• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 17, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬೆಂಗಳೂರನ್ನು ಛಿದ್ರಗೊಳಿಸುತ್ತಿಲ್ಲ, ಇನ್ನಷ್ಟು ಗಟ್ಟಿಗೊಳಿಸುತ್ತಿದ್ದೇವೆ: ಬಿಜೆಪಿಗೆ ಡಿಕೆಶಿ ಟಾಂಗ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 10, 2025 - 9:22 pm
in Flash News, ಕರ್ನಾಟಕ
0 0
0
22215 (8)

ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಡಿಸಿಎಂ ಡಿ ಕೆ ಶಿವಕುಮಾರ್ ಅವರು 20 ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ 2024 ಅನ್ನು ಸದನದಲ್ಲಿ ಮಂಡಿಸಿ, ಅದರ ಉದ್ದೇಶವನ್ನು ವಿವರಿಸಿದರು. ನಂತರ ಪ್ರತಿಪಕ್ಷಗಳ ಸದಸ್ಯರು ತಮ್ಮ ಅಭಿಪ್ರಾಯ, ಆಕ್ಷೇಪ ಕಾರಣಗಳನ್ನು ತಿಳಿಸಿದರು. ಇದಕ್ಕೆ ಪ್ರತಿಕ್ರಿಯೆ ಕೊಟ್ಟ ಡಿ ಕೆ ಶಿವಕುಮಾರ್ ಅವರು, “ಚರ್ಚೆಯಲ್ಲಿ ಭಾಗವಹಿಸಿದ ಎಲ್ಲಾ ಶಾಸಕರನ್ನು ಅಭಿನಂದಿಸುತ್ತೇನೆ.

ವಿರೋಧ ಪಕ್ಷಗಳ ನಾಯಕರು ತಮ್ಮದೇ ಆದ ಅಭಿಪ್ರಾಯ ತಿಳಿಸಿದ್ದಾರೆ. ಅವರು ಅಭಿಪ್ರಾಯವನ್ನು ನಾನು ವಿರೋಧಿಸುವುದಿಲ್ಲ. ಅವರಲ್ಲಿ ಕೆಲವರಿಗೆ ರಾಜಕೀಯ ಇಚ್ಚಾಶಕ್ತಿಯೂ ಇದೆ. ಅದರಲ್ಲಿ ತಪ್ಪಿಲ್ಲ. ಈಗಿರುವ ವ್ಯವಸ್ಥೆಯಲ್ಲಿಯೇ ಬೆಂಗಳೂರು ನಗರವನ್ನು ಮುನ್ನಡೆಸುವುದು ಅಸಾಧ್ಯ ಎಂದು ಅವರು ಆತ್ಮಸಾಕ್ಷಿ ಮೂಲಕ ಒಪ್ಪಿದ್ದಾರೆ. ತ್ಯಾಜ್ಯ ನಿರ್ವಹಣೆ, ಕುಡಿಯುವ ನೀರು ಆಡಳಿತಕ್ಕೆ ದೊಡ್ಡ ಸಮಸ್ಯೆ ಎಂಬ ಅರಿವು ಅವರಿಗಿದೆ. ಬೆಂಗಳೂರು ನಗರ ಕೆಂಪೇಗೌಡರು ಕಟ್ಟಿಸಿದ ಗೋಪುರ ಮೀರಿ ಬೆಳೆದಿದೆ. ಈಗಲೂ ಅದನ್ನು ನಿಲ್ಲಿಸಲು ಆಗುವುದಿಲ್ಲ, ಮುಂದೆಯೂ ಆಗುವುದಿಲ್ಲ. ಯಲಹಂಕ, ಕೆಂಗೇರಿ ಉಪನಗರಗಳು ಈಗ ಪಾಲಿಕೆ ವ್ಯಾಪ್ತಿಗೆ ಸೇರಿವೆ. ಹೀಗೆ ಬೆಳೆದಿರುವ ಬೆಂಗಳೂರಿನ ಆಡಳಿತವನ್ನು ನಾವು ವಿಕೇಂದ್ರೀಕರಣ ಮಾಡಲು ಮುಂದಾಗಿದ್ದೇವೆ” ಎಂದು ತಿಳಿಸಿದರು.

