• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, July 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಬಂದಿರುವ ಯೋಗವನ್ನು ಕನ್ನಡ ಚಿತ್ರರಂಗ ಉಳಿಸಿಕೊಂಡು ಹೋಗಲಿ: ಡಿಸಿಎಂ ಡಿ.ಕೆ. ಶಿವಕುಮಾರ್!

admin by admin
March 4, 2025 - 5:24 pm
in ಕರ್ನಾಟಕ, ಸಿನಿಮಾ
0 0
0
Befunky Collage 2025 03 04t172112.911

“ನಾನು ಚಿತ್ರರಂಗದ ಒಳಿತಿಗಾಗಿ ಮಾತನಾಡಿದ್ದೇನೆ. ಒಂದೆರಡು ಸಿನಿಮಾಗಳಿಂದ ಕನ್ನಡ ಚಿತ್ರರಂಗಕ್ಕೆ ಉತ್ತಮ ಯೋಗ ಬಂದಿದೆ. ಬಂದಿರುವ ಯೋಗವನ್ನು ಉಳಿಸಿಕೊಂಡು ಹೋಗಿ ಎಂದು ಹೇಳುತ್ತಿದ್ದೇನೆ. ನಾನು ನನ್ನ ಹಿತವಚನವನ್ನು ಹಳ್ಳಿ ಭಾಷೆಯಲ್ಲಿ ಒರಟಾಗಿ ಹೇಳಿದ್ದೇನೆ. ನನಗೂ ಚಿತ್ರರಂಗ ಉಳಿಯಬೇಕು ಎನ್ನುವ ಆಸೆಯಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಮಂಗಳವಾರ ಪ್ರತಿಕ್ರಿಯೆ ನೀಡಿದರು.

RelatedPosts

‘ನನ್ನವಳು ಗಂಧದ ಕೊರಡು’ ದೊಡ್ಡಗೌಡರ ಭಾವುಕ ಪತ್ರ..!

ಯಶ್ ಫ್ಯಾನ್ಸ್‌ಗೆ ನಿರಾಸೆ.. ರಾಮಾಯಣ ದರ್ಶನ ಮುಂದಕ್ಕೆ

ಕರಾವಳಿ ಸಿನಿಮಾ: ಪ್ರಜ್ವಲ್ ದೇವರಾಜ್ ಕರಿಯರ್‌‌ಗೆ ಬಹುದೊಡ್ಡ ತಿರುವು

2 ದಿನಗಳ ಚಿತ್ರದುರ್ಗ ಜಿಲ್ಲಾ ಪ್ರವಾಸ ಕೈಗೊಳ್ಳಲಿರುವ ಸಿಎಂ ಡಿಕೆ ಶಿವಕುಮಾರ್

ADVERTISEMENT
ADVERTISEMENT

“ಚಿತ್ರರಂಗದ ಬಗ್ಗೆ ನಿಮ್ಮ ಮಾತುಗಳು ಒರಟಾಗಿವೆ ಎನ್ನುವ ಬಿಜೆಪಿ, ಚಿತ್ರರಂಗದವರ ಟೀಕೆಯ ಬಗ್ಗೆ ಕೇಳಿದಾಗ, “ನನಗೆ ಬಣ್ಣ ಕಟ್ಟಿ ಮಾತನಾಡಲು ಬರುವುದಿಲ್ಲ. ನಾನು ನೇರವಾಗಿ ಹೇಳುತ್ತೇನೆ. ನೀವು (ಮಾಧ್ಯಮದವರು), ಅವರು ಬಂಡೆ ಎಂದು ಕರೆಯುತ್ತಾರೆ. ಹಾಗಾದರೆ ನಾನು ಬಂಡೆಯೇ? ನಾನು ಬಂಡೆಯಂತೇ ಕಾಣುತ್ತೇನೆಯೇ? ಕಲ್ಲು ಪ್ರಕೃತಿ, ಕಡೆದರೆ ಆಕೃತಿ, ಪೂಜಿಸಿದರೆ ಸಂಸ್ಕೃತಿ. ಇದು ನನ್ನ ಮಾತಿನ ಶೈಲಿ. ಶೈಲಿ ಸರಿ ಇಲ್ಲದಿದ್ದರೆ ಸರಿಪಡಿಸಿಕೊಳ್ಳುತ್ತೇನೆ, ಆದರೆ ಸತ್ಯ ಹೇಳಿದ್ದೇನೆ” ಎಂದರು.

