ಮಂಡ್ಯ, ಜುಲೈ 25, 2025: ವಸತಿ ಶಾಲೆಯಲ್ಲಿ ಊಟ ಸೇವಿಸಿ 6 ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೆ.ಎಂ ದೊಡ್ಡಿಯಲ್ಲಿರುವ ಭಾರತಿ ಎಕ್ಸಲೆನ್ಸ್ ವಸತಿ ಶಾಲೆಯಲ್ಲಿ ನಡೆದಿದೆ. ಅಸ್ವಸ್ಥರಾದ 6 ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಸ್ವಸ್ಥರಾದ ಆರು ವಿದ್ಯಾರ್ಥಿಗಳ ಪೈಕಿ ಇಬ್ಬರು ಮಂಡ್ಯದ ಮಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, ಉಳಿದ ನಾಲ್ವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಗಾಗಿದ್ದಾರೆ. ವೈದ್ಯರ ಪ್ರಕಾರ, ಎಲ್ಲಾ ವಿದ್ಯಾರ್ಥಿಗಳಿಗೆ ಯಾವುದೇ ಪ್ರಾಣಾಪಾಯವಿಲ್ಲ ಮತ್ತು ಅವರ ಆರೋಗ್ಯ ಸ್ಥಿರವಾಗಿದೆ ಎಂದು ಹೇಳಿದರು.
ಈ ಶಾಲೆಯು ಶಾಸಕರಾದ ಮಧು ಜಿ. ಮಾದೇಗೌಡ ಅವರಿಗೆ ಸಂಬಂಧಿಸಿದೆ ಎಂದು ತಿಳಿದುಬಂದಿದೆ. ಘಟನೆಯ ಬಗ್ಗೆ ಮಾಹಿತಿ ತಿಳಿದ ತಕ್ಷಣ ಸ್ಥಳೀಯ ಆರೋಗ್ಯ ಇಲಾಖೆ ಮತ್ತು ಆಡಳಿತವು ತಕ್ಷಣದ ಕ್ರಮಕ್ಕೆ ಮುಂದಾಗಿದೆ.
ಈ ಘಟನೆಯ ಬಗ್ಗೆ ಶಾಲಾ ಆಡಳಿತದಿಂದ ಯಾವುದೇ ಅಧಿಕೃತ ಹೇಳಿಕೆ ಇನ್ನೂ ಬಂದಿಲ್ಲ. ಆದರೆ, ಸ್ಥಳೀಯ ಆರೋಗ್ಯ ಇಲಾಖೆಯು ಶಾಲೆಯ ಆಹಾರ ಸರಬರಾಜು ವ್ಯವಸ್ಥೆಯನ್ನು ಪರಿಶೀಲಿಸುವುದಾಗಿ ತಿಳಿಸಿದೆ.