• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, November 2, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

71ನೇ ಕನ್ನಡ ರಾಜ್ಯೋತ್ಸವ: ಧ್ವಜಾರೋಹಣ ನೆರವೇರಿಸಿದ ಸಿಎಂ ಡಿ.ಕೆ ಶಿವಕುಮಾರ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 1, 2026 - 12:11 pm
in ಕರ್ನಾಟಕ
0 0
0
Untitled Design 2026 11 01T121030.918

ಬೆಂಗಳೂರು: ರಾಜ್ಯಾದ್ಯಂತ 71ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ ಮನೆಮಾಡಿದೆ. ಕನ್ನಡ ನಾಡು, ನುಡಿ, ನೆಲ, ಜಲ ಹಾಗೂ ಸಂಸ್ಕೃತಿಯ ಹಿರಿಮೆಯನ್ನು ಸಾರುವ ನವೆಂಬರ್ 1ರ ವಿಶೇಷ ದಿನವನ್ನು ಕನ್ನಡಿಗರು ಹೆಮ್ಮೆಯಿಂದ ಆಚರಿಸುತ್ತಿದ್ದಾರೆ. ಈ ಹಿನ್ನೆಲೆ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಧ್ವಜಾರೋಹಣ ನೆರವೇರಿಸಿ ಕನ್ನಡಿಗರಿಗೆ ಶುಭಾಶಯ ಕೋರಿದರು. ಇದೇ ವೇಳೆ ಸರ್ಕಾರಿ ಹಾಗೂ ಖಾಸಗಿ ಕಚೇರಿಗಳ ಮೇಲೆ ಕನ್ನಡ ಬಾವುಟ ಹಾರಿಸುವುದನ್ನು ಕಡ್ಡಾಯಗೊಳಿಸುವ ನಿಟ್ಟಿನಲ್ಲಿ ಸರ್ಕಾರ ಮಹತ್ವದ ಸಿದ್ಧತೆ ನಡೆಸುತ್ತಿದೆ ಎಂದು ಘೋಷಿಸಿದ್ದಾರೆ.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕನ್ನಡ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಸೇರಿದಂತೆ ಹಲವು ಗಣ್ಯರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

RelatedPosts

ಯಾದಗಿರಿಯಲ್ಲಿ ವಂದೇ ಭಾರತ್ ಸ್ಲೀಪರ್ ಎಕ್ಸ್‌ಪ್ರೆಸ್‌ ರೈಲು ನಿಲುಗಡೆಗೆ ಶಾಸಕ ಶರಣಗೌಡ ಕಂದಕೂರು ಚಾಲನೆ

ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಕೇಸ್‌: ಕೃಪಾ ಆಳ್ವಾ ಸೇರಿ ಮೂವರಿಗೆ ಷರತ್ತುಬದ್ಧ ನಿರೀಕ್ಷಣಾ ಜಾಮೀನು

ಬೆಲೆ ಏರಿಕೆ ಎಫೆಕ್ಟ್‌: ನವದಂಪತಿಗೆ ಹಾಲು, ಮೊಸರು ಗಿಫ್ಟ್‌

‘ಪ್ರಿಯಾಂಕ್ ಖರ್ಗೆ ಬಳಿ ಟ್ರೇಲರ್ ಇರಬಹುದು, ಅಸಲಿ ಪಿಕ್ಚರ್ ನಮ್ಮ ಬಳಿ ಇದೆ’: ಹೆಚ್‌ಡಿಕೆ

ADVERTISEMENT
ADVERTISEMENT
ಸರ್ಕಾರಿ, ಖಾಸಗಿ ಕಚೇರಿಗಳಲ್ಲಿ ಕನ್ನಡ ಬಾವುಟ ಕಡ್ಡಾಯ?

ಕಾರ್ಯಕ್ರಮದಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್, 71ನೇ ಕನ್ನಡ ರಾಜ್ಯೋತ್ಸವದ ಶುಭಾಶಯಗಳನ್ನು ನಾಡಿನ ಜನತೆಗೆ ತಿಳಿಸಿದರು. ಕನ್ನಡ ಭಾಷೆಗೆ ಯಾವುದೇ ಗಡಿಗಳಿಲ್ಲ. ದೇಶ-ವಿದೇಶಗಳಲ್ಲಿ ಕನ್ನಡಿಗರು ತಮ್ಮ ಭಾಷೆ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸುತ್ತಿದ್ದಾರೆ. ಕನ್ನಡದ ಅಸ್ಮಿತೆಯನ್ನು ಕಾಪಾಡುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಹೇಳಿದರು.