ಹುಬ್ಬಳ್ಳಿಗೆ ಏಕೆ ಹೋದರು; ಬೆಂಗಳೂರಿಗೆ ನೀರು ತರುವ ಹೋರಾಟವಿದು

ಮೇಕೆದಾಟು ಹೋರಾಟ ಕಾಂಗ್ರೆಸ್ ರೂಪಿಸಿದ ಹೋರಾಟ, ಇದರಲ್ಲಿ ಚಿತ್ರರಂಗದವರು ಹೇಗೆ ಭಾಗವಹಿಸಲು ಸಾಧ್ಯ ಎಂಬ ಪ್ರಶ್ನೆಗಳ ಬಗ್ಗೆ ಕೇಳಿದಾಗ, “ರಾಜ್ಯದ ನೆಲ, ಜಲ ಭಾಷೆ ರಕ್ಷಣೆಗೆ ಹೋರಾಟ ಮಾಡಬೇಕು. ಹಾಗಾದರೆ ಕಳಸಾ- ಬಂಡೂರಿ ಹೋರಾಟಕ್ಕೆ ಚಿತ್ರರಂಗದವರು ಏಕೆ ಹುಬ್ಬಳ್ಳಿಗೆ ಹೋದರು? ರಾಜಕುಮಾರ್ ಅವರು ಪಕ್ಷ ಬೇಧ ಮರೆತು ಹೋರಾಟಕ್ಕೆ ಏಕೆ ಬರುತ್ತಿದ್ದರು? ಹಾಗಾದರೆ ಈಗಿನ ಚಿತ್ರರಂಗದ ಜವಾಬ್ದಾರಿ ಏನು? ರಾಜಕುಮಾರ್ ಅವರು ಇವರಿಗೆ ಮಾದರಿ ಅಲ್ಲವೇ ಎಂದು ಪ್ರಶ್ನಿಸಿದರು.

ದುನಿಯಾ ವಿಜಯ್, ಪ್ರೇಮ್, ಸಾಧು ಕೋಕಿಲ, ಸಾ.ರಾ. ಗೋವಿಂದು ಮತ್ತಿತರರು ಹೋರಾಟದಲ್ಲಿ ಭಾಗವಹಿಸಿದ್ದರು. ಇವರೆಲ್ಲಾ ಕಾಂಗ್ರೆಸ್ ಪಕ್ಷದಿಂದ ಬಂದಿದ್ದರೇ? ನನ್ನ ಮನೆಗೆ ನೀರು ತರಲು ಹೋರಾಟ ಮಾಡಲಿಲ್ಲ. ಇಡೀ ಬೆಂಗಳೂರಿಗೆ ನೀರು ತರಲು ಹೋರಾಟ ಮಾಡಿದ್ದೇವೆ. ಬೆಂಗಳೂರಲ್ಲಿ ಚಿತ್ರರಂಗದವರೂ ಇದ್ದಾರೆ. ಬರೀ ಕಾಂಗ್ರೆಸ್ ಕಾರ್ಯಕರ್ತರು ಇಲ್ಲ. ಚಿತ್ರಂಗದವರು ಬರದೇ ಇದ್ದರೂ ಹೋರಾಟ ಮಾಡುತ್ತೇವೆ. ರಾಜಕೀಯವಾಗಿ ಯಾರ್ಯಾರದ್ದು ಏನೆನಿದೆ ಎಂದು ನನಗೆ ತಿಳಿದಿಲ್ಲವೇ? ಇನ್ನಾದರೂ ಬುದ್ದಿ ಕಲಿಯಿರಿ ಎಂದಷ್ಟೇ ಹೇಳುತ್ತಿದ್ದೇನೆ. ತಗೊಳ್ಳೋದು ಬಿಡೋದು ಅವರಿಗೆ ಬಿಟ್ಟದ್ದು” ಎಂದರು.