RelatedPosts

ಡಿಸಿಸಿ ಬ್ಯಾಂಕ್ ಚುನಾವಣೆ: ಲಾಂಗು-ಮಚ್ಚು ಹಿಡಿದು ರಾಜಾರೋಷವಾಗಿ ಓಡಾಡುತ್ತಿರುವ ಪುಂಡರು

ಕೇರಳದಲ್ಲಿ 14 ಪುರುಷರಿಂದ ಅಪ್ರಾಪ್ತ ಬಾಲಕನ ಮೇಲೆ ಅ*ತ್ಯಾಚಾರ

ಬೆಂಗಳೂರಿನ ಹಲವೆಡೆ ಇಂದು ಮತ್ತು ನಾಳೆ ವಿದ್ಯುತ್ ವ್ಯತ್ಯಯ..ಎಲ್ಲೆಲ್ಲಿ ಗೊತ್ತಾ?

ಪ್ರಧಾನಿ ಮೋದಿ 75ನೇ ಜನ್ಮದಿನ: ಟ್ರಂಪ್, ರಾಹುಲ್ ಗಾಂಧಿ ಸೇರಿ ಹಲವು ಗಣ್ಯರಿಂದ ಶುಭಾಶಯ

ADVERTISEMENT
ADVERTISEMENT

“ದೆಹಲಿ ಪರಿಸ್ಥಿತಿಯೇ ಬೇರೆ. ಇನ್ನು ಮುಂಬೈಯಲ್ಲಿ ಮೊದಲೇ ಅವರು ಅಧಿಕಾರ ನೀಡಿದ್ದರು. ಈಗ ಇಲ್ಲಿ ನಾವು ಹಣಕಾಸಿನ ವಿಚಾರ ಚರ್ಚೆ ಮಾಡುತ್ತಿದ್ದೇವೆ. ನಾವು ಬೆಂಗಳೂರನ್ನು ಛಿದ್ರ ಮಾಡಲು ಹೋಗುತ್ತಿಲ್ಲ, ಬೆಂಗಳೂರನ್ನು ಗಟ್ಟಿ ಮಾಡುತ್ತಿದ್ದೇವೆ. ಬೆಂಗಳೂರಿನ ಗೌರವ ಉಳಿಸಬೇಕು. ಮಾಜಿ ಪ್ರಧಾನಿ ವಾಜಪೇಯಿ ಅವರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆಗಾಗಿ ಬೆಂಗಳೂರಿಗೆ ಬಂದಾಗ, “ಇಷ್ಟು ದಿನ ವಿಶ್ವ ನಾಯಕರು ಮೊದಲು ದೆಹಲಿಗೆ ಬಂದು, ನಂತರ ದೇಶದ ಇತರ ನಗರಗಳಿಗೆ ಹೋಗುತ್ತಿದ್ದರು. ಆದರೆ ಈಗ ಪರಿಸ್ಥಿತಿ ಬದಲಾಗಿದೆ. ವಿಶ್ವದ ನಾಯಕರು ಮೊದಲು ಬೆಂಗಳೂರಿಗೆ ಬಂದು, ನಂತರ ದೇಶದ ಇತರ ನಗರಗಳಿಗೆ ಹೋಗುತ್ತಿದ್ದಾರೆ” ಎಂದು ಹೇಳಿದ್ದರು. ಇದಕ್ಕೆ ಕಾರಣ ಇಲ್ಲಿನ ಆಡಳಿತ. ಕೇವಲ ಕೃಷ್ಣ ಅವರ ಸರ್ಕಾರ ಅಥವಾ ಮತ್ತೊಂದು ಸರ್ಕಾರ ಮಾತ್ರ ಇದಕ್ಕೆ ಕಾರಣವಲ್ಲ. ಇಲ್ಲಿನ ಜನ ಅಷ್ಟರ ಮಟ್ಟಿಗೆ ವಿದ್ಯಾವಂತರು, ಬುದ್ದಿವಂತರು, ಪ್ರಜ್ಞಾವಂತರಿದ್ದಾರೆ. ನೆಹರೂ ಅವರು ಇಲ್ಲಿಯೇ ಇಸ್ರೋ, ಹೆಚ್ಎಂಟಿ, ಹೆಚ್ಎಎಲ್, ಐಟಿಐ ಆರಂಭಿಸಿದ್ದು ಏಕೆ? ಅನೇಕ ಮಹಾನ್ ಸಂಶೋಧಕರು, ಉದ್ದಿಮೆದಾರರು ಬೆಂಗಳೂರಿನಲ್ಲೇ ಓದಿದ್ದಾರೆ” ಎಂದು ವಿವರಿಸಿದರು.

