• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಅಕ್ರಮ ಬಂದೂಕು ಶಸ್ತ್ರಾಸ್ತ್ರಗಳನ್ನು ನ. 1 ರೊಳಗೆ ಸರ್ಕಾರಕ್ಕೆ ಒಪ್ಪಿಸಿ: ಸಿಎಂ ಡಿಕೆಶಿ

ಕವಿತಾ by ಕವಿತಾ
September 11, 2026 - 4:42 pm
in ಕರ್ನಾಟಕ
0 0
0
Untitled design (80)

ಬೆಂಗಳೂರು, ಸೆ.11: “ನವೆಂಬರ್ 1ನೇ ತಾರೀಕಿನೊಳಗೆ ಪರವಾನಗಿ‌ ಇಲ್ಲದ ಅಕ್ರಮ ಬಂದೂಕು ಶಸ್ತ್ರಾಸ್ತ್ರಗಳನ್ನು ಸರ್ಕಾರಕ್ಕೆ ಒಪ್ಪಿಸಬೇಕು. ಇಲ್ಲದಿದ್ದರೇ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು.

ಮಲ್ಲೇಶ್ವರಂನ ಅರಣ್ಯ ಭವನದಲ್ಲಿ ಶುಕ್ರವಾರ ನಡೆದ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆಯಲ್ಲಿ ಶಿವಕುಮಾರ್ ಅವರು ಮಾತನಾಡಿದರು.

RelatedPosts

ಸತೀಶ್ ಜಾರಕಿಹೊಳಿ ಮನೆ ಮೇಲೆ ದಾಳಿ ನಡೆಸಿದ ಬಗ್ಗೆ ಅಧಿಕೃತ ಮಾಹಿತಿ ನೀಡಿದ ED

ಬರ, ಪ್ರವಾಹ ಪರಿಹಾರ NDA ಅವಧಿಯಲ್ಲಿ ಹೆಚ್ಚಳ ಮಾಡಲಾಗಿದೆ: ಬೊಮ್ಮಾಯಿ

ಸತೀಶ್‌ ಜಾರಕಿಹೊಳಿ ಭೇಟಿ ಮಾಡಿದ ಸಚಿವ ಸಂತೋಷ್‌ ಲಾಡ್‌

ಊರಿಗೆ ಹೋಗುವವರಿಗೆ KSRTC ಗುಡ್‌ನ್ಯೂಸ್; ಹಬ್ಬಕ್ಕೆ 2,400 ವಿಶೇಷ ಬಸ್‌ಗಳ ವ್ಯವಸ್ಥೆ

ADVERTISEMENT
ADVERTISEMENT

“ಅಕ್ರಮ ಶಸ್ತ್ರಾಸ್ತ್ರಗಳನ್ನು ತಾವಾಗಿಯೇ ಒಪ್ಪಿಸಿದರೆ ಯಾವುದೇ ಪ್ರಕರಣ ದಾಖಲಿಸುವುದಿಲ್ಲ. ಹೆಚ್ಚಿನ ಅರಣ್ಯ ಇಲಾಖೆ ಸಿಬ್ಬಂದಿಗಳು ಪರವಾನಗಿ ಇಲ್ಲದೇ ಇರುವ ಬಂದೂಕುಗಳಿಂದಲೇ ಜೀವ ಕಳೆದುಕೊಂಡಿದ್ದಾರೆ. ನೀವು ನಿಮ್ಮ ಹಾಗೂ ನಿಮ್ಮ ಪ್ರಾಣಿಗಳ ರಕ್ಷಣೆಗಾಗಿ ಬಂದೂಕು ಇಟ್ಟುಕೊಳ್ಳುವುದಾದರೆ ಪರವಾನಗಿ ಪಡೆಯಿರಿ” ಎಂದು ಸಂದೇಶ ನೀಡಿದರು.

“ಈ ಹಿಂದೆ ರಾಮಮೂರ್ತಿ ಎನ್ನುವ ಹಿರಿಯ ಅಧಿಕಾರಿ ಅನೇಕರು ಅಕ್ರಮ ನಾಡ ಬಂದೂಕುಗಳನ್ನು ಹೊಂದಿರುವ ಬಗ್ಗೆ ಹೇಳಿದ್ದರು. ಆಗ ನಾನು ನನ್ನ ಕ್ಷೇತ್ರದಲ್ಲಿ 300 ಕ್ಕೂ ಹೆಚ್ಚು ಬಂದೂಕುಗಳನ್ನು ಜನರಿಂದ ಸರ್ಕಾರಕ್ಕೆ ಒಪ್ಪಿಸಿದ್ದೆ. ಇನ್ನೂ ಹೆಚ್ಚಿನ ನಾಡ ಬಂದೂಕುಗಳು ಇರುವ ಬಗ್ಗೆ ಸರ್ಕಾರಕ್ಕೆ ಮಾಹಿತಿಯಿದೆ” ಎಂದರು.

