• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, September 8, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು; ಸಿಎಂ ಡಿ.ಕೆ ಶಿವಕುಮಾರ್ ಆಗ್ರಹ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 23, 2026 - 6:34 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
ಟಿ (6)

ಗುರುವಾರ, ಜುಲೈ 23: “ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ಪ್ರಧಾನಿ ನರೇಂದ್ರ ಮೋದಿಯವರು ಈಗ ಮಾತನಾಡುವ ಬದಲು ಪ್ರಾರಂಭದಲ್ಲೇ ಮಾತನಾಡಬೇಕಿತ್ತು. ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ಯಾರನ್ನೂ ಕಾಪಾಡುವ ಪ್ರಶ್ನೆಯೇ ಕೇಂದ್ರ ಸರ್ಕಾರದ ಮುಂದಿರಬಾರದು” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಆಗ್ರಹಿಸಿದರು.

ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯೆ ನೀಡಿದರು. “ಬಿಜೆಪಿಯವರೇ ನಿಮ್ಮ ಮಕ್ಕಳೂ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ದೇಶದ ಯುವ ಜನತೆಯ ಭವಿಷ್ಯ ಹಾಳಾಗುತ್ತಿದೆ. ವೈಫಲ್ಯವನ್ನು ಬಿಜೆಪಿಯವರು ಒಪ್ಪಿಕೊಳ್ಳಬೇಕು. ಒಬ್ಬ ವ್ಯಕ್ತಿ ರಾಜಿನಾಮೆ ಕೊಡುವುದರಿಂದ ಏನಾಗಲಿದೆ? ಪ್ರಶ್ನೆ ಪತ್ರಿಕೆಗಳು ಸೋರಿಕೆಯಾದಾಗ ಇಂತಹ ಘಟನೆ ಬಗ್ಗೆ ಯಾರಾದರೂ ಜವಾಬ್ದಾರಿ ಹೊರಬೇಕಲ್ಲವೇ? ಇದಕ್ಕೆ ಯಾರು ಹೊಣೆ?” ಎಂದು ಕಿಡಿಕಾರಿದರು.

RelatedPosts

ದೇವನಹಳ್ಳಿಯಲ್ಲಿ ಭೀಕರ ಅಪಘಾತ: ಟಿಪ್ಪರ್ ಡಿಕ್ಕಿಗೆ 23 ವರ್ಷದ ಯುವಕ ಬಲಿ

ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್: ಎರಡು ದಿನ ಪೊಲೀಸ್ ಕಸ್ಟಡಿಗೆ

ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ 6000 ಕ್ಯುಸೆಕ್ ಕಾವೇರಿ ನೀರು ಹರಿಸಲು ಶಿಫಾರಸು

ಬಿಜೆಪಿಗೆ ಬಿಗ್ ಶಾಕ್: ‘ಬಳ್ಳಾರಿ ಚಲೋ’ ಸಮಾರೋಪಕ್ಕೆ ಮೈದಾನ ನೀಡಲು ಸರ್ಕಾರ ನಕಾರ

ADVERTISEMENT
ADVERTISEMENT

“ಪ್ರಶ್ನೆ ಪತ್ರಿಕೆ ಸೋರಿಕೆ ಬಗ್ಗೆ ಸಂಸತ್ತಿನಲ್ಲಿ ಚರ್ಚೆಯಾಗಲಿ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲವೂ ಚರ್ಚೆಯಾಗಬೇಕು. ಟೀಕೆ ಮಾಡಿದಾಗ ನಾವು ಹಾಗೂ ನೀವು ಇಬ್ಬರೂ ಒಪ್ಪಿ ತಿದ್ದಿಕೊಳ್ಳಬೇಕು. ನಾವು ಯುವಕರ ಭವಿಷ್ಯದ ಬಗ್ಗೆ ಆಲೋಚನೆ ಮಾಡುತ್ತಿದ್ದೇವೆ. ಈಗಾಗಲೇ ಸುಮಾರು 100 ಕ್ಕೂ ಹೆಚ್ಚು ಪರೀಕ್ಷೆಗಳ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗಿವೆ” ಎಂದರು.

