• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, July 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ನಾನು ಆತ್ಮಸಾಕ್ಷಿ ನಂಬಿದ್ದೇನೆ, ಆತ್ಮಸಾಕ್ಷಿಗೆ ತಕ್ಕಂತೆ ನಾವು ಕೆಲಸ ಮಾಡಬೇಕು: ಡಿ.ಕೆ ಶಿವಕುಮಾರ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 25, 2025 - 4:42 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 11 25T164032.813

ಕನಕಪುರ, ನ.25: “ನಾನು ಆತ್ಮಸಾಕ್ಷಿಯನ್ನು ನಂಬಿದ್ದೇನೆ. ಆತ್ಮಸಾಕ್ಷಿಗೆ ತಕ್ಕಂತೆ ನಾವು ಕೆಲಸ ಮಾಡಬೇಕು. ಪಕ್ಷಕ್ಕೆ ಮುಜುಗರ ತರಲು, ಪಕ್ಷವನ್ನು ದುರ್ಬಲಗೊಳಿಸಲು ನನಗೆ ಇಷ್ಟವಿಲ್ಲ. ಪಕ್ಷ ಹಾಗೂ ಕಾರ್ಯಕರ್ತರು ಇದ್ದರೆ ನಾವು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ಬೆಂಗಳೂರು ದಕ್ಷಿಣ ಜಿಲ್ಲೆ ಕನಕಪುರದಲ್ಲಿ ಮಾತನಾಡಿದ ಶಿವಕುಮಾರ್ ಅವರು, ಮಲ್ಲಿಕಾರ್ಜುನ ಖರ್ಗೆ ಅವರು ದೆಹಲಿಗೆ ತೆರಳಿದ್ದು, ರಾಹುಲ್ ಗಾಂಧಿ ಅವರೊಂದಿಗೆ ಅಧಿಕಾರ ಹಸ್ತಾಂತರದ ಬಗ್ಗೆ ಚರ್ಚೆ ನಡೆಸಲಿದ್ದಾರೆಯೇ ಎಂದು ಕೇಳಿದಾಗ, “ಈ ವಿಚಾರ ನನಗೆ ಗೊತ್ತಿಲ್ಲ. ಇದು ನಮ್ಮ ಐದಾರು ಜನರ ನಡುವಿನ ಗುಟ್ಟಿನ ವಿಚಾರ. ಇದನ್ನು ನಾನು ಬಹಿರಂಗ ಮಾಡುವುದಿಲ್ಲ. ಸಿಎಂ ಹಿರಿಯ ನಾಯಕರು, ನಮ್ಮ ಪಕ್ಷದ ಆಸ್ತಿ. ಅವರು ಸಿಎಂ ಆಗಿ ಏಳೂವರೆ ವರ್ಷಗಳ ಕಾಲ ಅಧಿಕಾರ ನಡೆಸಿದ್ದಾರೆ. ಮುಂದಿನ ಬಜೆಟ್ ಅನ್ನು ಅವರೇ ಮಂಡಿಸುವುದಾಗಿ ಹೇಳಿದ್ದಾರೆ. ಬಹಳ ಸಂತೋಷ. ಅವರು ವಿರೋಧ ಪಕ್ಷದ ನಾಯಕರಾಗಿ ಶ್ರಮಿಸಿದ್ದಾರೆ. ಪಕ್ಷ ಕಟ್ಟಿದ್ದಾರೆ. ನಾವೆಲ್ಲರೂ ಸೇರಿ 2028 ಹಾಗೂ 2029ರ ಚುನಾವಣೆ ಗುರಿಯತ್ತ ಗಮನ ಹರಿಸಬೇಕು” ಎಂದು ತಿಳಿಸಿದರು.

RelatedPosts

ಪ್ರಧಾನಿ ಮೋದಿಗಾಗಿ ಮೈಸೂರಿನಲ್ಲಿ ರೆಡಿಯಾದ ಅಪರೂಪದ ವಿಶೇಷ ಕಾಣಿಕೆ!

ಆ.1 ರಂದು ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ

ಕಾವೇರಿ ಕಿಚ್ಚು: ಮಂಡ್ಯದಲ್ಲಿ ಸಿಎಂ ವಿಜಯ್ ಸಿನಿಮಾ ಪ್ರದರ್ಶನಕ್ಕೆ ಬ್ರೇಕ್, ಪೋಸ್ಟರ್ ಹರಿದು ಆಕ್ರೋಶ!