ಆರ್ಥಿಕವಾಗಿ ಹಿಂದುಳಿದ ಪಾಲಿಕೆಗಳಿಗೆ ಸರ್ಕಾರದಿಂದ ನೆರವು

“ಅಧಿಕಾರ ವಿಕೇಂದ್ರಿಕರಣದ ಉದ್ದೇಶದಿಂದ ಬೆಂಗಳೂರು ಮೂರು ಜಿಲ್ಲೆಯಾಯಿತು, ಉಡುಪಿ ಹಾಗೂ ದಕ್ಷಿಣ ಕನ್ನಡ ಬೇರೆ ಜಿಲ್ಲೆಯಾದವು, ಗದಗ ಹಾಗೂ ಹಾವೇರಿ ಎರಡು ಜಿಲ್ಲೆಗಳಾದವು. ಅಶ್ವತ್ಥ್ ನಾರಾಯಣ ಅವರು ನಾಮನಿರ್ದೇಶಿತ ಸದಸ್ಯರಿಗೆ ಮತದಾನದ ಹಕ್ಕು ನೀಡಬೇಡಿ ಎನ್ನುತ್ತಿದ್ದರು. ಜಿಬಿಎಯಲ್ಲಿ (ಗ್ರೇಟರ್ ಬೆಂಗಳೂರು ಅಥಾರಿಟಿ) ನಾಮನಿರ್ದೇಶಿತ ಸದಸ್ಯರಿರುವುದಿಲ್ಲ. ಕೇವಲ ಲೋಕಸಭೆ, ರಾಜ್ಯಸಭೆ, ವಿಧಾನಸಭೆ ಹಾಗೂ ಪರಿಷತ್ತಿನ ಚುನಾಯಿತ ಪ್ರತಿನಿಧಿಗಳು ಮಾತ್ರ ಮತದಾನ ಹಕ್ಕನ್ನು ಹೊಂದಿರುತ್ತಾರೆ” ಎಂದು ಸ್ಪಷ್ಟನೆ ನೀಡಿದರು.

