• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 23, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಪಕ್ಷವನ್ನು ಅಧಿಕಾರಕ್ಕೆ ತಂದ ಕಾರ್ಯಕರ್ತರ ಜೊತೆ ನಾವು ಸದಾ ಇರುತ್ತೇವೆ: ಡಿ.ಕೆ.ಶಿವಕುಮಾರ್!

"ಎದ್ದೆದ್ದು ಬೀಳುತಿಹೆ, ಗುದ್ದಾಡಿ ಸೋಲುತಿಹೆ" ಎನ್ನುವ ಡಿವಿಜಿ ಕಗ್ಗದ ಮೂಲಕ ವಿಪಕ್ಷಗಳ ಗದ್ದಲಕ್ಕೆ ಉತ್ತರ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
March 11, 2025 - 3:23 pm
in Flash News, ಕರ್ನಾಟಕ
0 0
0
Befunky collage 2025 03 11t151249.193

“ನಮ್ಮ ಸರ್ಕಾರವನ್ನು ಅಧಿಕಾರಕ್ಕೆ ತಂದಂತಹ ಕಾರ್ಯಕರ್ತರಿಗೆ ಸರ್ಕಾರದ ಕಾರ್ಯಕ್ರಮಗಳ ಮೂಲಕ ಅನುಕೂಲ ಮಾಡಿಕೊಡುವ ಹಾಗೂ ಹುದ್ದೆಗಳನ್ನು ಕೊಡುವ ಹಕ್ಕು ನಮಗಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸರ್ಕಾರದ ನಿಲುವನ್ನು ಸಮರ್ಥಿಸಿಕೊಂಡರು.

ವಿಧಾನಸಭೆ ಪ್ರಶ್ನೋತ್ತರ ಕಲಾಪದ ವೇಳೆ ಶಾಸಕ ಎಂ.ಟಿ.ಕೃಷ್ಣಪ್ಪ ಅವರ ಅವರು ಗ್ಯಾರಂಟಿ ಅನುಷ್ಠಾನ ಸಮಿತಿಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರನ್ನು ಕೂರಿಸಲಾಗಿದೆ. ಅವರಿಗೆ ವೇತನ ನೀಡಲಾಗುತ್ತಿದೆ ಎನ್ನುವ ಆಕ್ಷೇಪಕ್ಕೆ ಉತ್ತರ ನೀಡಲು ಡಿಸಿಎಂ ಅವರು ಮುಂದಾದಾಗ ಗದ್ದಲ ಎಬ್ಬಿಸಿದ ವಿಪಕ್ಷಗಳಿಗೆ ಮಂಗಳವಾರ ತಿರುಗೇಟು ನೀಡಿದರು.

RelatedPosts

IND vs ENG: ಟೆಸ್ಟ್‌ನಿಂದ ರಿಷಭ್‌ ಪಂತ್‌ ಔಟ್‌..ಟೀಂ ಇಂಡಿಯಾಗೆ ಆಘಾತ.!