ಇದೇ ವೇಳೆ ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳು ಹಾಗೂ ಖಾಸಗಿ ಕಚೇರಿಗಳ ಮೇಲೂ ಕನ್ನಡ ಬಾವುಟ ಹಾರಿಸುವಂತೆ ಆದೇಶ ಹೊರಡಿಸುವ ಕುರಿತು ಸರ್ಕಾರ ಸಿದ್ಧತೆ ಮಾಡಿಕೊಂಡಿದೆ ಎಂದು ತಿಳಿಸಿದರು.

ಈ ವಿಚಾರವಾಗಿ ಕಾನೂನು ತಜ್ಞರೊಂದಿಗೆ ಈಗಾಗಲೇ ಚರ್ಚೆ ನಡೆಸಲಾಗಿದೆ. ಮುಂಬರುವ ಅಧಿವೇಶನದಲ್ಲಿ ಈ ಸಂಬಂಧ ಕೆಲವು ಮಹತ್ವದ ವಿಚಾರಗಳನ್ನು ಮಂಡಿಸಲಾಗುವುದು. ಕನ್ನಡ ಧ್ವಜವನ್ನು ಎಲ್ಲೆಡೆ ಬಳಸುವ ನಿಟ್ಟಿನಲ್ಲಿ ನಾವು ಬದ್ಧರಾಗಿರಬೇಕು. ಈ ಕುರಿತು ಸಾರ್ವಜನಿಕ ಚರ್ಚೆ ಹಾಗೂ ಶಾಸಕರ ಅಭಿಪ್ರಾಯಗಳಿಗೂ ಅವಕಾಶ ಕಲ್ಪಿಸಲಾಗುವುದು ಎಂದು ತಿಳಿಸಿದರು.

ಕನ್ನಡ ಧ್ವಜಕ್ಕೆ ಹೊಸ ರೂಪ ನೀಡಲು ಚಿಂತನೆ

ಕನ್ನಡ ಧ್ವಜದ ವಿನ್ಯಾಸದಲ್ಲಿಯೂ ಬದಲಾವಣೆ ತರುವ ಕುರಿತು ಸರ್ಕಾರ ಚಿಂತನೆ ನಡೆಸಿದೆ ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಸಾಂಪ್ರದಾಯಿಕ ಹಳದಿ ಮತ್ತು ಕೆಂಪು ಬಣ್ಣಗಳನ್ನು ಒಳಗೊಂಡಿರುವ ಕನ್ನಡ ಧ್ವಜಕ್ಕೆ ಮತ್ತೊಂದು ಬಣ್ಣವನ್ನು ಸೇರ್ಪಡೆಗೊಳಿಸುವುದರ ಜೊತೆಗೆ, ಧ್ವಜದ ಮಧ್ಯಭಾಗದಲ್ಲಿ ಕರ್ನಾಟಕದ ರಾಜ್ಯ ಲಾಂಛನವನ್ನು ಅಳವಡಿಸುವ ಪ್ರಸ್ತಾವನೆ ಇದೆ ಎಂದು ಮಾಹಿತಿ ನೀಡಿದ್ದಾರೆ.

ಈ ಸಂಬಂಧ ಸೂಕ್ತ ಮಾರ್ಗಸೂಚಿ ಹಾಗೂ ವಿನ್ಯಾಸ ರೂಪಿಸುವ ಕಾರ್ಯ ನಡೆಯುತ್ತಿದೆ. ಕನ್ನಡ ಧ್ವಜವನ್ನು ಮತ್ತಷ್ಟು ಗೌರವಯುತವಾಗಿ ರೂಪಿಸಿ, ರಾಜ್ಯದಾದ್ಯಂತ ಅದರ ಬಳಕೆಯನ್ನು ಉತ್ತೇಜಿಸುವ ಉದ್ದೇಶ ಸರ್ಕಾರಕ್ಕಿದೆ ಎಂದು ತಿಳಿಸಿದ್ದಾರೆ.