“ನಾವು ಕೂಡ ಆಡಳಿತಾತ್ಮಕ ದೃಷ್ಟಿಯಿಂದಲೇ ಪಾಲಿಕೆ ವಿಭಜನೆ ಮಾಡುತ್ತಿದ್ದೇವೆ. ಯಾಕೆ ಮಾಡಬೇಕು. ಇದರಿಂದ ಅನುದಾನದ ಸಮಸ್ಯೆಯಾಗುತ್ತದೆ ಎಂದು ಕೆಲವು ಸದಸ್ಯರು ಪ್ರಸ್ತಾಪಿಸಿದ್ದಾರೆ. ನಾವು ಕೂಡ ಈ ವಿಚಾರವನ್ನು ಅವರುಗಳಂತೆಯೇ ಆಲೋಚನೆ ಮಾಡಿದ್ದೇವೆ. 75ನೇ ತಿದ್ದುಪಡಿ ಪ್ರಕಾರ ಸ್ಥಳೀಯ ಸಂಸ್ಥೆಗಳ ಹಣವನ್ನು ನಾವು ಬೇರೆಡೆಗೆ ವರ್ಗಾವಣೆ ಮಾಡಲು ಸಾಧ್ಯವಿಲ್ಲ. ಜತೆಗೆ ಎಲ್ಲವನ್ನು ಒಟ್ಟಿಗೆ ಸಂಗ್ರಹಿಸಿ ಹಂಚಿಕೆ ಮಾಡಲು ಆಗುವುದಿಲ್ಲ. ಹೀಗಾಗಿ ನಾವು ಸರ್ಕಾರದಿಂದ ಆರ್ಥಿಕವಾಗಿ ದುರ್ಬಲವಾಗಿರುವ ಪಾಲಿಕೆಗಳಿಗೆ ಸಹಾಯ ಮಾಡಬೇಕು ಎಂದು ಈ ಮಸೂದೆಯಲ್ಲಿ ಪ್ರಸ್ತಾಪಿಸಿದ್ದೇವೆ” ಎಂದು ತಿಳಿಸಿದರು.

ಬೆಂಗಳೂರಿನ ಬಗ್ಗೆ ಮುಖ್ಯಮಂತ್ರಿಗಳಿಗೂ ಜವಾಬ್ದಾರಿ ಇರಬೇಕು:

“ಇನ್ನು ಮುಖ್ಯಮಂತ್ರಿಗಳಿಗೆ ಸಮಯಾವಕಾಶ ಇರುವುದಿಲ್ಲ ಎಂಬ ವಿಚಾರ ಪ್ರಸ್ತಾಪಿಸಿದ್ದಾರೆ. ನನಗೂ ಗೊತ್ತಿದೆ. ಸುಮಾರು 1.50 ಕೋಟಿ ಜನರು, ಅಂದರೆ ರಾಜ್ಯದ ಜನಸಂಖ್ಯೆಯಲ್ಲಿ ಶೇ. 25 ರಷ್ಟು ಜನಸಂಖ್ಯೆ ಇರುವ ನಗರದ ಬಗ್ಗೆ ಮುಖ್ಯಮಂತ್ರಿಗಳು ಸಭೆ ಮಾಡಲೇಬೇಕು. ಇದು ಅವರ ಕರ್ತವ್ಯ. ಮುಖ್ಯಮಂತ್ರಿಗಳಾದವರು ಕೇವಲ ಸಿಟಿ ರೌಂಡ್ಸ್ ಮಾಡಿದರೆ ಸಾಲುವುದಿಲ್ಲ. ಅವರೂ ಸಭೆ ಮಾಡಬೇಕು. ಹಣಕಾಸು ಹಂಚಿಕೆ ಮಾಡುವವರು ಅವರು. ನಾವು ಇಂದು ಪೆರಿಫೆರಲ್ ರಿಂಗ್ ರಸ್ತೆ, ಟನಲ್ ರಸ್ತೆ ಬಗ್ಗೆ ಮಾತನಾಡುತ್ತೇವೆ. ಅಂದೇ ಪಿಆರ್ ಆರ್ ಯೋಜನೆ ಮಾಡಿದ್ದರೆ 3-4 ಸಾವಿರ ಕೋಟಿಯಲ್ಲಿ ಪೂರ್ಣಗೊಳ್ಳುತ್ತಿತ್ತು. ಇಂದು ಆ ವೆಚ್ಚ 26 ಸಾವಿರ ಕೋಟಿ ರೂ. ಆಗುತ್ತಿದೆ. ಅಂದಿನ ಕಾಲದಲ್ಲಿಯೇ ಮೆಟ್ರೋ ಡಬಲ್ ಡೆಕ್ಕರ್ ಮಾಡಿದ್ದರೆ ಇಂದು ಈ ಪರಿಸ್ಥಿತಿ ಇರುತ್ತಿರಲಿಲ್ಲ. ನೀವು ಬೆಂಗಳೂರಿನ ಯಾವುದೇ ಭಾಗದಲ್ಲಿ ರಸ್ತೆ ಅಗಲೀಕರಣಕ್ಕೆ ಕಟ್ಟಡ ಕೆಡವಬೇಕಾದರೆ ದುಪ್ಪಟ್ಟು ಪರಿಹಾರ ನೀಡಬೇಕು. ಇದೆಲ್ಲವನ್ನು ನೋಡಿಯೇ, ಸಾಲವಾದರೂ ಸರಿ, ಎಲ್ಲ ಯೋಜನೆಗಳನ್ನು ಅನುಷ್ಠಾನಕ್ಕೆ ತರಬೇಕು ಎಂದು ಹೊರಟಿದ್ದೇವೆ.