ಪ್ರಶ್ನೆ ಪತ್ರಿಕೆ ಸೋರಿಕೆ ರಾಜಕೀಯ ವಿಚಾರವಲ್ಲ

“ಪ್ರಶ್ನೆ ಪತ್ರಿಕೆ ಸೋರಿಕೆ ಎಂಬುದು ರಾಜಕೀಯ ಪಕ್ಷಗಳ ವಿಚಾರವಲ್ಲ, ದೇಶದ ಭವಿಷ್ಯದ ವಿಚಾರ. ಪಾರದರ್ಶಕ, ಶಕ್ತಿಯುತ, ಉತ್ತಮ ಗುಣಮಟ್ಟದ ಶಿಕ್ಷಣ ದೊರೆಯುವಂತೆ ಮಾಡುವುದು ನಮ್ಮೆಲ್ಲರ ಜವಾಬ್ದಾರಿ. ಯಾವುದೇ ಪರೀಕ್ಷೆಗಳು ನಡೆದರು ಅವು ಪಾರದರ್ಶಕವಾಗಿರಬೇಕು. ಇಡೀ ಪ್ರಪಂಚ ಭಾರತದ ಯುವ ಜನತೆಯ ಭವಿಷ್ಯದ ಬಗ್ಗೆ ಆಲೋಚನೆ ಮಾಡುತ್ತಿದೆ. ನಮ್ಮ ದೇಶ ಪ್ರತಿಭಾವಂತರ ದೇಶ. ಇಡೀ ಪ್ರಪಂಚದಲ್ಲಿಯೇ ನಮ್ಮಲ್ಲಿ ಇರುವಷ್ಟು ಪ್ರತಿಭೆಗಳು ಎಲ್ಲಿಯೂ ಇಲ್ಲ ಎಂದು ಅನೇಕರು ಒಪ್ಪಿಕೊಂಡಿದ್ದಾರೆ. ನಮ್ಮನ್ನು ಇಡೀ ಪ್ರಪಂಚವೇ ನೋಡುತ್ತಿರುವ ಹೊತ್ತಿನಲ್ಲಿ ನಮ್ಮ ಶಿಕ್ಷಣದ ಗುಣಮಟ್ಟವನ್ನು ನಾವು ಕಾಪಾಡಬೇಕಿದೆ” ಎಂದರು.

ಮಾಧ್ಯಮಗಳು ಪ್ರಶ್ನೆ ಮಾಡಬೇಕಿತ್ತು

“ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಭಟನೆ ಮಾಡುವುದು ಪ್ರತಿಪಕ್ಷಗಳ, ಎಲ್ಲರ, ಯುಜನತೆಯ ಹಕ್ಕು. ಇಂತಹ ಸಂದರ್ಭದಲ್ಲಿ ಅವರ ಮೇಲೆ ಲಾಠಿಚಾರ್ಜ್ ಮಾಡಲಾಗಿದೆ, ತೊಂದರೆ ನೀಡಲಾಗಿದೆ. ಸುದ್ದಿ ಮಾಧ್ಯಮಗಳ ಮೇಲೆ ನಿರ್ಬಂದ ಹೇರಿ, ಧಮ್ಕಿ ಹಾಕಿ ಪ್ರಸಾರ ಆಗದಂತೆ ನೋಡಿಕೊಳ್ಳಲಾಗಿದೆ. ಅಲ್ಲಿದ್ದವರು ಮಾಡಿದ ವಿಡಿಯೋಗಳು ಯೂಟ್ಯೂಬ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿವೆ. ಮಾಧ್ಯಮಗಳು ಪ್ರಜಾಪ್ರಭುತ್ವದ ಅಂಗ. ಹೀಗಿದ್ದಾಗ ಮಾಧ್ಯಮಗಳು ಪ್ರಶ್ನೆ ಮಾಡದೇ ಏನು ಮಾಡುತ್ತಿದ್ದವು. ನೀವುಗಳು ಏಕೆ ಪ್ರತಿಭಟನೆ ಮಾಡಲಿಲ್ಲ. ಪ್ರಶ್ನೆ ಮಾಡದ ನಿಮ್ಮಗಳ ತಪ್ಪೂ ಇದೇ. ಸಾಮಾಜಿಕ ಜಾಲತಾಣದಲ್ಲಿ ಬಂದ ಮೇಲೆ ಮಾಧ್ಯಮಗಳು ವಿಷಯಗಳನ್ನು ಎತ್ತಿಕೊಂಡಿವೆ. ಇದು ಹೊಸ ತಲೆಮಾರಿನ ಹೋರಾಟ” ಎಂದರು.

