ಬೆಲೆ ಏರಿಕೆ ಅಭಿವೃದ್ಧಿಗಾಗಿಯೋ ಅಥವಾ ಹಗಲು ದರೋಡೆಯೋ? ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರಕ್ಕೆ ರಾಜ್ಯದ ಜನರು ಏಕೆ ಬೆಲೆ ತೆರಬೇಕು? ಎಂದು ನಿಖಿಲ್ ಕುಮಾರಸ್ವಾಮಿ ಅವರು ಕಿಡಿಕಾರಿದರು.
ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಕಾಂಗ್ರೆಸ್ ಸರ್ಕಾರ ರಾಜ್ಯದ ಜನತೆಗೆ ಡಬಲ್ ಶಾಕ್ ನೀಡಿದೆ. ಹಾಲಿನ ದರ ಹೆಚ್ಚಳದ ಬೆನ್ನಲ್ಲೇ ವಿದ್ಯುತ್ ದರವನ್ನು ಪ್ರತಿ ಯೂನಿಟ್ ಗೆ 36 ಪೈಸೆ ಹೆಚ್ಚಳ ಮಾಡಿರುವುದಕ್ಕೆ ಅವರು ನಿಖಿಲ್ ಅವರು ಆಕ್ರೋಶ ವ್ಯಕ್ತಪಡಿಸಿದರು.
Price hikes for development or daylight robbery? Why should people pay for the Congress Govt’s corruption?
Price hike in metro, busses, costly water bills, inflated prices for smart meters and now 36 paise will be increased per unit of electricity from April 1! No one can afford… pic.twitter.com/kwNPOJkEsi
— Nikhil Kumar (@Nikhil_Kumar_k) March 28, 2025
ದುಬಾರಿ ಆಡಳಿತದಲ್ಲಿ ಸಾಧ್ಯವಿಲ್ಲ!
ಮೆಟ್ರೋ, ಬಸ್ ಟಿಕೆಟ್ ಬೆಲೆ ಏರಿಕೆ, ನೀರಿನ ದರ ಏರಿಕೆ, ಸ್ಮಾರ್ಟ್ ಮೀಟರ್‌ಗಳಿಗೆ 5 ಪಟ್ಟು ಹೆಚ್ಚು ಬೆಲೆ ಮತ್ತು ಏಪ್ರಿಲ್ 1 ರಿಂದ ವಿದ್ಯುತ್ ಬಿಲ್ ನಲ್ಲಿ ಪ್ರತಿ ಯೂನಿಟ್‌ಗೆ 36 ಪೈಸೆ ಹೆಚ್ಚಳ ಕಾಂಗ್ರೆಸ್ ಸರಕಾರದ ದುಬಾರಿ ಆಡಳಿತದಲ್ಲಿ ವಾಸಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ನಿಖಿಲ್ ಕುಮಾರಸ್ವಾಮಿ ವ್ಯಂಗ್ಯವಾಡಿದರು.
ಹಾಲು ಮತ್ತು ವಿದ್ಯುತ್ ದರ ಏರಿಕೆಗೆ ಹೆಚ್.ಡಿ. ಕುಮಾರಸ್ವಾಮಿ ಕಿಡಿ
ಹಾಲು ಮತ್ತು ವಿದ್ಯುತ್ ದರ ಏರಿಕೆ ಮಾಡಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಟೀಕಾ ಪ್ರಹಾರ ನಡೆಸಿರುವ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕರ್ನಾಟಕ ರಾಜ್ಯ ಈಸ್ಟ್ ಇಂಡಿಯಾ ಕಾಂಗ್ರೆಸ್ ಕಂಪನಿ ಕಪಿಮುಷ್ಟಿಯಲ್ಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೇಂದ್ರ ಸಚಿವರು ಎರಡು ವರ್ಷಗಳ ಸರಣಿ ಸುಲಿಗೆ.ಯುಗಾದಿ ಹಬ್ಬಕ್ಕೆ ಬೆಲೆ ‘ಏರಿಕೆ ಹೋಳಿಗೆ’ ಎಂದು ಟಾಂಗ್ ನೀಡಿದ್ದಾರೆ.