ನಮ್ಮ ಮನೆಯಲ್ಲಿ ನಮ್ಮ ಮಕ್ಕಳೇ ಸಂಚಾರ ದಟ್ಟಣೆ ವಿಚಾರವಾಗಿ ನನಗೆ ಬಯ್ಯುತ್ತಿರುತ್ತಾರೆ. ನಾನು ಮುಂಬೈ, ದೆಹಲಿ, ಹೈದರಾಬಾದ್ ಮತ್ತಿತರ ನಗರಗಳಲ್ಲಿ ಸಂಚಾರಿ ದಟ್ಟಣೆ ನೋಡಿದ್ದೇನೆ. ನಮಗಿಂತ ಅಲ್ಲಿ ಹದಗೆಟ್ಟ ಪರಿಸ್ಥಿತಿ ಇದೆ. ಹಾಗೆಂದು ನಮ್ಮ ಜವಾಬ್ದಾರಿ ಮರೆಯುವಂತಿಲ್ಲ. ನಾವು ಸೇನೆಯವರ ಜತೆ ಮಾತನಾಡಿ ಅವರ ಜಾಗವನ್ನು ಪಡೆಯುತ್ತಿದ್ದೇವೆ. ಇದು ಅಷ್ಟು ಸುಲಭವಾದ ಕೆಲಸವಲ್ಲ. ಇದನ್ನು ಒಂದೇ ದಿನದಲ್ಲಿ ಮಾಯಾ ಮಂತ್ರ ಮಾಡಿ ಸರಿಪಡಿಸಲು ಆಗುವುದಿಲ್ಲ ಎಂದೇ ದೇವರ ವಿಚಾರ ಪ್ರಸ್ತಾಪ ಮಾಡಿದ್ದೆ. ಇದಕ್ಕಾಗಿ ಸರಿಯಾದ ಯೋಜನೆ ಮಾಡಿ, ಅದನ್ನು ಪರಿಣಾಮಕಾರಿಯಾಗಿ ಜಾರಿ ಮಾಡುವ ಅಗತ್ಯವಿದೆ” ಎಂದು ತಿಳಿಸಿದರು.