ರಾಜ್ಯಕ್ಕೆ ಮತ್ತೆ ಕೊರೊನಾ ಎಂಟ್ರಿ!: ಬೀದರ್‌ನ ಮಹಿಳೆಗೆ ಕೊರೊನಾ ಪಾಸಿಟಿವ್

ADVERTISEMENT
ADVERTISEMENT

ನನ್ನ ಕಷ್ಟಕಾಲದಲ್ಲಿ ಜನರು ಮಾಡಿದ್ದ ಪ್ರಾರ್ಥನೆ ಮರೆಯುವುದಿಲ್ಲ

ನೀವು ಸಿಎಂ ಆಗಬೇಕು ಎಂದು ಜನರು ಪೂಜೆ ಮಾಡುತ್ತಿದ್ದಾರಲ್ಲಾ ಎಂದಾಗ, “ನನಗೆ ಅಧಿಕಾರ ಸಿಗಲಿ ಎಂದು ಈಗ ಪೂಜೆ ಮಾಡುತ್ತಿರುವುದಕ್ಕಿಂತ, ನಾನು ಜೈಲಿಗೆ ಹೋದಾಗ ನನ್ನ ತಾಯಂದಿರು, ಯುವಕರು, ಹಿರಿಯರು ದೇವಾಲಯದ ಅರ್ಚಕರು ಮಾಡಿದ ಪ್ರಾರ್ಥನೆಯನ್ನು ಮರೆಯಲು ಸಾಧ್ಯವಿಲ್ಲ. ಬಿಜೆಪಿ ಅವಧಿಯಲ್ಲಿ ನಾನು ಜೈಲಿಂದ ಬಿಡುಗಡೆ ಆದಾಗ ಪೊಲೀಸರ ಬೆದರಿಕೆಗೂ ಹಿಂಜರಿಯದೇ ನನ್ನನ್ನು ಜನ ಸ್ವಾಗತಿಸಿದರು. ನಾನು ಜೈಲಲ್ಲಿ ಇದ್ದಾಗ ಕರವೇ ನಾರಾಯಣ ಗೌಡರಿಗೆ ಪ್ರತಿಭಟನೆ ನಡೆಸದಂತೆ ಪೊಲೀಸ್ ಅಧಿಕಾರಿ ಭಾಸ್ಕರ್ ರಾವ್ ಅವರು ಬೆದರಿಕೆ ಹಾಕಿದ್ದರು. ಕೆಲವು ಸ್ವಾಮೀಜಿಗಳು ಬಂದರು, ಕೆಲವರು ಬರಲಿಲ್ಲ. ಚನ್ನಪಟ್ಟಣದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಬೇರೆ ಹೇಳಿಕೆ ಕೊಟ್ಟರು.

ಅನೇಕರು ನಮ್ಮ ಮನೆಗೆ ಬಂದು ನನ್ನ ಪತ್ನಿ ಹಾಗೂ ಮಕ್ಕಳ ಜೊತೆ ಮಾತನಾಡಿ ಧೈರ್ಯ ತುಂಬಿದ್ದರು. ಅಂದು ಜನ ಹರಕೆ ಹೊತ್ತು ಪ್ರಾರ್ಥಿಸಿದ್ದರು. ಆಗ ಕಟ್ಟಿಕೊಂಡ ಹರಕೆ ಮುಗಿಸಲು ಇನ್ನೂ ನನಗೆ ಆಗುತ್ತಿಲ್ಲ. ಅನೇಕರು ನಾನು ಬಿಡುಗಡೆಯಾಗುವವರೆಗೂ ಕಾಲಿಗೆ ಚಪ್ಪಲಿ ಹಾಕಿರಲಿಲ್ಲ. ನಾನು ಇಂದು ಡಿಸಿಎಂ ಆಗಿದ್ದು, ಪಕ್ಷದ ಅಧ್ಯಕ್ಷನಾಗಿದ್ದೇನೆ. ಕಷ್ಟಕಾಲದಲ್ಲಿದ್ದಾಗ ಮಾಡಿದ ಪ್ರಾರ್ಥನೆ, ಆಗ ಅವರು ನನಗೆ ಆತ್ಮಸ್ಥೈರ್ಯ ತುಂಬಿದ್ದು ನನಗೆ ಬಹಳ ವಿಶೇಷ” ಎಂದು ತಿಳಿಸಿದರು.