ವಂದೇ ಭಾರತ್ ರೈಲಿನ ಆಹಾರದಲ್ಲಿ ಹುಳ: ವೈರಲ್‌ ಆಯ್ತು ಫೋಟೋ

ಕರಾವಳಿಯಲ್ಲಿ ಭಾರೀ ಮಳೆ; ಈ ಜಿಲ್ಲೆಗಳಲ್ಲಿ ನಾಳೆ ಶಾಲೆ-ಕಾಲೇಜುಗಳಿಗೆ ರಜೆ

ಬಾಹ್ಯಾಕಾಶದಿಂದ ಭೂಮಿಗೆ ಬಂದ ಬಳಿಕ ನಡೆಯಲು ಕಲಿಯುತ್ತಿದ್ದಾರೆ ಶುಭಾಂಶು ಶುಕ್ಲಾ

ADVERTISEMENT
ADVERTISEMENT

“52 ಸಾವಿರ ಕೋಟಿಯ ಬೃಹತ್ ಯೋಜನೆ ಜನರಿಗೆ ತಲುಪುತ್ತಿದೆಯೋ ಇಲ್ಲವೋ ಎಂದು ಮನೆ, ಮನೆಗೆ ತೆರಳಿ ಪರೀಕ್ಷೆ ಮಾಡಿ, ಜನರಿಗೆ ಉಪಯೋಗವಾಗುತ್ತಿದೆಯೇ ಇಲ್ಲವೇ ಎಂದು ತಿಳಿಯಲು ಕಾರ್ಯಕರ್ತರಿಗೆ ಅವಕಾಶ ಮಾಡಿಕೊಟ್ಟರೆ ಅದನ್ನು ನಿಮ್ಮ ಕೈಯಲ್ಲಿ ತಡೆದುಕೊಳ್ಳಲು ಆಗುತ್ತಿಲ್ಲವಲ್ಲ” ಎಂದು ಲೇವಡಿ ಮಾಡಿದರು.

ಈ ವೇಳೆ ಮಾತನಾಡಿದ ವಿಪಕ್ಷ ನಾಯಕ ಅಶೋಕ ಅವರು ರೂ. 187 ಕೋಟಿ ಸರ್ಕಾರದ ಹಣವನ್ನು ಬಳ್ಳಾರಿಯಲ್ಲಿ ಹಂಚಿದ್ದಾರೆ, ಪಕ್ಷಕ್ಕೆ ಕಾರ್ಯಕರ್ತರಿಗೆ ಬಳಸಿಕೊಂಡಿದ್ದಾರೆ ಎಂದರು. ಈ ಮಾತಿಗೆ ಕೆರಳಿದ ಡಿಸಿಎಂ ಅವರು, “ಈ ವಿಚಾರವನ್ನು ಚರ್ಚೆಗೆ ತೆಗೆದುಕೊಳ್ಳಲಿ ಇದಕ್ಕೆ ನಾವು ಉತ್ತರವನ್ನು ನೀಡುತ್ತೇವೆ. ಬಜೆಟ್ ಮೇಲೆ ಚರ್ಚೆ ಇದೆಯಲ್ಲಾ ಆಗ ಈ ವಿಚಾರ ಮಾತನಾಡಿ” ಎಂದರು.

“ಈ ರಾಜ್ಯದ ಜನ ನಮಗೆ 138 ಸ್ಥಾನಗಳನ್ನು ನೀಡಿ ಶಕ್ತಿ ತುಂಬಿದ್ದಾರೆ. ವಿರೋಧ ಪಕ್ಷದ ನಾಯಕರು ಹಾಗೂ ವಿಪಕ್ಷಗಳ ಶಾಸಕರು ಬಂದು ನಮಗೂ ಸಮಿತಿಗಳಲ್ಲಿ ಅಧ್ಯಕ್ಷ, ಸದಸ್ಯ ಸ್ಥಾನ ನೀಡಿ ಎಂದು ಮನವಿ ಮಾಡಿದ್ದಾರೆ. ಇದು ನನ್ನೊಬ್ಬನ ನಿರ್ಧಾರವಲ್ಲ, ಇದರ ಬಗ್ಗೆ ಕ್ಯಾಬಿನೆಟ್ ಅಲ್ಲಿ ಚರ್ಚೆ ಮಾಡಿ ತೀರ್ಮಾನ ಮಾಡುತ್ತೇವೆ. ನಾವು ಎಂದಿಗೂ ನಮ್ಮ ಕಾರ್ಯಕರ್ತರ ಜೊತೆ ಇದ್ದೇ ಇರುತ್ತೇವೆ” ಎಂದರು.