“ಬೆಂಗಳೂರಿಗೆ ಹೊಸ ದಿಕ್ಕು ನೀಡಬೇಕು ಎಂದು ನಾವು ಪ್ರಯತ್ನ ಮಾಡುತ್ತಿದ್ದು, ಮುಖ್ಯವಾಗಿ ಇಂಧನ ವಿಚಾರವಾಗಿ ಬೆಂಗಳೂರಿನಲ್ಲಿ ಮೊದಲ ಬಾರಿಗೆ ಅನಿಲ ವಿದ್ಯುತ್ ಉತ್ಪಾದನಾ ಘಟಕ ಮಾಡಿದ್ದು ನಾವು. ಇನ್ನು ನಗರ ಯೋಜನೆ ವಿಚಾರವಾಗಿ ಕೆಲವು ತಿದ್ದುಪಡಿಯನ್ನು ತಂದಿದ್ದೇವೆ. ದೇವರು ವರವನ್ನು ಕೊಡಲ್ಲ, ಶಾಪವನ್ನು ಕೊಡಲ್ಲ, ಕೇವಲ ಅವಕಾಶ ಮಾತ್ರ ನೀಡುತ್ತಾನೆ. ಈ ಅವಕಾಶದಲ್ಲಿ ಬೆಂಗಳೂರನ್ನು ಅಂತರರಾಷ್ಟ್ರೀಯ ನಗರವನ್ನಾಗಿ ಮಾಡಿ ಗಟ್ಟಿಗೊಳಿಸಲು ಈ ಮಸೂದೆ ಜಾರಿಗೆ ತರುತ್ತಿದ್ದೇವೆ” ಎಂದು ತಿಳಿಸಿದರು.

ಗ್ರೇಟರ್ ಬೆಂಗಳೂರು ಪವಿತ್ರವಾದ ಮಸೂದೆ

ಇದಕ್ಕೂ ಮೊದಲು ವಿಧೇಯಕ ಮಂಡನೆ ಕುರಿತ ಪ್ರಸ್ತಾವನೆ ವೇಳೆ ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು, “ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕದಲ್ಲಿ 74ನೇ ತಿದ್ದುಪಡಿಗೆ ಯಾವುದೇ ಧಕ್ಕೆಯಾಗುವುದಿಲ್ಲ. ಬೆಂಗಳೂರಿನ ಭವಿಷ್ಯದ ಹಿತದೃಷ್ಟಿಯಿಂದ ಈ ವಿಧೇಯಕ ಪವಿತ್ರವಾದದ್ದು. ಬೆಂಗಳೂರು ವೇಗವಾಗಿ ಬೆಳೆಯುತ್ತಿರುವ ಕಾರಣ ಓರ್ವ ಪಾಲಿಕೆ ಆಯುಕ್ತರು, ಮುಖ್ಯ ಇಂಜಿನಿಯರ್ ಗಳಿಂದ ನಿಭಾಯಿಸಲು ಕಷ್ಟವಾಗುತ್ತಿದೆ. ಹೀಗಾಗಿ ಈ ಮಸೂದೆಯಲ್ಲಿ 7 ಪಾಲಿಕೆ ರಚನೆಗೆ ಮುಂದಾಗಿದ್ದೇವೆ.

ಭವಿಷ್ಯದ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಈ ಪ್ರಸ್ತಾವನೆ ಸಲ್ಲಿಸಿದ್ದೇವೆ. ಸ್ಥಳೀಯ ಮಟ್ಟದಲ್ಲಿ ಶಾಸಕರಿಗೆ ನಿಯಂತ್ರಣ ಇರಬೇಕು, ವಾರ್ಡ್ ಸಮಿತಿಗಳಾಗಬೇಕು, ಅಲ್ಲಿ ಜನಪ್ರತಿನಿಧಿಗಳು ಇರಬೇಕು. ಈ ಮಸೂದೆಯಲ್ಲಿ ಎಲ್ಲಾ ಶಾಸಕರು, ಸಂಸದರು ಕೂಡ ಸದಸ್ಯರಾಗಿರುತ್ತಾರೆ. ಮುಖ್ಯಮಂತ್ರಿಗಳು ಇದರ ಅಧ್ಯಕ್ಷರಾಗಿರುತ್ತಾರೆ. ಜಿಲ್ಲಾ ಉಸ್ತುವಾರಿ ಸಚಿವರು ಇದಕ್ಕೆ ಉಪಾಧ್ಯಕ್ಷರಾಗಿರುತ್ತಾರೆ. ಪಾಲಿಕೆ ರಚನೆಯನ್ನು ನಾವು ಯಾವುದೇ ರೀತಿ ಬದಲವಾವಣೆ ಮಾಡುತ್ತಿಲ್ಲ” ಎಂದು ತಿಳಿಸಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2025 09 17t123054.001