ಅಧಿಕಾರ ದರ್ಪ ಇದ್ದ ಕಾರಣಕ್ಕೆ ರಾಜೇಂದ್ರ ಸಿಂಗ್ ಬಾಬು ಅವರನ್ನು ಅಧ್ಯಕ್ಷ ಸ್ಥಾನದಲ್ಲಿ ಕೂರಿಸಿದ್ದು

ಅಧಿಕಾರದ ದರ್ಪದಿಂದ ಹೀಗೆ ಹೇಳಿದ್ದಾರೆ ಎನ್ನುವ ಚಿತ್ರ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಅವರ ಹೇಳಿಕೆ ಬಗ್ಗೆ ಕೇಳಿದಾಗ, ರಾಜೇಂದ್ರ ಸಿಂಗ್ ಬಾಬು ನನ್ನ ಗೆಳೆಯ. ಅವರನ್ನು ಅಕಾಡೆಮಿಗೆ ಅಧ್ಯಕ್ಷರನ್ನಾಗಿ ಮಾಡಿದ್ದೆವು. ಅಧಿಕಾರ ದರ್ಪ ಇದ್ದ ಕಾರಣಕ್ಕೇ ಅವರನ್ನು ಆ ಸ್ಥಾನದಲ್ಲಿ ಕೂರಿಸಿದ್ದು. ಪಕ್ಷಕ್ಕೆ ಹಾಗೂ ಚಿತ್ರರಂಗಕ್ಕೆ ಸಹಾಯ ಮಾಡಲಿ ಎಂದು ಅವರಿಗೆ ಸ್ಥಾನ ನೀಡಲಾಗಿತ್ತು. ಇದಾದ ನಂತರ ಅವರು ಒಂದು ದಿನವೂ ಪಕ್ಷದ ಕೆಲಸಕ್ಕೆ ಬರಲಿಲ್ಲ. ದರ್ಪ ಸುಮ್ಮನೆ ಬರುವುದಿಲ್ಲ. ಜನರು ಕೊಟ್ಟ ಅಧಿಕಾರದಿಂದ ಬರುತ್ತದೆ. ಆ ಅಧಿಕಾರದಿಂದಲೇ ರಾಜೇಂದ್ರ ಸಿಂಗ್ ಬಾಬು ಅವರಂಥವರಿಗೆ ಅಧಿಕಾರ ಕೊಟ್ಟಿದ್ದದ್ದು” ಎಂದು ಹೇಳಿದರು.

“ನನಗೆ ಯಾವುದೇ ರೀತಿಯ ವರ್ಣನೆಯ ಅಗತ್ಯವಿಲ್ಲ. ಚಿತ್ರರಂಗದವರ ಉತ್ತಮ ವೇದಿಕೆಯನ್ನು, ಬದುಕು, ಬೆಳವಣಿಗೆಯನ್ನು ಅವರೇ ಉಳಿಸಿಕೊಳ್ಳಬೇಕಲ್ಲವೇ? ಶಿವಕುಮಾರ್, ಸಿದ್ದರಾಮಯ್ಯ ಅವರ ಮನೆ ಕಾರ್ಯಕ್ರಮಕ್ಕೆ ಬರಬೇಡಿ. ನಿಮ್ಮ ಕಾರ್ಯಕ್ರಮ, ನೀವು ಕಾರ್ಯಕ್ರಮಕ್ಕೆ ಬಂದು ಉಳಿಸಿ, ಬೆಳೆಸಿಕೊಂಡು ಹೋಗಿ ಎಂದು ಹೇಳಿದ್ದೇನೆ. ಎಲ್ಲಾ ಸೇರಿ ಸಂಘಟನೆ ಆಗಬೇಕಲ್ಲವೇ?” ಎಂದು ಹೇಳಿದರು.

ಹೊಸ ಭಾಷೆ ಕಲಿಸಿಕೊಡಲಿ

ನಟ್ಟು- ಬೋಲ್ಟ್ ಪದ ಶಿವಕುಮಾರ್ ಅವರ ಸಂಸ್ಕಾರ ತೋರಿಸುತ್ತದೆ ಎನ್ನುವ ನಾಗಾಭರಣ ಮಾತಿನ ಬಗ್ಗೆ ಕೇಳಿದಾಗ, “ನನ್ನ ಹಳ್ಳಿ ಭಾಷೆಯಲ್ಲಿ ಉತ್ತರ ನೀಡಿದ್ದೇನೆ. ಅವರ ಬಳಿ ಹೊಸ ಭಾಷೆಯಿದ್ದರೆ ಕಲಿಸಿಕೊಡಲಿ, ಅದೇ ರೀತಿ ಮಾತನಾಡುತ್ತೇನೆ” ಎಂದು ತಿವಿದರು.