ಈ ವೇಳೆ ವಿಪಕ್ಷಗಳ ಶಾಸಕರು ಗದ್ದಲ ಎಬ್ಬಿಸಿದರು. ಆಗ ಶಿವಕುಮಾರ್ ಅವರು ಡಿವಿಜಿಯವರ,
“ಎದ್ದೆದ್ದು ಬೀಳುತಿಹೆ, ಗುದ್ದಾಡಿ ಸೋಲುತಿಹೆ
ಗದ್ದಲವ ತುಂಬಿ ಪ್ರಸಿದ್ದನಾಗುತಿಹೆ
ಉದ್ಧರಿಸುವೆನು ಜಗವನೆನ್ನುತಿಹ ಸಖನೆ,
ನಿನ್ನುದ್ಧಾರವೆಷ್ಟಾಯ್ತೊ? – ಮಂಕುತಿಮ್ಮ” ಕವನದ ಮೂಲಕ ನೀಡಿದರು.

“ನಾವು ಗ್ಯಾರಂಟಿಗಳನ್ನು ವಿರೋಧ ಮಾಡಿಲ್ಲ” ಎನ್ನುವ ಬಿಜೆಪಿ ಶಾಸಕ ಸುನೀಲ್ ಕುಮಾರ್ ಹೇಳಿದಾಗ ಉತ್ತರಿಸಿದ ಡಿಸಿಎಂ, “ಪ್ರಾರಂಭದಲ್ಲಿ ಗ್ಯಾರಂಟಿಗಳಿಗೆ ವಿರೋಧ ಮಾಡಿದರು. ಆದರೂ ನಾವು ಅನುಷ್ಟಾನಕ್ಕೆ ತಂದೆವು. ಜನರಿಗೆ ತಲುಪಿತು. ಪ್ರಧಾನಮಂತ್ರಿಗಳಿಂದ ಎಲ್ಲರೂ ಗ್ಯಾರಂಟಿ ಯೋಜನೆಗಳಿಗೆ ಟೀಕೆ ಮಾಡಿರುವವರೆ” ಎಂದರು.

ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿಇರುವ ತನಕ ಗ್ಯಾರಂಟಿ ನಿಲ್ಲಿಸಲ್ಲ

“ನಾವು ಈ ರಾಜ್ಯದ ಬಡಜನತೆಗೆ, ಮಹಿಳೆಯರಿಗೆ ಅನುಕೂಲವಾಗಲಿ ಎಂದು ಗ್ಯಾರಂಟಿ ಮೂಲಕ ಅನುಕೂಲ ಮಾಡಿಕೊಟ್ಟಿದ್ದೇವೆ. ಹೆಣ್ಣು ಕುಟುಂಬದ ಕಣ್ಣು ಎಂದು ಅವರಿಗೆ ಸಹಾಯ ಮಾಡಿದ್ದೇವೆ. ಒಂದು ಸಮಯದಲ್ಲಿ ವಿಪಕ್ಷಗಳು ನಮ್ಮನ್ನು ಎದುರಿಸಲು ಪ್ರಯತ್ನಪಟ್ಟರು. ಈ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿಇರುವ ತನಕ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲು ಸಾಧ್ಯವಿಲ್ಲ. ಇದು ನಮ್ಮ ಬದ್ಧತೆ” ಎಂದರು.

