• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, July 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಇಂಗ್ಲೀಷ್, ಹಿಂದಿ ಭಾಷೆಗಳ ದಾಳಿಯಿಂದ ಕನ್ನಡ‌‌ ಕಾಪಾಡಬೇಕು: ಡಿ.ಕೆ ಶಿವಕುಮಾರ್

ನವೆಂಬರ್ ತಿಂಗಳು ಪೂರ್ತಿ ಸರ್ಕಾರಿ-ಖಾಸಗಿ ಕಚೇರಿಯಲ್ಲಿ ಕನ್ನಡ ಧ್ವಜ ಹಾರಿಸುವ ಬಗ್ಗೆ ಸಚಿವ ಸಂಪುಟದಲ್ಲಿ ತೀರ್ಮಾನ: ಡಿ.ಕೆ ಶಿವಕುಮಾರ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 1, 2025 - 4:10 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 11 01t160751.949

ಬೆಂಗಳೂರು, ನವೆಂಬರ್‌ 01: “ಇಡೀ ನವೆಂಬರ್ ತಿಂಗಳಲ್ಲಿ ಖಾಸಗಿ‌ ಹಾಗೂ ಸರ್ಕಾರಿ ಕಚೇರಿಗಳಲ್ಲಿ ಕಡ್ಡಾಯವಾಗಿ ಕನ್ನಡದ ಧ್ವಜ ಹಾರಿಸುವ ಬಗ್ಗೆ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ತೀರ್ಮಾನ ಮಾಡಲಾಗುವುದು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತ ನಗರದ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಶಾಲಾ ಮಕ್ಕಳ ಪಥಸಂಚಲನದಲ್ಲಿ ವಂದನೆ ಸ್ವೀಕರಿಸಿ ಹಾಗೂ ಇದಕ್ಕೂ ಮೊದಲು ವಿಧಾನಸೌಧದ ಭುವನೇಶ್ವರಿ ಪ್ರತಿಮೆ ಬಳಿ ಮಾಧ್ಯಮಗಳ ಜತೆ ಮಾತನಾಡಿದರು.

RelatedPosts

ಜಮ್ಮ-ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: ಪ್ರವಾಹ-ಭೂಕುಸಿತಕ್ಕೆ 11 ಮಂದಿ ಬಲಿ, ಹಲವರು ನಾಪತ್ತೆ

ಚೆನ್ನಮ್ಮ ಅಂತ್ಯಕ್ರಿಯೆ ಹಿನ್ನೆಲೆ ಹಾಸನದಲ್ಲಿ ಎರಡು ದಿನ ಮದ್ಯ ಮಾರಾಟ ಬಂದ್

ರಾಜ್ಯದ ಬರ ಪರಿಸ್ಥಿತಿ ಕುರಿತು ಇಂದು ಸಿಎಂ ಡಿ. ಕೆ. ಶಿವಕುಮಾರ್ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ

ಅಜ್ಜಿಯ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಳ್ಳಲು ವಿಶೇಷ ಅನುಮತಿ ಕೋರಿದ ಪ್ರಜ್ವಲ್ ರೇವಣ್ಣ

ADVERTISEMENT
ADVERTISEMENT

“ಕರ್ನಾಟಕ ಕೇವಲ ನಾಡಲ್ಲ, ಸಂಸ್ಕೃತಿಯ ಬೀಡು. ಕನ್ನಡ ಕೇವಲ ನುಡಿಯಲ್ಲ, ನಮ್ಮ ಅಂತರಂಗದ ಮಾತು. ಕಲಿತವರಿಗೆ ಅಮೃತ, ನಡೆದವರಿಗೆ ನೆರಳು, ದಾರಿದೀಪ. ಕನ್ನಡ ಎನ್ನುವುದು ಜೀವನದ ವಿಧಾನ. ಇಂತಹ ಕನ್ನಡವನ್ನು ಇಂಗ್ಲಿಷ್ ಹಾಗೂ ಹಿಂದಿ ಭಾಷೆಯ ದಾಳಿಯಿಂದ ನಾವೆಲ್ಲರೂ ಕಾಪಾಡಿಕೊಳ್ಳಬೇಕು” ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಬನ್ನಿ ನಮ್ಮ ಸಂಗಡ ಎಂದು ಕವಿ ಅಡಿಗರ ಕವನ‌ ವಾಚಿಸಿದ ಡಿಸಿಎಂ