ಮೊಟ್ಟೆ ಹೊಡೆದಿದ್ದು ಸರಿಯಲ್ಲ

“ನಾವೂ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ಪ್ರತಿಭಟನೆ ಮಾಡಿದ್ದೇವೆ. ಮಂಗಳವಾರದಂದು ಕಾಂಗ್ರೆಸ್ ಕಚೇರಿ ಬಳಿ ಮೊಟ್ಟೆ ಹೊಡೆದಿದ್ದನ್ನು ಸರಿ ಎಂದು ಹೇಳುವುದಿಲ್ಲ. ಕಾನೂನಿನ ಪ್ರಕಾರ ಯಾವ ಕ್ರಮ ತೆಗೆದುಕೊಳ್ಳಲಾಗುವುದು ಎಂದು ನಮ್ಮ ಗೃಹಸಚಿವರು ಈಗಾಗಲೇ ತಿಳಿಸಿದ್ದಾರೆ. ಬಿಜೆಪಿಯವರು ಹಿಂದೆ ಏನೇನು ಮಾಡಿದ್ದರು ಎಂದು ಅವರೂ ನೆನಪಿನಲ್ಲಿ ಇಟ್ಟುಕೊಳ್ಳಬೇಕು. ಲಾಠಿ, ಮಚ್ಚು, ರೈಫಲ್ ಗಳು ಸಿಕ್ಕಿದ್ದವು. ಪೊನ್ನಂಪೇಟೆಯ ಶಾಲೆಯ ಆವರಣದಲ್ಲಿ ರೈಫಲ್ ತರಭೇತಿ ನೀಡಿದ್ದರು. ನಿಮ್ಮದೂ ಇತಿಹಾಸಗಳಿವೆ” ಎಂದರು.

ರಾಜ್ಯದಲ್ಲಿ ಕೊತ್ವಾಲ್ ಆಡಳಿತ ನಡೆಯುತ್ತಿದೆ ಎನ್ನುವ ಬಿಜೆಪಿ ಹೇಳಿಕೆ ಬಗ್ಗೆ ಕೇಳಿದಾಗ, “ಅವರ ಖುಷಿಗೆ ಏನು ಬೇಕಾದರೂ, ಹೆಂಗೆ ಬೇಕಾದರೂ ಮಾತನಾಡಿಕೊಳ್ಳಲಿ. ನಾನು ಈ ಸ್ಥಾನಕ್ಕೆ ಬರಲು ವಿದ್ಯಾರ್ಥಿ ನಾಯಕನಾಗಿ ಬೆಳೆದವನು. ಹಳ್ಳಿಯಲ್ಲಿ ಹುಟ್ಟಿದ ನಾನು ಪರಿಶುದ್ಧವಾದ ರಾಜಕಾರಣ, ಆಡಳಿತ ಮಾಡುತ್ತಿದ್ದೇನೆ. ಇದನ್ನು ಅವರ ಕೈಯಲ್ಲಿ ತಡೆದುಕೊಳ್ಳಲು ಆಗುತ್ತಿಲ್ಲ ಎಂದರೆ ಏನು ಮಾಡಲು ಆಗುವುದಿಲ್ಲ” ಎಂದು ವ್ಯಂಗ್ಯವಾಡಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ನಾಲ್ಕು ದಿನಕ್ಕೆ 150ಕೋಟಿ.. (2)