“ನಮ್ಮ ಜನ ಬೆಲೆ ಏರಿಕೆಯಿಂದ ತತ್ತರಿಸಿ ಹೋಗಿದ್ದರು. ಪ್ರತಿಯೊಂದು ಪದಾರ್ಥಗಳ ಬೆಲೆಯೂ ಹೆಚ್ಚಾಗಿತ್ತು. ಆದ ಕಾರಣಕ್ಕೆ ನಮ್ಮ ಸರ್ಕಾರ ಐದು ಗ್ಯಾರಂಟಿಗಳನ್ನು ಜಾರಿಗೆ ತಂದಿತು. ಈ ಯೋಜನೆಗಳಿಗೆ ನೂರಾರು ಟೀಕೆ- ಟಿಪ್ಪಣಿಗಳು ಬಂದವು. ಒಂದು ಕಾಳು ಕಡಿಮೆ ಕೊಟ್ಟರೂ ಸಹ ಸುಮ್ಮನಿರುವುದಿಲ್ಲ ಎಂದು ಯಡಿಯೂರಪ್ಪ ಅವರು ಹೇಳಿದರು. ಇದು ಕಾಂಗ್ರೆಸ್ ಸರ್ಕಾರದಿಂದ ಸಾಧ್ಯವೇ ಎಂದರು. ನಾವು ಅಧಿಕಾರಕ್ಕೆ ಬಂದ ಮೊದಲನೇ ದಿನವೇ ಐದು ಗ್ಯಾರಂಟಿಗಳಿಗೆ ಒಪ್ಪಿಗೆ ಕೊಟ್ಟು ಆದೇಶ ಹೊರಡಿಸಿದೆವು” ಎಂದು ಹೇಳಿದರು.

“ಒಂದು ರಾಜ್ಯದ ಶೇ 20 ರಷ್ಟು ಬಜೆಟ್ ಅಂದರೆ 50 ಸಾವಿರ ಕೋಟಿಯಷ್ಟು ಹಣ ಮೀಸಲು ಇಡಲು ಎಷ್ಟು ಸಮಸ್ಯೆಯಿದೆ ಎನ್ನುನ ಅರಿವು ನಮಗಿದೆ. ಆದರೆ ನಮಗೆ ಜನರ ಕಲ್ಯಾಣ ಮುಖ್ಯ. ಜೀವ ಇದ್ದರೆ ಜೀವನ. ಒಂದು ಗ್ಯಾಸ್ ಸಿಲಿಂಡರ್ ಬೆಲೆ ರೂ. 1,100, ಅಡುಗೆ ಎಣ್ಣೆ ಬೆಲೆ ರೂ.200 ಸೇರಿದಂತೆ, ಸಿಮೆಂಟ್, ಪೆಟ್ರೋಲ್, ಡಿಸೇಲ್ ಬೆಲೆ ಎಲ್ಲವೂ ಗಗನಕ್ಕೆ ಹೋಗಿತ್ತು. ಹೀಗಾಗಿ ಗ್ಯಾರಂಟಿ ಯೋಜನೆ ನೀಡಿದೆವು. ಈ ಗ್ಯಾರಂಟಿಗಳಿಗೆ ಅಂದು ಟೀಕೆ ಮಾಡಿದ ಬಿಜೆಪಿ, ಇಂದು ತನ್ನ ಆಡಳಿತವಿರುವ ದೆಹಲಿ, ಮಹಾರಾಷ್ಟ್ರ, ಮಧ್ಯಪ್ರದೇಶ ರಾಜ್ಯಗಳು ಸೇರಿದಂತೆ ಅನೇಕ ರಾಜ್ಯಗಳ ಸರ್ಕಾರಗಳು ಗ್ಯಾರಂಟಿಗಳನ್ನು ಜಾರಿಗೊಳಿಸಿವೆ” ಎಂದು ಹೇಳಿದರು.