ಅರಣ್ಯ ಹಾಗೂ ಪೊಲೀಸ್ ಇಲಾಖೆ ಸಿಬ್ಬಂದಿಗಳ ಭತ್ಯೆ ಬಗ್ಗೆ ಶೀಘ್ರ ತೀರ್ಮಾನ

“ದೇಶದ ಅರಣ್ಯ ಸಂಪತ್ತನ್ನು ಕಾಪಾಡುವವರು ನೀವು.‌ ವನ್ಯಜೀವಿಗಳ ಜೊತೆ ಸಂಘರ್ಷ ಏರ್ಪಟ್ಟು ಅನೇಕ ಸಿಬ್ಬಂದಿಗಳು ಪ್ರಾಣ ತ್ಯಾಗ ಮಾಡಿದ್ದಾರೆ.‌ ಇಲಾಖೆಯ ಸಿಬ್ಬಂದಿಗಳ ಭತ್ಯೆಯ ವಿಚಾರವಾಗಿ ಸಚಿವರ ಮನವಿಯ ಬಗ್ಗೆ ಆಲೋಚಿಸಲಾಗುವುದು. ಆರ್ಥಿಕ ಇಲಾಖೆಯ ಬಳಿ ಚರ್ಚೆ ನಡೆಸಿ ಪೊಲೀಸ್ ಇಲಾಖೆಯನ್ನೂ ಒಳಗೊಂಡಂತೆ ಒಟ್ಟಾಗಿ ತೀರ್ಮಾನ ಮಾಡಲಾಗುವುದು” ಎಂದರು.

“ಅರಣ್ಯಕ್ಕೂ ನನಗೂ ಬಹಳ ಹತ್ತಿರದ ಸಂಬಂಧ. ನನ್ನ ಊರು, ಮನೆ, ಕ್ಷೇತ್ರ ಬದುಕು ಎಲ್ಲವೂ ಅರಣ್ಯಕ್ಕೆ ಹೊಂದಿಕೊಂಡೇ ಇದೆ. ಅರ್ಕಾವತಿಯಲ್ಲಿ ಮಹಶೀರ್ ಮೀನುಗಳಿದ್ದವು ನಾನೂ ಸಹ ಮೀನಿಗೆ ಗಾಳ ಹಾಕಿ ಕುಳಿತುಕೊಳ್ಳುತ್ತಿದ್ದೆ” ಎಂದರು.

“ಈ ಕಾರಣಕ್ಕೆ ನನಗೂ ಅರಣ್ಯ ಮಂತ್ರಿ ಆಗುವ ಆಸೆಯಿತ್ತು. ಎಸ್ ಎಂ ಕೃಷ್ಣ ಅವರ ಕಾಲದಲ್ಲಿ ಅವಕಾಶ ಕೇಳಿದ್ದೆ. ಆದರೆ ಅವರು ಕೃಷಿ ಸಚಿವನನ್ನಾಗಿ ಮಾಡಿದರು. ನಂತರ ಮನಸ್ಸು ಬದಲಾಯಿಸಿ ಕೃಷಿ ಇಲಾಖೆಯನ್ನು ಜಯಚಂದ್ರ ಅವರಿಗೆ ನೀಡಿ, ನನಗೆ ಸಹಕಾರ ಇಲಾಖೆ ನೀಡಿದರು. ನನಗಾಗ 38 ವರ್ಷ. ಸಚಿವ ಸಂಪುಟ ವಿಸ್ತರಣೆ ಆದಾಗಲೂ ಅರಣ್ಯ ಇಲಾಖೆ ನೀಡದೆ ನಗರಾಭಿವೃದ್ಧಿ ಇಲಾಖೆ ನೀಡಿದರು. ಇದೇ ವೇಳೆಯಲ್ಲಿ ರಾಜಕುಮಾರ್ ಅವರ ಅಪಹರಣ ಘಟನೆ ನಡೆಯಿತು” ಎಂದು ಮೆಲುಕು ಹಾಕಿದರು.

