾಧ್ಯವಿಲ್ಲದೆ ಎಸ್ಐಆರ್ ಮೂಲಕ ಅಕ್ರಮ

“ಚುನಾವಣೆಯಲ್ಲಿ ಗೆಲ್ಲಲು ಸಾಧ್ಯವಿಲ್ಲ ಎಂಬ ಕಾರಣಕ್ಕಾಗಿ ಬಿಜೆಪಿ ಹಾಗೂ ಜನತಾದಳ ಇಂತಹ ಕ್ರಿಮಿನಲ್ ಷಡ್ಯಂತ್ರ ನಡೆಸುತ್ತಿರುವುದು ಜಗಜ್ಜಾಹೀರಾಗಿದೆ. ಇಡೀ ದೇಶದಲ್ಲಿಯೇ ಇಂತಹ ಕ್ರಿಮಿನಲ್ ಗಳು ಇರಲು ಸಾಧ್ಯವಿಲ್ಲ. ನಾವು ಯಾವುದೇ ಕಾರಣಕ್ಕೂ ಕರ್ನಾಟಕದಲ್ಲಿ ಇಂತಹ ಕ್ರಿಮಿನಲ್ ಕೃತ್ಯಗಳು ನಡೆಯಲು ಬಿಡುವುದಿಲ್ಲ” ಎಂದು ಹೇಳಿದರು.

ಪ್ರತಿಯೊಬ್ಬರ ಮತದಾನದ ಹಕ್ಕು ರಕ್ಷಿಸಲು ಸರ್ಕಾರ ಬದ್ಧ

“ಅಲ್ಪಸಂಖ್ಯಾತರು, ಬಡವರ ಹಿತರಕ್ಷಣೆ, ಮತರಕ್ಷಣೆ ನನ್ನಿಂದ ಸಾಧ್ಯವಿಲ್ಲ ಎಂದರೆ ನಾನು ಮುಖ್ಯಮಂತ್ರಿ ಕುರ್ಚಿಯಲ್ಲಿ ಕುಳಿತುಕೊಳ್ಳಲು ಅರ್ಹನಲ್ಲ. ವಿಶೇಷ ಎಸ್ಐಆರ್ ಮಾಡಿದ ಬಳಿಕ ನಮ್ಮ ರಾಜ್ಯದಲ್ಲಿ, ಪಕ್ಷದ ಹಾಗೂ ಸರ್ಕಾರದ ವತಿಯಿಂದ ಜಾಗೃತಿ ಮೂಡಿಸುವ ಪ್ರಯತ್ನ ಮಾಡುತ್ತಿದ್ದೇವೆ. ರಾಜ್ಯದ ಮುಖ್ಯಮಂತ್ರಿಯಾಗಿ ಪ್ರತಿ ವರ್ಗ ಮತದಾರರಿಗೆ ತಮ್ಮ ಹಕ್ಕು ಉಳಿಸಿ ಕೊಡುವುದು ನನ್ನ ಜವಾಬ್ದಾರಿ. ರಾಜ್ಯದ ಜನತಗೆ ನನ್ನ ಮೇಲೆ ಹಾಗೂ ಸರ್ಕಾರದ ಮೇಲೆ ಸಂಪೂರ್ಣ ವಿಶ್ವಾಸ ಇರಿಸಿ ಈ ಸ್ಥಾನದಲ್ಲಿ ಕೂರಿಸಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಎಸ್ಐಆರ್ ದೊಡ್ಡ ವಂಚನೆ, ಹೀಗಾಗಿ ರದ್ದಾಗಬೇಕು

“ಮುಖ್ಯ ಚುನಾವಣಾಧಿಕಾರಿ ಜ್ಞಾನೇಶ್ ಕುಮಾರ್ ಅವರಿಗೆ ಮಾಹಿತಿ ಯಿಲ್ಲದೇ ಇಂತಹ ಕೃತ್ಯ ನಡೆಯಲು ಸಾಧ್ಯವಿಲ್ಲ. ಎಸ್ಐಆರ್ ದೇಶದ ಅತಿ ದೊಡ್ಡ ವಂಚನೆಯಾಗಿದ್ದು, ಎಸ್ಐಆರ್ ರದ್ದಾಗಬೇಕು” ಎಂದು ಆಗ್ರಹಿಸಿದರು.

“ಎಸ್ಐಅರ್ ಪ್ರಾರಂಭವಾದ ಬಳಿಕ ನಾವು ಸರ್ಕಾರದ ವತಿಯಿಂದ ಆಯೋಗಕ್ಕೆ ಎಲ್ಲಾ ಬೆಂಬಲ, ಸಹಕಾರ ನೀಡುತ್ತಾ ಬಂದಿದ್ದೇವೆ. 54 ಸಾವಿರ ಬಿಎಲ್ಎ 2 ಗಳನ್ನು ಪಕ್ಷದ ವತಿಯಿಂದ ನೇಮಕ ಮಾಡಿದ್ದೇವೆ. ಆಯೋಗದ ಕಾರ್ಯಕ್ಕೆ ಎಲ್ಲಾ ರೀತಿಯ ನೆರವನ್ನು ಸರ್ಕಾರ ನೀಡುತ್ತಾ ಬಂದಿದೆ. ಆದರೆ ಇದೀಗ ಅರ್ಹ ಮತದಾರರನ್ನು ಅಕ್ರಮವಾಗಿ ತೆಗೆದು ಹಾಕಲು ನಡೆಯುತ್ತಿರುವ ಕ್ರಿಮಿನಲ್ ಸಂಚು ಯಶಸ್ವಿಯಾಗಲು ನಾವು ಬಿಡುವುದಿಲ್ಲ” ಎಂದರು.