ಅಧಿವೇಶನದಲ್ಲಿ ಚರ್ಚೆ, ಬಳಿಕ ಕೇಂದ್ರಕ್ಕೆ ಪ್ರಸ್ತಾವನೆ

ಕನ್ನಡ ಧ್ವಜದ ವಿನ್ಯಾಸ ಮತ್ತು ಬಳಕೆಗೆ ಸಂಬಂಧಿಸಿದಂತೆ ಯಾವುದೇ ಅಂತಿಮ ನಿರ್ಧಾರ ಕೈಗೊಳ್ಳುವ ಮೊದಲು ಶಾಸನಾತ್ಮಕ ಹಾಗೂ ಕಾನೂನು ಪ್ರಕ್ರಿಯೆಗಳನ್ನು ಪೂರ್ಣಗೊಳಿಸುವ ಉದ್ದೇಶ ಸರ್ಕಾರಕ್ಕಿದೆ.

ಈ ಕುರಿತು ಮುಂಬರುವ ವಿಧಾನಮಂಡಲ ಅಧಿವೇಶನದಲ್ಲಿ ಚರ್ಚೆ ನಡೆಸಲಾಗುವುದು. ಶಾಸಕರು ಹಾಗೂ ಸಾರ್ವಜನಿಕರ ಅಭಿಪ್ರಾಯಗಳನ್ನು ಪರಿಗಣಿಸಿದ ಬಳಿಕ ಅಗತ್ಯ ನಿರ್ಣಯವನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಿಕೊಡಲಾಗುವುದು ಎಂದು ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಬೇರೆ ರಾಜ್ಯಗಳಲ್ಲಿಯೂ ಇಂತಹ ಧ್ವಜ ಬಳಕೆಯ ಮಾದರಿ ಇಲ್ಲ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ ಅವರು, ಕನ್ನಡ ಭಾಷೆ, ನೆಲ, ಜಲ ಮತ್ತು ಧ್ವಜದ ರಕ್ಷಣೆಗೆ ಎಲ್ಲರೂ ಕೈಜೋಡಿಸಬೇಕು ಎಂದು ಕರೆ ನೀಡಿದರು.

ಕನ್ನಡ ಭಾಷೆಗೆ ಗಡಿಗಳಿಲ್ಲ: ಡಿಕೆಶಿ

ಕನ್ನಡ ಭಾಷೆಯ ಸುದೀರ್ಘ ಇತಿಹಾಸ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಸ್ಮರಿಸಿದ ಡಿ.ಕೆ. ಶಿವಕುಮಾರ್, ಬ್ರಿಟಿಷರ ಆಡಳಿತದ ಕಾಲದಲ್ಲಿಯೂ ಮಕ್ಕಳ ಮಾತೃಭಾಷೆಯ ಆಯ್ಕೆಗೆ ಸಂಬಂಧಿಸಿದ ಇತಿಹಾಸವಿದೆ ಎಂದು ಪ್ರಸ್ತಾಪಿಸಿದರು.

ಕನ್ನಡ ನಾಡಿನ ಅಧಿದೇವತೆ ಭುವನೇಶ್ವರಿ ತಾಯಿಗೆ ಪೂಜೆ ಸಲ್ಲಿಸುವ ಮೂಲಕ ರಾಜ್ಯೋತ್ಸವವನ್ನು ಆಚರಿಸಲಾಗಿದೆ. ಕನ್ನಡ ಭಾಷೆ ಕೇವಲ ಸಂವಹನದ ಮಾಧ್ಯಮವಲ್ಲ, ಅದು ನಮ್ಮ ಬದುಕು, ಉಸಿರು ಮತ್ತು ಅಸ್ಮಿತೆಯಾಗಿದೆ. ಕನ್ನಡದ ಸಂಸ್ಕೃತಿ ಹಾಗೂ ಪರಂಪರೆಯನ್ನು ಮುಂದಿನ ಪೀಳಿಗೆಗೂ ತಲುಪಿಸುವ ಕೆಲಸವಾಗಬೇಕು ಎಂದು ಹೇಳಿದರು.