ಅರಣ್ಯ ಅಧಿಕಾರಿಗಳು ಅಭಿವೃದ್ಧಿ ಕೆಲಸಗಳ ಪರವಾಗಿ ನಿಲ್ಲಿ

“ಜನ ಸಾಮಾನ್ಯರು ಪೊಲೀಸರನ್ನು ಒಪ್ಪಿಕೊಳ್ಳುತ್ತಾರೆ.‌ ಅರಣ್ಯ ಇಲಾಖೆ ಸಿಬ್ಬಂದಿಗಳನ್ನು ಒಪ್ಪುವುದಿಲ್ಲ. ಅರಣ್ಯ ಅಂಚಿನ ಜನರೊಂದಿಗೆ ಸ್ನೇಹದ ವಾತಾವರಣ ನಿರ್ಮಿಸಿಕೊಳ್ಳಿ. ಅರಣ್ಯ ಒತ್ತುವರಿ ಇಂದು ನೆನ್ನೆಯದಲ್ಲ. ಅದನ್ನು ಕಾನೂನು ಪ್ರಕಾರ ಅದನ್ನು ಬಗೆಹರಿಸೋಣ. ಜನರ ಮೇಲೆ ಒತ್ತಡ ಹೇರಬೇಡಿ. ಅರಣ್ಯ ಇಲಾಖೆಯ ಅಧಿಕಾರಿಗಳು ಕೆಲವೊಂದು ವಿಚಾರದಲ್ಲಿ ಅತಿಯಾಗಿ ವರ್ತಿಸುತ್ತೀರಿ. ಅಭಿವೃದ್ಧಿ ಕೆಲಸಗಳಿಗೆ ಅಡ್ಡ ಬರಬಾರದು. ಕೆಲವೊಂದು ವಿನಾಯಿತಿಗಳನ್ನು ನೀಡಬೇಕು” ಎಂದರು.

“ಈ ಭೂಮಿ ನಮಗೆ ಸೇರಿದ್ದಲ್ಲ. ಆದರೆ ಭೂಮಿ ಕಾಪಾಡಬೇಕಿರುವುದು ನಮ್ಮ ಕರ್ತವ್ಯ. ಎಷ್ಟೇ ದೊಡ್ಡವರಾದರೂ ಕೊನೆಗೆ ಭೂಮಿಗೆ ಸೇರುತ್ತೇವೆ. ಚಿತೆಯಲ್ಲಿ ಸುಡುವ ಮರವೂ ಭೂಮಿ ಮೇಲೆಯೇ ಬೆಳೆಯುತ್ತದೆ. ದಕ್ಷ ಹಾಗೂ ಪ್ರಾಮಾಣಿಕ ಅಧಿಕಾರಿಗಳು ಈ ಇಲಾಖೆಯಲ್ಲಿದ್ದಾರೆ. ಇವರಿಂದ ಅನೇಕ ಕಡೆ ಕಾಡು ಸುರಕ್ಷಿತವಾಗಿದೆ” ಎಂದರು.

ತೇಗದ ಸಿರಿ ಯೋಜನೆ ಯಶಸ್ಸಿಗೆ ಶ್ರಮಿಸಿ

“ತೇಗದ ಸಿರಿ ಯೋಜನೆ ಯಶಸ್ಸಿಗೆ ಅರಣ್ಯ ಅಧಿಕಾರಿಗಳು ಕೆಲಸ ಮಾಡಬೇಕು. ರೈತರಿಗೆ ಇದರಿಂದ ಹೆಚ್ಚಿನ ಲಾಭವಾಗುತ್ತದೆ. ಅರಣ್ಯ ಇಲಾಖೆಯ ಆದಾಯವನ್ನು ಹೆಚ್ಚು ಮಾಡಿಕೊಳ್ಳುವ ಕಡೆ ಎಲ್ಲರೂ ಗಮನ ಹರಿಸಬೇಕು. ಕೆ ಎಚ್ ರಂಗನಾಥ್ ಅವರು ಇಲಾಖೆ ಸಚಿವರಾಗಿದ್ದಾಗ ಶ್ರೀಗಂಧವನ್ನು ಖಾಸಗಿ ಜಮೀನಿನಲ್ಲೂ ಬೆಳೆಯಲು ಅವಕಾಶ ನೀಡಿದರು” ಎಂದು ಹೇಳಿದರು.

“ಕಸ್ತೂರಿ ರಂಗನ್ ವರದಿಯನ್ನು ಮೂರು- ನಾಲ್ಕು ಸಲ ವಾಪಸ್ ಕಳುಹಿಸಿದೆವು. ನಮಗೊಂದು ನ್ಯಾಯ, ಕೇರಳಕ್ಕೆ ‌ಒಂದು ನ್ಯಾಯ ನೀಡಲಾಗಿದೆ. ಇದರ ಬಗ್ಗೆ ಚರ್ಚೆ ನಡೆಸಲು ವಿಶೇಷ ಅಧಿವೇಶನ ಕರೆಯಲಾಗುತ್ತದೆ” ಎಂದರು.