ಮನೆಹಾಳು ಪದ ಕಡತದಲ್ಲಿ ಇರಲಿ

ಗ್ಯಾರಂಟಿ ಅನುಷ್ಟಾನ ಸಮಿತಿ ಮೂಲಕ ಕಾರ್ಯಕರ್ತರಿಗೆ ವೇತನ ನೀಡಿ ಕಾಂಗ್ರೆಸ್ ʼಮನೆಹಾಳುʼ ಮಾಡುತ್ತಿದೆ ಎನ್ನುವ ಆರ್.ಅಶೋಕ್ ಮಾತಿಗೆ ತಿರುಗೇಟು ನೀಡಿದ ಶಿವಕುಮಾರ್ ಅವರು, “ಆರ್.ಅಶೋಕ್ ಬಳಸಿರುವ ಮನೆಹಾಳು ಪದ ಕಡತಲ್ಲಿಯೇ ಉಳಿಯಲಿ. ನಾವು ಗ್ಯಾರಂಟಿ ಯೋಜನೆಗಳ ಮೂಲಕ ಬಡವರ ಮನೆ ಕಟ್ಟುತ್ತಿದ್ದೇವೆ. ಆದರೂ ಮನೆಹಾಳು ಪದ ಪ್ರಯೋಗಿಸಿದ್ದಾರೆ” ಎಂದು ಶಿವಕುಮಾರ್ ಅವರು ತಿವಿದರು.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

121111 (2)

IND vs ENG: ಟೆಸ್ಟ್‌ನಿಂದ ರಿಷಭ್‌ ಪಂತ್‌ ಔಟ್‌..ಟೀಂ ಇಂಡಿಯಾಗೆ ಆಘಾತ.!

by ಶಾಲಿನಿ ಕೆ. ಡಿ
July 23, 2025 - 11:19 pm
0

121111 (1)

ಟ್ರೇಲರ್‌ನಲ್ಲೇ ಕುತೂಹಲ ಮೂಡಿಸಿರುವ ಚಿತ್ರ “ಕಮರೊ2” ಆಗಸ್ಟ್ 1ರಂದು ತೆರೆಗೆ

by ಶಾಲಿನಿ ಕೆ. ಡಿ
July 23, 2025 - 10:55 pm
0

121111

ವಂದೇ ಭಾರತ್ ರೈಲಿನ ಆಹಾರದಲ್ಲಿ ಹುಳ: ವೈರಲ್‌ ಆಯ್ತು ಫೋಟೋ

by ಶಾಲಿನಿ ಕೆ. ಡಿ
July 23, 2025 - 10:47 pm
0

111 (39)

ಕರಾವಳಿಯಲ್ಲಿ ಭಾರೀ ಮಳೆ; ಈ ಜಿಲ್ಲೆಗಳಲ್ಲಿ ನಾಳೆ ಶಾಲೆ-ಕಾಲೇಜುಗಳಿಗೆ ರಜೆ

by ಶಾಲಿನಿ ಕೆ. ಡಿ
July 23, 2025 - 10:29 pm
0

ಸಂಬಂಧಿಸಿದ ಪೋಸ್ಟ್‌ಗಳು

  • 121111 (2)
    IND vs ENG: ಟೆಸ್ಟ್‌ನಿಂದ ರಿಷಭ್‌ ಪಂತ್‌ ಔಟ್‌..ಟೀಂ ಇಂಡಿಯಾಗೆ ಆಘಾತ.!
    July 23, 2025 | 0
  • 121111
    ವಂದೇ ಭಾರತ್ ರೈಲಿನ ಆಹಾರದಲ್ಲಿ ಹುಳ: ವೈರಲ್‌ ಆಯ್ತು ಫೋಟೋ
    July 23, 2025 | 0
  • 111 (39)
    ಕರಾವಳಿಯಲ್ಲಿ ಭಾರೀ ಮಳೆ; ಈ ಜಿಲ್ಲೆಗಳಲ್ಲಿ ನಾಳೆ ಶಾಲೆ-ಕಾಲೇಜುಗಳಿಗೆ ರಜೆ
    July 23, 2025 | 0
  • 111 (37)
    ಬಾಹ್ಯಾಕಾಶದಿಂದ ಭೂಮಿಗೆ ಬಂದ ಬಳಿಕ ನಡೆಯಲು ಕಲಿಯುತ್ತಿದ್ದಾರೆ ಶುಭಾಂಶು ಶುಕ್ಲಾ
    July 23, 2025 | 0
  • 111 (35)
    ಶಿವಮೊಗ್ಗದಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ: ಮೂವರಿಗೆ ಗಾಯ
    July 23, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version