“ನಮ್ಮ ಉಸಿರು‌ ಕನ್ನಡ, ನಮ್ಮ ಕಸುವು ಕನ್ನಡ, ನಮ್ಮ ಹೆಸರು ಕನ್ನಡ, ನಮ್ಮ ಕಸುಬು ಕನ್ನಡ, ಕನ್ನಡವಿದು ಕನ್ನಡ, ಬನ್ನಿ ನಮ್ಮ ಸಂಗಡ” ಎಂದು ಗೋಪಾಲಕೃಷ್ಣ ಅಡಿಗರ ಕವನವನ್ನು ವಾಚಿಸಿದರು. ಆದಿಕವಿ ಪಂಪನಿಂದ ಹಿಡಿದು ಬಸವಣ್ಣ, ಅಲ್ಲಮಪ್ರಭು, ಕನಕದಾಸರು, ಪುರಂದರದಾಸರು, ಕುವೆಂಪು,‌ ಬೇಂದ್ರೆ, ಮಾಸ್ತಿ ಹೀಗೆ ಸಾಹಿತ್ಯದ ದೊಡ್ಡ ಪರಂಪರೆಯನ್ನು ನಾವು ಹೊಂದಿದ್ದೇವೆ. ಈ ಎಲ್ಲಾ ಸಾಹಿತ್ಯ ಭಂಡಾರವನ್ನು ಮಕ್ಕಳು ಬಾಚಿಕೊಳ್ಳಬೇಕು” ಎಂದು ಕರೆ ‌ನೀಡಿದರು.

“ಕನ್ನಡಕ್ಕೆ ಸುಮಾರು ಎರಡು ಸಾವಿರ ವರ್ಷಗಳ ಇತಿಹಾಸವಿದೆ. ಈ ನೆಲದಲ್ಲಿ ಏನೋ ವೈಶಿಷ್ಟ್ಯ ಅಡಗಿದೆ. ಇಲ್ಲಿಗೆ ಬಂದವರು ಯಾವುದೇ ಕಾರಣಕ್ಕೂ ಮರಳಿ ಹೋಗುವುದಿಲ್ಲ. ಎಲ್ಲರನ್ನೂ ಒಳಗೊಂಡಿರುವ ನಮ್ಮ ಕರ್ನಾಟಕ ಶಾಂತಿಯಿಂದ ಕೂಡಿದೆ. ಹೊರಗಿನಿಂದ ಬಂದವರು ಸಹ ಊಟ, ವಸತಿ ಗಳಿಸಿಕೊಂಡಿದ್ದಾರೆ. ಇದೇ ನಮ್ಮ ಕನ್ನಡ ತಾಯಿ, ಭೂಮಿಯ ವಿಶೇಷ. ಇಲ್ಲಿ ಇರುವ ಅತ್ಯುತ್ತಮ ವಾತಾವರಣ ದೇಶದ ಯಾವ ಭಾಗದಲ್ಲಿಯೂ ಇಲ್ಲ. ನಮ್ಮ ಸಂಸ್ಕೃತಿ ಹಾಗೂ ನೆಲ,‌‌ ಜಲಕ್ಕೆ ಎಲ್ಲರನ್ನೂ ಆಕರ್ಷಿಸುವ ಗುಣವಿದೆ” ಎಂದರು.