“ಕಬಿನಿಗೆ ತೆರಳಿದಾಗ ಅಲ್ಲಿನ ವನ್ಯಜೀವಿ ಸಂಪತ್ತು ನೋಡಿ ಬೆರಗಾಗಿ ಹೋದೆ. ಕೆಲವೇ ಹೊತ್ತಿನಲ್ಲಿ 250 ಕ್ಕೂ ಹೆಚ್ಚು ಆನೆಗಳನ್ನು ನೋಡಿದೆ. ಅಷ್ಟು ಸಂಪತ್ಬರಿತವಾಗಿ ನಮ್ಮ ನಾಡಿನ ವನ್ಯಜೀವಿ ಸಂಪತ್ತಿದೆ. ಇಂದಿರಾಗಾಂಧಿ ಅವರು ಸಹ ಅರಣ್ಯ ಸಂರಕ್ಷಣೆಗೆ ಹೆಚ್ಚಿನ ಒತ್ತು ನೀಡಿದ್ದರು. ನಮ್ಮ ಊರಿನ ಬಳಿಯ ಶಿವಾಲ್ದಪ್ಪನ ಬೆಟ್ಟದಲ್ಲಿ ಬಿದಿರು ಹೆಚ್ಚು ಬೆಳೆಯುತ್ತಿದ್ದರು. ಅದನ್ನು ಬಳಸಿ ಜನ ಬಿದಿರು ಬುಟ್ಟಿಗಳನ್ನು ಹೆಣೆಯುತ್ತಿದ್ದರು. ಮನುಷ್ಯನಿಗೂ ಹಸಿರಿಗೂ ವಿಶೇಷ ಸಂಬಂಧವಿದೆ” ಎಂದರು.

“ಅರಣ್ಯ ಇಲಾಖೆಯ ಉನ್ನತ ಅಧಿಕಾರಿ ಕಚೇರಿಯಲ್ಲಿದ್ದ ಇದ್ದಂತಹ ದಂತವನ್ನೇ ಈ ಹಿಂದೆ ಕದ್ದಿದ್ದರು. ನಾನು ವಾಸವಿದ್ದ ಮನೆಯ ಬಳಿಯಿದ್ದ ಹಾಗೂ ಮಂತ್ರಿಗಳ ಮನೆಗಳ ಅಂಗಳದಲ್ಲಿದ್ದ ಗಂಧದ ಮರಗಳನ್ನೇ ಕದಿಯಲು ಬಂದಿದ್ದಂತಹ ಘಟನೆಗಳನ್ನು ನಾನು ನೋಡಿದ್ದೇನೆ” ಎಂದರು.

“ನಗರದಲ್ಲಿರುವ ಅರಣ್ಯ ಇಲಾಖೆಗೆ ಸಂಬಂಧಿಸಿದ ಜಾಗಗಳಲ್ಲಿ ಟ್ರೀ ಪಾರ್ಕ್ ಗಳನ್ನು ನಿರ್ಮಾಣ‌ ಮಾಡಿ ನಗರದ ಶ್ವಾಸಕೋಶವನ್ನು ಹಿಗ್ಗಿಸುವ ಕೆಲಸ ಮಾಡಲಾಗುವುದು. ಶಾಲಾ ಮಕ್ಕಳಿಂದ ಗಿಡ ನೆಡುವ ಕೆಲಸ ಮಾಡಿಸಲಾಗಿತ್ತು.‌ ಬೆಂಗಳೂರಿನಲ್ಲಿ ಈ ಕಾರ್ಯಕ್ರಮ ಯಶಸ್ವಿಯಾಗಿತ್ತು. ಈ ಕಾರ್ಯಕ್ರಮದ ಬಗ್ಗೆ ಪಾಲಿಕೆಗಳು ಹೆಚ್ಚಿನ ಗಮನ ಹರಿಸಬೇಕು ಎಂದು ಹೇಳಿದ್ದೇನೆ” ಎಂದು ಹೇಳಿದರು.