“ಎಸ್ಐಆರ್ ರದ್ದುಪಡಿಸಬೇಕು. ಪ್ರತಿಯೊಬ್ಬರಿಗೂ ಮತದಾನದ ಹಕ್ಕು ಒದಗಿಸಲು ಕ್ರಮ ಕೈಗೊಳ್ಳಬೇಕು. ಇದರಲ್ಲಿ ಶಾಮೀಲಾಗಿದ್ದಾರೆ ಅಂತಹವರನ್ನು ಬಂಧಿಸಬೇಕು. ಬಿಎಲ್ಒಗಳ ಮೇಲೆ ಒತ್ತಡ ಹೇರಿದವರನ್ನು ಪತ್ತೆಹಚ್ಚಿ, ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು” ಎಂದು ಒತ್ತಾಯಿಸಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

11 (11)

ದೀಪಾವಳಿಗೆ ರೈತರಿಗೆ ₹2,000 ಗಿಫ್ಟ್‌? ಪಿಎಂ ಕಿಸಾನ್ 24ನೇ ಕಂತಿನ ಹಣ ಯಾವಾಗ ಜಮೆ?

by ದಿಶಾ ಕೆ. ಎಸ್.
October 15, 2026 - 10:25 pm
0

11 (10)

ಮೈಸೂರಿನಲ್ಲಿ ಮಳೆ ಅವಾಂತರ: ಯುವ ದಸರಾ ಕಾರ್ಯಕ್ರಮ ಅರ್ಧಕ್ಕೆ ಸ್ಥಗಿತ!

by ದಿಶಾ ಕೆ. ಎಸ್.
October 15, 2026 - 9:41 pm
0

11 (9)

ಏಷ್ಯನ್ ಗೇಮ್ಸ್‌ನಲ್ಲಿ ಪದಕ ಗೆದ್ದ ಭಾರತೀಯ ಕ್ರೀಡಾಪಟುಗಳಿಗೆ ಮೋದಿ ಸನ್ಮಾನ

by ದಿಶಾ ಕೆ. ಎಸ್.
October 15, 2026 - 8:05 pm
0

11 (8)

ಬೆಂಗಳೂರಿನಲ್ಲಿ ವರುಣನ ಆರ್ಭಟ; ಹಲವೆಡೆ ಧಾರಾಕಾರ ಮಳೆ, ಜನಜೀವನ ಅಸ್ತವ್ಯಸ್ತ!

by ದಿಶಾ ಕೆ. ಎಸ್.
October 15, 2026 - 7:13 pm
0

ಸಂಬಂಧಿಸಿದ ಪೋಸ್ಟ್‌ಗಳು

  • 11 (10)
    ಮೈಸೂರಿನಲ್ಲಿ ಮಳೆ ಅವಾಂತರ: ಯುವ ದಸರಾ ಕಾರ್ಯಕ್ರಮ ಅರ್ಧಕ್ಕೆ ಸ್ಥಗಿತ!
    October 15, 2026 | 0
  • 11 (9)
    ಏಷ್ಯನ್ ಗೇಮ್ಸ್‌ನಲ್ಲಿ ಪದಕ ಗೆದ್ದ ಭಾರತೀಯ ಕ್ರೀಡಾಪಟುಗಳಿಗೆ ಮೋದಿ ಸನ್ಮಾನ
    October 15, 2026 | 0
  • 11 (8)
    ಬೆಂಗಳೂರಿನಲ್ಲಿ ವರುಣನ ಆರ್ಭಟ; ಹಲವೆಡೆ ಧಾರಾಕಾರ ಮಳೆ, ಜನಜೀವನ ಅಸ್ತವ್ಯಸ್ತ!
    October 15, 2026 | 0
  • 11 (4)
    ಶ್ರೀರಂಗಪಟ್ಟಣ ದಸರಾ ಮಹೋತ್ಸವಕ್ಕೆ ಕ್ರೇಜಿಸ್ಟಾರ್ ರವಿಚಂದ್ರನ್ ಚಾಲನೆ
    October 15, 2026 | 0
  • 11 (2)
    ಕರ್ನಾಟಕದ ನೂತನ ರಾಜ್ಯಪಾಲರಾಗಿ ಸುಧಾ ಯಾದವ್ ನಾಳೆ ಪ್ರಮಾಣವಚನ ಸ್ವೀಕಾರ
    October 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version