ಮೋದಿ ಸೀಟ್‌ನಲ್ಲಿ ಕುರ್ತಾರೆ ಮಲಯಾಳಂ ನಟ: ‘ವಿಶ್ವನೇತಾ’ ಆಗಲಿದ್ದಾರೆ ಉನ್ನಿ ಮುಕುಂದನ್

by ಶಾಲಿನಿ ಕೆ. ಡಿ
September 17, 2025 - 12:35 pm
0

Untitled design 2025 09 17t121626.630

ಡಿಸಿಸಿ ಬ್ಯಾಂಕ್ ಚುನಾವಣೆ: ಲಾಂಗು-ಮಚ್ಚು ಹಿಡಿದು ರಾಜಾರೋಷವಾಗಿ ಓಡಾಡುತ್ತಿರುವ ಪುಂಡರು

by ಶಾಲಿನಿ ಕೆ. ಡಿ
September 17, 2025 - 12:17 pm
0

Untitled design 2025 09 17t114138.681

ಕೇರಳದಲ್ಲಿ 14 ಪುರುಷರಿಂದ ಅಪ್ರಾಪ್ತ ಬಾಲಕನ ಮೇಲೆ ಅ*ತ್ಯಾಚಾರ

by ಶಾಲಿನಿ ಕೆ. ಡಿ
September 17, 2025 - 11:52 am
0

Untitled design 2025 09 17t112558.883

ಬೆಂಗಳೂರಿನ ಹಲವೆಡೆ ಇಂದು ಮತ್ತು ನಾಳೆ ವಿದ್ಯುತ್ ವ್ಯತ್ಯಯ..ಎಲ್ಲೆಲ್ಲಿ ಗೊತ್ತಾ?

by ಶಾಲಿನಿ ಕೆ. ಡಿ
September 17, 2025 - 11:32 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 09 17t121626.630
    ಡಿಸಿಸಿ ಬ್ಯಾಂಕ್ ಚುನಾವಣೆ: ಲಾಂಗು-ಮಚ್ಚು ಹಿಡಿದು ರಾಜಾರೋಷವಾಗಿ ಓಡಾಡುತ್ತಿರುವ ಪುಂಡರು
    September 17, 2025 | 0
  • Untitled design 2025 09 17t114138.681
    ಕೇರಳದಲ್ಲಿ 14 ಪುರುಷರಿಂದ ಅಪ್ರಾಪ್ತ ಬಾಲಕನ ಮೇಲೆ ಅ*ತ್ಯಾಚಾರ
    September 17, 2025 | 0
  • Untitled design 2025 09 17t112558.883
    ಬೆಂಗಳೂರಿನ ಹಲವೆಡೆ ಇಂದು ಮತ್ತು ನಾಳೆ ವಿದ್ಯುತ್ ವ್ಯತ್ಯಯ..ಎಲ್ಲೆಲ್ಲಿ ಗೊತ್ತಾ?
    September 17, 2025 | 0
  • Untitled design 2025 09 17t110443.640
    ಪ್ರಧಾನಿ ಮೋದಿ 75ನೇ ಜನ್ಮದಿನ: ಟ್ರಂಪ್, ರಾಹುಲ್ ಗಾಂಧಿ ಸೇರಿ ಹಲವು ಗಣ್ಯರಿಂದ ಶುಭಾಶಯ
    September 17, 2025 | 0
  • 111 (44)
    ಅವಾಚ್ಯವಾಗಿ ನಿಂದಿಸಿದ್ದನ್ನ ಪ್ರಶ್ನೆ ಮಾಡಿದ್ದಕ್ಕೆ ಮಾರಣಾಂತಿಕ ಹಲ್ಲೆ: 3 ದಿನದ ಬಳಿಕ ಯುವಕ ಸಾ*ವು
    September 14, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version