ಸರಿಯಾಗಿ ಆಹ್ವಾನ ನೀಡಿಲ್ಲ ಎಂದು ನಾಗಭರಣ ಹೇಳಿದ್ದರ ಬಗ್ಗೆ ಕೇಳಿದಾಗ, “ಆಹ್ವಾನ ನೀಡದೇ ಇದ್ದರೇ ತಪ್ಪು. ಇದು ಬೇರೆ ವಿಚಾರ. ಮನೆ ಹಬ್ಬವನ್ನು ಎಲ್ಲರೂ ಸೇರಿ ಆಚರಿಸಬೇಕಲ್ಲವೇ? ಟೀಕೆ ಮಾಡಲಿ, ಬಯ್ಯಲಿ, vಹೋರಾಟ ಮಾಡಲಿ, ಜೈಕಾರ ಕೂಗಲಿ. ತಲೆ ಕೆಡಿಕೊಳ್ಳುವುದಿಲ್ಲ, ಅದು ನನಗೆ ಸಂತಸದ ವಿಚಾರವೇ” ಎಂದರು.

ಚಿತ್ರರಂಗ ಸಾಯುತ್ತಿದೆ

“ನಾನು ಸಹ ಸಿನಿಮಾ ರಂಗದಿಂದಲೇ ಬಂದವನು. ಇಂದು ಕನ್ನಡ ಚಿತ್ರರಂಗ ಸಾಯುತ್ತಿದೆ. ಹೊಸ ಸಿನಿಮಾಗಳು ಬರುತ್ತಿಲ್ಲ. ನಾನು ಇದೇ ರಂಗಕ್ಕೆ ಸೇರಿದವನು. ಈ ಹಿಂದೆ ಇಂದಿರಾಗಾಂಧಿ ಅವರ ಹೆಸರಿನಲ್ಲಿ ಟೂರಿಂಗ್ ಟಾಕೀಸ್ ನಡೆಸುತ್ತಿದ್ದೆ. ಈಗ ನಮ್ಮ ಒಡೆತನದ 23 ಸಿನಿಮಾ ಪ್ರದರ್ಶನ ಪರದೆಗಳು ಬೆಂಗಳೂರಿನಲ್ಲಿವೆ” ಎಂದು ಹೇಳಿದರು.

“ನಮ್ಮ ಕನ್ನಡ ಚಿತ್ರರಂಗ ಇತ್ತೀಚೆಗೆ ಒಂದೆರಡು ಸಿನಿಮಾಗಳಿಂದ ಬಾಲಿವುಡ್ಗಿಂತ ಕೊಂಚ ಎತ್ತರಕ್ಕೆ ಬೆಳೆದಿದೆ. ಚಿತ್ರಗಳ ಗುಣಮಟ್ಟ ಹಾಲಿವುಡ್ ಗುಣಮಟ್ಟಕ್ಕೆ ಬೆಳೆಯುತ್ತಿದೆ. ಒಂದಷ್ಟು ಜನ ಇದಕ್ಕಾಗಿ ಶ್ರಮ ಪಡುತ್ತಿದ್ದಾರೆ. ಈ ಹೆಜ್ಜೆ ಗುರುತುಗಳು ಉಳಿಯಬೇಕು, ಇನ್ನೂ ಎತ್ತರಕ್ಕೆ ಚಿತ್ರರಂಗವನ್ನು ತೆಗೆದುಕೊಂಡು ಹೋಗಬೇಕು ಎಂಬುದು ನನ್ನ ಉದ್ದೇಶ ಮತ್ತು ಆಶಯವಾಗಿದೆ” ಎಂದರು.