ರಾಜ್ಯದಲ್ಲಿ ಹಾಲಿನ ಹಾಲಾಹಲ ಶುರುವಾಗಿದೆ. 3ನೇ ಸಲ ದರ ಏರಿಕೆ ಮಾಡಲಾಗಿದೆ. 2023 ಆಗಸ್ಟ್ ತಿಂಗಳಲ್ಲಿ ₹3, 2024 ಜೂನ್ ತಿಂಗಳಿನಲ್ಲಿ ₹2 ಹಾಗೂ 2025 ಮಾರ್ಚ್, ಅಂದರೆ ಈಗ ₹4 ಏರಿಕೆ ಮಾಡಲಾಗಿದೆ. ಹಾಗೆಯೇ ವಿದ್ಯುತ್ ಕೂಡ ದುಬಾರಿ ಆಗಿದೆ. ಜನರಿಗೆ ವಿದ್ಯುತ್ ಶಾಕ್ ನೀಡಿದ್ದಾರೆ. ಈಗ ಎಲ್ಲರಿಗೂ ಪ್ರತೀ ಯೂನಿಟ್ಟಿಗೆ ₹36 ಪೈಸೆ ಬರೆ. ಮಹಾದೇವಪ್ಪನಿಗೂ ಶಾಕು, ಕಾಕಾ ಪಾಟೀಲಗೂ ಶಾಕು, ಎಂದು ರಾಜ್ಯ ಸರ್ಕಾರದ ಬಗ್ಗೆ ಕೇಂದ್ರ ಸಚಿವರು ಲೇವಡಿ ಮಾಡಿದ್ದಾರೆ.
Under @INCKarnataka govt, Nandini milk prices have surged by ₹9/litre in 2 years!
Meanwhile, dairy farmers await ₹650 crore in unpaid incentives for over 9 months. Consumers pay more, farmers receive less; who’s really benefiting?
ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ನಂದಿನಿ ಹಾಲಿನ… pic.twitter.com/mMPnOPd5f6
— Nikhil Kumar (@Nikhil_Kumar_k) March 27, 2025
ಒಂದು ಕೈಯಲ್ಲಿ ಕೊಟ್ಟು ಹತ್ತು ಕೈಗಳಲ್ಲಿ ಕಿತ್ತುಕೊಳ್ಳುವ ದಶಾವತಾರಿ ರಾವಣರೂಪಿ ಸುಲಿಗೆ ಪ್ರವೃತ್ತಿ ಕನ್ನಡಿಗರ ಪಾಲಿಗೆ ಮರಣಶಾಸನ. ಹಾಲು, ವಿದ್ಯುತ್ ದರ ಏರಿಕೆ ಖಂಡನೀಯ. ನೆಪ ರೈತರದು, ಲಾಭ ಕೆಎಂಎಫ್ ಗೆ, ಕಂಪನಿ ಆಡಳಿತ ನಡೆಸುತ್ತಿದೆ ಸರ್ಕಾರ. ಮೊಸರು ದರ ₹4 ಏರಿಕೆ ಮಾಡಿದ್ದೀರಿ. ಈ ಹಣ ಏನು ಮಾಡುತ್ತೀರಿ? ರೈತರಿಗೆ ವರ್ಗಾಯಿಸುತ್ತೀರೋ ಅಥವಾ ಕೆಎಂಎಫ್ ತಾನೇ ಉಳಿಸಿಕೊಳ್ಳಲಿದೆಯೋ? ಸ್ಪಷ್ಟಪಡಿಸಿ ಎಂದು ಸರ್ಕಾರವನ್ನು ಒತ್ತಾಯ ಮಾಡಿದ್ದಾರೆ.
ಇದು ಪ್ರಜಾಪ್ರಭುತ್ವ ಸರ್ಕಾರವಲ್ಲ:
ದರ ಏರಿಕೆ, ತೆರಿಗೆ ಹೇರಿಕೆ ಸರಕಾರ. ಇದು ಈಸ್ಟ್ ಇಂಡಿಯಾ ಕಾಂಗ್ರೆಸ್ ಕಂಪನಿ ಸುಲಿಗೆಯಷ್ಟೇ ನಿತ್ಯಕೃತ್ಯ. ಕರ್ನಾಟಕ ರಾಜ್ಯ ಈಸ್ಟ್ ಇಂಡಿಯಾ ಕಾಂಗ್ರೆಸ್ ಕಂಪನಿ ಕಪಿಮುಷ್ಟಿಯಲ್ಲಿದೆ. ಈಸ್ಟ್ ಇಂಡಿಯಾ ಕಾಂಗ್ರೆಸ್ ಎಂದು ಅವರು ಕಿಡಿ ಕಾರಿದ್ದಾರೆ.