ನಿಮ್ಮನ್ನು ಸಿಎಂ ಸ್ಥಾನದಲ್ಲಿ ನೋಡಬೇಕು ಎಂದು ಜಿಲ್ಲೆಯ ನಾಲ್ಕೂ ಕ್ಷೇತ್ರಗಳಲ್ಲೂ ಜನ ಪಕ್ಷಕ್ಕೆ ಬೆಂಬಲ ನೀಡಿದ್ದಾರೆ ಅಲ್ಲವೇ ಎಂದು ಕೇಳಿದಾಗ, “ನಾನು ಚುನಾವಣೆ ಸಂದರ್ಭದಲ್ಲಿ ಮಹದೇವಪ್ಪ ಅವರ ಕ್ಷೇತ್ರ, ಮಂಡ್ಯ ಸೇರಿದಂತೆ ಎಲ್ಲಾ ಕಡೆಗಳಲ್ಲಿ ನನ್ನ ಮುಖ ನೋಡಿ ಮತ ಹಾಕಿ ಎಂದೂ ಕೇಳಿದ್ದೇನೆ. ಜನ ನಮ್ಮ ಸಾಮೂಹಿಕ ನಾಯಕತ್ವಕ್ಕೆ ಮತ ಹಾಕಿದ್ದಾರೆ. ನನ್ನೊಬ್ಬನಿಗಾಗಿ ಮತ ಹಾಕಿದ್ದಾರೆ ಎಂದು ನಾನು ಹೇಳುವುದಿಲ್ಲ. 224 ಕ್ಷೇತ್ರಗಳಲ್ಲಿ ನಮಗಿಂತ ನಮ್ಮ ಕಾರ್ಯಕರ್ತರು ಹೆಚ್ಚು ಶ್ರಮ ಹಾಕಿದ್ದಾರೆ” ಎಂದು ತಿಳಿಸಿದರು.

ಅನೇಕ ಕೆಲಸಗಳ ಮಧ್ಯೆ ಕಾರ್ಯಕರ್ತರ ಚುನಾವಣೆಗೆ ಬಂದಿದ್ದೀರಿ ಎಂದು ಕೇಳಿದಾಗ, “ಕಾರ್ಯಕರ್ತರು ಎಂದರೆ ನಾವು. ರಾಮಕೃಷ್ಣ ಹೆಗಡೆ ಅವರು ಸಿಎಂ ಆಗಿದ್ದಾಗ ಇದೇ ಚುನಾವಣೆಗೆ ನಾನು ಹಾಗೂ ಶ್ರೀಕಂಠಯ್ಯ ಅವರು ಚುನಾವಣೆಗೆ ಸ್ಪರ್ಧಿಸಿದ್ದೆವು. ಉಳಿದಂತೆ ಜನತಾದಳದಿಂದ ಸ್ಪರ್ಧಿಸಿದ್ದರು. ನನ್ನ ರಾಜಕೀಯ ಬದುಕಿನ ಮೊದಲ ಚುನಾವಣೆ ಅದಾಗಿತ್ತು. ಕನಕಪುರದಲ್ಲಿ ಈ ಚುನಾವಣೆ ಗೆದ್ದು ನಿರ್ದೇಶಕನಾಗಿ ಆಯ್ಕೆಯಾಗಿದ್ದೆ. ಆಗ ಆಸ್ಕರ್ ಫರ್ನಾಂಡೀಸ್ ಅವರು ಇದೇ ಕಟ್ಟಡದ ಕೋಣೆಯಲ್ಲಿ ಒಂದು ತಿಂಗಳು ಇದ್ದು, ಚುನಾವಣೆ ಮಾಡಿದ್ದರು. ಇದು ಕಾರ್ಯಕರ್ತರ ಚುನಾವಣೆ. ಕಾರ್ಯಕರ್ತರು ನನ್ನ ಚುನಾವಣೆ ಮಾಡುವಾಗ, ನಾನು ಅವರ ಚುನಾವಣೆಗೆ ಬಂದು ಮತ ಹಾಕದಿದ್ದರೆ ನನ್ನಿಂದ ಕರ್ತವ್ಯ ಲೋಪವಾಗುತ್ತದೆ. ಕಾರ್ಯಕರ್ತರು ಬಲಿಷ್ಠವಾಗಿದ್ದರೆ ಮಾತ್ರ ನಾವು ಬಲಿಷ್ಠವಾಗುತ್ತೇವೆ. ಚುನಾವಣೆಯಲ್ಲಿ ರಾಜಿ ಮಾಡಿಕೊಳ್ಳಿ ಎಂದು ಕೇಳಿದರು.