ದೇಶ-ವಿದೇಶಗಳಲ್ಲಿ ಕನ್ನಡ ಭಾಷೆ ಮತ್ತು ಸಂಸ್ಕೃತಿಯನ್ನು ಬೆಳೆಸುತ್ತಿರುವ ಕನ್ನಡಿಗರಿಗೆ ಧನ್ಯವಾದ ಸಲ್ಲಿಸಿದ ಅವರು, ವಿಶ್ವದಾದ್ಯಂತ ಇರುವ ಸಮಸ್ತ ಕನ್ನಡಿಗರಿಗೆ 71ನೇ ಕರ್ನಾಟಕ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳನ್ನು ಕೋರಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled Design 2026 11 02T182957.381

ಯಾದಗಿರಿಯಲ್ಲಿ ವಂದೇ ಭಾರತ್ ಸ್ಲೀಪರ್ ಎಕ್ಸ್‌ಪ್ರೆಸ್‌ ರೈಲು ನಿಲುಗಡೆಗೆ ಶಾಸಕ ಶರಣಗೌಡ ಕಂದಕೂರು ಚಾಲನೆ

by ಶಾಲಿನಿ ಕೆ. ಡಿ
November 2, 2026 - 6:30 pm
0

Untitled Design 2026 11 02T181150.232

ದೀಪಾವಳಿ, ಧನತ್ರಯೋದಶಿಗೆ ಬಂಪರ್‌ ಆಫರ್: ಹತ್ತೇ ನಿಮಿಷದಲ್ಲಿ ಮನೆ ಬಾಗಿಲಿಗೆ ಚಿನ್ನ ಜೊತೆಗೆ ಬೆಳ್ಳಿ ಫ್ರೀ!

by ಶಾಲಿನಿ ಕೆ. ಡಿ
November 2, 2026 - 6:13 pm
0

Untitled Design 2026 11 02T180931.494

ರೋಬೋಟ್‌ ಜಿಯಾಗೆ ಆ್ಯಕ್ಷನ್ ಕಟ್ ಹೇಳಿದ ಸಿಂಪಲ್ ಸುನಿ

by ಶಾಲಿನಿ ಕೆ. ಡಿ
November 2, 2026 - 6:06 pm
0

Untitled Design 2026 11 02T172132.932

ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಕೇಸ್‌: ಕೃಪಾ ಆಳ್ವಾ ಸೇರಿ ಮೂವರಿಗೆ ಷರತ್ತುಬದ್ಧ ನಿರೀಕ್ಷಣಾ ಜಾಮೀನು

by ಶಾಲಿನಿ ಕೆ. ಡಿ
November 2, 2026 - 5:22 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled Design 2026 11 02T182957.381
    ಯಾದಗಿರಿಯಲ್ಲಿ ವಂದೇ ಭಾರತ್ ಸ್ಲೀಪರ್ ಎಕ್ಸ್‌ಪ್ರೆಸ್‌ ರೈಲು ನಿಲುಗಡೆಗೆ ಶಾಸಕ ಶರಣಗೌಡ ಕಂದಕೂರು ಚಾಲನೆ
    November 2, 2026 | 0
  • Untitled Design 2026 11 02T172132.932
    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಕೇಸ್‌: ಕೃಪಾ ಆಳ್ವಾ ಸೇರಿ ಮೂವರಿಗೆ ಷರತ್ತುಬದ್ಧ ನಿರೀಕ್ಷಣಾ ಜಾಮೀನು
    November 2, 2026 | 0
  • Untitled Design 2026 11 02T154222.678
    ಬೆಲೆ ಏರಿಕೆ ಎಫೆಕ್ಟ್‌: ನವದಂಪತಿಗೆ ಹಾಲು, ಮೊಸರು ಗಿಫ್ಟ್‌
    November 2, 2026 | 0
  • Untitled Design 2026 11 02T141219.450
    ‘ಪ್ರಿಯಾಂಕ್ ಖರ್ಗೆ ಬಳಿ ಟ್ರೇಲರ್ ಇರಬಹುದು, ಅಸಲಿ ಪಿಕ್ಚರ್ ನಮ್ಮ ಬಳಿ ಇದೆ’: ಹೆಚ್‌ಡಿಕೆ
    November 2, 2026 | 0
  • Untitled Design 2026 11 02T120046.633
    ಹಾಸನಾಂಬೆ ದರ್ಶನಕ್ಕೆ ಹರಿದುಬಂದ ಜನಸಾಗರ: ಮೂರೇ ದಿನದಲ್ಲಿ ₹5 ಕೋಟಿಗೂ ಅಧಿಕ ಆದಾಯ!
    November 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version