“ಎಲ್ಲಾ ಕನ್ನಡಿಗರನ್ನು ಒಗ್ಗೂಡಿಸಬೇಕು. ಕನ್ನಡಿಗರ ತ್ಯಾಗ, ಬಲಿದಾನ, ಶ್ರಮವನ್ನು ನಾವುಗಳು ಮರೆಯಬಾರದು. ಅನೇಕ ಹಿರಿಯರು ಈ ಭಾಷೆ, ನೆಲ,‌ ಜಲ, ಬಾವುಟದ ಗೌರವವನ್ನು ಕಾಪಾಡಿದ್ದಾರೆ. ದೇಶದ ಯಾವ ರಾಜ್ಯವೂ ಧ್ವಜ, ನಾಡಗೀತೆ ಹೊಂದಿಲ್ಲ. ಆದರೆ ನಾವು ಇವೆರಡನ್ನೂ ಹೊಂದಿದ್ದೇವೆ. ವಿಧಾನಸೌಧದ ಆವರಣದಲ್ಲಿ ತಾಯಿ ಭುವನೇಶ್ವರಿ ಪ್ರತಿಮೆ ಸ್ಥಾಪಿಸಿದ್ದೇವೆ. ಫಲಕಗಳಲ್ಲಿ ಶೇ. 60 ರಷ್ಟು ಕನ್ನಡ ಕಡ್ಡಾಯಗೊಳಿಸಿದ್ದೇವೆ. ಬೆಂಗಳೂರಿನಲ್ಲಿರುವ ಉದ್ದಿಮೆಗಳು, ಕಾರ್ಖಾನೆಗಳು, ವಾಣಿಜ್ಯ ಕೇಂದ್ರಗಳಲ್ಲಿ ರಾಜ್ಯೋತ್ಸವ ಆಚರಣೆ ಕಡ್ಡಾಯ ಮಾಡಿದ್ದೇವೆ” ಎಂದರು.

“ಈ ವರ್ಷ ಸಮೃದ್ಧಿಯಿಂದ ಕೂಡಿದೆ.‌ ಮಳೆ ಇಳೆಯನ್ನು ತಂಪುಗೊಳಿಸಿದೆ. ಕೆಆರ್ ಎಸ್ ಒಂದೇ ವರ್ಷದಲ್ಲಿ ಮೂರು ಬಾರಿ ತುಂಬಿದೆ” ಎಂದು ಹೇಳಿದರು.

ಜಾಗತಿಕ ಮಟ್ಟಕ್ಕೆ ಕನ್ನಡ, ಕರ್ನಾಟಕವನ್ನು ಕೊಂಡೊಯ್ಯಬೇಕು

“ಕುವೆಂಪು ಅವರು ಹೇಳಿರುವಂತೆ ಕರ್ನಾಟಕ ಶಾಂತಿಯ ತೋಟ. ನಾವೆಲ್ಲರೂ ಜಾತಿ, ಧರ್ಮಗಳನ್ನು ಬಿಟ್ಟು ಸಹಬಾಳ್ವೆಯಿಂದ ಕರ್ನಾಟಕದ ಏಳಿಗೆಗೆ ದುಡಿಯಬೇಕು. ಜಾಗತಿಕವಾಗಿ ಬೆಂಗಳೂರು ಬೆಳಗುತ್ತಿದೆ. ಪ್ರಪಂಚದ ಜನರು ನಮ್ಮನ್ನು ಗಮನಿಸುತ್ತಿದ್ದಾರೆ. ಕನ್ನಡ, ಕರ್ನಾಟಕವನ್ನು ಜಾಗತಿಕ ಮಟ್ಟಕ್ಕೆ ನಾವೆಲ್ಲರೂ ಕೊಂಡೊಯ್ಯಬೇಕು. ಭುವನೇಶ್ವರಿ ತಾಯಿ ಇಡೀ ಭೂಮಿಗೆ ಒಡತಿ. ಕರ್ನಾಟಕದ ನಾಡದೇವತೆ” ಎಂದರು.

“ಶಾಲಾ ಮಕ್ಕಳ ಪಥಸಂಚಲನ ನೋಡುತ್ತಿದ್ದರೆ ನನಗೂ ಸಹ ನನ್ನ ಬಾಲ್ಯದ ದಿನಗಳು ನೆನಪಾಗುತ್ತದೆ. ನಾನು ಸಹ ಇದೇ ರೀತಿ ಸಮವಸ್ತ್ರ ಧರಿಸಿ ಶಿಸ್ತಿನಿಂದ ನಡೆಯುತ್ತಿದ್ದೆ. ಬೇಸ್ ಡ್ರಮ್ ನುಡಿಸುವವನಾಗಿ ಹೆಜ್ಜೆ ಹಾಕಿದ್ದೆ. ಇದೇ ಕ್ರೀಡಾಂಗಣದಲ್ಲಿ ನಾನು ನಡೆದಾಡಿದ್ದು ನೆನಪಾಯಿತು” ಎಂದು ಶಾಲಾ ದಿನವನ್ನು ಮೆಲುಕು ಹಾಕಿದರು.