ನಾವೇ ಚುನಾವಣೆ ಆಗಲಿ, ಕಾರ್ಯಕರ್ತರಿಗೆ ಚುನಾವಣೆ ಅನುಭವವಾಗಲಿ ಎಂದು ಹೇಳಿದ್ದೇವೆ. ನಾವು ಸಂಸತ್ ಚುನಾವಣೆ ವೇಳೆ ಯಾಮಾರಿದೆವು, ಎಷ್ಟೋ ಬೂತ್ ಗಳಿಗೆ ಏಜೆಂಟ್ ಗಳು ಇರಲಿಲ್ಲ. ಒಳೇಟು ಯಾವ ರೀತಿ ಬಿತ್ತು ಎಂದು ತಿಳಿಯಲಿಲ್ಲ. ನಾವು ನಮ್ಮ ತಪ್ಪನ್ನು ತಿದ್ದುಕೊಳ್ಳುತ್ತೇವೆ. ರಾಜಕಾರಣದಲ್ಲಿ ನಮ್ಮ ವೈರಿ ಯಾರು ಎಂದು ತಿಳಿಯಬೇಕು. ಈ ಚುನಾವಣೆಯಲ್ಲಿ ನಮ್ಮ ಪರ ಯಾರು ನಿಂತಿದ್ದಾರೆ, ವಿರುದ್ಧ ಯಾರು ನಿಂತಿದ್ದಾರೆ ಎಂದು ತಿಳಿಯುತ್ತದೆ. ಹೀಗಾಗಿ ಚುನಾವಣೆ ಮಾಡುತ್ತಿದ್ದೇವೆ” ಎಂದು ತಿಳಿಸಿದರು.

ಪಕ್ಷ ಸಂಘಟನೆಗೆ ಇಂತಹ ಚುನಾವಣೆಗಳು ಮುಖ್ಯವೇ ಎಂದು ಕೇಳಿದಾಗ, “ಪಕ್ಷಕ್ಕೆ ಮೂಲ ಸ್ವರೂಪ ಇಲ್ಲವಾದರೆ ಯಾವ ಪಕ್ಷವೂ ಇರಲು ಸಾಧ್ಯವಿಲ್ಲ. ಇದು ನಮ್ಮ ಮೂಲ. ಸೊಸೈಟಿ, ಹಾಲಿನ ಒಕ್ಕೂಟ, ಪಿಎಲ್ ಡಿ, ಮುನ್ಸಿಪಾಲಿಟಿ, ಪಂಚಾಯ್ತಿಗಳು ನಮ್ಮ ಆಸ್ತಿಗಳಿದ್ದಂತೆ. ಇಲ್ಲಿರುವುದು 300 ಚಿಲ್ಲರೆ ಮತಗಳು, ಆದರೂ 300 ನಾಯಕರು ಕಾರ್ಯಕರ್ತರ ಗೆಲುವಿಗೆ ಬಂದಿದ್ದಾರೆ. ಹೀಗಾಗಿ ಎಷ್ಟೇ ಕೆಲಸದ ಒತ್ತಡ ಇದ್ದರೂ ಬಂದು ಮತ ಹಾಕುತ್ತಿದ್ದೇನೆ. ನಾವು ಬರಲಿಲ್ಲ ಅಂದರೆ, ನಾಯಕರೇ ಬಂದು ಮತ ಹಾಕಿಲ್ಲ, ನಾವು ಯಾಕೆ ಹಾಕಬೇಕು ಎಂದು ಹಳ್ಳಿಗಳಲ್ಲಿ ಮರ್ಯಾದೆ ತೆಗೆಯುತ್ತಾರೆ” ಎಂದರು.

ಸಚಿವ ಸ್ಥಾನ ಆಕಾಂಕ್ಷಿಗಳು ದೆಹಲಿಗೆ ಹೋಗಿದ್ದಾರೆ

ಕೆಲ ಶಾಸಕರು ದೆಹಲಿಗೆ ತೆರಳಿದ್ದು, ನಿಮ್ಮನ್ನು ಸಿಎಂ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ಕೇಳಿದಾಗ, “ಸಚಿವ ಸ್ಥಾನದ ಆಕಾಂಕ್ಷೆ ಇರುವವರು ಹೋಗಿದ್ದಾರೆ, ನನ್ನನ್ನು ಸಿಎಂ ಮಾಡುವ ಪ್ರಯತ್ನದ ಬಗ್ಗೆ ನನಗೆ ಗೊತ್ತಿಲ್ಲ. ನಾನು ಅವರಿಗೆ ಕರೆ ಮಾಡಿಲ್ಲ, ಅವರನ್ನು ಕಳುಹಿಸಿಲ್ಲ. ಯಾಕೆ ಹೋದಿರಿ ಎಂದು ಪ್ರಶ್ನೆ ಮಾಡುವುದಿಲ್ಲ” ಎಂದರು.

