• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ನಕಲಿ ಔಷಧ ದಂಧೆಗೆ ಬಿಗ್ ಟ್ವಿಸ್ಟ್; ತನಿಖೆಗೆ SIT ರಚನೆ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
August 20, 2026 - 7:39 pm
in ಕರ್ನಾಟಕ
0 0
0
Untitled design 2026 08 20T193723.339

ಬೆಂಗಳೂರು ದಕ್ಷಿಣದ ದೊಡ್ಡೇರಿ ವ್ಯಾಪ್ತಿಯಲ್ಲಿ ಪತ್ತೆಯಾಗಿರುವ ಬೃಹತ್ ನಕಲಿ ಔಷಧ ಜಾಲ ಪ್ರಕರಣ ಬಗೆದಷ್ಟೂ ಆತಂಕಕಾರಿ ಮಾಹಿತಿಗಳು ಹೊರಬರುತ್ತಿವೆ. ಪ್ರತಿಷ್ಠಿತ ಬಹುರಾಷ್ಟ್ರೀಯ ಕಂಪನಿಗಳ (MNC) ಬ್ರ್ಯಾಂಡ್‌ಗಳ ಹೆಸರನ್ನು ಬಳಸಿಕೊಂಡು ಜೀವಕ್ಕೆ ಅಪಾಯ ಉಂಟುಮಾಡಬಹುದಾದ ನಕಲಿ ಇಂಜೆಕ್ಷನ್‌ಗಳು ಹಾಗೂ ಮಾತ್ರೆಗಳನ್ನು ತಯಾರಿಸಿ ಪೂರೈಸುತ್ತಿದ್ದ ಅಂತಾರಾಜ್ಯ ಜಾಲದ ವಿರುದ್ಧ ತನಿಖೆ ತೀವ್ರಗೊಂಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ನಾಲ್ವರನ್ನು ಬಂಧಿಸಲಾಗಿದ್ದು, ದಂಧೆಯ ಕಿಂಗ್‌ಪಿನ್ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಇದೀಗ ವಿಶೇಷ ತನಿಖಾ ತಂಡ (SIT) ರಚಿಸಿ ತನಿಖೆಗೆ ಆದೇಶಿಸಿದೆ. ಹಿರಿಯ IPS ಅಧಿಕಾರಿ ಸಿ. ವಂಶಿಕೃಷ್ಣ ಅವರ ನೇತೃತ್ವದಲ್ಲಿ SIT ರಚಿಸಲಾಗಿದ್ದು, ತಂಡದಲ್ಲಿ IPS ಅಧಿಕಾರಿಗಳಾದ ಶಿವಪ್ರಕಾಶ್ ಮತ್ತು ಲೋಕೇಶ್, ಸಹಾಯಕ ಔಷಧ ನಿಯಂತ್ರಕರಾದ ಮಂಜುನಾಥ್ ರೆಡ್ಡಿ ಹಾಗೂ ನಮ್ರತಾ ಹಲ್ಲೂರು ಮತ್ತು ಔಷಧ ನಿರೀಕ್ಷಕಿ ನೇಹಾ ಮುರ್ಗಿ ಅವರನ್ನು ಒಳಗೊಂಡಂತೆ ತಂಡ ರಚಿಸಲಾಗಿದೆ.