“ಸಾಮ್ರಾಟ್ ಅಶೋಕ ಚಕ್ರವರ್ತಿಯ ಕಾಲದಿಂದಲೂ ಕನ್ನಡದ ಹಿರಿಮೆಯಿದೆ. ಕನ್ನಡ ಹಾಗೂ ಕರ್ನಾಟಕದ ಇತಿಹಾಸವನ್ನು ಮಾಧ್ಯಮಗಳು ಅತ್ಯುತ್ತಮವಾಗಿ ವರದಿ ಮಾಡಿವೆ‌.‌ ಕರ್ನಾಟಕದ ಸಮಸ್ತ ಜನತೆಗೆ ಕರ್ನಾಟಕ ರಾಜ್ಯೋತ್ಸವದ ಶುಭಾಶಯಗಳನ್ನು ತಿಳಿಸುತ್ತೇನೆ” ಎಂದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಮೇಘಸ್ಫೋಟ

ಜಮ್ಮ-ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: ಪ್ರವಾಹ-ಭೂಕುಸಿತಕ್ಕೆ 11 ಮಂದಿ ಬಲಿ, ಹಲವರು ನಾಪತ್ತೆ

by ಶಾಲಿನಿ ಕೆ. ಡಿ
July 19, 2026 - 3:47 pm
0

ವಾಂಗ್ಚುಕ್ (13)

ನಾಳೆಯಿಂದ ಸಂಸತ್ತಿನ ಮುಂಗಾರು ಅಧಿವೇಶನ ಆರಂಭ

by ದಿಶಾ ಕೆ. ಎಸ್.
July 19, 2026 - 2:36 pm
0

ವಾಂಗ್ಚುಕ್ (12)

ಫಿಫಾ ವಿಶ್ವಕಪ್ ಫೈನಲ್ 2026: ಪುಟ್ಬಾಲ್ ಅಭಿಮಾನಿಗಳು ತಾಳ್ಮೆಯಿಂದ ವರ್ತಿಸಲು CM DK ಶಿವಕುಮಾರ್ ಮನವಿ

by ದಿಶಾ ಕೆ. ಎಸ್.
July 19, 2026 - 1:42 pm
0

ವಾಂಗ್ಚುಕ್ (11)

ಚೆನ್ನಮ್ಮ ಅಂತ್ಯಕ್ರಿಯೆ ಹಿನ್ನೆಲೆ ಹಾಸನದಲ್ಲಿ ಎರಡು ದಿನ ಮದ್ಯ ಮಾರಾಟ ಬಂದ್

by ದಿಶಾ ಕೆ. ಎಸ್.
July 19, 2026 - 12:55 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮೇಘಸ್ಫೋಟ
    ಜಮ್ಮ-ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: ಪ್ರವಾಹ-ಭೂಕುಸಿತಕ್ಕೆ 11 ಮಂದಿ ಬಲಿ, ಹಲವರು ನಾಪತ್ತೆ
    July 19, 2026 | 0
  • ಅಪಾಯ (14)
    E20 ಪೆಟ್ರೋಲ್‌ನಿಂದ ಎಂಜಿನ್ ಸಮಸ್ಯೆ: ವಾಹನ ಮಾಲೀಕನಿಗೆ ಪರಿಹಾರ ಕೊಡಿ ಎಂದ ಕೋರ್ಟ್‌
    July 16, 2026 | 0
  • ಅಪಾಯ (13)
    ಕುಡಿಬೇಡ ಎಂದಿದ್ದಕ್ಕೆ ಅಜ್ಜಿಯನ್ನೇ ಚಾಕುವಿನಿಂದ ಇರಿದು ಕೊಂದ ಮೊಮ್ಮಗ
    July 16, 2026 | 0
  • ಅಪಾಯ (12)
    2ನೇ ತರಗತಿ ಹಿಂದೂ ವಿದ್ಯಾರ್ಥಿಗೆ ‘ಕಲ್ಮಾ’ ಪಠಿಸಲು ಸೂಚನೆ: ಶಿಕ್ಷಕಿ ವಜಾ
    July 16, 2026 | 0
  • ಅಪಾಯ (11)
    ಸೋಶಿಯಲ್ ಮೀಡಿಯಾ ಬಳಕೆದಾರರೇ ಎಚ್ಚರ!: ಅಸಭ್ಯ ಕಮೆಂಟ್ ಮಾಡಿದ್ರೆ ಜೈಲು ಗ್ಯಾರಂಟಿ
    July 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version