“ರಾಮಲಿಂಗಾರೆಡ್ಡಿ ಅವರಿಗೆ ನೀರಾವರಿ ಇಲಾಖೆ ನೀಡಲಾಗಿತ್ತು. ದೊಡ್ಡ ಇಲಾಖೆ ಸ್ವಚ್ಚವಾಗಿ ಕೆಲಸ ಮಾಡಬಹುದು ಎಂದು ಹೇಳಿದೆ. ಅನೇಕ ಅರ್ಚಕರು ರಾಮಲಿಂಗಾರೆಡ್ಡಿ ಅವರ ಬಳಿಯೇ ಮುಜರಾಯಿ ಇಲಾಖೆ ಇರಬೇಕು ಎಂದು ಮನವಿ ಮಾಡಿದರು. ಅಷ್ಟು ದಕ್ಷವಾಗಿ ಇಲಾಖೆ ನಿರ್ವಹಿಸಿದ್ದರು” ಎಂದರು.

“ನಾನು ಹಾಗೂ ರಾಮಲಿಂಗಾರೆಡ್ಡಿ ಅವರು 9 ಚುನಾವಣೆ ಎದುರಿಸಿದ್ದೇವೆ. ಒಂದೊಂದು ಬಾರಿ ಸೋತಿದ್ದೇವೆ. ಸತತ 8 ಬಾರಿ ಗೆದ್ದವರು ನಾವಿಬ್ಬರೇ. ಸಿದ್ದರಾಮಯ್ಯ ಅವರು, ಯಡಿಯೂರಪ್ಪ ಅವರೂ ನಡುವೆ ಸೋತಿದ್ದಾರೆ” ಎಂದರು.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಛಾವಣಿ (6)

ಲಂಡನ್‌ನಲ್ಲಿ ವಿರಾಟ್ ಕೊಹ್ಲಿ-ಮಹಾರಾಷ್ಟ್ರ ಡಿಸಿಎಂ ಏಕನಾಥ್ ಶಿಂಧೆ ಭೇಟಿ

by ಕವಿತಾ
September 11, 2026 - 10:32 pm
0

ಛಾವಣಿ (4)

IRCTC ಟಿಕೆಟ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ; ಒಂದೇ ದಿನ 20 ಲಕ್ಷಕ್ಕೂ ಹೆಚ್ಚು ಟಿಕೆಟ್ ಬುಕ್!

by ಕವಿತಾ
September 11, 2026 - 10:28 pm
0

ಛಾವಣಿ (5)

ಫಿಲಿಪೈನ್ಸ್‌ನಲ್ಲಿ ಭೀಕರ ದೋಣಿ ಅಗ್ನಿ ದುರಂತ; ಸಾವಿನ ಸಂಖ್ಯೆ 35ಕ್ಕೆ ಏರಿಕೆ!

by ಕವಿತಾ
September 11, 2026 - 10:24 pm
0

ಛಾವಣಿ (3)

ವಿಷಪೂರಿತ ದ್ರವ್ಯ ಕುಡಿದು ಯುವಕ ಸಾ*ವು

by ಕವಿತಾ
September 11, 2026 - 9:29 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಛಾವಣಿ (2)
    ಸತೀಶ್ ಜಾರಕಿಹೊಳಿ ಮನೆ ಮೇಲೆ ದಾಳಿ ನಡೆಸಿದ ಬಗ್ಗೆ ಅಧಿಕೃತ ಮಾಹಿತಿ ನೀಡಿದ ED
    September 11, 2026 | 0
  • ಛಾವಣಿ (1)
    ಬರ, ಪ್ರವಾಹ ಪರಿಹಾರ NDA ಅವಧಿಯಲ್ಲಿ ಹೆಚ್ಚಳ ಮಾಡಲಾಗಿದೆ: ಬೊಮ್ಮಾಯಿ
    September 11, 2026 | 0
  • Untitled design (85)
    ಸತೀಶ್‌ ಜಾರಕಿಹೊಳಿ ಭೇಟಿ ಮಾಡಿದ ಸಚಿವ ಸಂತೋಷ್‌ ಲಾಡ್‌
    September 11, 2026 | 0
  • Untitled design (84)
    ಊರಿಗೆ ಹೋಗುವವರಿಗೆ KSRTC ಗುಡ್‌ನ್ಯೂಸ್; ಹಬ್ಬಕ್ಕೆ 2,400 ವಿಶೇಷ ಬಸ್‌ಗಳ ವ್ಯವಸ್ಥೆ
    September 11, 2026 | 0
  • ಪಟ್ಟೆ ತಲೆ ಹೆಬ್ಬಾತು ಪ್ರಕರಣ (19)
    ಗಣೇಶ ಹಬ್ಬಕ್ಕೆ ಊರಿಗೆ ಹೊರಟವರಿಗೆ ಶಾಕ್: ಖಾಸಗಿ ಬಸ್‌ ಟಿಕೆಟ್ ದರ ಭಾರೀ ಏರಿಕೆ!
    September 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version