RelatedPosts

KPSC ಹಗರಣ: ಶಿವಶಂಕರಪ್ಪ ಸಾಹುಕಾರ್ ಅಮಾನತಿಗೆ ಸರ್ಕಾರದ ಶಿಫಾರಸು

ವಂದೇ ಮಾತರಂ ವಿವಾದ: ಬಿಜೆಪಿಗೆ ಪ್ರಿಯಾಂಕ್ ಖರ್ಗೆ ತಿರುಗೇಟು

ನಾಗೇಂದ್ರ ರಾಜೀನಾಮೆಗೆ ಬಿಜೆಪಿ-ಜೆಡಿಎಸ್ ಆಗ್ರಹ: ಕಪ್ಪು ಟೀ ಶರ್ಟ್‌ನಲ್ಲಿ ಸದನಕ್ಕೆ ಎಂಟ್ರಿ

ಸೆ.7ರೊಳಗೆ ಕರಾವಳಿ-ಮಲೆನಾಡು ಪ್ರವಾಸೋದ್ಯಮ ನೀತಿಯ ಕರಡು ಸಿದ್ಧ: ಸಚಿವ ಕೆ.ಜೆ. ಜಾರ್ಜ್‌

ADVERTISEMENT
ADVERTISEMENT

ದೊಡ್ಡೇರಿ ನಕಲಿ ಔಷಧ ಪ್ರಕರಣ ಬೆಳಕಿಗೆ ಬಂದ ದಿನವೇ ಆರೋಗ್ಯ ಸಚಿವ ಯು.ಟಿ. ಖಾದರ್ ಹಾಗೂ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಪ್ರಕರಣದ ಗಂಭೀರತೆಯನ್ನು ಗಮನಿಸಿ SIT ತನಿಖೆ ನಡೆಸುವ ಕುರಿತು ಸುಳಿವು ನೀಡಿದ್ದರು. ಇದೀಗ ಸರ್ಕಾರ ಅಧಿಕೃತವಾಗಿ ವಿಶೇಷ ತನಿಖಾ ತಂಡ ರಚಿಸಿ ಆದೇಶ ಹೊರಡಿಸಿದೆ.

ಕರ್ನಾಟಕದ ಡ್ರಗ್ ಎನ್‌ಫೋರ್ಸ್‌ಮೆಂಟ್ ವಿಂಗ್ ಆಗಸ್ಟ್ 18ರಂದು ಬಿದದಿ ಸಮೀಪದ ನಂ.34 ಕುರುಬರಹಳ್ಳಿ ಗ್ರಾಮದ ಲೈಸೆನ್ಸ್ ಇಲ್ಲದ ಔಷಧ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿತ್ತು. ಈ ವೇಳೆ ಭಾರೀ ಪ್ರಮಾಣದ ನಕಲಿ ಔಷಧಗಳು ಪತ್ತೆಯಾಗಿವೆ. ಮಾತ್ರವಲ್ಲದೆ ಬಲ್ಕ್ ಸ್ಟಾಕ್, ಔಷಧ ಪ್ಯಾಕೇಜಿಂಗ್‌ಗೆ ಬಳಸುತ್ತಿದ್ದ ಯಂತ್ರಗಳು, ಖಾಲಿ ವಯಲ್‌ಗಳು ಹಾಗೂ ನಕಲಿ ಲೇಬಲ್‌ಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ದಾಳಿ ವೇಳೆ ವಶಪಡಿಸಿಕೊಂಡ ವಸ್ತುಗಳ ಒಟ್ಟು ಅಂದಾಜು ಮೌಲ್ಯ ಬರೋಬ್ಬರಿ 5,05,49,575 ರೂಪಾಯಿ ಎಂದು ತಿಳಿದುಬಂದಿದೆ. ಪ್ರತಿಷ್ಠಿತ ಔಷಧ ಕಂಪನಿಗಳ ಹೆಸರಿನಲ್ಲಿ ನಕಲಿ ಉತ್ಪನ್ನಗಳನ್ನು ಸಿದ್ಧಪಡಿಸಿ ಅವುಗಳನ್ನು ಮಾರುಕಟ್ಟೆಗೆ ಪೂರೈಸಲಾಗುತ್ತಿತ್ತೇ ಎಂಬುದರ ಕುರಿತು ತನಿಖೆ ನಡೆಯುತ್ತಿದೆ.

ಈ ಜಾಲದ ಹಿಂದೆ ಯಾರು ಕಾರ್ಯನಿರ್ವಹಿಸುತ್ತಿದ್ದರು? ನಕಲಿ ಔಷಧಗಳನ್ನು ಯಾವೆಲ್ಲ ರಾಜ್ಯಗಳಿಗೆ ಪೂರೈಸಲಾಗುತ್ತಿತ್ತು? ಆಸ್ಪತ್ರೆಗಳು, ಮೆಡಿಕಲ್‌ ಶಾಪ್‌ಗಳು ಅಥವಾ ಇತರ ಮಾರ್ಗಗಳ ಮೂಲಕ ಇವು ಮಾರುಕಟ್ಟೆ ಪ್ರವೇಶಿಸಿದ್ದವೇ ಎಂಬ ಹಲವು ಪ್ರಶ್ನೆಗಳಿಗೆ SIT ತನಿಖೆಯಲ್ಲಿ ಉತ್ತರ ಸಿಗಬೇಕಿದೆ. ವಿದೇಶದಲ್ಲಿ ತಲೆಮರೆಸಿಕೊಂಡಿರುವ ಎನ್ನಲಾಗಿರುವ ಕಿಂಗ್‌ಪಿನ್‌ನ ಪತ್ತೆಗೂ ತನಿಖಾ ತಂಡ ಕ್ರಮ ಕೈಗೊಳ್ಳುವ ಸಾಧ್ಯತೆಯಿದೆ.