“ಮುಂದಿನ ವರ್ಷ ಬೆಂಗಳೂರಿನಲ್ಲಿ ಐಫಾ (ಐಐಎಫ್ ಎ) ಪ್ರಶಸ್ತಿ ನೀಡುವ ಕುರಿತು ಆಲೋಚನೆ ಮಾಡಿದ್ದೇನೆ. ಇದರ ಬಗ್ಗೆ ಈಗಾಗಲೇ ಎರಡು ಸುತ್ತಿನ ಮಾತುಕಥೆ ನಡೆದಿದೆ. ಪ್ರಶಸ್ತಿ ನೀಡುವ ತಂಡ ಈಗಾಗಲೇ ಬಂದು ನನ್ನ ಬಳಿ ಮಾತುಕಥೆ ನಡೆಸಿದೆ. ಇತ್ತೀಚೆಗೆ ಅಬುದಾಬಿಗೆ ಹೋದಾಗಲೂ ಚರ್ಚೆ ನಡೆಸಿದ್ದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design (23)

ನೀಟ್ ಹೋರಾಟಕ್ಕೆ ಸೋನು ನಿಗಮ್ ಸಾಥ್..! ದೆಹಲಿ ಸಂಗೀತ ಕಾರ್ಯಕ್ರಮ ಮುಂದೂಡಿದ ಗಾಯಕ

by ಕವಿತಾ
July 24, 2026 - 11:20 pm
0

ಕೈಗೊಳ್ಳಲಿರುವ (30)

ಬತ್ತಿದ್ದ ಕೃಷ್ಣಾ ನದಿಗೆ ಮತ್ತೆ ಜೀವಕಳೆ: ಬಸವಸಾಗರದಲ್ಲಿ ನೀರಿನ ಮಟ್ಟ ಭಾರೀ ಏರಿಕೆ..!

by ಕವಿತಾ
July 24, 2026 - 10:55 pm
0

ಕೈಗೊಳ್ಳಲಿರುವ (28)

ಕೇಂದ್ರ ಸಚಿವ ಸ್ಥಾನಕ್ಕೆ ರವನೀತ್ ಸಿಂಗ್ ಬಿಟ್ಟು ರಾಜೀನಾಮೆ

by ಕವಿತಾ
July 24, 2026 - 10:33 pm
0

ಕೈಗೊಳ್ಳಲಿರುವ (26)

ಭಾರೀ ಮಳೆ: ದ.ಕ, ಉಡುಪಿ ಜಿಲ್ಲೆಗಳಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ

by ಕವಿತಾ
July 24, 2026 - 10:14 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಕೈಗೊಳ್ಳಲಿರುವ (12)
    ‘ನನ್ನವಳು ಗಂಧದ ಕೊರಡು’ ದೊಡ್ಡಗೌಡರ ಭಾವುಕ ಪತ್ರ..!
    July 24, 2026 | 0
  • ಕೈಗೊಳ್ಳಲಿರುವ
    2 ದಿನಗಳ ಚಿತ್ರದುರ್ಗ ಜಿಲ್ಲಾ ಪ್ರವಾಸ ಕೈಗೊಳ್ಳಲಿರುವ ಸಿಎಂ ಡಿಕೆ ಶಿವಕುಮಾರ್
    July 24, 2026 | 0
  • Untitled design (21)
    11,000 ಕೋಟಿ ರೂ. ಆದಾಯ ಗುರಿ ಸಾಧನೆಗೆ ಪ್ರತಿ ಜಿಯಾಲಜಿಸ್ಟ್‌ಗೆ ಗುರಿ ನಿಗದಿ: ರೋಹಿಣಿ ಸಿಂಧೂರಿ
    July 24, 2026 | 0
  • Untitled design (20)
    ಬಿಯಾಂಡ್ ಬೆಂಗಳೂರು ನೀತಿಯಲ್ಲಿ ಉದ್ಯಮಗಳ ವೆಚ್ಚ ಕಡಿಮೆ ಮಾಡಲು ಅಗತ್ಯ ಕ್ರಮ: ಸಿಎಂ ಡಿಕೆಶಿ
    July 24, 2026 | 0
  • Untitled design (18)
    ರಾಜ್ಯದ ಜನೆತೆಗೆ ಬೆಲೆ ಏರಿಕೆ ಶಾಕ್‌!: ತುಪ್ಪ, ಬೆಣ್ಣೆ ಬೆಲೆ ಹೆಚ್ಚಳ!
    July 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version