ಅಧಿಕಾರ ಹಂಚಿಕೆ ಒಪ್ಪಂದ ಆಗಿತ್ತೇ ಎಂದು ಕೇಳಿದಾಗ, “ನಾನು ಆ ಬಗ್ಗೆ ಯಾಕೆ ಮಾತನಾಡಲಿ, ನೀವುಗಳೇ (ಮಾಧ್ಯಮಗಳು) ಏನೇನೋ ಬರೆಯುತ್ತಿದ್ದೀರಿ” ಎಂದು ತಿಳಿಸಿದರು.

ಅಧಿಕಾರ ಹಂಚಿಕೆ ವಿಚಾರವಾಗಿ ಬಸವರಾಜ ರಾಯರೆಡ್ಡಿ, ಸದಾನಂದ ಗೌಡರ ಹೇಳಿಕೆ ಬಗ್ಗೆ ಕೇಳಿದಾಗ, “ನಾನು ಯಾರ ಹೇಳಿಕೆಗೂ ಪ್ರತಿಕ್ರಿಯೆ ನೀಡುವುದಿಲ್ಲ. ನಾನು ಅವರ ವಕ್ತಾರನಲ್ಲ” ಎಂದು ತಿಳಿಸಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಬಲಿಷ್ಠ (7)

ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್: ಜುಲೈ 31ರಿಂದ ಆನ್‌ಲೈನ್ ಲಗೇಜ್ ಬುಕಿಂಗ್ ಸೇವೆ ಆರಂಭ

by ದಿಶಾ ಕೆ. ಎಸ್.
July 30, 2026 - 5:02 pm
0

ಬಲಿಷ್ಠ (6)

ಕಾವೇರಿ ವಿವಾದದಲ್ಲಿ ಕರ್ನಾಟಕಕ್ಕೆ ಹಿನ್ನಡೆ: ತಮಿಳುನಾಡಿಗೆ 3,500 ಕ್ಯೂಸೆಕ್‌ ನೀರು ಹರಿಸಲು CWMA ಆದೇಶ

by ದಿಶಾ ಕೆ. ಎಸ್.
July 30, 2026 - 4:38 pm
0

ಬಲಿಷ್ಠ (5)

ಪ್ರಧಾನಿ ಮೋದಿಗಾಗಿ ಮೈಸೂರಿನಲ್ಲಿ ರೆಡಿಯಾದ ಅಪರೂಪದ ವಿಶೇಷ ಕಾಣಿಕೆ!

by ದಿಶಾ ಕೆ. ಎಸ್.
July 30, 2026 - 4:15 pm
0

ಬಲಿಷ್ಠ (4)

ಆ.1 ರಂದು ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ

by ದಿಶಾ ಕೆ. ಎಸ್.
July 30, 2026 - 3:59 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಬಲಿಷ್ಠ (5)
    ಪ್ರಧಾನಿ ಮೋದಿಗಾಗಿ ಮೈಸೂರಿನಲ್ಲಿ ರೆಡಿಯಾದ ಅಪರೂಪದ ವಿಶೇಷ ಕಾಣಿಕೆ!
    July 30, 2026 | 0
  • ಬಲಿಷ್ಠ (4)
    ಆ.1 ರಂದು ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ
    July 30, 2026 | 0
  • ಮುನ್ಸೂಚನೆ (30)
    ಕಾವೇರಿ ಕಿಚ್ಚು: ಮಂಡ್ಯದಲ್ಲಿ ಸಿಎಂ ವಿಜಯ್ ಸಿನಿಮಾ ಪ್ರದರ್ಶನಕ್ಕೆ ಬ್ರೇಕ್, ಪೋಸ್ಟರ್ ಹರಿದು ಆಕ್ರೋಶ!
    July 30, 2026 | 0
  • ಮುನ್ಸೂಚನೆ (27)
    ರಾಜ್ಯಕ್ಕೆ ಮತ್ತೆ ಕೊರೊನಾ ಎಂಟ್ರಿ!: ಬೀದರ್‌ನ ಮಹಿಳೆಗೆ ಕೊರೊನಾ ಪಾಸಿಟಿವ್
    July 30, 2026 | 0
  • ಮುನ್ಸೂಚನೆ (26)
    ಕಲಬುರಗಿಯಲ್ಲಿ ಬೆಳಗಿನ ಉಪಹಾರ ಸೇವಿಸಿದ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ
    July 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version