ನಕಲಿ ಔಷಧಗಳು ಸಾರ್ವಜನಿಕರ ಆರೋಗ್ಯಕ್ಕೆ ಗಂಭೀರ ಅಪಾಯ ಉಂಟುಮಾಡುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಪ್ರಕರಣದ ತನಿಖೆ ಮಹತ್ವ ಪಡೆದುಕೊಂಡಿದೆ. ಇದೀಗ SIT ತನಿಖೆ ಆರಂಭವಾಗಿರುವುದರಿಂದ ಈ ಅಂತಾರಾಜ್ಯ ದಂಧೆಯ ಸಂಪೂರ್ಣ ಜಾಲ ಬಯಲಾಗುವ ನಿರೀಕ್ಷೆ ಮೂಡಿದೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Untitled design 2026 08 21T222256.380

ಧ್ಯಾನ ಶಿಬಿರದ ಮೇಲೆ ವೈಮಾನಿಕ ದಾಳಿ; ಮ್ಯಾನ್ಮಾರ್‌ನಲ್ಲಿ 14 ಭಕ್ತರ ದುರ್ಮರಣ

by ಕವಿತಾ
August 21, 2026 - 11:24 pm
0

Untitled design 2026 08 21T223549.883

ಟಾಕ್ಸಿಕ್ ಗೆ ಒಲಿದ ವರಮಹಾಲಕ್ಷ್ಮೀ: ಕರ್ನಾಟಕ ಒಂದರಲ್ಲೇ 1000 ಶೋ ಅಡ್ವಾನ್ಸ್ ಸೋಲ್ಡ್ ಔಟ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 21, 2026 - 10:39 pm
0

Untitled design 2026 08 21T221141.162

ಬಿಗ್ ಬಾಸ್ ಕನ್ನಡ 13 ಡೇಟ್ ಫಿಕ್ಸ್; ಸೆ.6ಕ್ಕೆ ಗ್ರ್ಯಾಂಡ್ ಪ್ರೀಮಿಯರ್

by ಕವಿತಾ
August 21, 2026 - 10:25 pm
0

Untitled design 2026 08 21T215319.629

ಸಕ್ಕರೆ ಬೆಲೆ ಗಗನಕ್ಕೇರಿದ್ದೇಕೆ? ಎಥೆನಾಲ್ ಆರೋಪ ತಳ್ಳಿಹಾಕಿದ ಕೇಂದ್ರ

by ಕವಿತಾ
August 21, 2026 - 9:55 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 21T202504.551
    KPSC ಹಗರಣ: ಶಿವಶಂಕರಪ್ಪ ಸಾಹುಕಾರ್ ಅಮಾನತಿಗೆ ಸರ್ಕಾರದ ಶಿಫಾರಸು
    August 21, 2026 | 0
  • Untitled design 2026 08 21T143946.870
    ವಂದೇ ಮಾತರಂ ವಿವಾದ: ಬಿಜೆಪಿಗೆ ಪ್ರಿಯಾಂಕ್ ಖರ್ಗೆ ತಿರುಗೇಟು
    August 21, 2026 | 0
  • Untitled design 2026 08 21T141105.833
    ನಾಗೇಂದ್ರ ರಾಜೀನಾಮೆಗೆ ಬಿಜೆಪಿ-ಜೆಡಿಎಸ್ ಆಗ್ರಹ: ಕಪ್ಪು ಟೀ ಶರ್ಟ್‌ನಲ್ಲಿ ಸದನಕ್ಕೆ ಎಂಟ್ರಿ
    August 21, 2026 | 0
  • Untitled design 2026 08 21T133338.280
    ಸೆ.7ರೊಳಗೆ ಕರಾವಳಿ-ಮಲೆನಾಡು ಪ್ರವಾಸೋದ್ಯಮ ನೀತಿಯ ಕರಡು ಸಿದ್ಧ: ಸಚಿವ ಕೆ.ಜೆ. ಜಾರ್ಜ್‌
    August 21, 2026 | 0
  • Untitled design 2026 08 21T111608.454
    ವರಮಹಾಲಕ್ಷ್ಮಿ ಹಬ್ಬಕ್ಕೆ ವಿಶೇಷ ಅಲಂಕಾರ: ನೋಟುಗಳಿಂದ ಸಿಂಗಾರಗೊಂಡ ಚಾಮುಂಡೇಶ್ವರಿ
    August 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version