ದೇವನಹಳ್ಳಿಯಲ್ಲಿ ಭೀಕರ ಅಪಘಾತ: ಟಿಪ್ಪರ್ ಡಿಕ್ಕಿಗೆ 23 ವರ್ಷದ ಯುವಕ ಬಲಿ

by ಕವಿತಾ
September 8, 2026 - 4:31 pm
0

ನಾಲ್ಕು ದಿನಕ್ಕೆ 150ಕೋಟಿ.. (1)

ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್: ಎರಡು ದಿನ ಪೊಲೀಸ್ ಕಸ್ಟಡಿಗೆ

by ಕವಿತಾ
September 8, 2026 - 4:17 pm
0

ನಾಲ್ಕು ದಿನಕ್ಕೆ 150ಕೋಟಿ..

ನಾಲ್ಕು ದಿನಕ್ಕೆ 150ಕೋಟಿ.. ಮಿರ್ಜಾಪುರ್ ಮೂವಿ ಸೆನ್ಸೇಷನ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 8, 2026 - 4:00 pm
0

Untitled design (39)

ಭಾರತಕ್ಕೆ ದೋಖಾ ಮಾಡಿದ ಮಾಲ್ಡೀವ್ಸ್ ತಿಲಾಪುಷ್ಟಿ ಮೇಲೆ ಚೀನಾ ಕಣ್ಣು

by Hemanth Kumar S
September 8, 2026 - 3:51 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಆಸ್ಟ್ರಾ (2)
    ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ 6000 ಕ್ಯುಸೆಕ್ ಕಾವೇರಿ ನೀರು ಹರಿಸಲು ಶಿಫಾರಸು
    September 8, 2026 | 0
  • ಬಿಜೆಪಿಗೆ ಬಿಗ್ ಶಾಕ್ ‘ಬಳ್ಳಾರಿ ಚಲೋ’ ಸಮಾರೋಪಕ್ಕೆ ಮೈದಾನ ನೀಡಲು ಸರ್ಕಾರ ನಕಾರ
    ಬಿಜೆಪಿಗೆ ಬಿಗ್ ಶಾಕ್: ‘ಬಳ್ಳಾರಿ ಚಲೋ’ ಸಮಾರೋಪಕ್ಕೆ ಮೈದಾನ ನೀಡಲು ಸರ್ಕಾರ ನಕಾರ
    September 8, 2026 | 0
  • Untitled design 2026 09 08T120303.600
    ಕೆಂಪಗೊಂಡಿ ಹಾವಳಿ ಹೆಚ್ಚಾದೀತಲೇ ಎಚ್ಚರ.!: ಆನೆಕೊಂಡ ಮರಡಿ ಬಸವೇಶ್ವರ ಕಾರ್ಣಿಕ ನುಡಿ
    September 8, 2026 | 0
  • ಚಿಂತೆ ಕಾಡಬಹುದು.! (12)
    ಬೆಂಗಳೂರಿನಲ್ಲಿ 180 ಜೀವಂತ ಇಂಡಿಯನ್ ಸ್ಟಾರ್ ಆಮೆಗಳ ಜಪ್ತಿ
    September 8, 2026 | 0
  • ಚಿಂತೆ ಕಾಡಬಹುದು.! (10)
    ರಕ್ತ ಹೆಪ್ಪುಗಟ್ಟುವಂತೆ ವಿದ್ಯಾರ್ಥಿ ಕಣ್ಣಿಗೆ ಥಳಿಸಿದ ಶಿಕ್ಷಕ: FIR ದಾಖಲು
    September 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version